Just In
Don't Miss!
- Movies
'ದೀಪ್ ಸಿಧು ಜೊತೆ ನನಗೆ ಯಾವುದೇ ಸಂಬಂಧವಿಲ್ಲ': ಸಂಸದ, ನಟ ಸನ್ನಿ ಡಿಯೋಲ್ ಸ್ಪಷ್ಟನೆ
- News
ಭಾರತದಲ್ಲಿ ಬೇಕಾದಷ್ಟು ಲಸಿಕೆಯಿದೆ, ಆದರೆ... ಸಮಸ್ಯೆ ಬೇರೆಯೇ ಆಗಿದೆ
- Finance
ಬಜೆಟ್ 2021: ಸ್ಟ್ಯಾಂಡರ್ಡ್ ಡಿಡಕ್ಷನ್ ರು. 1 ಲಕ್ಷಕ್ಕೆ ಹೆಚ್ಚಳ ನಿರೀಕ್ಷೆ
- Sports
ಬೈರ್ಸ್ಟೋವ್ಗೆ 2 ಪಂದ್ಯಗಳ ವಿಶ್ರಾಂತಿ ನೀಡಿರುವುದನ್ನು ಸಮರ್ಥಿಸಿದ ಇಂಗ್ಲೆಂಡ್ ಕೋಚ್
- Education
WCD Chitradurga Recruitment 2021: ಅಂಗನವಾಡಿಯಲ್ಲಿ 129 ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಿ ಸೆಗ್ಮೆಂಟ್ ಸೆಡಾನ್ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಹೋಂಡಾ ಸಿಟಿ
ಆರ್ಥಿಕ ಹಿಂಜರಿತದ ಜೊತೆಗೆ ಕರೋನಾ ವೈರಸ್ ಪರಿಣಾಮ ಸಾಕಷ್ಟು ಇಳಿಕೆ ಕಂಡಿದ್ದ ಹೊಸ ವಾಹನಗಳು ಮಾರಾಟವು ಬಹುದಿನಗಳ ನಂತರ ಸುಧಾರಣೆ ಕಂಡಿದ್ದು, ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಕೂಡಾ ದಸರಾ ಮತ್ತು ದೀಪಾವಳಿ ಸಂಭ್ರಮಾಚರಣೆಯಲ್ಲಿ ಅತ್ಯಧಿಕ ಪ್ರಮಾಣದ ಬೇಡಿಕೆ ಪಡೆದುಕೊಂಡಿದೆ.

ಕಳೆದ ಐದಾರು ತಿಂಗಳಿನಿಂದ ಸತತವಾಗಿ ಹೊಸ ವಾಹನಗಳ ಮಾರಾಟದಲ್ಲಿ ಕನಿಷ್ಠ ಬೆಳವಣಿಗೆಗೂ ಪರದಾಡಿದ್ದ ಆಟೋ ಕಂಪನಿಗಳು ಇದೀಗ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ದಸರಾ ನಂತರ ದೀಪಾವಳಿ ಸಂಭ್ರಮದಲ್ಲೂ ಹೊಸ ವಾಹನ ಮಾರಾಟವು ನೀರಿಕ್ಷಿತ ಮಟ್ಟಕ್ಕಿಂತಲೂ ಹೆಚ್ಚಳವಾಗಿದೆ. ಹೋಂಡಾ ಕಾರ್ಸ್ ಇಂಡಿಯಾ ಕೂಡಾ ಗರಿಷ್ಠ ಪ್ರಮಾಣದ ಪ್ರಮಾಣದ ಬೇಡಿಕೆ ಪಡೆದುಕೊಂಡಿದ್ದು, ಸಿ ಸೆಗ್ಮೆಂಟ್ ಸೆಡಾನ್ ಕಾರು ಮಾರಾಟದಲ್ಲಿ ಸಿಟಿ ಕಾರು ಮಾದರಿಯು ಅಗ್ರಸ್ಥಾನ ಕಾಯ್ದುಕೊಂಡಿದೆ.

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ನವೆಂಬರ್ ವೇಳೆ ಒಟ್ಟು 9,990 ಯುನಿಟ್ ಮಾರಾಟ ಮಾಡುವ ಮೂಲಕ ಕಳೆದ ವರ್ಷದ ನವೆಂಬರ್ ಅವಧಿಗಿಂತ ಶೇ.55 ರಷ್ಟು ಬೆಳವಣಿಗೆ ಸಾಧಿಸಿದ್ದು, ಸಿ ಸೆಗ್ಮೆಂಟ್ ಸೆಡಾನ್ ಮಾದರಿಯಾಗಿರುವ ಸಿಟಿ ಕಾರು ಕೂಡಾ ಹೆಚ್ಚಿನ ಮಟ್ಟದಲ್ಲಿ ಮಾರಾಟಗೊಂಡಿದೆ.

ಸದ್ಯ ಐದನೇ ತಲೆಮಾರಿನ ವೈಶಿಷ್ಟ್ಯತೆಯೊಂದಿಗೆ ಮಾರಾಟವಾಗುತ್ತಿರುವ ಸಿಟಿ ಸೆಡಾನ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ವೆರ್ನಾ, ಮಾರುತಿ ಸುಜುಕಿ ಸಿಯಾಜ್, ಸ್ಕೋಡಾ ರ‍್ಯಾಪಿಡ್, ಟೊಯೊಟಾ ಯಾರಿಸ್, ಫೋಕ್ಸ್‌ವ್ಯಾಗನ್ ವೆಂಟೊ ಮಾದರಿಗಳ ಮಾರಾಟಕ್ಕಿಂತಲೂ ಹೆಚ್ಚು ಬೇಡಿಕೆ ಪಡೆದುಕೊಂಡಿದೆ.

