ಸ್ಥಗಿತವಾಯ್ತು ಹೋಂಡಾ ಸಿಆರ್-ವಿ ಎಸ್‍ಯುವಿಯ ಡೀಸೆಲ್ ಆವೃತ್ತಿ
ಹೋಂಡಾ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಸಿಆರ್-ವಿ ಡೀಸೆಲ್ ಆವೃತ್ತಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಸ್ಥಗಿತಗೊಳಿಸಲಾಗಿದೆ. ಈ ಹೋಂಡಾ ಸಿಆರ್-ವಿ ಎಸ್‍ಯುವಿಯ ಬಿಎಸ್-6 ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರ ಲಭ್ಯವಿರಲಿದೆ.

ಹೊಸ ಹೋಂಡಾ ಸಿಆರ್-ವಿ ಎಸ್‍ಯುವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.28.27 ಲಕ್ಷಗಳಾಗಿದೆ. ಸಿಆರ್-ವಿ ಡೀಸೆಲ್ ಆವೃತ್ತಿಯನ್ನು ಸ್ಥಗಿತಗೊಳಿಸಲು ಏನು ಕಾರಣವೆಂಬುದು ಹೋಂಡಾ ಇನ್ನು ತಿಳಿಸಿಲ್ಲ. ಹೋಂಡಾ ಕಂಪನಿಯು ತನ್ನ ವೆಬ್‌ಸೈಟ್ ನಲ್ಲಿ ಸಿಆರ್-ವಿ ಡೀಸೆಲ್ ಆವೃತ್ತಿಯ ಹೆಸರನ್ನು ತೆಗೆದುಹಾಕಲಾಗಿದೆ. ಈಗ ಈ ಎಸ್‍ಯುವಿಯು ಕೇವಲ ಒಂದು ಎಂಜಿನ್ ಆಯ್ಕೆಯಲ್ಲಿ ಮಾತ್ರ ಲಭ್ಯವಿರಲಿದೆ.

2020ರ ಹೋಂಡಾ ಸಿಆರ್-ವಿ ಎಸ್‍ಯುವಿಯಲ್ಲಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 150 ಬಿಹೆಚ್‌ಪಿ ಮತ್ತು 189 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು ಸಿವಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.
MOST READ: ಹೊಸ ಸುರಕ್ಷತಾ ಕ್ರಮಗಳೊಂದಿಗೆ ಆಕ್ಟೀವಿಯಾ ಆರ್‍ಎಸ್ 245 ಕಾರಿನ ವಿತರಿಸಿದ ಸ್ಕೋಡಾ

ಭವಿಷ್ಯದಲ್ಲಿ ಮಾರುಕಟ್ಟೆಯಲ್ಲಿ ಹೋಂಡಾ ಸಿಆರ್-ವಿ ಎಸ್‍ಯುವಿಯಲ್ಲಿ ಡೀಸೆಲ್ ಎಂಜಿನ್ ಅನ್ನು ತರುತ್ತದೆಯೇ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸದ್ಯಕ್ಕೆ ಕಂಪನಿಯು ಇದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಲಾಗಿದೆ. ಈ ಎಸ್‍ಯುವಿಯು ಕೇವಲ ಪೆಟ್ರೋಲ್ ಆವೃತ್ತಿಯಲ್ಲಿ ಲಭ್ಯವಿರುತ್ತದೆ.

ಈ ಸಿಆರ್-ವಿ ಎಸ್‍ಯುವಿಯಲ್ಲಿ ಡೀಸೆಲ್ ಎಂಜಿನ್ ಸ್ಥಗಿತಗೊಳಿಸುವುದರ ಹೊರತಾಗಿ ಹೋಂಡಾದ ಈ ಜನಪ್ರಿಯ ಎಸ್‍ಯುವಿಯಲ್ಲಿ ಇತರ ಯಾವುದೇ ಬದಲಾವಣೆಗಳಿಲ್ಲ. ಸಿಆರ್-ವಿ ಮಾದರಿಯಲ್ಲಿ ಅದೇ ಹಿಂದಿನ ಫೀಚರ್ ಗಳನ್ನು ಹೊಂದಿರಲಿದೆ.
MOST READ: ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಹೊಸ ತಲೆಮಾರಿನ ಹೋಂಡಾ ಸಿಆರ್-ವಿ ಎಸ್‍ಯುವಿಯನ್ನು 2018ರಲ್ಲಿ ಬಿಡುಗಡೆಗೊಳಿಸಿದ್ದರು. ಕಳೆದ ಎರಡು ವರ್ಷಗಳಲ್ಲಿ ಈ ಎಸ್‍ಯುವಿಯು ಉತ್ತಮವಾಗಿ ಕಾರ್ಯನಿರ್ವಹಿಸಲಾಗಿದೆ. ಆದರೆ ಅದೇ ವಿಭಾಗದ ಪ್ರತಿಸ್ಪರ್ದಿಗಳ ಮಾರಾಟವನ್ನು ಹೋಲಿಸಿದರೆ ಸ್ವಲ್ಪ ಕೆಳಗಿನ ಸ್ಥಾನದಲ್ಲಿದೆ.

ಇದರೊಂದಿಗೆ ಹೋಂಡಾ ತನ್ನ 2020ರ ಸಿಟಿ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಬಹುನಿರೀಕ್ಷಿತ ಹೊಸ ಹೋಂಡಾ ಸಿಟಿ ಕಾರನಲ್ಲಿ ಹೊಸ ಎಂಜಿನ್ ಆಯ್ಕೆಯೊಂದಿಗೆ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.
MOST READ: ಬಿಡುಗಡೆಯಾಯ್ತು ಬಿಎಸ್-6 ದಟ್ಸನ್ ಗೋ, ಗೋ ಪ್ಲಸ್ ಕಾರುಗಳು

ಮಾರುಕಟ್ಟೆಯಲ್ಲಿರುವ ಹೋಂಡಾ 1.5-ಲೀಟರ್ ಎಸ್‌ಒಹೆಚ್‌ಸಿ ಎಂಜಿನ್‌ಗಿಂತಲೂ ಇದು ಹೆಚ್ಚು ಪವರ್ ಬ್ಯಾಂಡ್ ಹೊಂದಿರಲಿದೆ. ಹೊಸ ಸಿಟಿ ಕಾರಿನಲ್ಲಿ ಡ್ಯುಯಲ್ ಓವರ್‌ಹೆಡ್ ಕ್ಯಾಮ್ ಸೆಟಪ್‌ನೊಂದಿಗೆ ಹೊಸ 1.5-ಲೀಟರ್ ಪೆಟ್ರೋಲ್ ಎಂಜಿನ್(ಎಲ್ 15 ಬಿ) ನೀಡಲಾಗುತದೆ. ಈ ಹೊಸ ಎಂಜಿನ್ 119 ಬಿಎಚ್‌ಪಿ ಮತ್ತು ಸುಮಾರು 155 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ.

ಹೋಂಡಾ ಸಿಆರ್-ವಿ ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಕಂಪನಿಯ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ದೀರ್ಘಕಾಲದವರೆಗೆ ಮಾರುಕಟ್ಟೆಯಲ್ಲಿ ಮಾರಾಟದಲ್ಲಿದೆ


Click it and Unblock the Notifications