ಬಿಎಸ್-6 ಕಾರುಗಳ ಮೇಲೂ ಡಿಸ್ಕೌಂಟ್ ಘೋಷಣೆ ಮಾಡಿದ ಹೋಂಡಾ
ಆಟೋ ಉದ್ಯಮವು ಸೇರಿದಂತೆ ಎಲ್ಲಾ ವಲಯದಲ್ಲೂ ಕರೋನಾ ವೈರಸ್ ಮಹಾಮಾರಿಯಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದ್ದು, ವ್ಯಾಪಾರ ಅಭಿವೃದ್ದಿಯು ಇದೀಗ ಹೊಸ ಸವಾಲಾಗಿ ಪರಿಣಮಿಸಿದೆ. ಸದ್ಯಕ್ಕೆ ಆಟೋ ಉದ್ಯಮಕ್ಕೆ ಕೆಲವು ವಿನಾಯ್ತಿಗಳನ್ನು ನೀಡಲಾಗಿದ್ದರೂ ಸಹ ವಾಹನ ಖರೀದಿದಾರರು ಇಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

ಲಾಕ್‌ಡೌನ್‌ನಿಂದಾಗಿ ಬಹುತೇಕ ವಾಣಿಜ್ಯ ಚಟುವಟಿಕೆಗಳು ನೆಲಕಚ್ಚಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಉದ್ಯೋಗದ ಅಭದ್ರತೆ ಇದೀಗ ಅತಿ ದೊಡ್ಡ ಸಮಸ್ಯೆಯಾಗಿ ಕಾಡತೋಡಗಿದೆ. ಹೀಗಿರುವಾಗ ಹೊಸ ವಾಹನಗಳ ಮಾರಾಟವನ್ನು ಸರಿದಾರಿಗೆ ತರಲು ಯತ್ನಿಸುತ್ತಿರುವ ಆಟೋ ಕಂಪನಿಯು ಕೆಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸುತ್ತಿವೆ. ಹೋಂಡಾ ಇಂಡಿಯಾ ಕೂಡಾ ವಿವಿಧ ಕಾರು ಮಾದರಿಗಳ ಮೇಲೆ ವಿಶೇಷ ಆಫರ್‌ಗಳನ್ನು ಘೋಷಣೆ ಮಾಡಿದೆ.

ಲಾಕ್‌ಡೌನ್‌ಗೂ ಮೊದಲು ಬುಕ್ಕಿಂಗ್ ಮಾಡಿ ಹೊಸ ವಾಹನಗಳ ಖರೀದಿಯ ಸಂಭ್ರಮದಲ್ಲಿದ್ದ ಗ್ರಾಹಕರು ಇದೀಗ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿರುವುದು ಆಟೋ ಕಂಪನಿಗಳನ್ನು ಚಿಂತೆಗೀಡು ಮಾಡಿದೆ.

ಮಾರ್ಚ್ 15ಕ್ಕೂ ಮುನ್ನ ದೇಶಾದ್ಯಂತ ಹೊಸ ವಾಹನಗಳಿಗೆ ಬುಕ್ಕಿಂಗ್ ಮಾಡಿದ್ದ ಗ್ರಾಹಕರಲ್ಲಿ ಸುಮಾರು ಶೇ.60ರಿಂದ ಶೇ.70ರಷ್ಟು ಜನ ಹೊಸ ವಾಹನ ಖರೀದಿಯಿಂದ ಹಿಂದೆ ಸರಿದಿದ್ದು, ಉದ್ಯೋಗದ ಅಭದ್ರತೆ ಮತ್ತು ಆದಾಯಕ್ಕಿಂತ ಖರ್ಚು ಹೆಚ್ಚುತ್ತಿರುವುದರಿಂದ ಹೊಸ ವಾಹನಗಳ ಖರೀದಿಯ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆಯಾಗಿದೆ.
MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!

