ಅನಾವರಣವಾಯ್ತು ಪವರ್‌ಫುಲ್ ಜಿಎಂಸಿ ಹಮ್ಮರ್ ಇವಿ

ಜನರಲ್ ಮೋಟಾರ್ಸ್ ಸಂಸ್ಥೆಯು ಕೊನೆಗೂ ತನ್ನ ಹಮ್ಮರ್ ಇವಿ ಪಿಕಪ್ ಟ್ರಕ್ ಅನ್ನು ಅನಾವರಣಗೊಳಿಸಿದೆ. ಐಕಾನಿಕ್ ಹಮ್ಮರ್ ಎಂಬ ಹೆಸರಿನಲ್ಲಿ ಹೊಸ ಇವಿ ಪಿಕಪ್ ಟ್ರಕ್ ಅನ್ನು ಅನಾವರಣಗೊಳಿಸಿರುವುದರಿಂದ ಆಫ್-ರೋಡ್ ಪ್ರಿಯರಿಗೆ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

ಅನಾವರಣವಾಯ್ತು ಪವರ್‌ಫುಲ್ ಜಿಎಂಸಿ ಹಮ್ಮರ್ ಇವಿ

ಜಿಎಂಸಿ ಕಂಪನಿಯು ತನ್ನ ಹಮ್ಮರ್ ಮಾದರಿಯನ್ನು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಅನಾವರಣಗೊಳಿಸಿದೆ. ಜಿಎಂಸಿ ನಿರ್ಮಿಸಿರುವ ಮೊದಲ ಎಲೆಕ್ಟ್ರಿಕ್ ಸೂಪರ್ ಟ್ರಕ್" ಇದಾಗಿದೆ. ಹೊಸ ಜಿಎಂಸಿ ಹಮ್ಮರ್ ಇವಿ 1,000 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಹಮ್ಮರ್ ನಲ್ಲಿ 24-ಮಾಡ್ಯೂಲ್, ಡಬಲ್-ಸ್ಟ್ಯಾಕ್ಡ್ ಅಲ್ಟಿಯಮ್ ಬ್ಯಾಟರಿಯನ್ನು ಅಳವಡಿಸಲಾಗಿದೆ. ಇನ್ನು ಹಮ್ಮರ್ ಇವಿ 350 ಕಿ.ಮೀ ಗಿಂತಲೂ ಅಧಿಕ ಮೈಲೇಜ್ ಅನ್ನು ನೀಡುತ್ತದೆ. ಅಂದರೆ ಸರಿಸುಮಾರು 560 ಕಿ.ಮೀ ಮೈಲೇಜ್ ನೀಡುವ ಸಾಮರ್ಥ್ಯವಿದೆ.

ಅನಾವರಣವಾಯ್ತು ಪವರ್‌ಫುಲ್ ಜಿಎಂಸಿ ಹಮ್ಮರ್ ಇವಿ

ಹಮ್ಮರ್ ಇವಿ 800 ವೋಲ್ಟ್ ವೇಗದ ಚಾರ್ಜಿಂಗ್ ವ್ಯವಸ್ಥಯನ್ನು ಹೊಂದಿದೆ. ಈ ವಾಹನವನ್ನು ಕೇವಲ 10 ನಿಮಿಷ ಚಾರ್ಜ್ ಮಾಡಿದರೆ 100 ಕಿ.ಮೀ ನಷ್ಟು ಚಲಿಸುವ ಸಾಮರ್ಥ್ಯವನ್ನು ಹೊಂದಿದೆ.

MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಅನಾವರಣವಾಯ್ತು ಪವರ್‌ಫುಲ್ ಜಿಎಂಸಿ ಹಮ್ಮರ್ ಇವಿ

ಹಮ್ಮರ್ ಇವಿ ಉತ್ತಮ ಪರ್ಫಾಮೆನ್ಸ್ ಮಾದರಿಯಾಗಿದೆ. ಕೇವಲ 3 ಸೆಕೆಂಡುಗಳಲ್ಲಿ ಈ ಹಮ್ಮರ್ ಇವಿ 0-60 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಈ ವಾಹನದಲ್ಲಿ 35 ಇಂಚಿನ ಟಯರ್ ಗಳೊಂದಿಗೆ ಸ್ಟ್ಯಾಂಡರ್ಡ್ ಆಗಿ 4ಡಬ್ಲ್ಯುಡಿಯನ್ನು ಅಳವಡಿಸಿದ್ದಾರೆ.

