ಭಾರತದಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಸಿಟಿ ಆರ್‍ಎಸ್ ಪರ್ಫಾಮೆನ್ಸ್ ಮಾದರಿ
ಹೋಂಡಾ ಕಂಪನಿಯು ತನ್ನ 2020ರ ಸಿಟಿ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದರ ನಡುವೆ ಭಾರತೀಯ ಮಾರುಕಟ್ಟೆಯಲ್ಲಿ ಪರ್ಫಾಮೆನ್ಸ್ ಮಾದರಿಯಾದ ಹೋಂಡಾ ಸಿಟಿ ಆರ್‍ಎಸ್ ಅನ್ನು ಕೂಡ ಬಿಡುಗಡೆಗೊಳಿಸುವುದರ ಬಗ್ಗೆ ಚಿಂತನೆ ನಡೆಸಿದೆ.

ಹೋಂಡಾ ಕಂಪನಿಯು ಪರ್ಫಾಮೆನ್ಸ್ ಮಾದರಿಯಾದ ಹೋಂಡಾ ಸಿಟಿ ಆರ್‍ಎಸ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವುದರ ಕುರಿತು ಅಧ್ಯಯನ ನಡೆಸುತ್ತಿದೆ. ಇನ್ನು ಥಾಯ್-ಸ್ಪೆಕ್ ಸಿಟಿ ಆರ್‍ಎಸ್ ಮಾದರಿಯಲ್ಲಿ 1.0-ಲೀಟರ್, 3-ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 120 ಬಿಎಚ್‌ಪಿ ಪವರ್ ಮತ್ತು 173 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 7-ಸ್ಪೀಡ್ ಸಿವಿಟಿ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಹೋಂಡಾ ಸಿಟಿ ಆರ್‍ಎಸ್ ಮಾದರಿಯ ವಿನ್ಯಾಸವು ಸಾಮಾನ್ಯ ಸಿಟಿ ಕಾರಿಗಿಂತ ಕೆಲವು ಬದಲಾವಣೆಗಳನ್ನು ಹೊಂದಿರುತ್ತದೆ. ಪರ್ಫಾಮೆನ್ಸ್ ಮಾದರಿಯಲ್ಲಿ ಬ್ಲ್ಯಾಕ್ ಗ್ರಿಲ್ ಮತ್ತು ಆರ್‍ಎಸ್ ಬ್ಯಾಡ್ಜಿಂಗ್ ಅನ್ನು ಹೊಂದಿದೆ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಬಿಎಸ್-6 ಮಹೀಂದ್ರಾ ಬೊಲೆರೊ

ಇದರೊಂದಿಗೆ ಬ್ಲ್ಯಾಕ್ ಒಆರ್‍ವಿಎಂಗಳು ಮತ್ತು ಹಿಂಭಾಗದಲ್ಲಿ ಲಿಪ್ ಸ್ಪಾಯ್ಲರ್ ಹೊಂದಿರುವ ಸ್ಪೋರ್ಟಿ ಬಾಡಿಕಿಟ್ ಸೇರಿದೆ. ಇನ್ನು ಈ ಸಿಟಿ ಆರ್‍ಎಸ್ ಮಾದರಿಯ ಇಂಟಿರಿಯರ್ ನಲ್ಲಿ ಸ್ಪೋರ್ಟಿ ಬಿಟ್‌ಗಳಾದ ಅಲ್ಯೂಮಿನಿಯಂ ಪೆಡಲ್‌ಗಳನ್ನು ಹೊಂದಿದೆ.

ಇನ್ನು ಹೋಂಡಾ ಕಂಪನಿಯು ಸಾಮಾನ್ಯ ಮಾದರಿಯಾದ 2020ರ ಸಿಟಿ ಕಾರನ್ನು ಇದೇ ತಿಂಗಳ 15 ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಈ ಐದನೇ ತಲೆಮಾರಿನ ಸಿಟಿ ಕಾರು ಸ್ಥಳೀಯ ಡೀಲರ್ ಬಳಿ ಈಗಾಗಲೇ ತಲುಪಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಇತ್ತೀಚೆಗೆ ಹೋಂಡಾ ಕಂಪನಿಯು ಈ ಹೊಸ ಸಿಟಿ ಕಾರಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಲಾಗಿದೆ. ಜಪಾನ್ ಮೂಲದ ಹೋಂಡಾ ಕಂಪನಿಯು ಉತ್ತದ ಪ್ರದೇಶದ ನೋಯ್ಡಾದಲ್ಲಿರುವ ತನ್ನ ಸ್ಥಾವರದಲ್ಲಿ ಈ ಹೊಸ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದೆ.

2020ರ ಹೋಂಡಾ ಸಿಟಿ ಕಾರಿನಲ್ಲಿ 1.5 ಎಲ್ ಐ-ವಿಟಿಇಸಿ ಡಿಒಹೆಚ್‌ಸಿ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 600 ಆರ್‌ಪಿಎಂನಲ್ಲಿ 121 ಬಿಹೆಚ್‌ಪಿ ಪವರ್ ಮತ್ತು 4,300 ಆರ್‌ಪಿಎಂನಲ್ಲಿ 145 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಹೊಸ 7-ಸ್ಪೀಡ್ ಆಟೋಮ್ಯಾಟಿಕ್ ಸಿವಿಟಿ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ.
MOST READ: ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಹೀಂದ್ರಾ ಥಾರ್

ಇನ್ನು 2020ರ ಹೋಂಡಾ ಸಿಟಿ ಕಾರಿನಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 99 ಬಿಹೆಚ್‍ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗುತ್ತದೆ. ಈ ಎಂಜಿನ್ ಪ್ರತಿ ಲೀಟರ್‌ಗೆ 24.1 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

ಈ 2020ರ ಹೋಂಡಾ ಸಿಟಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ವೆರ್ನಾ, ಸ್ಕೋಡಾ ರ‍್ಯಾಪಿಡ್, ಫೋಕ್ಸ್‌ವ್ಯಾಗನ್ ವೆಂಟೊ, ಮತ್ತು ಟೊಯೊಟಾ ಯಾರೀಸ್ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ.


Click it and Unblock the Notifications