ಲಾಕ್‌ಡೌನ್ ಎಫೆಕ್ಟ್- 'ಹೋಂಡಾ ಫ್ರಮ್ ಹೋಮ್' ಆನ್‌ಲೈನ್ ಕಾರು ಮಾರಾಟ ಮಳಿಗೆ ಆರಂಭ

ಕರೋನಾ ವೈರಸ್ ಅಟ್ಟಹಾಸದಿಂದಾಗಿ ಇಡೀ ವಿಶ್ವವೇ ಆತಂಕದಲ್ಲಿದ್ದು, ವೈರಸ್‌ವನ್ನು ಪರಿಣಾಮಕಾರಿಯಾಗಿ ತಗ್ಗಿಸಲು ಎಲ್ಲಾ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದರಿಂದ ವಾಣಿಜ್ಯ ಚಟುವಟಿಕೆಗಳು ಸಂಪೂರ್ಣವಾಗಿ ಬಂದ್ ಆಗಿದ್ದು, ಆಟೋ ಉದ್ಯಮಕ್ಕೂ ಭಾರೀ ಹೊಡೆತ ಕೊಟ್ಟಿದೆ.

'ಹೋಂಡಾ ಫ್ರಮ್ ಹೋಮ್' ಆನ್‌ಲೈನ್ ಕಾರು ಮಾರಾಟ ಮಳಿಗೆ ಆರಂಭ

ಸದ್ಯ ವೈರಸ್ ಹೊಡೆದೊಡಿಸಲು ಹಾಕಲಾಗಿರುವ ಲಾಕ್‌‌ಡೌನ್ ಅನ್ನು ಹಂತ ಹಂತವಾಗಿ ತೆರವುಗೊಳಿಸಲಾಗುತ್ತಿದ್ದು, ಹಸಿರು ವಲಯದಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಷರತ್ತುಬದ್ದ ಅವಕಾಶ ನೀಡಲಾಗುತ್ತಿದೆ. ಇದರಿಂದ ಕೆಲವು ಸುರಕ್ಷಾ ಕ್ರಮಗಳೊಂದಿಗೆ ವಾಣಿಜ್ಯ ವ್ಯಾಪಾರವನ್ನು ಪುನಾರಂಭಿಸುತ್ತಿರುವ ಉದ್ಯಮ ಸಂಸ್ಥೆಗಳು ಸೋಂಕು ಹರಡದಂತೆ ಸಾಕಷ್ಟು ಎಚ್ಚರಿಕೆ ವಹಿಸುತ್ತಿದ್ದು, ಹೋಂಡಾ ಇಂಡಿಯಾ ಕೂಡಾ ಹೊಸ ನಿಯಮ ಅನುಸಾರವಾಗಿ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ 'ಹೋಂಡಾ ಫ್ರಮ್ ಹೋಮ್' ಎನ್ನುವ ಆನ್‌ಲೈನ್ ಕಾರು ಮಾರಾಟ ಮಳಿಗೆಯನ್ನು ತೆರೆದಿದೆ.

'ಹೋಂಡಾ ಫ್ರಮ್ ಹೋಮ್' ಆನ್‌ಲೈನ್ ಕಾರು ಮಾರಾಟ ಮಳಿಗೆ ಆರಂಭ

ಡಿಜಿಟಲ್ ಪ್ಲ್ಯಾಟ್‌‌ಫಾರ್ಮ್ ಮೂಲಕವೇ ಕಾರು ಮಾರಾಟ ಪ್ರಕ್ರಿಯೆಗಳನ್ನು ಕೈಗೊಳ್ಳಲಿರುವ ಹೋಂಡಾ ಇಂಡಿಯಾ ಕಂಪನಿಯು ಗ್ರಾಹಕರ ಮನೆ ಬಾಗಿಲಿಗೆ ಹೊಸ ಕಾರು ಉತ್ಪನ್ನಗಳನ್ನು ತಲುಪಿಸಲಿದ್ದು, ಈ ವೇಳೆ ಗರಿಷ್ಠ ಸುರಕ್ಷಾ ಕ್ರಮಗಳನ್ನು ತೆಗದುಕೊಳ್ಳಲಿದೆ.

'ಹೋಂಡಾ ಫ್ರಮ್ ಹೋಮ್' ಆನ್‌ಲೈನ್ ಕಾರು ಮಾರಾಟ ಮಳಿಗೆ ಆರಂಭ

ಹೊಸ ಸುರಕ್ಷಾ ನಿಯಮದಡಿ ಗ್ರಾಹಕರಿಗೆ ಹೆಚ್ಚಿನ ಸುರಕ್ಷತೆಯೊಂದಿಗೆ ಉತ್ಪನ್ನಗಳನ್ನು ತಲುಪಿಸುವುದರ ಜೊತೆಗೆ ಉದ್ಯೋಗಿಗಳಿಗೂ ಗರಿಷ್ಠ ಸುರಕ್ಷತೆ ಒದಗಿಸಲಿರುವ ಹೋಂಡಾ ಕಂಪನಿಯು ಆರ್ಥಿಕ ಸಂಕಷ್ಟದಿಂದ ಹೊರಬರಲು ಹಲವಾರು ಹೊಸ ಯೋಜನೆಗಳನ್ನು ರೂಪಿಸುತ್ತಿದೆ.

