ಸತತ ಆರನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ದರ

ಕರೋನಾ ವೈರಸ್‌ನಿಂದಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಲಾಕ್‌ಡೌನ್ ಅವಧಿಯಲ್ಲಿ ಜನರು ಮನೆಗಳಿಂದ ಹೊರಬರುವಂತಿರಲಿಲ್ಲ. ಲಾಕ್‌ಡೌನ್ ಕಾರಣದಿಂದಾಗಿ ಜನರು ಉದ್ಯೋಗ ನಷ್ಟ, ವೇತನ ಕಡಿತದಂತಹ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದಾರೆ.

ಸತತ ಆರನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ದರ

ಲಾಕ್‌ಡೌನ್ ಅವಧಿಯಲ್ಲಿ ಬಹುತೇಕ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಯಿತು. ಇದರಿಂದಾಗಿ ಜನರು ಆರ್ಥಿಕ ಸಂಕಷ್ಟಕ್ಕೀಡಾದರು. ಈಗ ತೈಲ ಕಂಪನಿಗಳು ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುತ್ತಿದ್ದು, ವಾಹನ ಸವಾರರು ಬೆಲೆ ಏರಿಕೆ ಬಿಸಿಯಿಂದ ತತ್ತರಿಸುವಂತಾಗಿದೆ.

ಸತತ ಆರನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ದರ

ಲಾಕ್‌ಡೌನ್ ಅವಧಿಯಲ್ಲಿ ವಾಹನಗಳ ಸಂಚಾರ ರದ್ದುಗೊಂಡಿದ್ದ ಕಾರಣಕ್ಕೆ ಪೆಟ್ರೋಲ್, ಡೀಸೆಲ್ ಮಾರಾಟದಲ್ಲಿ ತೀವ್ರ ಪ್ರಮಾಣದ ಕುಸಿತ ಉಂಟಾಗಿತ್ತು. ಸುಮಾರು ಎರಡೂವರೆ ತಿಂಗಳಿನಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ ಏರಿಕೆಯಾಗಿರಲಿಲ್ಲ.

MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಸತತ ಆರನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ದರ

ಲಾಕ್‌ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಜನ ಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಕಚೇರಿಗೆ ಹೋಗುವವರು, ವ್ಯಾಪಾರಿಗಳು ಹಾಗೂ ಸಾರಿಗೆ ಸೇವಾ ಕಂಪನಿಗಳು ತಮ್ಮ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ.

ಸತತ ಆರನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ದರ

ಕಳೆದ ಎರಡು ತಿಂಗಳುಗಳಿಂದ ಯಾವುದೇ ಆದಾಯವಿಲ್ಲದ ಜನ ಮತ್ತೆ ಕೆಲಸಕ್ಕೆ ಮರಳಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಅವರ ಆದಾಯಕ್ಕೆ ಹೊಡೆತ ನೀಡಿದೆ. ಪೆಟ್ರೋಲ್, ಡೀಸೆಲ್ ಬೆಲೆಯನ್ನು ಸತತ 6ನೇ ದಿನವೂ ಏರಿಸಲಾಗಿದೆ.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಸತತ ಆರನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ದರ

ದೆಹಲಿಯಲ್ಲಿ ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರಿಗೆ 57 ಪೈಸೆ ಹಾಗೂ ಡೀಸೆಲ್ ಬೆಲೆಯನ್ನು ಪ್ರತಿ ಲೀಟರಿಗೆ 59 ಪೈಸೆಯಷ್ಟು ಏರಿಸಲಾಗಿದೆ. ಬೆಲೆ ಏರಿಕೆಯ ನಂತರ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.74.57ಗಳಾದರೆ, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ರೂ.72.22ಗಳಾಗಿದೆ.

ಸತತ ಆರನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ದರ

ಕಳೆದ ಆರು ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಇದರಿಂದಾಗಿ ಕಳೆದ ಆರು ದಿನಗಳಿಂದ ಪೆಟ್ರೋಲ್ ಬೆಲೆ ರೂ.3.31ಗಳಷ್ಟು ಹಾಗೂ ಡೀಸೆಲ್ ಬೆಲೆ ರೂ.3.59ಗಳಷ್ಟು ಏರಿಕೆಯಾಗಿದೆ. ಡೀಸೆಲ್ ಬೆಲೆ ಏರಿಕೆಯ ಪರಿಣಾಮವು ಅಗತ್ಯ ವಸ್ತುಗಳ ಮೇಲಾಗುವ ಸಾಧ್ಯತೆಗಳಿವೆ.

MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಸತತ ಆರನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ದರ

ಕಳೆದ ಎರಡೂವರೆ ತಿಂಗಳುಗಳಿಂದ ಆದಾಯ ಹಾಗೂ ವೇತನವಿಲ್ಲದೇ ಆರ್ಥಿಕ ಸಂಕಷ್ಟದಲ್ಲಿದ್ದ ಜನರಿಗೆ ಇದು ಮತ್ತಷ್ಟು ಆಘಾತ ನೀಡಲಿದೆ.

Article Published On: Saturday, June 13, 2020, 10:31 [IST]
English summary
Hike in petrol diesel price for sixth consecutive day. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+