ನ್ಯೂ ಜನರೇಷನ್ ಸಿಟಿ ಸೆಡಾನ್ ಕಾರು ಮಾದರಿಯು ನವೆಂಬರ್ ಅವಧಿಯಲ್ಲಿ ಒಟ್ಟು 3,523 ಯುನಿಟ್ ಮಾರಾಟದೊಂದಿಗೆ ಕಳೆದ ವರ್ಷದ ನವೆಂಬರ್‌ಗಿಂತ ಶೇ. 135ರಷ್ಟು ಬೆಳವಣಿಗೆ ಸಾಧಿಸಿದ್ದು, ಮಾರುತಿ ಸಿಯಾಜ್ ಕಾರು ಮಾದರಿಯು 1,870 ಯುನಿಟ್, ಹ್ಯುಂಡೈ ವೆರ್ನಾ ಕಾರು ಮಾದರಿಯು 1487 ಯುನಿಟ್, ಸ್ಕೋಡಾ ರ‍್ಯಾಪಿಡ್ 813 ಯುನಿಟ್, ಟೊಯೊಟಾ ಯಾರಿಸ್ 345 ಯನಿಟ್ ಮತ್ತು ಫೋಕ್ಸ್‌ವ್ಯಾಗನ್ ವೆಂಟೋ ಕಾರು 125 ಯುನಿಟ್ ಮಾರಾಟಗೊಂಡಿದೆ.

2020ರ ಜುಲೈ ಆರಂಭದಲ್ಲಿ ಸಿಟಿ ಸೆಡಾನ್ ಮಾದರಿಯನ್ನು ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಗೊಳಿಸಿದ ನಂತರ ಇದೀಗ ಅತಿಹೆಚ್ಚು ಗ್ರಾಹಕರ ಬೇಡಿಕೆ ಪಡೆದುಕೊಂಡಿದ್ದು, ಸೆಡಾನ್ ಕಾರು ಮಾರಾಟವು ಕಳೆದ ವರ್ಷಕ್ಕಿಂತ ಶೇ. 29 ರಷ್ಟು ಏರಿಕೆಯಾಗಿದೆ.

ಇನ್ನು ನ್ಯೂ ಜನರೇಷನ್ ಸಿಟಿ ಕಾರು ವಿ, ವಿಎಕ್ಸ್, ಜೆಡ್ಎಕ್ಸ್ ಆವೃತ್ತಿಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಹೊಸ ಕಾರು ಸಿ ಸೆಗ್ಮೆಂಟ್ ಸೆಡಾನ್ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ. ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 10.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14.65 ಲಕ್ಷದೊಂದಿಗೆ ಸೆಡಾನ್ ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

ಹೊಸ ಕಾರಿನಲ್ಲಿ ಕಟಿಂಗ್ ಎಡ್ಜ್ ಎಲ್ಇಡಿ ಹೆಡ್‍ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, ಎಲ್‌ಇಡಿ ಡಿಆರ್‌ಎಲ್, ಎಲ್ ಶೇಪ್ಡ್ ಎಲ್ಇಡಿ ಟರ್ನ್ ಸಿಗ್ನಲ್, ಡೈನಾಮಿಕ್ ಇಂಡಿಕೇಟರ್ ನೀಡಲಾಗಿದ್ದು, ಹೊಸ ಕಾರು 10ನೇ ತಲೆಮಾರಿನ ಸಿವಿಕ್ ಸೆಡಾನ್ ಮಾದರಿಯಿಂದಲೂ ಹಲವಾರು ಫೀಚರ್ಸ್‌ಗಳನ್ನು ಎರವಲು ಪಡೆದುಕೊಂಡಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ಸಿಟಿ ಕಾರಿನಲ್ಲಿ ಈ ಬಾರಿ ಡಬಲ್ ಓವರ್‌ಹೆಡ್ ಕ್ಯಾಮ್ ಸೆಟಪ್‌ನೊಂದಿಗೆ ಹೊಸದಾಗಿ 1.5-ಲೀಟರ್ ಪೆಟ್ರೋಲ್ ಎಂಜಿನ್(ಎಲ್15ಬಿ) ನೀಡಲಾಗುತ್ತಿದ್ದು, ಈ ಹೊಸ ಎಂಜಿನ್ 120-ಬಿಎಚ್‌ಪಿ ಮತ್ತು 145-ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ.

ಹಾಗೆಯೇ ಡೀಸೆಲ್ ಮಾದರಿಯು 1.5-ಲೀಟರ್ 100-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಸ್ಟ್ಯಾಂಡರ್ಡ್ ಆಗಿ ಎರಡು ಮಾದರಿಯಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಪರ್ಫಾಮೆನ್ಸ್ ಪ್ರಿಯರಿಗಾಗಿ ಪೆಟ್ರೋಲ್ ಹೈ ಎಂಡ್ ಮಾದರಿಯಲ್ಲಿ ಮಾತ್ರ 7-ಸ್ಪೀಡ್ ಸಿವಿಟಿ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದ್ದು, ಪೆಟ್ರೋಲ್ ಮಾದರಿಯು ಪ್ರತಿ ಲೀಟರ್‌ಗೆ 17ರಿಂದ 18 ಕಿ.ಮೀ ಮತ್ತು ಡೀಸೆಲ್ ಮಾದರಿಯು ಪ್ರತಿ ಲೀಟರ್‌ಗೆ 22ರಿಂದ 23 ಕಿ.ಮೀ ಇಂಧನ ದಕ್ಷತೆಯನ್ನು ಹೊಂದಿರಲಿದೆ.