ಕರೋನಾ ವಿರುದ್ಧ ಹೋರಾಟಕ್ಕಾಗಿ ಹೈ ಪ್ರೆಷರ್ ಬ್ಯಾಕ್‌ಪ್ಯಾಕ್ ಸ್ಪ್ರೇ ಕಿಟ್ ವಿತರಣೆ ಮಾಡಿದ ಹೋಂಡಾ

ಹೋಂಡಾ ಇಂಡಿಯಾ ಕಂಪನಿಯು ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಸರ್ಕಾರದ ಜೊತೆ ಕೈಜೋಡಿಸಿದ್ದು, ಹಸಿದವರ ಹೊಟ್ಟೆ ತುಂಬಿಸುವುದರ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳಿಗೆ ಹೈ ಪ್ರೆಷರ್ ಬ್ಯಾಕ್‌ಪ್ಯಾಕ್ ಸ್ಪ್ರೇ‌ ಕಿಟ್‌ಗಳನ್ನು ದೇಣಿಯಾಗಿ ನೀಡಿದೆ.

ಕರೋನಾ ವಿರುದ್ಧ ಹೋರಾಟಕ್ಕಾಗಿ ಹೈ ಪ್ರೆಷರ್ ಬ್ಯಾಕ್‌ಪ್ಯಾಕ್ ಸ್ಪ್ರೇ ವಿತರಣೆ ಮಾಡಿದ ಹೋಂಡಾ

ಕಾರ್ಪೋರೆಟ್ ಸಾಮಾಜಿಕ ಹೊಣೆಗಾರಿಕೆ ನೀಡಿ ಅಡಿ ಸಂಕಷ್ಟದಲ್ಲಿರುವ ಸರ್ಕಾರದ ಜೊತೆ ಕೈಜೋಡಿಸಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ದೇಣಿಗೆ ಜೊತೆಗೆ ವೈದ್ಯಕೀಯ ಉಪಕರಣಗಳನ್ನು ಸಹ ಉತ್ಪಾದನೆ ಮಾಡಿ ಒದಗಿಸುತ್ತಿದ್ದು, ಹೋಂಡಾ ಇಂಡಿಯಾ ಕಂಪನಿ ಕೂಡಾ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಾಕಷ್ಟು ನೆರವು ನೀಡುತ್ತಿದೆ. ಇಂದು ಕೂಡಾ ಸರ್ಕಾರದ ಬೇಡಿಕೆ ಮೇರೆಗೆ ಹೈ ಪ್ರೆಷರ್ ಬ್ಯಾಕ್‌ಪ್ಯಾಕ್ ಸ್ಪ್ರೇ ಕಿಟ್ ಅನ್ನು ನೀಡಿದ್ದು, ವೈರಸ್ ತೊಲಗಿಸಲು ತನ್ನದೆ ಆದ ರೀತಿಯಲ್ಲಿ ಸಹಕಾರ ನೀಡುತ್ತಿದೆ.

ಕರೋನಾ ವಿರುದ್ಧ ಹೋರಾಟಕ್ಕಾಗಿ ಹೈ ಪ್ರೆಷರ್ ಬ್ಯಾಕ್‌ಪ್ಯಾಕ್ ಸ್ಪ್ರೇ ವಿತರಣೆ ಮಾಡಿದ ಹೋಂಡಾ

ಹರಿಯಾಣ, ರಾಜಸ್ತಾನ, ಕರ್ನಾಟಕ ಮತ್ತು ಗುಜರಾತ ಸರ್ಕಾರಗಳಿಗೆ 800 ಯುನಿಟ್ ಹೈ ಪ್ರೆಷರ್ ಬ್ಯಾಕ್‌ಪ್ಯಾಕ್ ಸ್ಪ್ರೇ ಕಿಟ್‌ಗಳನ್ನು ದೇಣಿಗೆಯಾಗಿ ನೀಡಿರುವ ಹೋಂಡಾ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೈ ಪ್ರೆಷರ್ ಬ್ಯಾಕ್‌ಪ್ಯಾಕ್ ಸ್ಪ್ರೇ ಸಾಧನಗಳನ್ನು ಇತರೆ ರಾಜ್ಯ ಸರ್ಕಾರಗಳಿಗೆ ಒದಗಿಸುವುದಾಗಿ ಹೇಳಿಕೊಂಡಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಕರೋನಾ ವಿರುದ್ಧ ಹೋರಾಟಕ್ಕಾಗಿ ಹೈ ಪ್ರೆಷರ್ ಬ್ಯಾಕ್‌ಪ್ಯಾಕ್ ಸ್ಪ್ರೇ ವಿತರಣೆ ಮಾಡಿದ ಹೋಂಡಾ

