ಜೂನ್ ತಿಂಗಳ ಮಾರಾಟ ವರದಿ ಬಿಡುಗಡೆಗೊಳಿಸಿದ ಹೋಂಡಾ

ಜಪಾನ್ ಮೂಲದ ಹೋಂಡಾ ಕಂಪನಿಯು ತನ್ನ ಸರಣಿಯಲ್ಲಿರುವ ಕಾರುಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಹೋಂಡಾ ಕಾರುಗಳ ಮಾರಾಟದಲ್ಲಿ ದೊಡ್ಡ ಮಟ್ಟದ ಕುಸಿತವನ್ನು ಕಂಡಿದೆ.

ಜೂನ್ ತಿಂಗಳ ಮಾರಾಟ ವರದಿ ಬಿಡುಗಡೆಗೊಳಿಸಿದ ಹೋಂಡಾ

ಕರೋನಾ ವೈರಸ್ ನಿಂದಾಗಿ ಆಟೋಮೊಬೈಲ್ ಕ್ಷೇತ್ರಕ್ಕೆ ದೊಡ್ಡ ಪರಿಣಾಮವನ್ನು ಬೀರಿದೆ. ಕೆಲವು ವಾಹನ ಉತ್ಪಾದನಾ ಸಂಸ್ಥೆಗಳು ಮಾರಾಟದಲ್ಲಿ ಯಶ್ವಸಿಯನ್ನು ಕಂಡಿದರೆ ಕೆಲವು ವಾಹನ ಉತ್ಪಾದನಾ ಸಂಸ್ಥೆಗಳು ಮುಚ್ಚುವ ಹಾದಿಗೆ ತಲುಪಿದೆ. ಇನ್ನು ಹೊಂಡಾ ಕಂಪನಿಯ ಬಗ್ಗೆ ಹೇಳುವುದಾದರೆ ಮಾರಾಟದಲ್ಲಿ ದೊಡ್ದ ಕುಸಿತವಾಗಿದೆ. ಕಳೆದ ಜೂನ್ ತಿಂಗಳಲ್ಲಿ ಹೋಂಡಾ ಕಂಪನಿಯು 1,398 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಜೂನ್ ತಿಂಗಳ ಮಾರಾಟ ವರದಿ ಬಿಡುಗಡೆಗೊಳಿಸಿದ ಹೋಂಡಾ

ಆದರೆ ಕಳೆದ ವರ್ಷದ ಜೂನ್ ತಿಂಗಳಲ್ಲಿ 10,314 ಯುನಿಟ್‌ಗಳನ್ನು ಮಾರಾಟವನ್ನು ಮಾಡಲಾಗಿತ್ತು. ಅಲ್ಲದೇ ಹೋಂಡಾ ಕಂಪನಿಯು 142 ಯುನಿಟ್‌ಗಳನ್ನು ರಫ್ತು ಮಾಡಿದ್ದರು. ಆದರೆ ಮುಂದಿನ ದಿನಗಳಲ್ಲಿ ಹೋಂಡಾ ಕಾರುಗಳ ಮಾರಾಟದಲ್ಲಿ ಏರಿಕೆಯನ್ನು ಕಾಣಬಹುದು.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಜೂನ್ ತಿಂಗಳ ಮಾರಾಟ ವರದಿ ಬಿಡುಗಡೆಗೊಳಿಸಿದ ಹೋಂಡಾ

ಹೋಂಡಾ ಕಾರ್ಸ್ ಇಂಡಿಯಾ ಲಿಮಿಟೆಡ್ ನ ಹಿರಿಯ ಉಪಾಧ್ಯಕ್ಷರಾದ ರಾಜೇಶ್ ಗೋಯೆಲ್ ಅವರು ಮಾತನಾಡಿ, ನಾವು ಸರ್ಕಾರದ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ ಕಾರುಗಳ ಉತ್ಪಾದನೆಯನ್ನು ಪ್ರಾರಂಭಿಸಿದ್ದೇವೆ. ಇನ್ನು ಭಾರತದಲ್ಲಿ ಈ ತಿಂಗಳು ಹೊಸ ಸಿಟಿ, ಡಬ್ಲ್ಯುಆರ್-ವಿ, ಸಿವಿಕ್ ಮತ್ತು ಜಾಝ್ ಕಾರುಗಳು ಬಿಡುಗಡೆಯಾಗಲಿದೆ. ಈ ಕಾರುಗಳ ಬಿಡುಗಡೆಯಾದ ಬಳಿಕ ಮಾರಾಟದಲ್ಲಿ ಏರಿಕೆಯಾಗುತ್ತದೆ ಎಂದು ಹೇಳಿದರು.

