ಶೀಘ್ರದಲ್ಲೇ ನಿರ್ಮಾಣವಾಗಲಿವೆ 2,600 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌

ಎಲೆಕ್ಟ್ರಿಕ್ ವಾಹನಗಳ ಮಾರಾಟಕ್ಕೆ ಪೂರಕವಾದ ಮಾರುಕಟ್ಟೆಯಿದ್ದರೂ ಅಗತ್ಯವಾದ ಚಾರ್ಜಿಂಗ್ ಸ್ಟೇಷನ್‌ಗಳ ಕೊರತೆ ಎದ್ದು ಕಾಣುತ್ತಿದ್ದು, ಈ ನಿಟ್ಟಿನಲ್ಲಿ ಹೊಸ ಯೋಜನೆ ರೂಪಿಸಿರುವ ಕೇಂದ್ರ ಸರ್ಕಾರವು ಶೀಘ್ರದಲ್ಲೇ 2,600 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ದೇಶದ ಪ್ರಮುಖ ನಗರಗಳಲ್ಲಿ ನಿರ್ಮಾಣಕ್ಕೆ ಚಾಲನೆ ನೀಡುತ್ತಿದೆ.

ಶೀಘ್ರದಲ್ಲೇ ನಿರ್ಮಾಣವಾಗಲಿವೆ 2,600 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌

ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮತ್ತು ಮಾರಾಟ ಹೆಚ್ಚಿಸಲು ಜಾರಿಗೆ ತರಲಾಗಿರುವ ಫೇಮ್ 2 ಯೋಜನೆಯಡಿಯಲ್ಲೇ ಹೊಸದಾಗಿ 2,600 ಫಾಸ್ಟ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ನಿರ್ಮಾಣವಾಗಲಿದ್ದು, ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ ಮತ್ತು ಪ್ರಮುಖ ಜನದಟ್ಟಣೆ ಪ್ರದೇಶಗಳಲ್ಲಿ ಹೊಸ ಚಾರ್ಜಿಂಗ್ ಸ್ಟೇಷನ್‌ಗಳು ತಲೆ ಎತ್ತಲಿವೆ. ಫಾಸ್ಟ್‌ ಚಾರ್ಜಿಂಗ್ ಸ್ಟೇಷನ್‌ಗಳಲ್ಲಿ ಅತಿ ಕಡಿಮೆ ಅವಧಿಯಲ್ಲಿ ಚಾರ್ಜಿಂಗ್ ಮಾಡಿಕೊಳ್ಳಬಹುದಾಗಿದ್ದು, 40 ನಿಮಿಷದಿಂದ 50 ನಿಮಿಷ ಅವಧಿಯಲ್ಲಿ ಶೇ.80 ರಷ್ಟು ಚಾರ್ಜಿಂಗ್ ಮಾಡಿಕೊಳ್ಳಬಹುದಾಗಿದೆ.

ಶೀಘ್ರದಲ್ಲೇ ನಿರ್ಮಾಣವಾಗಲಿವೆ 2,600 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿ ಹಲವು ಎಲೆಕ್ಟ್ರಿಕ್ ಕಾರು ಮಾದರಿಗಳು ಖರೀದಿಗೆ ಲಭ್ಯವಿದ್ದು, ಬಹುತೇಕ ಇವಿ ಕಾರುಗಳು ಸಾಮಾನ್ಯ ಕಾರು ಮಾದರಿಗಿಂತಲೂ ಎರಡು ಪಟ್ಟು ದುಬಾರಿ ಬೆಲೆ ಹೊಂದಿವೆ. ಇದರಿಂದ ಎಲೆಕ್ಟ್ರಿಕ್ ಕಾರು ಮಾರಾಟವನ್ನು ಹೆಚ್ಚಿಸುವುದಕ್ಕಾಗಿ ಬೆಲೆ ಇಳಿಕೆಗೆ ನೀತಿ ಆಯೋಗವು ಹೊಸ ಯೋಜನೆಯೊಂದನ್ನು ರೂಪಿಸುತ್ತಿದೆ.