ಸೋಂಕು ಪೀಡಿತ ಪ್ರದೇಶಗಳಿಗೆ ನಂಜು ನಿರೋಧಕ ಔಷಧಿಯನ್ನು ಸಿಂಪರಣೆ ಮಾಡಲು ಹೈ ಪ್ರೆಷರ್ ಬ್ಯಾಕ್‌ಪ್ಯಾಕ್ ಸ್ಪ್ರೇ ಕಿಟ್ಸಾಕಷ್ಟು ಸಹಕಾರಿಯಾಗಲಿದ್ದು, ರೋಗ ಹರಡುವಿಕೆಯನ್ನು ತಡೆಯುವಲ್ಲಿ ಇದು ಪ್ರಮುಖ ಪಾತ್ರವಹಿಸುತ್ತದೆ.

ಕರೋನಾ ವಿರುದ್ಧ ಹೋರಾಟಕ್ಕಾಗಿ ಹೈ ಪ್ರೆಷರ್ ಬ್ಯಾಕ್‌ಪ್ಯಾಕ್ ಸ್ಪ್ರೇ ವಿತರಣೆ ಮಾಡಿದ ಹೋಂಡಾ

ಇದಲ್ಲದೆ ಲಾಕ್‌ಡೌನ್ ವೇಳೆ ಆಹಾರಕ್ಕಾಗಿ ಪರದಾಡುತ್ತಿರುವ ಬಡವರಿಗೆ ಸಹಾಯ ಮಾಡುತ್ತಿರುವ ಹೋಂಡಾ ಕಂಪನಿಯು ದಿನಂಪ್ರತಿ ದೇಶದ ವಿವಿಧ ಕಡೆಗಳಲ್ಲಿ 1 ಸಾವಿರ ಪ್ಯಾಕೇಟ್ ಸಿದ್ದ ಆಹಾರದ ಪೊಟ್ಟಣಗಳ ಜೊತೆಗೆ ಅಗತ್ಯ ದಿನಬಳಕೆಯ ಸಾಮಾಗ್ರಿಗಳ ಕಿಟ್‌ಗಳನ್ನು ವಿತರಣೆ ಮಾಡುತ್ತಿದೆ.

MOST READ: ವೈದ್ಯರ ನೆರವಿಗೆ ಬರಲಿದೆ ಮಹೀಂದ್ರಾ ನಿರ್ಮಾಣದ ವಿಶೇಷ ಏರೋಸೊಲ್ ಬಾಕ್ಸ್

ಕರೋನಾ ವಿರುದ್ಧ ಹೋರಾಟಕ್ಕಾಗಿ ಹೈ ಪ್ರೆಷರ್ ಬ್ಯಾಕ್‌ಪ್ಯಾಕ್ ಸ್ಪ್ರೇ ವಿತರಣೆ ಮಾಡಿದ ಹೋಂಡಾ

ಇನ್ನು ಮಹಾಮಾರಿ ಕರೋನಾ ವೈರಸ್ ಹರಡುವಿಕೆಯನ್ನು ತಡೆಯಲು ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಈ ವೇಳೆ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಯತ್ನಕ್ಕೆ ಆಟೋ ಉತ್ಪಾದನಾ ಕಂಪನಿಗಳು ಬೆನ್ನಲುಬಾಗಿ ಸೇವೆ ಸಲ್ಲಿಸುತ್ತಿವೆ.