ಜೂನ್ ತಿಂಗಳ ಮಾರಾಟ ವರದಿ ಬಿಡುಗಡೆಗೊಳಿಸಿದ ಹೋಂಡಾ

ಇತ್ತೀಚೆಗೆ ಹೋಂಡಾ ಕಂಪನಿಯು ಈ ಹೊಸ ಸಿಟಿ ಕಾರಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಲಾಗಿದೆ. ಜಪಾನ್ ಮೂಲದ ಹೋಂಡಾ ಕಂಪನಿಯು ಉತ್ತದ ಪ್ರದೇಶದ ನೋಯ್ಡಾದಲ್ಲಿರುವ ತನ್ನ ಸ್ಥಾವರದಲ್ಲಿ ಈ ಹೊಸ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದೆ. ಇದೇ ತಿಂಗಳು ಹೋಂಡಾ ಸಿಟಿ ಕಾರು ಬಿಡುಗಡೆಯಾಗಲಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಜೂನ್ ತಿಂಗಳ ಮಾರಾಟ ವರದಿ ಬಿಡುಗಡೆಗೊಳಿಸಿದ ಹೋಂಡಾ

ಈ ಹೊಸ ಹೋಂಡಾ ಸಿಟಿ 4,549 ಎಂಎಂ ಉದ್ದ, 1,748 ಎಂಎಂ ಅಗಲ, 1,489 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ. 2020ರ ಹೋಂಡಾ ಸಿಟಿ ಪ್ರಸ್ತುತ ಮಾದರಿಗಿಂತ ಹೆಚ್ಚು ಉದ್ದ ಮತ್ತು ಅಗಲವನ್ನು ಹೊಂದಿದೆ.

ಜೂನ್ ತಿಂಗಳ ಮಾರಾಟ ವರದಿ ಬಿಡುಗಡೆಗೊಳಿಸಿದ ಹೋಂಡಾ

2020ರ ಹೋಂಡಾ ಸಿಟಿ ಕಾರಿನಲ್ಲಿ 1.5 ಎಲ್ ಐ-ವಿಟಿಇಸಿ ಡಿಒಹೆಚ್‌ಸಿ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 600 ಆರ್‌ಪಿಎಂನಲ್ಲಿ 121 ಬಿಹೆಚ್‌ಪಿ ಪವರ್ ಮತ್ತು 4,300 ಆರ್‌ಪಿಎಂನಲ್ಲಿ 145 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಹೊಸ 7-ಸ್ಪೀಡ್ ಆಟೋಮ್ಯಾಟಿಕ್ ಸಿವಿಟಿ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ.

MOST READ: ಅನಾವರಣವಾಯ್ತು ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಫೇಸ್‍‍ಲಿಫ್ಟ್ ಎಸ್‍ಯುವಿ

ಜೂನ್ ತಿಂಗಳ ಮಾರಾಟ ವರದಿ ಬಿಡುಗಡೆಗೊಳಿಸಿದ ಹೋಂಡಾ

ಇನ್ನು 2020ರ ಹೋಂಡಾ ಸಿಟಿ ಕಾರಿನಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 99 ಬಿಹೆಚ್‍ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗುತ್ತದೆ. ಈ ಎಂಜಿನ್ ಪ್ರತಿ ಲೀಟರ್‌ಗೆ 24.1 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

ಜೂನ್ ತಿಂಗಳ ಮಾರಾಟ ವರದಿ ಬಿಡುಗಡೆಗೊಳಿಸಿದ ಹೋಂಡಾ

ಹೊಸ ಹೋಂಡಾ ಸಿಟಿ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಆರು ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ವೆಹಿಕಲ್ ಸ್ಟೆಬಿಲಿಟಿ ಅಸಿಸ್ಟ್, ಹಿಲ್-ಸ್ಟಾರ್ಟ್ ಅಸಿಸ್ಟ್, ಟಯರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ, ಹೋಂಡಾದ ಲೇನ್‌ವಾಚ್ ಕ್ಯಾಮೆರಾ ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.

Most Read Articles

Kannada
Read more on ಹೋಂಡಾ honda
English summary
Honda Cars India Ltd Sales Report For June 2020. Read In Kannada.
Story first published: Thursday, July 2, 2020, 20:29 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X