ಶೀಘ್ರದಲ್ಲೇ ನಿರ್ಮಾಣವಾಗಲಿವೆ 2,600 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌

ವಿಶ್ವಾದ್ಯಂತ ಬಹುತೇಕ ರಾಷ್ಟ್ರಗಳು ಮಾಲಿನ್ಯ ತಗ್ಗಿಸುವ ಉದ್ದೇಶದಿಂದ 2030ರ ವೇಳೆಗೆ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ಮುಂದಾಗಿದ್ದು, ಕೇಂದ್ರ ಸರ್ಕಾರವು ಸಹ ಇದೇ ನಿಟ್ಟಿನಲ್ಲಿ ಯೋಜನೆ ರೂಪಿಸಿದೆ.

ಶೀಘ್ರದಲ್ಲೇ ನಿರ್ಮಾಣವಾಗಲಿವೆ 2,600 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌

ಎಲೆಕ್ಟ್ರಿಕ್ ಕಾರುಗಳ ಮಾರಾಟವನ್ನು ಹೆಚ್ಚಿಸುವ ಸಂಬಂಧ ಫೇಮ್ 1 ಮತ್ತು ಫೇಮ್ 2 ಯೋಜನೆಗಳ ಮೂಲಕ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮಾಡುವ ಕಂಪನಿಗಳಿಗೆ ಮಾತ್ರವಲ್ಲದೇ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಹಲವಾರು ಆಫರ್‌ಗಳನ್ನು ನೀಡುತ್ತಿದ್ದು, ಫೇಮ್ 2 ಯೋಜನೆಯ ಆಫರ್‌ಗಳ ಹೊರತಾಗಿಯೂ ಎಲೆಕ್ಟ್ರಿಕ್ ವಾಹನಗಳ ಮಾರಾಟವು ನಿಗದಿತ ಮಟ್ಟಕ್ಕಿಂತಲೂ ಕಡಿಮೆ ಪ್ರಮಾಣದಲ್ಲಿ ಮಾರಾಟವಾಗುತ್ತಿದ್ದು, ಈ ಕುರಿತು ನೀತಿ ಆಯೋಗವು ಗಂಭೀರವಾಗಿ ಚಿಂತನೆ ನಡೆಸುತ್ತಿದೆ.

ಶೀಘ್ರದಲ್ಲೇ ನಿರ್ಮಾಣವಾಗಲಿವೆ 2,600 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌

ಎಲೆಕ್ಟ್ರಿಕ್ ವಾಹನಗಳ ಪ್ರಮುಖ ತಾಂತ್ರಿಕ ಅಂಶವಾಗಿರುವ ಲೀಥಿಯಂ ಅಯಾನ್ ಬ್ಯಾಟರಿ ಬಳಕೆಯ ಬೆಲೆ ತಗ್ಗಿಸಲು ಮಹತ್ವದ ಕ್ರಮ ಕೈಗೊಳ್ಳಲಾಗುತ್ತಿದ್ದು, ಭಾರತದಲ್ಲೇ ಉತ್ಪಾದನೆ ಮಾಡಲು ಈಗಾಗಲೇ ಹಲವು ಆಟೋ ಉತ್ಪಾದನಾ ಸಂಸ್ಥೆಗಳು ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿವೆ.

ಶೀಘ್ರದಲ್ಲೇ ನಿರ್ಮಾಣವಾಗಲಿವೆ 2,600 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌

ಲೀಥಿಯಂ ಬ್ಯಾಟರಿ ಸಂಪನ್ಮೂಲಕ್ಕಾಗಿ ಶೇ.100ರಷ್ಟು ಚೀನಿ ಮತ್ತು ತೈವಾನ್ ಮಾರುಕಟ್ಟೆಗಳನ್ನೇ ಅವಂಭಿಸಿರುವ ಭಾರತದ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಸಂಸ್ಥೆಗಳು ಸ್ಥಳೀಯವಾಗಿ ಅಭಿವೃದ್ದಿಗೊಳಿಸಲಾದ ಲೀಥಿಯಂ ಅಯಾನ್ ಬ್ಯಾಟರಿ ಸಂಪನ್ಮೂಲಕ್ಕಾಗಿ ಎದುರು ನೋಡುತ್ತಿವೆ.

