Just In
Don't Miss!
- Lifestyle
"ಸೋಮವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ"
- Finance
Flipkart Big Saving Days: ಆಪಲ್, ಸ್ಯಾಮ್ಸಂಗ್ ಸೇರಿ ಹಲವು ಬ್ರ್ಯಾಂಡ್ ಗಳ ಆಫರ್
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು
ವಿಶ್ವದ ಪ್ರಮುಖ ವಾಹನ ಉತ್ಪಾದನಾ ಕಂಪನಿಗಳು ಪೂರ್ಣ ಪ್ರಮಾಣದಲ್ಲಿ ಹಲವು ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಹೋಂಡಾ ಕಾರ್ಸ್ ಕೂಡಾ ಮೊದಲ ಬಾರಿಗೆ ತನ್ನ ಕಾನ್ಸೆಪ್ಟ್ ಎಲೆಕ್ಟ್ರಿಕ್ ಮಾದರಿಯನ್ನು ಬಿಡುಗಡೆ ಮಾಡುತ್ತಿದೆ.

2030ರ ವೇಳೆಗೆ ಶೇ.100ರಷ್ಟು ವಿದ್ಯುತ್ ಚಾಲಿತ ವಾಹನಗಳನ್ನು ರಸ್ತೆಗಿಳಿಸುವ ಸಂಬಂಧ ಹಲವಾರು ಹೊಸ ಕಾನೂನುಗಳನ್ನು ಜಾರಿಗೆ ತರಲಾಗುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವನ್ನು ಕ್ರಮೇಣ ತಗ್ಗಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಮುಖ ಆಟೋ ಕಂಪನಿಗಳು ಈಗಾಗಲೇ ಡೀಸೆಲ್ ಎಂಜಿನ್ ವಾಹನಗಳ ಮಾರಾಟವನ್ನೇ ಸ್ಥಗಿತಗೊಳಿಸಿದ್ದು, ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡಿವೆ.

ಮುಂಬರುವ ಕೆಲವೇ ವರ್ಷಗಳಲ್ಲಿ ಪೆಟ್ರೋಲ್ ವಾಹನಗಳ ಕೂಡಾ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದ್ದು, ಕೇವಲ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟ ಮಾತ್ರವೇ ಮುಂದುವರಿಯಲಿದೆ.

ಈ ಸಂಬಂಧ ವಿಶ್ವದ ಪ್ರಮುಖ ರಾಷ್ಟ್ರಗಳ ತಮ್ಮದೇ ಆದ ಕಾನೂನು ಜಾರಿಗೆ ತರುವ ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ಗ್ರಾಹಕರನ್ನು ಸೆಳೆಯಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಯುರೋಪ್ ಮಾರುಕಟ್ಟೆಯಲ್ಲಂತೂ ಡೀಸೆಲ್ ವಾಹನಗಳ ಮೇಲೆ ಹಲವಾರು ನಿರ್ಬಂಧಗಳನ್ನು ಹೇರುವ ಮೂಲಕ ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ಆಕರ್ಷಣೆ ಮಾಡಲಾಗುತ್ತಿದೆ.

ಇದಕ್ಕೆ ಪೂರಕವಾಗಿ ಜರ್ಮನ್, ಜಪಾನ್ ಮತ್ತು ಫ್ರೆಂಚ್ ಕಾರು ಉತ್ಪಾದನಾ ಕಂಪನಿಗಳು ಪೈಪೋಟಿಯಾಗಿ ವಿವಿಧ ಮಾದರಿಯ ಹಲವು ಎಲೆಕ್ಟ್ಕಿಕ್ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಹೋಂಡಾ ಕಾರ್ಸ್ ಕೂಡಾ ತನ್ನ ರೆಟ್ರೋ ಮಾದರಿಯ ಎಲೆಕ್ಟ್ರಿಕ್ ಹ್ಯಾಚ್ಬ್ಯಾಕ್ ಮಾದರಿಯನ್ನು ಮುಂದಿನ ಅಕ್ಟೋಬರ್ ವೇಳೆಗೆ ಬಿಡುಗಡೆಗೆ ಸಿದ್ದವಾಗಿದೆ.

ಹೋಂಡಾ ಹೊಸ ಎಲೆಕ್ಟ್ರಿಕ್ ಕಾರು ಸದ್ಯ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ಬಿಡುಗಡೆಯಾಗಲಿದ್ದು, ಭಾರತದಲ್ಲಿ ಸದ್ಯಕ್ಕೆ ಈ ಕಾರು ಬಿಡುಗಡೆಯಾಗುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿಗಳಿಲ್ಲ. ದೇಶದಲ್ಲಿ ಸದ್ಯ ಸಾರ್ವಜನಿಕ ಚಾರ್ಜಿಂಗ್ ನಿಲ್ದಾಣ ಕೊರತೆಯು ಎಲೆಕ್ಟ್ರಿಕ್ ವಾಹನಗಳ ಬಿಡುಗಡೆಗೆ ಹಿನ್ನಡೆಯಾಗುತ್ತಿದ್ದು, ಕೆಲವೇ ಕೆಲವು ಇವಿ ಕಾರುಗಳು ಮಾತ್ರ ಭಾರತದಲ್ಲಿ ಖರೀದಿಗೆ ಲಭ್ಯವಿವೆ.

ಹ್ಯುಂಡೈ ಕೊನಾ, ಟಾಟಾ ನೆಕ್ಸಾನ್ ಇವಿ, ಎಂಜಿ ಜೆಡ್ಎಸ್ ಇವಿ, ಟಾಟಾ ಟಿಗೋರ್ ಇವಿ ಕಾರುಗಳನ್ನು ಹೊರತುಪಡಿಸಿದರೆ ಹಲವು ಇವಿ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಲು ಸಿದ್ದವಾಗಿವೆ. ಆದರೆ ಚಾರ್ಜಿಂಗ್ ನಿಲ್ದಾಣಗಳ ಕೊರತೆ ಹೆಚ್ಚಿರುವುದರಿಂದ ಇವಿ ವಾಹನಗಳ ಬಿಡುಗಡೆಯು ವಿಳಂಬವಾಗುತ್ತಿದೆ.

ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚು ಆಸಕ್ತಿ ವಹಿಸುತ್ತಿದ್ದು, ಸಾರ್ವಜನಿಕ ಚಾರ್ಜಿಂಗ್ ನಿಲ್ದಾಣಗಳ ಮೇಲೆ ಭಾರೀ ಪ್ರಮಾಣದ ಹೂಡಿಕೆ ಮಾಡಲಾಗುತ್ತಿದೆ. ಕೇವಲ ಸರ್ಕಾರಿ ಸ್ವಾಮ್ಯದಲ್ಲಿ ಮಾತ್ರವಲ್ಲ ಖಾಸಗಿ ಕಂಪನಿಗಳು ಈ ನಿಟ್ಟಿನಲ್ಲಿ ಆಸಕ್ತಿ ವಹಿಸಿದ್ದು, 2022ರ ವೇಳೆ ಹಲವಾರು ಇವಿ ಕಾರುಗಳು ಭಾರತದಲ್ಲಿ ಬಿಡುಗಡೆಯಾಗಲಿವೆ.
MOST READ: ಪ್ರತಿ ಚಾರ್ಜ್ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಹೋಂಡಾ ಕಾರ್ಸ್ ಕೂಡಾ 2020ರ ವೇಳೆ ