ಸ್ಥಗಿತವಾಗಲಿದೆ 4ನೇ ತಲೆಮಾರಿನ ಹೋಂಡಾ ಸಿಟಿ ಕಾರಿನ ಟಾಪ್ ವೆರಿಯೆಂಟ್‌ಗಳು
ಹೋಂಡಾ ಕಂಪನಿಯು ಇತ್ತೀಚೆಗೆ ತನ್ನ ಐದನೇ ತಲೆಮಾರಿನ ಸಿಟಿ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಇದೀಗ ಹೋಂಡಾ ಕಂಪನಿಯು ತನ್ನ ನಾಲ್ಕನೇ ತಲೆಮಾರಿನ ಸಿಟಿ ಕಾರಿನ ಟಾಪ್ ವೆರಿಯೆಂಟ್ ಗಳನ್ನು ಸ್ಥಗಿತಗೊಳಿಸಲು ಮುಂದಾಗಿದೆ.

ನಾಲ್ಕನೇ ತಲೆಮಾರಿನ ಬಿಎಸ್ 6 ಹೋಂಡಾ ಸಿಟಿ ಎಸ್‌ವಿ, ವಿ, ವಿಎಕ್ಸ್ ಮತ್ತು ಝಡ್‌ಎಕ್ಸ್ ಎಂಬ ನಾಲ್ಕು ರೂಪಾಂತರಗಳಲ್ಲಿ ಲಭ್ಯವಿದೆ. ಹಿಂದಿನ ತಲೆಮಾರಿನ ಮಾದರಿಯಿಂದ ಹೊಸ ಐದನೇ ತಲೆಮಾರಿನ ಹೋಂಡಾ ಸಿಟಿ ಕಾರಿನ ಮಾರಾಟದ ಮೇಲೆ ಪರಿಣಾಮವನ್ನು ಬೀರಬಹುದು ಎಂದು ಹೋಂಡಾ ಕಂಪನಿಯು ಯೋಚಿಸಿದೆ. ಇದರಿಂದ ನಾಲ್ಕನೇ ತಲೆಮಾರಿನ ಟಾಪ್ ವೆರಿಯೆಂಟ್ ಆದ ವಿಎಕ್ಸ್ ಮತ್ತು ಝಡ್‌ಎಕ್ಸ್ ರೂಪಾಂತರಗಳನ್ನು ಸ್ಥಗಿತಗೊಳಿಸಲು ಹೋಂಡಾ ಕಂಪನಿಯು ಮುಂದಾಗಿದೆ ಎಂದು ವರದಿಗಳು ಪ್ರಕಟವಾಗಿದೆ.

ನಾಲ್ಕನೇ ತಲೆಮಾರಿನ ಹೋಂಡಾ ಸಿಟಿ ಕಾರಿನಲ್ಲಿ ಹೋಂಡಾ ಸಿಟಿ ಕಾರು 1.5-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ.ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 145 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಮ್ಯಾನುವಲ್ ಮತ್ತು ಸಿವಿಟಿ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ಇನ್ನು ಇತ್ತೀಚೆಗೆ ಬಿಡುಗಡೆಗೊಂಡ ಐದನೇ ತಲೆಮಾರಿನ ಹೋಂಡಾ ಸಿಟಿ ಕಾರಿನ ಪ್ರಾರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.10.90 ಲಕ್ಷಗಳಾಗಿದೆ. ಹೊಸ ತಲೆಮಾರಿನ ಸಿಟಿ ಕಾರು ವಿ, ವಿಎಕ್ಸ್, ಝೆಡ್ಎಕ್ಸ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ.

ಈ ಹೊಸ ಕಾರಿನಲ್ಲಿ ಎಲ್ಇಡಿ ಹೆಡ್‍ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, ಎಲ್‌ಇಡಿ ಡಿಆರ್‌ಎಲ್, ಎಲ್ ಶೇಪ್ಡ್ ಎಲ್ಇಡಿ ಟರ್ನ್ ಸಿಗ್ನಲ್, ಡೈನಾಮಿಕ್ ಇಂಡಿಕೇಟರ್ ನೀಡಲಾಗಿದೆ, ಈ ಹೊಸ ಕಾರು 10ನೇ ತಲೆಮಾರಿನ ಸಿವಿಕ್ ಸೆಡಾನ್ ಮಾದರಿಯಿಂದಲೂ ಹಲವಾರು ಫೀಚರ್ಸ್‌ಗಳನ್ನು ಎರವಲು ಪಡೆದುಕೊಂಡಿದೆ.
MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ಇನ್ನು ಈ ಹೊಸ ಹೋಂಡಾ ಸಿಟಿ ಕಾರು 4,549 ಎಂಎಂ ಉದ್ದ, 1,748 ಎಂಎಂ ಅಗಲ, 1,489 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ. 2020ರ ಸಿಟಿ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಲಭ್ಯವಿದೆ. ಇದರಲ್ಲಿ 1.5-ಲೀಟರ್ ಐ-ವಿಟಿಇಸಿ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಐ-ಡಿಟಿಇಸಿ ಡೀಸೆಲ್ ಎಂಜಿನ್ ಅನ್ನು ಹೊಂದಿದೆ.

1.5-ಲೀಟರ್ ಐ-ವಿಟಿಇಸಿ ಪೆಟ್ರೋಲ್ ಎಂಜಿನ್ 120 ಬಿಹೆಚ್‍ಪಿ ಪವರ್ ಮತ್ತು 145 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 1.5-ಲೀಟರ್ ಐ-ಡಿಟಿಇಸಿ ಡೀಸೆಲ್ ಎಂಜಿನ್ 100 ಬಿಹೆಚ್‍ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ. ಇನ್ನು ಪೆಟ್ರೋಲ್ ಎಂಜಿನ್ ನೊಂದಿಗೆ 7-ಸ್ಫೀಡ್ ಸಿವಿಟಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ.

ಹೋಂಡಾ ಸಿಟಿ ಕಾರು ಭಾರತದಲ್ಲಿ ಜನಪ್ರಿಯ ಸೆಡಾನ್ ಗಳಲ್ಲಿ ಒಂದಾಗಿದೆ. ಹೋಂಡಾ ಸಿಟಿ ಭಾರತೀಯ ಮಾರುಟ್ಟೆಯಲ್ಲಿ ಹ್ಯುಂಡೈ ವೆರ್ನಾ, ಸ್ಕೋಡಾ ರ‍್ಯಾಪಿಡ್, ಫೋಕ್ಸ್‌ವ್ಯಾಗನ್ ವೆಂಟೊ, ಮತ್ತು ಟೊಯೊಟಾ ಯಾರೀಸ್ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ.


Click it and Unblock the Notifications