ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯ ಸಿದ್ದತೆಯಲ್ಲಿ ಹೋಂಡಾ ಕಾರ್ಸ್ ಇಂಡಿಯಾ

ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಹೆಚ್ಚಿಸಲಾಗುತ್ತಿದೆ.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯ ಸಿದ್ದತೆಯಲ್ಲಿ ಹೋಂಡಾ ಕಾರ್ಸ್ ಇಂಡಿಯಾ

ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಯುರೋಪ್ ಒಕ್ಕೂಟದಲ್ಲಿನ ಪ್ರಮುಖ ರಾಷ್ಟ್ರಗಳು ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ನಿಷೇಧದ ನಿರ್ಣಯದಿಂದಾಗಿ ಇಂಧನ ಚಾಲಿತ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ. ಆಟೋ ಉತ್ಪದನಾ ಕಂಪನಿಗಳು ಕೂಡಾ ಹೊಸ ನಿರ್ಣಯಕ್ಕೆ ಪೂರಕವಾಗಿ ಇವಿ ವಾಹನಗಳ ಮೇಲೆ ಹೆಚ್ಚು ಗಮನಹರಿಸಿದ್ದು, ಹೋಂಡಾ ಕಂಪನಿಯು ಸಹ ಶೀಘ್ರದಲ್ಲೇ ವಿವಿಧ ರಾಷ್ಟ್ರಗಳಲ್ಲಿ ಹಲವು ಎಲೆಕ್ಟ್ರಿಕ್ ಕಾರು ಮಾದರಿಗಳ ಬಿಡುಗಡೆಗೆ ಸಿದ್ದವಾಗಿದೆ.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯ ಸಿದ್ದತೆಯಲ್ಲಿ ಹೋಂಡಾ ಕಾರ್ಸ್ ಇಂಡಿಯಾ

ಭಾರತದಲ್ಲೂ ಈಗಾಗಲೇ ಹಲವು ಕಾರು ಕಂಪನಿಗಳು ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಶೀಘ್ರದಲ್ಲೇ ಜಪಾನ್ ಆಟೋ ಉತ್ಪದನಾ ಕಂಪನಿಯಾಗಿರುವ ಹೋಂಡಾ ಕಾರ್ಸ್ ಭಾರತದಲ್ಲಿ ಹೊಸ ಎಲೆಕ್ಟ್ರಿಕ್ ಬಿಡುಗಡೆಗೆ ಸಿದ್ದವಾಗಿದೆ.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯ ಸಿದ್ದತೆಯಲ್ಲಿ ಹೋಂಡಾ ಕಾರ್ಸ್ ಇಂಡಿಯಾ

ಹೋಂಡಾ ಕಾರ್ಸ್ ಇಂಡಿಯಾ ಕಾರ್ಸ್ ಕಂಪನಿಯು ಇತ್ತೀಚೆಗೆ ಗ್ರೇಟರ್ ನೋಯ್ಡಾದಲ್ಲಿರುವ ಕಾರು ಉತ್ಪಾದನಾ ಘಟಕವನ್ನು ಸ್ಥಗಿತಗೊಳಿಸುವ ಮೂಲಕ ರಾಜಸ್ತಾನದಲ್ಲಿರುವ ತಾರಕ್ಪುರ್ ಉತ್ಪಾದನಾ ಘಟಕಕ್ಕೆ ಸ್ಥಳಾಂತಗೊಂಡಿದ್ದು, ಹೊಸ ಉತ್ಪಾದನಾ ಘಟಕದಲ್ಲಿ ಎಲೆಕ್ಟ್ರಿಕ್ ಕಾರು ಮಾದರಿಗಳಿಗಾಗಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ಸಿದ್ದಪಡಿಸಲಾಗಿದೆ.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯ ಸಿದ್ದತೆಯಲ್ಲಿ ಹೋಂಡಾ ಕಾರ್ಸ್ ಇಂಡಿಯಾ

ತಾರಕ್ಪುರ್‌ದಲ್ಲಿರುವ ಕಾರು ಉತ್ಪಾದನಾ ಘಟಕದ ಮೂಲಕ ಕಾರು ಮಾರಾಟದಲ್ಲಿ ಮತ್ತೊಂದು ಹಂತದ ಬೆಳವಣಿಗೆ ಸಾಧಿಸಲಿರುವ ಹೋಂಡಾ ಕಂಪನಿಯು ಎಲೆಕ್ಟ್ರಿಕ್ ಕಾರು ಮಾದರಿಗಳ ಮೇಲೆ ಹೆಚ್ಚಿನ ಮಟ್ಟದ ನೀರಿಕ್ಷೆಯಿಟ್ಟುಕೊಂಡಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ಕಾರು ಮಾದರಿಗಳಲ್ಲೇ ಎಲೆಕ್ಟ್ರಿಕ್ ವರ್ಷನ್ ಅಭಿವೃದ್ದಿಗೊಳಿಸಲಿದೆಯಾ ಅಥವಾ ಸಂಪೂರ್ಣವಾಗಿ ಹೊಸ ಉತ್ಪನ್ನ ಬಿಡುಗಡೆ ಮಾಡಲಿದೆಯಾ ಎನ್ನುವ ಸ್ಪಷ್ಟ ಮಾಹಿತಿಯಿಲ್ಲ.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯ ಸಿದ್ದತೆಯಲ್ಲಿ ಹೋಂಡಾ ಕಾರ್ಸ್ ಇಂಡಿಯಾ