ಅನಾವರಣವಾಯ್ತು ಪವರ್‌ಫುಲ್ ಜಿಎಂಸಿ ಹಮ್ಮರ್ ಇವಿ

ಈ ಹಮ್ಮರ್ ಇವಿಯಲ್ಲಿ ವಿಶಿಷ್ಟವಾದ ಡ್ರೈವಿಂಗ್ ಮೋಡ್ ಅನ್ನು ಸಹ ಹೊಂದಿದೆ. ಇದನ್ನು ‘ಕ್ರಾಬ್ ಮೋಡ್' ಎಂದು ಕರೆಯಲಾಗುತ್ತದೆ. ಇದು ಆಫ್-ರೋಡ್ ನಲ್ಲಿ ಹೆಚ್ಚು ಉಪಯೋಗವಾಗುವ ಪೀಚರ್ ಆಗಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಅನಾವರಣವಾಯ್ತು ಪವರ್‌ಫುಲ್ ಜಿಎಂಸಿ ಹಮ್ಮರ್ ಇವಿ

ಹಮ್ಮರ್ ಇವಿಯಲ್ಲಿ 13.4-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ 12.3-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿರಲಿದೆ. ಇದರಲ್ಲಿ ಕ್ಲೈಮೆಂಟ್ ಕಂಟ್ರೋಲ್ ಫೀಚರ್ ಅನ್ನು ಹೊಂದಿದೆ.

ಅನಾವರಣವಾಯ್ತು ಪವರ್‌ಫುಲ್ ಜಿಎಂಸಿ ಹಮ್ಮರ್ ಇವಿ

ಈ ವಾಹನವು ಅಡಾಪ್ಟಿವ್ ಏರ್ ಸಸ್ಪೆಂಕ್ಷನ್ (ಇದು 6 ಇಂಚುಗಳಷ್ಟು ಗ್ರೌಂಡ್ ಕ್ಲಿಯರೆನ್ಸ್ ಹೆಚ್ಚಿಸಬಹುದು), ಇನ್ನು ಆಫ್-ರೋಡಿಂಗ್‌ಗಾಗಿ ಅಂಡರ್‌ಬಾಡಿ ಅರ್ಮರ್ ಮತ್ತು ಕಾರಿನ ಸುತ್ತಲಿನ ದೃಶ್ಯವನ್ನು ಒದಗಿಸಲು 18 ಕ್ಯಾಮೆರಾಗಳನ್ನು ಸಹ ನೀಡುತ್ತದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಅನಾವರಣವಾಯ್ತು ಪವರ್‌ಫುಲ್ ಜಿಎಂಸಿ ಹಮ್ಮರ್ ಇವಿ

ಪರ್ಪಾಮೆನ್ಸ್ ಸೂಪರ್ ಟ್ರಕ್ ಹಮ್ಮರ್ ಜಿಎಂ ಕಂಪನಿಯ ಎಲೆಕ್ಟ್ರಿಕ್ ವಿಭಾಗಕ್ಕೆ ಮತ್ತೊಂದು ಹೆಜ್ಜೆಯಾಗಿದೆ. ಈ ಹಮ್ಮರ್ ಇವಿ ಉತ್ತಮ ಸಾಮರ್ಥ್ಯ, ದಕ್ಷತೆ ಮತ್ತು ಕಾರ್ಯಕ್ಷಮತೆಯನ್ನು ಹೊಂದಿದೆ ಎಂದು ಜನರಲ್ ಮೋಟಾರ್ಸ್ ಅಧ್ಯಕ್ಷ ಮಾರ್ಕ್ ರೌಸ್ ಹೇಳಿದರು.

ಅನಾವರಣವಾಯ್ತು ಪವರ್‌ಫುಲ್ ಜಿಎಂಸಿ ಹಮ್ಮರ್ ಇವಿ

ಹಮ್ಮರ್ ಇವಿ ರೂಫ್ ಪ್ಯಾನೆಲ್ ಗಳನ್ನು ಸಹ ಪಡೆಯುತ್ತದೆ, ಅದು ಮುಂಭಾಗದ ಬೂಟ್‌ನೊಳಗೆ ಹೊಂದಿಕೊಳ್ಳುತ್ತದೆ. ಹೊಸ ಹಮ್ಮರ್ ಇವಿಯಲ್ಲಿ ಆಲ್-ಎಲ್ಇಡಿ ಲೈಟಿಂಗ್ ಅನ್ನು ಅಳವಡಿಸಿದೆ. ಈ ವಾಹನವು ಬಾಕ್ಸಿ-ಲುಕ್ ನೊಂದಿಗೆ ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಜಿಎಂಸಿ ಹಮ್ಮರ್ ಇವಿ ಉತ್ಪಾದನೆಯು ಮುಂದಿನ ವರ್ಷ ಪ್ರಾರಂಭವಾಗಲಿದೆ.

Most Read Articles

Kannada
Read more on ಹಮ್ಮರ್ hummer
English summary
GMC Hummer EV Unveiled With 1000 HP And 350 Km Driving Range Details. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X