ಕರೋನಾ ವಿರುದ್ಧ ಹೋರಾಟಕ್ಕಾಗಿ ಹೈ ಪ್ರೆಷರ್ ಬ್ಯಾಕ್‌ಪ್ಯಾಕ್ ಸ್ಪ್ರೇ ವಿತರಣೆ ಮಾಡಿದ ಹೋಂಡಾ

ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಮತ್ತು ಐಸಿಯು ಯುನಿಟ್‌ಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡುವುದಾಗಿ ಘೋಷಣೆ ಮಾಡಿದ್ದು, ಆರೋಗ್ಯ ಇಲಾಖೆಯ ಬೇಡಿಕೆಗಳನ್ನು ಪೂರೈಸಲು ಸಿದ್ದವಾಗುತ್ತಿವೆ.

MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ಕರೋನಾ ವಿರುದ್ಧ ಹೋರಾಟಕ್ಕಾಗಿ ಹೈ ಪ್ರೆಷರ್ ಬ್ಯಾಕ್‌ಪ್ಯಾಕ್ ಸ್ಪ್ರೇ ವಿತರಣೆ ಮಾಡಿದ ಹೋಂಡಾ

ಇದರ ಜೊತೆಗೆ ಗ್ರಾಮೀಣ ಭಾಗದಲ್ಲಿನ ಆರೋಗ್ಯ ಸೌಕರ್ಯ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ವಿಶೇಷ ಆದ್ಯತೆ ನೀಡುವುದಾಗಿ ಹೇಳಿಕೊಂಡಿರುವ ಆಟೋ ಕಂಪನಿಗಳು ಪರಿಸರ ಮತ್ತು ಆರೋಗ್ಯ ಕಾಳಜಿಗೆ ವಿಶೇಷ ಆಸಕ್ತಿ ವಹಿಸಿದ್ದು, ಶೀಘ್ರದಲ್ಲೇ ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವುದಾಗಿ ಘೋಷಣೆ ಮಾಡಿವೆ.

ಕರೋನಾ ವಿರುದ್ಧ ಹೋರಾಟಕ್ಕಾಗಿ ಹೈ ಪ್ರೆಷರ್ ಬ್ಯಾಕ್‌ಪ್ಯಾಕ್ ಸ್ಪ್ರೇ ವಿತರಣೆ ಮಾಡಿದ ಹೋಂಡಾ

ಇದಲ್ಲದೇ ವೈರಸ್ ತಡೆಗಾಗಿ ಈಗಾಗಲೇ ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಿನಿಂದ ಹೋರಾಟ ನಡೆಸುತ್ತಿದ್ದು, ವೈದ್ಯಕೀಯ ಉಪಕರಣಗಳ ಕೊರತೆಯು ಸೋಂಕಿತರ ಸಾವಿನ ಪ್ರಮಾಣ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ಕರೋನಾ ವಿರುದ್ಧ ಹೋರಾಟಕ್ಕಾಗಿ ಹೈ ಪ್ರೆಷರ್ ಬ್ಯಾಕ್‌ಪ್ಯಾಕ್ ಸ್ಪ್ರೇ ವಿತರಣೆ ಮಾಡಿದ ಹೋಂಡಾ

ಈ ಹಿನ್ನಲೆಯಲ್ಲಿ ಸದ್ಯ ವಾಹನಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವ ಆಟೋ ಉತ್ಪಾದನಾ ಘಟಕಗಳಲ್ಲೇ ಅಗತ್ಯ ವೈದಕೀಯ ಉಪಕರಣಗಳ ಉತ್ಪಾದನೆಗೆ ನಿರ್ಧರಿಸಲಾಗಿದ್ದು, ವೆಂಟಿಲೆಟರ್, ಮಾಸ್ಕ್‌, ಟೆಸ್ಟಿಂಗ್ ಕಿಟ್ ಉತ್ಪಾದನೆಗೆ ಪ್ರಮುಖ ಕಾರು ಕಂಪನಿಗಳು ಒಪ್ಪಿಗೆ ಸೂಚಿಸಿವೆ.

Most Read Articles

Kannada
Read more on ಹೋಂಡಾ honda
English summary
Honda India Foundation Extends Its Support To State Governments Amidst Coronavirus Lockdown. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X