ಹೈಮಾ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಮಾಹಿತಿ ಬಹಿರಂಗ

ಎಲೆಕ್ಟ್ರಿಕ್ ಕಾರುಗಳ ಮಾರಾಟ ಪ್ರಕ್ರಿಯೆ ಜೋರಾಗುತ್ತಿದ್ದು, ಹೈಮಾ ಸಂಸ್ಥೆಯು ಸಹ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯೊಂದಿಗೆ ಭಾರತದಲ್ಲಿ ಹೊಸ ಕಾರು ಪ್ರಕ್ರಿಯೆ ಚಾಲನೆ ನೀಡುವುದಾಗಿ ಹೇಳಿಕೊಂಡಿದೆ.

ಹೈಮಾ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಮಾಹಿತಿ ಬಹಿರಂಗ

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಾಲಿನ್ಯವನ್ನು ತಗ್ಗಿಸಲು ಭಾರತದಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಕಾರುಗಳ ಮಾರಾಟವನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಹಲವು ಕಠಿಣ ಕ್ರಮಕೈಗೊಳ್ಳಲಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮತ್ತು ಮಾರಾಟದ ಮೇಲೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇದರ ಪರಿಣಾಮ ಚೀನಿ ಮೂಲದ ಹಲವು ಜನಪ್ರಿಯ ಆಟೋ ಉತ್ಪಾದನಾ ಸಂಸ್ಥೆಗಳು ತಮ್ಮ ಎಲೆಕ್ಟ್ರಿಕ್ ಕಾರು ಆವೃತ್ತಿಗಳನ್ನು ಭಾರತದಲ್ಲಿ ಬಿಡುಗಡೆಗೆ ಸಿದ್ದತೆ ನಡೆಸಿವೆ.

ಹೈಮಾ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಮಾಹಿತಿ ಬಹಿರಂಗ

ಚೀನಾದ ಜನಪ್ರಿಯ ಆಟೋ ಉತ್ಪಾದನಾ ಸಂಸ್ಥೆಯಾಗಿರುವ ಫಾವ್ ತನ್ನ ಅಂಗಸಂಸ್ಥೆಯಾದ ಹೈಮಾ ನಿರ್ಮಾಣದ ಎಲೆಕ್ಟ್ರಿಕ್ ಕಾರುಗಳ ಮೂಲಕ ಮೊದಲ ಬಾರಿಗೆ ಭಾರತೀಯ ಆಟೋ ಉದ್ಯಮವನ್ನು ಪ್ರವೇಶಿಸುತ್ತಿದ್ದು, ಮೊದಲ ಹಂತದಲ್ಲೇ ವಿವಿಧ ಕಾರು ಮಾದರಿಗಳನ್ನು ಬಿಡುಗಡೆಗೊಳಿಸುವ ಸುಳಿವು ನೀಡಿದೆ.

ಹೈಮಾ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಮಾಹಿತಿ ಬಹಿರಂಗ

ಫಾವ್ ಮೋಟಾರ್ಸ್ ಸಂಸ್ಥೆಯು ಚೀನಿ ಮಾರುಕಟ್ಟೆಯಲ್ಲಿ ಪ್ರಮುಖ ಕಾರುಗಳ ಉತ್ಪಾದನಾ ಮಾಲೀಕತ್ವವನ್ನು ಹೊಂದಿದ್ದು, ಹೈಮಾ ಕೂಡಾ ಇದೇ ಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ. ಇದೀಗ ಭಾರತದಲ್ಲಿ ಬರ್ಡ್ ಗ್ರೂಪ್ ಜೊತೆಗೂಡಿರುವ ಹೈಮಾ ಸಂಸ್ಥೆಯು ಭಾರತೀಯ ಗ್ರಾಹಕ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳನ್ನು ಬಿಡುಗಡೆ ಮಾಡಲು ಸಜ್ಜಾಗುತ್ತಿದೆ.

ಹೈಮಾ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಮಾಹಿತಿ ಬಹಿರಂಗ

ದೆಹಲಿ ಆಟೋ ಎಕ್ಸ್‌ಪೋ ಈಗಾಗಲೇ 7ಎಕ್ಸ್ ಎನ್ನುವ ಎಂಪಿವಿ ಮಾದರಿಯೊಂದನ್ನು ಅನಾವರಣಗೊಳಿಸಿ ಸಾರ್ವಜನಿಕರ ಗಮನಸೆಳೆದಿರುವ ಹೈಮಾ ಸಂಸ್ಥೆಯು ಇದೇ ವೇಳೆ ಅತಿ ಕಡಿಮೆ ಬೆಲೆಯಲ್ಲಿ ಅತ್ಯುತ್ತಮ ಮೈಲೇಜ್ ಪ್ರೇರಿತ ಇ1 ಮೈಕ್ರೋ ಎಸ್‌ಯುವಿ ಎಲೆಕ್ಟ್ರಿಕ್ ಕಾರು ಮಾದರಿಯೊಂದು ಪ್ರದರ್ಶನಗೊಳಿಸಿ ಶೀಘ್ರದಲ್ಲೇ ಬಿಡುಗಡೆ ಮಾಡುವ ಸುಳಿವು ನೀಡಿದೆ. ಇ1 ಹೊಸ ಕಾರು ರೂ. 10 ಲಕ್ಷದೊಳಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ಲೀಥಿಯಂ ಬ್ಯಾಟರಿ ಪ್ಯಾಕ್ ಹೊಂದಿದೆ.