ಶೀಘ್ರದಲ್ಲೇ ನಿರ್ಮಾಣವಾಗಲಿವೆ 2,600 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌

ಸದ್ಯ ಹೊಸ ಬ್ಯಾಟರಿ ಉತ್ಪಾದನಾ ಘಟಕಗಳ ನಿರ್ಮಾಣದ ಹೂಡಿಕೆ ಮಾಡುತ್ತಿರುವ ಆಟೋ ಉತ್ಪಾದನಾ ಸಂಸ್ಥೆಗಳು ಮುಂದಿನ ಎರಡು ವರ್ಷಗಳ ಅವಧಿಯೊಳಗೆ ಬ್ಯಾಟರಿ ಪೂರೈಕೆಗೆ ಸಿದ್ದವಾಗಲಿದ್ದು, ತದನಂತರವಷ್ಟೇ ಎಲೆಕ್ಟ್ರಿಕ್ ಕಾರುಗಳು ಮತ್ತು ದ್ವಿಚಕ್ರ ವಾಹನಗಳ ಬೆಲೆ ಇಳಿಕೆಯನ್ನ ನೀರಿಕ್ಷಿಸಲಾಗುತ್ತಿದೆ.

ಶೀಘ್ರದಲ್ಲೇ ನಿರ್ಮಾಣವಾಗಲಿವೆ 2,600 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌

ಇದಕ್ಕಾಗಿ ಭಾರತದಲ್ಲಿ ಸದ್ಯ ನಿರ್ಮಾಣವಾಗುತ್ತಿರುವ ಬ್ಯಾಟರಿ ಉತ್ಪಾದನಾ ಸಂಸ್ಥೆಗಳಿಗೆ ಪೂರಕವಾಗಿ ಮತ್ತಷ್ಟು ಹೊಸ ಸರಳ ನೀತಿ ನಿಯಮಗಳನ್ನು ಜಾರಿಗೆ ತರುವುದಾಗಿ ನೀತಿ ಆಯೋಗವು ಭರವಸೆ ನೀಡಿದ್ದು, 2030ರ ವೇಳೆ ಡೀಸೆಲ್-ಪೆಟ್ರೋಲ್ ವಾಹನಗಳನ್ನು ತಗ್ಗಿಸಲು ಈಗಿನಿಂದಲೇ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ಹೆಚ್ಚಿಸಲು ಅನಿವಾರ್ಯತೆಗಳಿವೆ.

ಶೀಘ್ರದಲ್ಲೇ ನಿರ್ಮಾಣವಾಗಲಿವೆ 2,600 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌

ಪ್ರಮುಖವಾಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿನ ಬದಲಾವಣೆಗಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವಂತಹ ಅನಿವಾರ್ಯತೆ ಇರುವುದಾಗಿದ ನೀತಿ ಆಯೋಗವು ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದೆ.

ಶೀಘ್ರದಲ್ಲೇ ನಿರ್ಮಾಣವಾಗಲಿವೆ 2,600 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌

ಹೊಸ ಎಲೆಕ್ಟ್ರಿಕ್ ವಾಹನಗಳ ಜೊತೆಗೆ ಸದ್ಯ ಮಾರುಕಟ್ಟೆಯಲ್ಲಿರುವ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಪ್ರೇರಿತ ವಾಹನಗಳನ್ನು ಎಲೆಕ್ಟ್ರಿಕ್‌ನತ್ತ ಬದಲಾಯಿಸುವ ಬಗ್ಗೆಯು ಮಾತನಾಡಿರುವ ನೀತಿ ಆಯೋಗವು ಬ್ಯಾಟರಿ ಉತ್ಪಾದನಾ ಸಂಸ್ಥೆಗಳಿಗೆ ಅಗತ್ಯ ಸೌಲಭ್ಯದ ಜೊತೆಗೆ ಉತ್ಪಾದನಾ ನಿಯಮಗಳನ್ನು ಮತ್ತಷ್ಟು ಸರಳಗೊಳಿಸುವುದಾಗಿ ಭರವಸೆ ನೀಡಿದೆ.

Most Read Articles

Kannada
English summary
Government to install 2,600 EV charging station under Fame-2 scheme. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X