400 ಕಿ.ಮೀಗೂ ಹೆಚ್ಚು ಮೈಲೇಜ್ ನೀಡಲಿದೆ ಈ ಎಲೆಕ್ಟ್ರಿಕ್ ಕಾರು
ಚೀನಾ ಮೂಲದ ಗ್ರೇಟ್ ವಾಲ್ ಮೋಟಾರ್ಸ್ ತನ್ನ ಹೊಸ ಓರಾ ಆರ್ 2 ಎಲೆಕ್ಟ್ರಿಕ್ ಕಾರ್ ಅನ್ನು ಅನಾವರಣಗೊಳಿಸಿದೆ. ಓರಾ ಆರ್ 2 ಎಲೆಕ್ಟ್ರಿಕ್ ಕಾರಿನ ಎಂಜಿನ್ ಭಾಗಗಳ ಬಗ್ಗೆ ಗ್ರೇಟ್ ವಾಲ್ ಮೋಟಾರ್ಸ್ ಯಾವುದೇ ಮಾಹಿತಿಯನ್ನು ಬಿಡುಗಡೆಗೊಳಿಸಿಲ್ಲ.

ಈ ಎಲೆಕ್ಟ್ರಿಕ್ ಕಾರು ಚೀನಾ ಮಾರುಕಟ್ಟೆಯಲ್ಲಿ ಇದೇ ತಿಂಗಳು ಬಿಡುಗಡೆಯಾಗುವ ನಿರೀಕ್ಷೆಗಳಿವೆ. ಗ್ರೇಟ್ ವಾಲ್ ಮೋಟಾರ್ಸ್ ಕಂಪನಿಯು ಈ ವರ್ಷದ ಫೆಬ್ರವರಿಯಲ್ಲಿ ದೆಹಲಿಯಲ್ಲಿ ನಡೆದಿದ್ದ 2020ರ ಆಟೋ ಎಕ್ಸ್‌ಪೋದಲ್ಲಿ ವಿಶ್ವದ ಅಗ್ಗದ ಎಲೆಕ್ಟ್ರಿಕ್ ಕಾರ್ ಎಂದು ಹೇಳಲಾದ ಆರ್ 1 ಮಾದರಿಯನ್ನು ಅನಾವರಣಗೊಳಿಸಿತ್ತು.

ಆರ್ 2 ಮಾದರಿಯ ಕಾರ್ ಅನ್ನು ಆರ್ 1 ಮಾದರಿಯ ಎಲೆಕ್ಟ್ರಿಕ್ ಕಾರಿನ ಪ್ಲಾಟ್‌ಫಾರಂ ಮೇಲೆ ಅಭಿವೃದ್ಧಿಪಡಿಸಲಾಗಿದೆ. ಓರಾ ಆರ್ 2 ಎಲೆಕ್ಟ್ರಿಕ್ ಕಾರು, ಆರ್ 1 ಎಲೆಕ್ಟ್ರಿಕ್ ಕಾರಿಗಿಂತ 15 ಎಂಎಂ ಹೆಚ್ಚು ಅಂದರೆ 2490 ಎಂಎಂ ವ್ಹೀಲ್ ಬೇಸ್ ಹೊಂದಿದೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!

ಆರ್ 1 ಮಾದರಿಯಲ್ಲಿರುವ ಎಲೆಕ್ಟ್ರಿಕ್ ಮೋಟರ್, 48 ಬಿಹೆಚ್‌ಪಿ ಪವರ್ ಉತ್ಪಾದಿಸಿದರೆ, ಆರ್ 2 ಮಾದರಿಯಲ್ಲಿರುವ ಎಲೆಕ್ಟ್ರಿಕ್ ಮೋಟರ್ 63 ಬಿಹೆಚ್‌ಪಿ ಪವರ್ ಉತ್ಪಾದಿಸುತ್ತದೆ. ಓರಾ ಆರ್ 2 ಕಾರಿನಲ್ಲಿರುವ ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್ ಮಾಡಿದರೆ ಈ ಎಲೆಕ್ಟ್ರಿಕ್ ಕಾರು 401 ಕಿ.ಮೀಗಳವರೆಗೆ ಚಲಿಸುತ್ತದೆ.

