ನವೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು 2020ರ ನವೆಂಬರ್‌ ತಿಂಗಳಿನ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ವರದಿ ಪ್ರಕಾರ ಹೋಂಡಾ ಕಂಪನಿಯು ಕಳೆದ ತಿಂಗಳ ಮಾರಾಟದಲ್ಲಿ ಶೇ.55 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಜಪಾನ್ ಮೂಲದ ಹೋಂಡಾ ಕಂಪನಿಯು 2020ರ ನವೆಂಬರ್‌ ತಿಂಗಳಿನಲ್ಲಿ 9,990 ಯುನಿಟ್‌ಗಳು ಮಾರಾಟಗೊಳಿಸಿವೆ. ಇನ್ನು ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ 6,459 ಯುನಿಟ್‌ಗಳು ಮಾರಾಟಗೊಳಿಸಿದ್ದರು. ಕುತೂಹಲಕಾರಿಯಾಗಿ ಮಾಸಿಕ ತಿಂಗಳ ಮಾರಾಟದ ಆಧಾರದ ಮೇಲೆ ಹೋಂಡಾ ಕಂಪನಿಯು ಶೇ.ರಷ್ಟು ಕುಸಿತವನ್ನು ದಾಖಲಿಸಿದೆ. ಆದರೆ ಇದನ್ನು ಸಣ್ಣ ಮಟ್ಟದ ಕುಸಿತ ಮಾತ್ರ ಗಮನಾರ್ಹವಾದುದಲ್ಲ ಎಂದು ಹೇಳಬಹುದು.

ನವೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

2020ರ ಅಕ್ಟೋಬರ್ ತಿಂಗಳಿನಲ್ಲಿ ಹೋಂಡಾ ಕಂಪನಿಯು 10,836 ಯುನಿ‍‍ಟ್‍‍ಗಳನ್ನು ಮಾರಾಟ ಮಾಡಿದೆ. ಇನ್ನು 2020ರ ಸೆಪ್ಟೆಂಬರ್ ತಿಂಗಳಲ್ಲಿ ಹೋಂಡಾ ಕಂಪನಿಯು 10,199 ಯುನಿ‍‍ಟ್‍‍ಗಳನ್ನು ಮಾರಾಟಗೊಳಿಸಿತ್ತು.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ನವೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಹೋಂಡಾದ ಪ್ರಸ್ತುತ ಮಾರುಕಟ್ಟೆ ಪಾಲು ಶೇ.3.5 ರಷ್ಟಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.1 ರಷ್ಟು ಹೆಚ್ಚಾಗಿದೆ. ಕಳೆದ ವರ್ಷದ ನವೆಂಬರ್‌ನಂತೆಯೇ ಮಾರಾಟ ಪಟ್ಟಿಯಲ್ಲಿ ಏಳನೇ ಸ್ಥಾನವನ್ನು ಬ್ರ್ಯಾಂಡ್ ಉಳಿಸಿಕೊಂಡಿದೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಈ ವರ್ಷದ ಹೋಂಡಾ ಕಂಪನಿಯು ತನ್ನ ಹೊಸ ತಲೆಮಾರಿನ ಸಿಟಿ ಕಾರನ್ನು ಪರಿಚಯಿಸಿತು. ಇದು ಖರೀದಿದಾರರಲ್ಲಿ ಬ್ರ್ಯಾಂಡ್‌ನ ಜನಪ್ರಿಯತೆಯನ್ನು ಹೆಚ್ಚಿಸಿದೆ. ಇದರೊಂದಿಗೆ ಹಿಂದಿನ ತಲೆಮಾರಿನ ಸಿಟಿ ಕಾರು ಕೂಡ ಮಾರಾಟವಾಗುತ್ತಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ನವೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಹೊಸ ಹೋಂಡಾ ಸಿಟಿ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ. ಮಾರಾಟದಲ್ಲಿ ಹೋಂಡಾ ಸಿಟಿ ತನ್ನ ಪ್ರತಿಸ್ಪರ್ಧಿಗಳಿಗೆ ಪ್ರಬಲ ಪೈಪೋಟಿಯನ್ನು ನೀಡುತ್ತಿದೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

2020ರ ಸಿಟಿ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಲಭ್ಯವಿದೆ. ಇದರಲ್ಲಿ 1.5-ಲೀಟರ್ ಐ-ವಿಟಿಇಸಿ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಐ-ಡಿಟಿಇಸಿ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಇದರೊಂದಿಗೆ 1.5-ಲೀಟರ್ ಐ-ವಿಟಿಇಸಿ ಪೆಟ್ರೋಲ್ ಎಂಜಿನ್ 120 ಬಿಹೆಚ್‍ಪಿ ಪವರ್ ಮತ್ತು 145 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇನ್ನು 1.5-ಲೀಟರ್ ಐ-ಡಿಟಿಇಸಿ ಡೀಸೆಲ್ ಎಂಜಿನ್ 100 ಬಿಹೆಚ್‍ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ನವೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಅಲ್ಲದೇ ಹೋಂಡಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಡಬ್ಲ್ಯುಆರ್-ವಿ ಮತ್ತು ಜಾಝ್ ಕಾರುಗಳನ್ನು ಸಣ್ಣ ಕಾಸ್ಮೆಟಿಕ್ ನವೀಕರಣಗಳೊಂದಿಗೆ ಬಿಡುಗಡೆಗೊಳಿಸಿತ್ತು. ಈ ಕಾರುಗಳು ಕೂಡ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಟವಾಗುತ್ತಿವೆ.

ನವೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಕಂಪನಿಯು ಮಾರಾಟದಲ್ಲಿ ಬೆಳವಣಿಗೆಯನ್ನು ಕಾಣುತ್ತಿದೆ. ಹೋಂಡಾ ಕಂಪನಿಯು ಹೊಸ ಸಬ್-ಮೀಟರ್ ಎಸ್‌ಯುವಿ ಅಭಿವೃದ್ಧಿ ಪಡಿಸಲಿದೆ ಎಂದು ವರದಿಯಾಗಿದೆ. ಈ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಕಿಯಾ ಸೊನೆಟ್, ಹ್ಯುಂಡೈ ಕ್ರೆಟಾ ಮತ್ತು ಮಾರುತಿ ಸುಜುಕಿ ಬ್ರೇಝಾ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Article Published On: Tuesday, December 1, 2020, 18:49 [IST]
English summary
Honda Car Sales Up By 55% In November 2020. Read In Kananda.
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+