Just In
Don't Miss!
- News
ಕೊರೊನಾ ಬಂದಿದ್ದು ಚೀನಾದಿಂದ ಅಲ್ಲ... ಶಿವನಿಂದ, ನಾನೇ ಶಿವ!
- Sports
ಯುಎಇ ಆಟಗಾರರಿಂದ ಮ್ಯಾಚ್ ಫಿಕ್ಸಿಂಗ್; ಅಮಾನತು ಮಾಡಿದ ಐಸಿಸಿ
- Movies
'ಬೆಲ್ ಬಾಟಂ-2' ಟೈಟಲ್ ಪೋಸ್ಟರ್ ಅನಾವರಣ: ಡಿಟೆಕ್ಟಿವ್ ದಿವಾಕರ್ ಈಸ್ ಬ್ಯಾಕ್
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
50%ನಷ್ಟು ಟೋಲ್ ಶುಲ್ಕವನ್ನು ಮಾತ್ರ ಪಡೆಯುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶ ನೀಡಿದ ಹೈಕೋರ್ಟ್
ಚೆನ್ನೈನಿಂದ ಬೆಂಗಳೂರನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮಧುರಾವೋಯಲ್ ವಲಾಜಪೇಟೆವರೆಗಿನ ಮಾರ್ಗವು ಹಲವಾರು ವರ್ಷಗಳಿಂದ ಸರಿಯಾದ ನಿರ್ವಹಣೆ ಇಲ್ಲದೆ ಸೊರಗುತ್ತಿದೆ. ಈ ಮಾರ್ಗದಲ್ಲಿ ರಸ್ತೆ ಗುಂಡಿಗಳಿರುವುದರಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ.

ಈ ಮಾರ್ಗದಲ್ಲಿ ಹಲವಾರು ಪ್ರಮುಖ ಕಾರ್ಖಾನೆಗಳಿವೆ. ಜೊತೆಗೆ ಈ ಮಾರ್ಗವು ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತದೆ. ಆದರೂ ಈ ರಸ್ತೆಯನ್ನು ಸರಿಯಾಗಿ ನಿರ್ವಹಿಸಿಲ್ಲ. ಈ ಬಗ್ಗೆ ಹಲವು ಬಾರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ವಾಹನ ಚಾಲಕರು ದೂರಿದ್ದಾರೆ.

ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ಈ ರಸ್ತೆಯು ಮತ್ತಷ್ಟು ಹದಗೆಟ್ಟಿದೆ. ಮಧುರಾವೋಯಲ್ - ವಾಲಾಜಪೇಟೆಯವರೆಗಿನ ಮಾರ್ಗವು ಹದಗೆಟ್ಟ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ಸ್ವಯಂಪ್ರೇರಣೆಯಿಂದ ಪ್ರಕರಣ ದಾಖಲಿಸಿ ಕೊಂಡಿದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಈ ಪ್ರಕರಣವು ನ್ಯಾಯಮೂರ್ತಿಗಳಾದ ಸತ್ಯನಾರಾಯಣನ್ ಹಾಗೂ ಹೇಮಲತಾ ಅವರಿದ್ದ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಿಚಾರಣೆಯ ಸಂದರ್ಭದಲ್ಲಿ ಹದಗೆಟ್ಟಿರುವ ಮಧುರಾವೋಯಲ್ - ವಲಾಜಪೇಟೆ ರಸ್ತೆಯ ಫೋಟೋಗಳನ್ನು ನ್ಯಾಯಾಧೀಶರ ಮುಂದೆ ಸಲ್ಲಿಸಲಾಯಿತು.

ಈ ಮಾರ್ಗದ ಹಲವು ಭಾಗಗಳಲ್ಲಿ ರಸ್ತೆ ದೀಪಗಳು ಇಲ್ಲದಿರುವ ಬಗ್ಗೆ ಹಾಗೂ ರಸ್ತೆಯ ಮಧ್ಯದಲ್ಲಿ ಸಸ್ಯಗಳು ಇಲ್ಲದಿರುವ ಬಗ್ಗೆ ನ್ಯಾಯಾಧೀಶರಿಗೆ ದೂರು ನೀಡಲಾಯಿತು. ನ್ಯಾಯಾಧೀಶರು ರಾಷ್ಟ್ರೀಯ ಹೆದ್ದಾರಿಯ ಸ್ಥಿತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ರಸ್ತೆಯನ್ನು ನಿರ್ವಹಿಸದೇ ಇರುವ ಬಗ್ಗೆ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಪ್ರಶ್ನಿಸಿದರು. ಮುಂದಿನ 10 ದಿನಗಳಲ್ಲಿ ಮಧುರಾವೋಯಲ್ -ವಲಾಜಾಪೇಟೆಯ ರಸ್ತೆಯನ್ನು ಸರಿಪಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನ್ಯಾಯಪೀಠಕ್ಕೆ ತಿಳಿಸಿದೆ.

ಈ ಕಾರಣಕ್ಕೆ ಮಧುರಾವೋಯಲ್ ವಲಾಜಾಪೇಟೆಯ ನಡುವಿನ ಎರಡು ಟೋಲ್ ಪ್ಲಾಜಾಗಳಲ್ಲಿ, ಮುಂದಿನ ಎರಡು ವಾರಗಳವರೆಗೆ ನಿಗದಿಪಡಿಸಿದ ಟೋಲ್‌ಗಿಂತ ಶೇಕಡಾ 50 ರಷ್ಟು ಶುಲ್ಕವನ್ನು ಮಾತ್ರ ವಾಹನ ಸವಾರಿರಿಂದ ಪಡೆಯುವಂತೆ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶ ನೀಡಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಚೆನ್ನೈ ಹಾಗೂ ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಯನ್ನು ಸುವರ್ಣ ಚತುರ್ಭುಜ ಯೋಜನೆಯಡಿ ನಿರ್ಮಿಸಲಾಗಿದೆ. ಈ ಯೋಜನೆಯಡಿ ನಿರ್ಮಾಣವಾಗಿರುವ ರಾಷ್ಟ್ರೀಯ ಹೆದ್ದಾರಿಗಳು ದೆಹಲಿ, ಕೋಲ್ಕತಾ, ಚೆನ್ನೈ ಹಾಗೂ ಮುಂಬೈ ನಗರಗಳನ್ನು ಸಂಪರ್ಕಿಸುತ್ತವೆ.