ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೋಂಡಾ ಕಾರ್ಸ್ ಇಂಡಿಯಾ ಲಿಮಿಟೆಡ್ ಕಂಪನಿಯು ಅಮೇಜ್ ಕಾಂಪ್ಯಾಕ್ಟ್-ಸೆಡಾನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ 2013ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿತು. ಈ ಹೋಂಡಾ ಅಮೇಜ್ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಭಾರತದಲ್ಲಿ ಬಿಡುಗಡೆಯಾದಾಗಿನಿಂದ ಇಲ್ಲಿಯವರೆಗೆ ಹೋಂಡಾ ಅಮೇಜ್ ಕಾರಿನ 4 ಲಕ್ಷ ಯುನಿಟ್‌ಗಳು ಮಾರಾಟವಾಗಿದೆ. ಪ್ರಸ್ತುತ ಭಾರತದಲ್ಲಿ ಮಾರಾಟವಾಗುತ್ತಿರುವ ಹೋಂಡಾ ಅಮೇಜ್ ಎರಡನೇ ತಲೆಮಾರಿನಲ್ಲಿದೆ. ಇದೇ ಹೋಂಡಾ ಅಮೇಜ್ ಭಾರತದಲ್ಲಿ ಕಂಪನಿಯ ಅತಿ ಹೆಚ್ಚು ಮಾರಾಟವಾದ ಮಾದರಿಯಾಗಿದೆ. ಹೋಂಡಾ ಅಮೇಜ್ ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಡಿಜೈರ್, ಫೋರ್ಡ್ ಆಸ್ಪೈರ್ ಮತ್ತು ಹ್ಯುಂಡೈ ಒರಾ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೋಂಡಾ ಕಾರ್ಸ್ ಇಂಡಿಯಾ ಲಿಮಿಟೆಡ್‌ನ ಹಿರಿಯ ಉಪಾಧ್ಯಕ್ಷ ಮತ್ತು ನಿರ್ದೇಶಕ ಶ್ರೀ ರಾಜೇಶ್ ಗೋಯೆಲ್ ಅವರು ಇದರ ಬಗ್ಗೆ ಮಾತನಾಡಿ, ಹೋಂಡಾ ಅಮೇಜ್ ಅತ್ಯಂತ ಯಶಸ್ವಿ ಮಾದರಿಯಾಗಿದೆ ಮತ್ತು ಇದು ನಮ್ಮ ವ್ಯವಹಾರದ ಪ್ರಮುಖ ಆಧಾರಸ್ತಂಭವಾಗಿದೆ. ನಮ್ಮ ಗ್ರಾಹಕರ ಪ್ರೀತಿ ಮತ್ತು ನಮ್ಮ ಪಾಲುದಾರರ ಬೆಂಬಲದಿಂದಾಗಿ ಹೋಂಡಾ ಅಮೇಜ್ ಮಾರುಕಟ್ಟೆಗಳಲ್ಲಿ ಜನಪ್ರಿಯ ಬ್ರ್ಯಾಂಡ್ ಆಗಲು ಸಾಧ್ಯವಾಗಿದೆ ಎಂದು ಹೇಳಿದರು.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಮೊದಲ ತಲೆಮಾರಿನ ಹೋಂಡಾ ಅಮೇಜ್ ಕಾರನ್ನು ಭಾರತದಲ್ಲಿ 2013ರಲ್ಲಿ ಬಿಡುಗಡೆಗೊಳಿಸಲಾಗಿತು. ಬಿಡುಗಡೆಯಾದ ಪ್ರಾರಂಭದಲ್ಲೇ ಹೋಂಡಾ ಅಮೇಜ್ ಕಾರಿಗೆ ಭಾರತದ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಂಡಿತು,

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೋಂಡಾ ಕಂಪನಿಯು 2018ರ ಮಾರ್ಚ್ ತಿಂಗಳವರೆಗೆ ಭಾರತದಲ್ಲಿ ಅಮೇಜ್ ಕಾರಿನ 2.6 ಲಕ್ಷ ಯುನಿಟ್ ಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿತ್ತು.

MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೋಂಡಾ ಕಂಪನಿಯು 2018ರ ಏಪ್ರಿಲ್ ತಿಂಗಳಲ್ಲಿ ಅಮೇಜ್ ಕಾರನ್ನು ಅಪ್‌ಗ್ರೇಡ್ ಮಾಡಿ ಎರಡನೇ ತಲೆಮಾರಿನ ಮಾದರಿಯನ್ನು ಬಿಡುಗಡೆಗೊಳಿಸಿದರು. ಎರಡನೇ ತಲೆಮಾರಿನ ಹೋಂಡಾ ಅಮೇಜ್ ಕಾರು ಬಿಡುಗಡೆಯಾದಾಗಿನಿಂದ ಇಲ್ಲಿಯವರೆಗೆ 1.4 ಲಕ್ಷ ಯುನಿಟ್ ಮಾರಾಟವಾಗಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಮಾರುಕಟ್ಟೆಯಲ್ಲಿ ಆಟೋಮ್ಯಾಟಿಕ್ ಆವೃತ್ತಿಗಳಿಗೆ ಬೇಡಿಕೆ ಹೆಚ್ಚುತ್ತಿರುವುದರಿಂದ ಹೋಂಡಾ ಅಮೇಜ್ ಸಿವಿಟಿ ಉತ್ತಮವಾಗಿ ಮಾರಾಟವಾಗಿದೆ. ಮೊದಲ ತಲೆಮಾರಿನ ಮಾದರಿಗಿಂತ ಎರಡನೇ ತಲೆಮಾರಿನ ಹೋಂಡಾ ಅಮೇಜ್ ಸಿವಿಟಿ ಮಾದರಿಯಿಂದ ಹೆಚ್ಚು ಬೇಡಿಕೆ ಪಡೆದುಕೊಂಡಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಪ್ರಸ್ತುತ ತಲೆಮಾರಿನ ಅಮೇಜ್ ಕಾರು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಈ ಕಾರಿನಲ್ಲಿ 1.5 ಎಲ್ ಐ-ಡಿಟಿಇಸಿ ಡೀಸೆಲ್ ಎಂಜಿನ್ ಮತ್ತು 1.2 ಎಲ್ ಐ-ವಿಟಿಇಸಿ ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಹೊಂದಿವೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಈ ಎರಡು ಎಂಜಿನ್ ಗಳೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆಯ್ಕೆಯನ್ನು ಹೊಂದಿದೆ. ಹೋಂಡಾ ಅಮೇಜ್ ಭಾರತೀಯ ಮಾರುಕಟ್ಟೆಯ ಕಾಂಪ್ಯಾಕ್ಟ್-ಸೆಡಾನ್ ಸರಣಿಯಲ್ಲಿ ಜನಪ್ರಿಯ ಮಾದರಿಗಳಲ್ಲಿ ಇದು ಕೂಡ ಒಂದಾಗಿದೆ.

Most Read Articles

Kannada
English summary
Honda Amaze Sales Crosses 4 Lakh Mark Since 2013. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X