ಹೈಮಾ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಮಾಹಿತಿ ಬಹಿರಂಗ

ಈ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 302 ಕಿ.ಮೀ ಮೈಲೇಜ್ ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದು, ಮೈಲೇಜ್ ಜೊತೆಗೆ ಹೊಸ ಕಾರಿನಲ್ಲಿ ಹಲವು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆಯೆಂತೆ.

ಹೈಮಾ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಮಾಹಿತಿ ಬಹಿರಂಗ

ಆದರೆ ಹೊಸ ಕಾರಿನ ಒಳಭಾಗದ ತಾಂತ್ರಿಕ ಅಂಶಗಳ ಕುರಿತಾಗಿ ಯಾವುದೇ ನೀಡಿಲ್ಲವಾದರೂ ಹೊಸ ಕಾರು ಬಜೆಟ್ ಬೆಲೆಯೊಂದಿಗೆ ಉತ್ತಮ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವುದು ಬಹುತೇಕ ಖಚಿತವಾಗಿದ್ದು, ಮೈಲೇಜ್ ವಿಚಾರವಾಗಿ ಹೊಸ ಕಾರು 2021ರ ಮಧ್ಯಂತರದಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹೈಮಾ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಮಾಹಿತಿ ಬಹಿರಂಗ

ಇನ್ನು ಹೈಮಾ ಆಟೋಮೊಬೈಲ್ ಸಂಸ್ಥೆಯು ಚೀನಿ ಮಾರುಕಟ್ಟೆಯಲ್ಲಿ 1988ರಲ್ಲೇ ಕಾರು ಮಾರಾಟ ಪ್ರಕ್ರಿಯೆಯನ್ನು ಆರಂಭಿಸಿದ್ದು, ಮಜ್ದಾ ಕಾರುಗಳ ರೀಬ್ಯಾಡ್ಜ್ ಆವೃತ್ತಿಯ ಮಾರಾಟದ ಮೂಲಕ ಜಾಗತಿಕ ಆಟೋ ಉತ್ಪಾದನಾ ಸಂಸ್ಥೆಯಾಗಿ ಗುರುತಿಸಿಕೊಂಡಿದೆ.

ಹೈಮಾ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಮಾಹಿತಿ ಬಹಿರಂಗ

ಜೊತೆಗೆ ಹೈಮಾ ಸಂಸ್ಥೆಯು ಹೊಸ ಕಾರುಗಳ ಅಭಿವೃದ್ದಿಗಾಗಿ ಗ್ಲೊಬಲ್ ಆರ್ಕಿಟೆಕ್ಚರ್ ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡುತ್ತಿರುವುದು ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿದ್ದು, ಹೈಮಾ ಜನಪ್ರಿಯ ಇ3 ಸೆಡಾನ್, ಇ5 ಎಸ್‌ಯುವಿ ಮತ್ತು ಇ70 ಎನ್ನುವ ಎಲೆಕ್ಟ್ರಿಕ್ ಎಂಪಿವಿ ಕಾರು ಭಾರತದಲ್ಲೂ ಬಿಡುಗಡೆಯಾಗುವ ನೀರಿಕ್ಷೆಗಳಿವೆ.

ಹೈಮಾ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಮಾಹಿತಿ ಬಹಿರಂಗ

ಈ ಮೂಲಕ ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯಗೊಳ್ಳುತ್ತಿರುವ ಕಿಯಾ ಮೋಟಾರ್ಸ್, ಎಂಜಿ ಮೋಟಾರ್ ಸಂಸ್ಥೆಗಳಿಗೆ ಪೈಪೋಟಿ ನೀಡಲಿರುವ ಹೈಮಾ ಆಟೋಮೊಬೈಲ್ ಸಂಸ್ಥೆಯು ಗ್ರೇಟ್ ವಾಲ್ ಮೋಟಾರ್ಸ್ ಸಂಸ್ಥೆಗೂ ಪೈಪೋಟಿಯಾಗಿ ಹಲವು ಹೊಸ ಕಾರು ಮಾದರಿಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲು ಭರ್ಜರಿ ಸಿದ್ದತೆ ನಡೆಸಿದೆ.

More from DriveSpark

Article Published On: Thursday, February 13, 2020, 17:12 [IST]
English summary
Haima E1 Electric Vehicle India Launch Details. Read in Kannada.
Read more on ಹೈಮಾ haima
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+