Just In
Don't Miss!
- Lifestyle
'ಮಂಗಳವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ '
- News
ಕೋವಿಡ್ ಲಸಿಕೆ ಪಡೆದುಕೊಂಡಿದ್ದ ಆರೋಗ್ಯ ಇಲಾಖೆ ಉದ್ಯೋಗಿ ಹೃದಯಾಘಾತದಿಂದ ಸಾವು
- Sports
ಐಎಸ್ಎಲ್: ಅಂಕ ಹಂಚಿಕೊಂಡ ಈಸ್ಟ್ ಬೆಂಗಾಲ್ ಮತ್ತು ಚೆನ್ನೈಯಿನ್
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Movies
ಶಿವಲಿಂಗಕ್ಕೆ ಅಪಮಾನ: ನಟಿಯ ವಿರುದ್ಧ ಮಾಜಿ ರಾಜ್ಯಪಾಲ ದೂರು
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜನಪ್ರಿಯ ಹೋಂಡಾ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್
ಜಪಾನ್ ಮೂಲದ ಜನಪ್ರಿಯ ಕಾರು ತಯಾರಕ ಕಂಪನಿಯಾದ ಹೋಂಡಾ ಈ ಹಬ್ಬದ ಸೀಸನ್‌ನಲ್ಲಿ ತನ್ನ ಆಯ್ದ ಮಾದರಿಗಳಿಗೆ ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ. ಹೋಂಡಾ ಕಂಪನಿಯು ತನ್ನ ಆಯ್ದ ಮಾದರಿಗಳಿಗೆ ನಗದು ರಿಯಾಯಿತಿ, ಎಕ್ಸ್‌ಚೆಂಜ್ ಬೋನಸ್ ಮತ್ತು ವಿಶೇಷ ಪ್ಯಾಕೇಜ್‌ಗಳನ್ನು ಘೋಷಿಸಿದೆ.

ಹೋಂಡಾ ಕಂಪನಿಯು ತನ್ನ ಜನಪ್ರಿಯ ಮಾದರಿಗಳಾದ ಅಮೇಜ್, ಡಬ್ಲ್ಯುಆರ್-ವಿ ಮತ್ತು ಸಿವಿಕ್ ಮಾದರಿಗಳಿಗೆ ರಿಯಾಯಿತಿಯನ್ನು ಘೋಷಿಸಿದೆ. ಮಾದರಿ ಮತ್ತು ರೂಪಾಂತರವನ್ನು ಅವಲಂಬಿಸಿ ರೂ.2.5 ಲಕ್ಷಗಳವರೆಗೆ ರಿಯಾಯಿತಿಯನ್ನು ಘೋಷಿಸಿದೆ. ಗ್ರಾಹಕರು ಆನ್‌ಲೈನ್‌ನಲ್ಲಿ ಅಥವಾ ಭಾರತದಾದ್ಯಂತದ ಯಾವುದೇ ಅಧಿಕೃತ ಡೀಲರುಗಳ ಬಳಿಯಿಂದ ಖರೀದಿಸುವಾಗ ಈ ರಿಯಾಯಿತಿಗಳು ಲಭ್ಯವಿರುತ್ತದೆ. ಈ ತಿಂಗಳು ಅಂತ್ಯದವರೆಗೆ ಈ ರಿಯಾಯಿತಿಗಳು ಲಭ್ಯವಿರಲಿದೆ.

ಮಾದರಿವಾರು ಹೇಳುವುದಾದರೆ, ಹೋಂಡಾ ಕಂಪನಿಯ ಕಾಂಪ್ಯಾಕ್ಟ್-ಸೆಡಾನ್ ಹೋಂಡಾ ಅಮೇಜ್ ಮಾದರಿಯ ಎಲ್ಲಾ ರೂಪಾಂತರಗಳ ಮೇಲೆ ರೂ.27,000 ಗಳವರೆಗೆ ರಿಯಾಯಿತಿಯನ್ನು ನೀಡಲಾಗುತ್ತಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೊಸ ಅಮೇಜ್ ಕಾರಿಗಾಗಿ ಹಳೆಯ ಕಾರನ್ನು ವಿನಿಮಯ ಮಾಡಿಕೊಳ್ಳಲು ಬಯಸುವ ಗ್ರಾಹಕರಿಗೆ ನಾಲ್ಕನೇ ಮತ್ತು ಐದನೇ ವರ್ಷಕ್ಕೆ ರೂ.12,000 ಮೌಲ್ಯದ ವಾರಂಟಿ ಪ್ಯಾಕೇಜ್ ನೀಡಲಾಗುತ್ತದೆ. ಇನ್ನು ಹೆಚ್ಚುವರಿಯಾಗಿ ರೂ.15 ಸಾವಿರಗಳವರೆಗೆ ಎಕ್ಸ್‌ಚೆಂಜ್ ಬೋನಸ್ ಅನ್ನು ನೀಡುತ್ತಾರೆ.

