ಲಾಕ್‌ಡೌನ್ ಎಫೆಕ್ಟ್: ಗುತ್ತಿಗೆದಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು ಶೀಘ್ರದಲ್ಲೇ ರಸ್ತೆ ಗುತ್ತಿಗೆದಾರರಿಗೆ ರಸ್ತೆ ಯೋಜನೆಗಳನ್ನು ಪೂರ್ಣಗೊಳಿಸಲು ಹಾಗೂ ಕಾರ್ಮಿಕರಿಗೆ ಸಂಬಳ ನೀಡಲು ರೂ.8,000 ಕೋಟಿ ಪಾವತಿಸಲಿದೆ.

ಲಾಕ್‌ಡೌನ್ ಎಫೆಕ್ಟ್: ಗುತ್ತಿಗೆದಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

ಲಾಕ್‌ಡೌನ್‌ನಿಂದ ಉಂಟಾಗಿರುವ ಸಂಕಷ್ಟಗಳನ್ನು ಗಮನದಲ್ಲಿಟ್ಟುಕೊಂಡು, ಇಲಾಖೆಯು ಕಾಮಗಾರಿಗಳನ್ನು ಪೂರ್ಣಗೊಳಿಸುವ ಅವಧಿಯನ್ನು 3-6 ತಿಂಗಳುಗಳಿಗೆ ವಿಸ್ತರಿಸಿದೆ. ಲಾಕ್‌ಡೌನ್‌ನಿಂದ ಉಂಟಾದ ನಷ್ಟ ಹಾಗೂ ಗುತ್ತಿಗೆದಾರರಿಗೆ ನೀಡಬೇಕಾಗಿರುವ ಬಾಕಿಯ ಬಗ್ಗೆ ಇಲಾಖೆಯು ಇನ್ನೂ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ. ಗುತ್ತಿಗೆದಾರರು ಯೋಜನೆಯಲ್ಲಿಟ್ಟಿರುವ ಭದ್ರತಾ ಹಣವನ್ನು ಕಾಮಗಾರಿಗೆ ಬಳಸಿಕೊಳ್ಳಬೇಕೆಂದು ಇಲಾಖೆ ಆದೇಶಿಸಿದೆ.

ಲಾಕ್‌ಡೌನ್ ಎಫೆಕ್ಟ್: ಗುತ್ತಿಗೆದಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

ಯೋಜನೆಗಳನ್ನು ಮುಂದುವರಿಸಲು ಇಲಾಖೆಯು ಎಸ್ಕ್ರೊ ಖಾತೆಯ ಮೂಲಕ ಹಣ ಪಾವತಿಸುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ಕೇಂದ್ರ ಸರ್ಕಾರವು ರಸ್ತೆ ಅಭಿವೃದ್ಧಿಗಾಗಿ ರೂ.15 ಲಕ್ಷ ಕೋಟಿಗಳನ್ನು ಖರ್ಚು ಮಾಡಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿರವರು ಹೇಳಿದ್ದಾರೆ.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಲಾಕ್‌ಡೌನ್ ಎಫೆಕ್ಟ್: ಗುತ್ತಿಗೆದಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

ಇದರ ಜೊತೆಗೆ ಆಟೋ ಸ್ಕ್ರ್ಯಾಪಿಂಗ್ ನೀತಿಯನ್ನು ಜಾರಿಗೆ ತರುವ ಬಗ್ಗೆ ಸಚಿವರು ಮಾಹಿತಿ ನೀಡಿದ್ದಾರೆ. ಕರೋನಾ ವೈರಸ್‌ನಿಂದ ಉಂಟಾಗಿರುವ ಬಿಕ್ಕಟ್ಟನ್ನು ಅವಕಾಶವನ್ನಾಗಿ ಮಾಡಿಕೊಳ್ಳಬೇಕೆಂದು ನಿತಿನ್ ಗಡ್ಕರಿ ಭಾರತೀಯ ಕೈಗಾರಿಕೋದ್ಯಮಿಗಳಿಗೆ ಕರೆ ನೀಡಿದ್ದಾರೆ.

ಲಾಕ್‌ಡೌನ್ ಎಫೆಕ್ಟ್: ಗುತ್ತಿಗೆದಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

ವಾಹನ ಉತ್ಪಾದನಾ ವಲಯವನ್ನು ಆರ್ಥಿಕ ಹಿಂಜರಿತದಿಂದ ಹೊರತರಲು ವಿದೇಶಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವಂತೆ ಅವರು ಕರೆ ನೀಡಿದ್ದಾರೆ. ಕರೋನಾ ವೈರಸ್‌ನಿಂದ ಆರ್ಥಿಕತೆ ವ್ಯವಸ್ಥೆಯ ಮೇಲೆ ಬಿಕ್ಕಟ್ಟು ಉಂಟಾಗಿದೆ ಎಂದು ಅವರು ಹೇಳಿದ್ದಾರೆ.

MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಲಾಕ್‌ಡೌನ್ ಎಫೆಕ್ಟ್: ಗುತ್ತಿಗೆದಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

ಈ ಬಿಕ್ಕಟ್ಟನ್ನು ಅವಕಾಶವನ್ನಾಗಿ ಪರಿವರ್ತಿಸಿಕೊಳ್ಳಬೇಕು. ಭಾರತದಲ್ಲಿ ಹೂಡಿಕೆ ಮಾಡಲು ಭಾರತೀಯ ಉದ್ಯಮವು ವಿದೇಶಿ ಕಂಪನಿಗಳನ್ನು ಆಹ್ವಾನಿಸಬೇಕು ಎಂದು ಹೇಳಿರುವ ಸಚಿವರು ಕರೋನಾ ವೈರಸ್ ವಿರುದ್ಧದ ಯುದ್ಧದಲ್ಲಿ ದೇಶವು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲಾಕ್‌ಡೌನ್ ಎಫೆಕ್ಟ್: ಗುತ್ತಿಗೆದಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

ದೇಶದ ಆಟೋಮೊಬೈಲ್ ಉದ್ಯಮವು ಜಾಗತಿಕ ಮಾರುಕಟ್ಟೆಯಲ್ಲಿ ಸ್ಪರ್ಧೆಯನ್ನು ನೀಡಲು ಹೊಸ ತಂತ್ರಜ್ಞಾನ ಹಾಗೂ ಸಂಶೋಧನೆಗಳನ್ನು ಹೆಚ್ಚು ಬಳಸಬೇಕು ಎಂದು ಗಡ್ಕರಿರವರು ಹೇಳಿದರು.

Most Read Articles

Kannada
English summary
Government extends timelines for road contractors and releases upto Rs.8000 crore. Read in Kannada.
Story first published: Friday, June 5, 2020, 19:57 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X