MOST READ: ಲಾಕ್‌ಡೌನ್ ಸಂಕಷ್ಟ- ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5 ಸಾವಿರ ಪರಿಹಾರ..

'ಹೋಂಡಾ ಫ್ರಮ್ ಹೋಮ್' ಆನ್‌ಲೈನ್ ಕಾರು ಮಾರಾಟ ಮಳಿಗೆ ಆರಂಭ

ಇನ್ನು ಕರೋನಾ ವೈರಸ್ ವಿರುದ್ಧದ ಹೋರಾಟದಲ್ಲೂ ಭಾಗಿಯಾಗಿರುವ ಹೋಂಡಾ ಕಂಪನಿಯು ತನ್ನ ಗ್ರಾಹಕರಿಗೆ ಹೆಚ್ಚುವರಿ ವಾರಂಟಿ ಅವಧಿಯನ್ನು ಘೋಷಣೆ ಮಾಡಿರುವುದಲ್ಲದೆ ಕಾರ್ಪೋರೆಟ್ ಸಾಮಾಜಿಕ ಹೊಣೆಗಾರಿಕೆಯ ನೀತಿ ಭಾರೀ ಪ್ರಮಾಣದ ದೇಣಿಗೆ ನೀಡಿ ಬದ್ದತೆ ತೊರಿದ್ದು, ವೆಂಟಿಲೆಟರ್‌ ಮತ್ತು ಅಗತ್ಯ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಸಹಕಾರಿಯಾಗುತ್ತಿದೆ.

'ಹೋಂಡಾ ಫ್ರಮ್ ಹೋಮ್' ಆನ್‌ಲೈನ್ ಕಾರು ಮಾರಾಟ ಮಳಿಗೆ ಆರಂಭ

ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಧನಸಹಾಯದ ಜೊತೆಗೆ ವೈದ್ಯಕೀಯ ಉಪಕರಣಗಳನ್ನು ಉತ್ಪಾದನೆ ಮಾಡಿ ವಿವಿಧ ರಾಜ್ಯ ಸರ್ಕಾರಗಳಿಗೆ ವಿತರಣೆ ಮಾಡುತ್ತಿವೆ.

MOST READ: ಲಾಕ್‌ಡೌನ್ ವೇಳೆ ಕಾರು ಚಾಲನೆ ಮಾಡಿ ಸಿಕ್ಕಿಬಿದ್ದ ಮಹಿಳೆಯಿಂದ ಹೈಡ್ರಾಮಾ..

'ಹೋಂಡಾ ಫ್ರಮ್ ಹೋಮ್' ಆನ್‌ಲೈನ್ ಕಾರು ಮಾರಾಟ ಮಳಿಗೆ ಆರಂಭ

ಆಟೋ ಉತ್ಪಾದನಾ ಚಟುವಟಿಕೆ ಸಂಪೂರ್ಣ ಸ್ತಬ್ಧವಾಗಿದ್ದರಿಂದ ವೈದ್ಯಕೀಯ ಉಪಕರಣಗಳ ಉತ್ಪಾದನೆ ಹೆಚ್ಚಿನ ಒತ್ತುನೀಡಿರುವ ಆಟೋ ಉತ್ಪಾದನಾ ಕಂಪನಿಗಳು ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್, ಪ್ರೋಟೆಕ್ವಿಟ್ ಕ್ಲಾಥ್, ರ‍್ಯಾಪಿಡ್ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಉತ್ಪಾದನೆ ಮಾಡುತ್ತಿವೆ.

'ಹೋಂಡಾ ಫ್ರಮ್ ಹೋಮ್' ಆನ್‌ಲೈನ್ ಕಾರು ಮಾರಾಟ ಮಳಿಗೆ ಆರಂಭ

ವೈರಸ್ ತಡೆಗಾಗಿ ಈಗಾಗಲೇ ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಿನಿಂದ ಹೋರಾಟ ನಡೆಸುತ್ತಿದ್ದು, ವೈದ್ಯಕೀಯ ಉಪಕರಣಗಳ ಕೊರತೆಯು ಸೋಂಕಿತರ ಸಾವಿನ ಪ್ರಮಾಣ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

'ಹೋಂಡಾ ಫ್ರಮ್ ಹೋಮ್' ಆನ್‌ಲೈನ್ ಕಾರು ಮಾರಾಟ ಮಳಿಗೆ ಆರಂಭ

ಈ ಹಿನ್ನಲೆಯಲ್ಲಿ ಸದ್ಯ ವಾಹನಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವ ಆಟೋ ಉತ್ಪಾದನಾ ಘಟಕಗಳಲ್ಲೇ ಅಗತ್ಯ ವೈದಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಗರಿಷ್ಠ ಸಹಾಯ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಕಾರಣವಾಗಿದೆ.

Most Read Articles

Kannada
Read more on ಹೋಂಡಾ honda
English summary
Honda car online booking platform launched details. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more