ಪರ್ಯಾಯವಾಗಿ ವಿನಿಮಯವನ್ನು ನಡೆಸಲು ಬಯಸದ ಗ್ರಾಹಕರಿಗೆ ನಾಲ್ಕನೇ ಮತ್ತು ಐದನೇ ವರ್ಷಕ್ಕೆ ಅದೇ ವಾರಂಟಿ ಪ್ಯಾಕೇಜ್ ಮತ್ತು ಹೊಸ ಅಮೇಜ್ ಕಾಂಪ್ಯಾಕ್ಟ್ ಸೆಡಾನ್ ಖರೀದಿಯೊಂದಿಗೆ ರೂ.3,000 ಗಳವರೆಗೆ ನಗದು ರಿಯಾಯಿತಿ ನೀಡಲಾಗುತ್ತದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬ್ರಾಂಡ್‌ನ ಡಬ್ಲ್ಯುಆರ್-ವಿ ಕಾಂಪ್ಯಾಕ್ಟ್-ಎಸ್‌ಯುವಿಯನ್ನು ಇತ್ತೀಚೆಗೆ ಬಿಎಸ್ 6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಬಿಡುಗಡೆಗೊಳಿಸಲಾಗಿತ್ತು. ಈ ಡಬ್ಲ್ಯುಆರ್-ವಿ ಕಾಂಪ್ಯಾಕ್ಟ್-ಎಸ್‌ಯುವಿಯು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದೆ.

ಡಬ್ಲ್ಯುಆರ್-ವಿ ಮಾದರಿಯ ಎಲ್ಲಾ ರೂಪಾಂತರಗಳ ಮೇಲೆ ರೂ.20,000 ಗಳವರೆಗೆ ನಗದು ರಿಯಾಯಿತಿಯನ್ನು ನೀಡಲಾಗುತ್ತಿದೆ. ಹೋಂಡಾ ಕಂಪನಿಯು ಒಟ್ಟು ನಾಲ್ಕು ರೂಪಾಂತರಗಳಲ್ಲಿ ಲಭ್ಯವಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಹೋಂಡಾ ಕಂಪನಿಯು ಸಿವಿಕ್ ಕಾರನ್ನು ಇತ್ತೀಚೆಗೆ ಬಿಎಸ್ 6 ಡೀಸೆಲ್ ಎಂಜಿನ್ ರೂಪದಲ್ಲಿ ಬಿಡುಗಡೆಗೊಳಿಸಿತ್ತು. ಈ ಸಿವಿಕ್ ಡೀಸೆಲ್ ಮಾದರಿಯ ಮೇಲೆ ಭರ್ಜರಿ ರಿಯಾಯಿತಿ ನೀಡಿದೆ. ಸಿವಿಕ್ ಡೀಸೆಲ್ ಮಾದರಿಯ ಮೇಲೆ ರೂ.2.5 ಲಕ್ಷಗಳವರೆಗೆ ನಗದು ರಿಯಾಯಿತಿಯನ್ನು ಘೋಷಿಸಿದೆ. ಇನ್ನು ಸಿವಿಕ್ ಪೆಟ್ರೋಲ್ ಮಾದರಿಗೆ ರೂ.1 ಲಕ್ಷ ಗಳವರೆಗೆ ರಿಯಾಯಿತಿಯನ್ನು ನೀಡಲಾಗಿದೆ.

ಭಾರತದಲ್ಲಿ ಈ ಹಬ್ಬದ ಸೀಸನ್‌ನಲ್ಲಿ ಹೋಂಡಾ ಕಂಪನಿಯು ತನ್ನ ಜನಪ್ರಿಯ ಮಾದರಿಗಳಿಗೆ ಭರ್ಜರಿ ರಿಯಾಯಿತಿಯನ್ನು ನೀಡಿದೆ, ಹೋಂಡಾ ಕಾರನ್ನು ಖರೀದಿಸಲು ಬಯಸುವ ಗ್ರಾಹಕರಿಗೆ ಇದೊಂದು ಉತ್ತಮ ಅವಕಾಶವಾಗಿದೆ.