ಆದರೆ 2022ರ ಹೊತ್ತಿಗೆ ಹೊಸ ಕಾರು ಉತ್ಪಾದನಾ ಘಟಕದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯನ್ನು ಆರಂಭಿಸಲು ಸಿದ್ದವಾಗಿರುವ ಹೋಂಡಾ ಕಂಪನಿಯು ಶೀಘ್ರದಲ್ಲೇ ಎಲೆಕ್ಟ್ರಿಕ್ ಕಾರು ಮಾದರಿಯ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಆರಂಭಿಸಲಿದೆ.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯ ಸಿದ್ದತೆಯಲ್ಲಿ ಹೋಂಡಾ ಕಾರ್ಸ್ ಇಂಡಿಯಾ

ಇನ್ನು ಹೋಂಡಾ ಕಾರ್ಸ್ ಕಂಪನಿಯು ಈಗಾಗಲೇ ತನ್ನ ಜನಪ್ರಿಯ ಹೋಂಡಾ ಇ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಯುರೋಪ್ ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ಮೂಲಕ ಆಟೋ ಉದ್ಯಮದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರು ಬಿಡುಗಡೆಯಾದ ಕೆಲವೇ ತಿಂಗಳಿನಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದೆ.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯ ಸಿದ್ದತೆಯಲ್ಲಿ ಹೋಂಡಾ ಕಾರ್ಸ್ ಇಂಡಿಯಾ

ಹೋಂಡಾ ಕಾರ್ಸ್ ಕಂಪನಿಯು ಈ ವರ್ಷದ ಅಗಸ್ಟ್ ಮೊದಲ ಮೊದಲ ವಾರದಲ್ಲಿ ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ ಹೊಸ ಇ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಿದ್ದು, ಮಾರ್ಡನ್ ರೆಟ್ರೋ ವಿನ್ಯಾಸವನ್ನು ಹೊಂದಿರುವ ಹೊಸ ಕಾರು ಆಕರ್ಷಕ ಬ್ಯಾಟರಿ ಆಯ್ಕೆಯೊಂದಿಗೆ ಮಾರಾಟಗೊಳ್ಳುತ್ತಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯ ಸಿದ್ದತೆಯಲ್ಲಿ ಹೋಂಡಾ ಕಾರ್ಸ್ ಇಂಡಿಯಾ

ಬ್ಯಾಟರಿ ಆಯ್ಕೆ ಮತ್ತು ಫೀಚರ್ಸ್‌ಗಳಿಗೆ ಅನುಗುಣವಾಗಿ ಪ್ರಮುಖ ಎರಡು ಮಾದರಿಗಳಲ್ಲಿ ಮಾರಾಟಗೊಳ್ಳುತ್ತಿರುವ ಹೋಂಡಾ ಇ ಕಾರು ಸಾಮಾನ್ಯ ಮತ್ತು ಸುಧಾರಿತ ಬ್ಯಾಟರಿ ಆಯ್ಕೆ ಹೊಂದಿದ್ದು, ಸಾಮಾನ್ಯ ಬ್ಯಾಟರಿ ಹೊಂದಿರುವ ಮಾದರಿಯು ಪ್ರತಿ ಚಾರ್ಜ್‌ಗೆ 200 ಕಿ.ಮೀ ನಿಂದ 250 ಕಿ.ಮೀ ಸ್ಟ್ಯಾಂಡರ್ಡ್ ಮೈಲೇಜ್ ಹೊಂದಿದ್ದು, ಆಸಕ್ತ ಗ್ರಾಹಕರು ಇದೇ ಕಾರು ಮಾದರಿಯಲ್ಲಿ ಹೆಚ್ಚುವರಿ ಬ್ಯಾಟರಿ ಆಯ್ಕೆಗಳ ಮೂಲಕ ಪ್ರತಿ ಚಾರ್ಜ್‌ಗೆ 520 ಕಿ.ಮೀ ಮೈಲೇಜ್ ವರೆಗೂ ಹೆಚ್ಚಿಸಿಕೊಳ್ಳಬಹುದು.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯ ಸಿದ್ದತೆಯಲ್ಲಿ ಹೋಂಡಾ ಕಾರ್ಸ್ ಇಂಡಿಯಾ

ಹೋಂಡಾ ಇ ಕಾರು ಜಪಾನ್ ಮಾರುಕಟ್ಟೆಯಲ್ಲಿ ಭಾರತೀಯ ಬೆಲೆಗಳಿಗೆ ಅನುಗುಣವಾಗಿ ರೂ. 16 ಲಕ್ಷದಿಂದ ರೂ. 20 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುತ್ತಿದ್ದು, ಕ್ವಿಕ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯ ಸಿದ್ದತೆಯಲ್ಲಿ ಹೋಂಡಾ ಕಾರ್ಸ್ ಇಂಡಿಯಾ

ಆದರೆ ಹೋಂಡಾ ಇ-ಕಾರು ಮಾದರಿಯು ಸದ್ಯಕ್ಕೆ ಭಾರತದಲ್ಲಿ ಬಿಡುಗಡೆಯಾಗುವ ಯಾವುದೇ ಸಾಧ್ಯತೆಗಳಿಲ್ಲವಾದರೂ ಭವಿಷ್ಯದಲ್ಲಿ ಬಿಡುಗಡೆಯ ನೀರಿಕ್ಷೆಗಳಿದ್ದು, ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟಕ್ಕೆ ಚಾರ್ಜಿಂಗ್ ನಿಲ್ದಾಣಗಳ ಕೊರತೆಯು ಭಾರೀ ಹಿನ್ನಡೆ ಉಂಟು ಮಾಡುತ್ತಿದೆ.

Article Published On: Friday, December 25, 2020, 11:32 [IST]
English summary
Honda To Focus On Electric Models in India. Read in Kannada.
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+