ಇದರಿಂದ ಗ್ರಾಹಕರನ್ನು ಸೆಳೆಯಲು ಆಟೋ ಕಂಪನಿಗಳು ಅತಿ ಸುಲಭವಾದ ಸಾಲಸೌಲಭ್ಯ ಸೇರಿದಂತೆ ಹಲವಾರು ಹೊಸ ಆಫರ್ ನೀಡುತ್ತಿದ್ದು, ಹೋಂಡಾ ಕೂಡಾ ತನ್ನ ಜನಪ್ರಿಯ ಕಾರುಗಳ ಮೇಲೆ ವಿಶೇಷ ಆಫರ್‌ಗಳನ್ನು ಘೋಷಣೆ ಮಾಡಿ ಗ್ರಾಹಕರ ಸೆಳೆಯುವ ಯತ್ನಯಲ್ಲಿದೆ.

ತನ್ನ ಜನಪ್ರಿಯ ಸೆಡಾನ್ ಮಾದರಿಯಾದ ಸಿಟಿ ಮತ್ತು ಕಂಪ್ಯಾಕ್ಟ್ ಸೆಡಾನ್ ಮಾದರಿಯ ಅಮೇಜ್ ಕಾರಿನ ಮೇಲೆ ಸೀಮಿತ ಅವಧಿಗಾಗಿ ಆಫರ್‌ಗಳನ್ನು ಘೋಷಿಸಿದ್ದು, ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಬೋನಸ್ ಮತ್ತು ವಾರಂಟಿ ಅವಧಿ ವಿಸ್ತರಣೆಯ ಆಫರ್ ನೀಡುತ್ತಿದೆ.
MOST READ: ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಅಮೇಜ್ ಕಾರು ಮಾದರಿಯ ಖರೀದಿಯ ಮೇಲೆ ರೂ.32 ಸಾವಿರ ತನಕ ಆಫರ್‌ಗಳನ್ನು ಪಡೆದುಕೊಳ್ಳಬಹುದಾಗಿದ್ದು, ಹೆಚ್ಚುವರಿಯಾಗಿ ಎರಡು ವರ್ಷಗಳ ಕಾಲ ವಾರಂಟಿ ಅವಧಿಯನ್ನು ಸಹ ವಿಸ್ತರಣೆ ಮಾಡಲಾಗುತ್ತಿದೆ.

ಹಾಗೆಯೇ ಸಿಟಿ ಸೆಡಾನ್ ಮಾದರಿಯ ಖರೀದಿಯ ಮೇಲೆ ರೂ.1 ಲಕ್ಷದ ತನಕ ಆಫರ್‌ಗಳನ್ನು ಪಡೆದುಕೊಳ್ಳಬಹುದಾಗಿದ್ದು, ವಿ ಸಿವಿಟಿ ವೆರಿಯೆಂಟ್ ಖರೀದಿ ಮೇಲೆ ರೂ.25 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು 20 ಸಾವಿರ ಎಕ್ಸ್‌ಚೆಂಜ್ ಆಫರ್ ನೀಡಲಾಗುತ್ತದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಆಫರ್ ನೀಡಲಾಗುತ್ತಿರುವ ಎರಡು ಮಾದರಿಗಳು ಸಹ ಬಿಎಸ್-6 ಎಂಜಿನ್ ಅನ್ನು ಹೊಂದಿದ್ದು, ಸಿಟಿ ಸೆಡಾನ್ ಕಾರು ಸದ್ಯದಲ್ಲೇ ಹೊಸ ತಲೆಮಾರಿನ ಆವೃತ್ತಿಯೊಂದಿಗೆ ಮಾರಾಟಗೊಳ್ಳಲು ಸಿದ್ದವಾಗುತ್ತಿರುವುದೇ ಹಳೆಯ ಮಾದರಿಯ ಮೇಲೆ ಹೆಚ್ಚಿನ ಆಫರ್ ನೀಡಲಾಗುತ್ತಿದೆ.


Click it and Unblock the Notifications








