ಹೊಸ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಟೀಸರ್ ವೀಡಿಯೋ ಬಿಡುಗಡೆ

ಜನರಲ್ ಮೋಟಾರ್ಸ್ ಸಂಸ್ಥೆಯು ತನ್ನ ಜನಪ್ರಿಯ ಹಮ್ಮರ್ ಎಸ್‍‍ಯುವಿಯನ್ನು ಮತ್ತೊಮ್ಮೆ ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗುತ್ತಿದೆ. ಆದರೆ ಈ ಬಾರಿ ಜನಪ್ರಿಯ ಹಮ್ಮರ್ ಎಸ್‍‍ಯುವಿಯನ್ನು ಎಲೆಕ್ಟ್ರಿಕ್ ರೂಪದಲ್ಲಿ ಪರಿಚಯಿಸಲಿದೆ.

ಹೊಸ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಟೀಸರ್ ವೀಡಿಯೋ ಬಿಡುಗಡೆ

ಜನರಲ್ ಮೋಟಾರ್ಸ್ ಸಂಸ್ಥೆಯು ಹೊಸ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಟೀಸರ್ ವೀಡಿಯೋವನ್ನು ಬಿಡುಗಡೆಗೊಳಿಸಿದೆ. ಈ ಹಮ್ಮರ್ ಎಸ್‍ಯುವಿಯನ್ನು ಬಿಟಿ1 ಪ್ಲಾಟ್‌ಫಾರ್ಮ್ ಅಡಿಯಲ್ಲಿ ತಯಾರಿಸಲಾಗುತ್ತದೆ. ಈ ಹೊಸ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಟಾಪ್-ಆಫ್-ಲೈನ್ ರೂಪಾಂತರವು 1,014 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇದು ಕೇವಲ ಮೂರು ಸೆಕೆಂಡುಗಳಲ್ಲಿ 0 - 96 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಈ ಎಸ್‍ಯುವಿಯಲ್ಲಿ ಅಲ್ಟಿಯಮ್ ತಲೆಮಾರಿನ ಲಿಥಿಯಂ ಬ್ಯಾಟರಿಗಳನ್ನು ಬಳಸಲಾಗುತ್ತದೆ.

ಹೊಸ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಟೀಸರ್ ವೀಡಿಯೋ ಬಿಡುಗಡೆ

ಹಮ್ಮರ್ ಎಲೆಕ್ಟ್ರಿಕ್ ಆವೃತ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಟೀಸರ್ ವೀಡಿಯೋವನ್ನು ಹಮ್ಮರ್ ಎಲೆಕ್ಟ್ರಿಕ್ ಎಸ್‍‍ಯುವಿಯ ವಿನ್ಯಾಸವು ಹಿಂದಿನ ಮಾದರಿಗಿಂತ ಆಕರ್ಷಕವಾದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ಹೊಸ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಟೀಸರ್ ವೀಡಿಯೋ ಬಿಡುಗಡೆ

ಈ ಹೊಸ ಎಸ್‍‍ಯುವಿಯು ಶಾರ್ಪ್ ಲೈನ್ ವಿನ್ಯಾಸವನ್ನು ಹೊಂದಿದೆ. ಹಳೆಯ ಮಾದರಿಯಿಂದ ಹೊಸ ಮಾದರಿಯು ಪ್ರತ್ಯೇಕಿಸುವ ಅಂಶವೆಂದರೆ ಎಲ್‍ಇಡಿ ಲೈಟಿಂಗ್, ಹೆಡ್‍‍ಲ್ಯಾಂಪ್‍, ಗ್ರಿಲ್ ಮತ್ತು ಡೇ ಟೈಮ್ ರನ್ನಿಂಗ್ ಲೈಟ್ ಆಗಿದೆ.

ಹೊಸ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಟೀಸರ್ ವೀಡಿಯೋ ಬಿಡುಗಡೆ

ಎಲೆಕ್ಟ್ರಿಕ್ ಹಮ್ಮರ್ ಎಸ್‍ಯುವಿಯ ವಿನ್ಯಾಸ ಮತ್ತು ಸ್ಟೈಲಿಂಗ್ ಬಗ್ಗೆ ಹೆಚ್ಚಿನ ಮಾಹಿತಿ ಅಧಿಕೃತವಾಗಿ ಬಹಿರಂಗಪಡಿಸಿಲ್ಲ. ಹೊಸ ಹಮ್ಮರ್ ಆಫ್-ರೋಡ್ ಎಸ್‍‍ಯುವಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿದೆ.

MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ಹೊಸ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಟೀಸರ್ ವೀಡಿಯೋ ಬಿಡುಗಡೆ

ಹಮ್ಮರ್ ಸರಳವಾದ ಆಫ್-ರೋಡ್ ಎಸ್‍‍ಯುವಿಯಾಗಿದೆ. ಹಮ್ಮರ್ ಎಸ್‍‍ಯುವಿಯು ಕಠಿಣವಾದ ಅಡೆತಡೆಗಳಲ್ಲಿ ಸುಲಭವಾಗಿ ಸಾಗುತ್ತದೆ. ಆಫ್ ರೋಡ್ ವಾಹನ ಪ್ರಿಯರ ಮೆಚ್ಚಿನ ಎಸ್‍‍ಯುವಿಯಾಗಿದೆ. ಅಮೆರಿಕಾದ ಸೈನ್ಯ, ಯುಎಸ್ ಮೆರೈನ್ ಕಾಪ್ಸ್ ಮತ್ತು ಇತರ ಅರೆಸೈನಿಕ ಪಡೆಗಳಿಗೂ ಇದು ಮೆಚ್ಚಿನ ಎಸ್‍ಯುವಿಯಾಗಿದೆ.

ಹೊಸ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಟೀಸರ್ ವೀಡಿಯೋ ಬಿಡುಗಡೆ

ಅಮೆರಿಕಾದ ಪಡೆಗಳು ಕಾರ್ಯಾಚರಣೆಗಾಗಿ ವಿಶೇಷವಾಗಿ ತಯಾರಿಸಿ ಹಮ್ಮರ್ ಅನ್ನು ಬಳಸುತ್ತಿದ್ದರು. ಹಮ್ಮರ್ ಎಸ್‍‍ಯುವಿಯನ್ನು ಮೊದಲ ಬಾರಿಗೆ 1992ರಲ್ಲಿ ಬಿಡುಗಡೆ ಗೊಳಿಸಿದ್ದರು. ಹಮ್ಮರ್‍‍ನ ಉತ್ಪಾದನೆಯನ್ನು 2010ರಲ್ಲಿ ಸ್ಥಗಿತಗೊಳಿಸಲಾಗಿತ್ತು.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಈ ಎಂಜಿನ್ ಅಪಾರ ಪ್ರಮಾಣದ ಮಾಲಿನ್ಯವನ್ನು ಉಂಟುಮಾಡುತ್ತದೆ. ಇದನ್ನು ಪರಿಸರವಾದಿಗಳು ತೀವ್ರವಾಗಿ ಟೀಕಿಸಿದರು. ಈ ಟೀಕೆಗಳಿಂದ ಹೊರಗೆ ಬರಲು ಹಮ್ಮರ್ ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ. ಜಿ‍ಎಂಸಿ ಕಂಪನಿಯು ಹಮ್ಮರ್ ಎಲೆಕ್ಟ್ರಿಕ್ ಎಸ್‍‍ಯುವಿಯನ್ನು ಅಭಿವೃದ್ದಿಪಡಿಸಲಾಗಿದೆ.

ಹೊಸ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಟೀಸರ್ ವೀಡಿಯೋ ಬಿಡುಗಡೆ

ಹಮ್ಮರ್‍ ಎಸ್‍‍ಯುವಿಯು ಹೆಚ್ಚು ತೂಕ , ಇಂಧನ ದಕ್ಷತೆ ಅಂಕಿ ಅಂಶಗಳು, ಪವರ್ ಮತ್ತು ಟಾರ್ಕ್ ಉತ್ಪಾದನೆಯು ಅಂಕಿ ಅಂಶಗಳು ಹೆಚ್ಚಿದೆ. ಪವರ್‍‍ಫುಲ್ ಹಮ್ಮರ್ ಎಸ್‍‍ಯುವಿ ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗುವ ಮೂಲಕ ಪರಿಸರ ಸ್ನೇಹಿಯಾಗಿರಲಿದೆ. ಈ ಹೊಸ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯು ಈ ವರ್ಷದ ಕೊನೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.

More from DriveSpark

Article Published On: Thursday, July 30, 2020, 14:05 [IST]
English summary
General Motors Teases Upcoming Hummer Electric SUV. Read In Kannada.
Read more on ಹಮ್ಮರ್ hummer
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+