ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು 2020ರ ಅಕ್ಟೋಬರ್ ತಿಂಗಳಿನ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ವರದಿ ಪ್ರಕಾರ ಹೋಂಡಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ತಿಂಗಳ ಮಾರಾಟದಲ್ಲಿ ಶೇ.5.87 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

2020ರ ಅಕ್ಟೋಬರ್ ತಿಂಗಳಿನಲ್ಲಿ ಹೋಂಡಾ ಕಂಪನಿಯು 10,836 ಯುನಿ‍‍ಟ್‍‍ಗಳನ್ನು ಮಾರಾಟ ಮಾಡಿದೆ. ಇನ್ನು 2020ರ ಸೆಪ್ಟೆಂಬರ್ ತಿಂಗಳಲ್ಲಿ ಹೋಂಡಾ ಕಂಪನಿಯು 10,199 ಯುನಿ‍‍ಟ್‍‍ಗಳನ್ನು ಮಾರಾಟಗೊಳಿಸಿತ್ತು. 2020ರ ಸೆಪ್ಟೆಂಬರ್ ತಿಂಗಳ ಮಾರಾಟವನ್ನು ಅಕ್ಟೋಬರ್ ತಿಂಗಳಿಗೆ ಹೋಲಿಸಿದರೆ 637 ಯುನಿ‍‍ಟ್‍‍ಗಳು ಹೆಚ್ಚು ಮಾರಾಟವಾಗಿವೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಹೋಂಡಾ ಕಂಪನಿಯು 10,010 ಯುನಿ‍‍ಟ್‍‍ಗಳನ್ನು ಮಾರಾಟ ಮಾಡಿದ್ದರು .ಹೋಂಡಾ ಕಾರ್ಸ್ ಲಿಮಿಟೆಡ್‌ನ ಭಾರತೀಯ ಮಾರುಕಟ್ಟೆಯಲ್ಲಿ ವರ್ಷದಿಂದ ವರ್ಷಕ್ಕೆ ಶೇ.8.3 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಹೋಂಡಾ ಕಾರ್ಸ್ ಇಂಡಿಯಾ ಲಿಮಿಟೆಡ್ ಹಿರಿಯ ಉಪಾಧ್ಯಕ್ಷ ಮತ್ತು ಮಾರ್ಕೆಟಿಂಗ್ ಮತ್ತು ಸೇಲ್ಸ್ ನಿರ್ದೇಶಕ ಶ್ರೀ ರಾಜೇಶ್ ಗೋಯೆಲ್ ಆವರು ಮಾತನಾಡಿ, ಭಾರತೀಯ ಮಾರುಕಟ್ಟೆಯ ಮಾರಾಟದಲ್ಲಿ ನಾವು ಸಕಾರಾತ್ಮಕ ಬೆಳವಣಿಗೆಯನ್ನು ಸಾಧಿಸಿದ್ದೇವೆ. ಹಬ್ಬದ ಸೀಸನ್ ನಲ್ಲಿ ಮಾರಾಟವನ್ನು ಹೆಚ್ಚಿಸಲು ಗಮನ ಹರಿಸಿದ್ದೇವೆ ಎಂದು ಹೇಳಿದ್ದರು.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಇನ್ನು ಹೋಂಡಾ ಕಂಪನಿಯ 7ನೇ ತಲೆಮಾರಿನ ಹೋಂಡಾ ಸಿಟಿಯ ಆರ್‍ಎಸ್ ರೂಪಾಂತರವು ಹೈಬ್ರಿಡ್ ತಂತ್ರಜ್ಞಾನವನ್ನು ಪಡೆದುಕೊಂಡಿದೆ. ಹೋಂಡಾ ಜಾಝ್ ಹೈಬ್ರಿಡ್ ಆವೃತ್ತಿಯಲ್ಲಿರುವತಹ ಐ-ಎಂಎಂಡಿ ಹೈಬ್ರಿಡ್ ಸಿಸ್ಟಂ ಅನ್ನು ಹೋಂಡಾ ಸಿಟಿ ಹೊಂದಿರುತ್ತದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಈ ಹೊಸ ಹೋಂಡಾ ಸಿಟಿಯ ಹೈಬ್ರಿಡ್ ಸೆಟಪ್ ಮೂರು ಡ್ರೈವ್ ಮೋಡ್‌ಗಳನ್ನು ಹೊಂದಿರುವ ಸಾಧ್ಯತೆಗಳಿದೆ. ಈ ಹೊಸ ಹೋಂಡಾ ಸಿಟಿ ಹೈಬ್ರಿಡ್ ಆವೃತ್ತಿಯು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ತನ್ನ ಪ್ರಮುಖ ಸಿಆರ್-ವಿ ಎಸ್‌ಯುವಿಯ ಹೊಸ ಸ್ಪೆಷಲ್ ಎಡಿಷನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಹೋಂಡಾ ಸಿಆರ್-ವಿ ಸ್ಪೆಷಲ್ ಎಡಿಷನ್ ಎಸ್‌ಯುವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿ ರೂ.29.50 ಲಕ್ಷಗಳಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಹೊಸ ಹೋಂಡಾ ಸಿಆರ್-ವಿ ಸ್ಪೆಷಲ್ ಎಡಿಷನ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಸೀಮಿತ ಸಂಖ್ಯೆಯಲ್ಲಿ ಲಭ್ಯವಿರುತ್ತದೆ. ಈ ಸ್ಪೆಷಲ್ ಎಡಿಷನ್ ಸಿಆರ್-ವಿ ಪ್ರಸ್ತುತ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟದಲ್ಲಿರುವ ಫೇಸ್‌ಲಿಫ್ಟೆಡ್-ಎಸ್‍ಯುವಿಯನ್ನು ಆಧರಿಸಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹೋಂಡಾ

ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಕಂಪನಿಯು ಮಾರಾಟದಲ್ಲಿ ಬೆಳವಣಿಗೆಯನ್ನು ಕಾಣುತ್ತಿದೆ. ದೀಪಾವಳಿ ಹಬ್ಬದ ಸಮಯದಲ್ಲಿ ಹೋಂಡಾ ಕಾರುಗಳು ಮಾರಾಟ ಮತ್ತಷ್ಟು ಹೆಚ್ಚಾಗಬಹುದು ಎಂದು ನಿರೀಕ್ಷಿಸುತ್ತೇವೆ.

Most Read Articles

Kannada
Read more on ಹೋಂಡಾ honda
English summary
Honda Registers Around 6% Growth In Monthly. Read In Kannada.
Story first published: Thursday, November 5, 2020, 9:39 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X