ಚೀನಾ ಮಾರುಕಟ್ಟೆಯಲ್ಲಿ ಆರ್ 1 ಎಲೆಕ್ಟ್ರಿಕ್ ಕಾರ್ ಅನ್ನು ಎರಡು ಮಾದರಿಗಳಲ್ಲಿ ಮಾರಾಟ ಮಾಡಲಾಗುತ್ತದೆ. 28.5 ಕಿ.ವ್ಯಾ ಬ್ಯಾಟರಿ ಹೊಂದಿರುವ ಮಾದರಿಯು 300 ಕಿ.ಮೀಗಳವರೆಗೆ ಚಲಿಸಿದರೆ, 33 ಕಿ.ವ್ಯಾ ಬ್ಯಾಟರಿ ಹೊಂದಿರುವ ಮಾದರಿಯು 350 ಕಿ.ಮೀಗಳವರೆಗೆ ಚಲಿಸುತ್ತದೆ.
MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಬ್ಯಾಟರಿಯನ್ನು ಚಾರ್ಜ್ ಮಾಡಲು ಚಾರ್ಜಿಂಗ್ ಹೋಲ್ ಗಳನ್ನು ಕಾರಿನ ಮುಂಭಾಗದ ಎಡಭಾಗದಲ್ಲಿ ನೀಡಲಾಗಿದೆ. ವಿಂಡ್‌ಸ್ಕ್ರೀನ್ ಅನ್ನು ಕಾರಿನ ಹಿಂಭಾಗದಲ್ಲಿ ವಿಂಡ್‌ಶೀಲ್ಡ್ ಟೇಲ್‌ಗೇಟ್‌ನಂತೆ ನೀಡಲಾಗಿದೆ. ಹಿಂಭಾಗದಲ್ಲಿರುವ ಟೇಲ್‌ಲ್ಯಾಂಪ್‌ಗಳು ಈ ರೇರ್ ಸ್ಕ್ರೀನ್ ನ ಬಹುಭಾಗವನ್ನು ಆಕ್ರಮಿಸುತ್ತವೆ.

ಇವುಗಳ ಮೇಲೆ ಓರಾ ಕಂಪನಿಯ ಲೊಗೊ ಅಳವಡಿಸಲಾಗಿದೆ. ಓರಾ ಕಂಪನಿಯ ಮೂರನೇ ಉತ್ಪನ್ನವಾದ ಈ ಕಾರಿನಲ್ಲಿ ಮರ್ಸಿಡಿಸ್ ಬೆಂಝ್ ಕಂಪನಿಯ ಕಾರುಗಳ ರೀತಿಯಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಇನ್ಫೋಟೆನ್ ಮೆಂಟ್ ಸಿಸ್ಟಂ ಹಾಗೂ ದೊಡ್ಡ ಗಾತ್ರದ ಇಂಟಿಗ್ರೇಟೆಡ್ ಸ್ಕ್ರೀನ್ ಗಳನ್ನು ನೀಡಲಾಗಿದೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಕಡಿಮೆ ವೆಚ್ಚದ ಎಲೆಕ್ಟ್ರಿಕ್ ಕಾರ್ ಆಗಿದ್ದರೂ, ಆರ್ 2 ಎಲೆಕ್ಟ್ರಿಕ್ ಕಾರಿನಲ್ಲಿ 6 ಏರ್‌ಬ್ಯಾಗ್, ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂಗಳನ್ನು ಅಳವಡಿಸಲಾಗುವುದು. ಈ ಹೊಸ ಎಲೆಕ್ಟ್ರಿಕ್ ಕಾರಿನ ಬೆಲೆಯು ಆರ್ 1 ಎಲೆಕ್ಟ್ರಿಕ್ ಕಾರಿನ ಬೆಲೆಗಿಂತ ಹೆಚ್ಚಾಗಿರಲಿದೆ.

ಚೀನಾ ಸರ್ಕಾರದ ರಿಯಾಯಿತಿಗಳ ನಂತರ ಈ ಕಾರಿನ ಬೆಲೆ ಭಾರತದ ರೂಪಾಯಿ ಮೌಲ್ಯದಲ್ಲಿ ರೂ.6.5 ಲಕ್ಷಗಳಾಗಲಿದೆ. ಆರ್ 2 ಎಂಬುದು ಈ ಎಲೆಕ್ಟ್ರಿಕ್ ಕಾರಿನ ತಾತ್ಕಾಲಿಕ ಹೆಸರು. ಈ ಎಲೆಕ್ಟ್ರಿಕ್ ಕಾರನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗುವುದೆಂದು ಗ್ರೇಟ್ ವಾಲ್ ಮೋಟಾರ್ಸ್ ಹೇಳಿದೆ.


Click it and Unblock the Notifications








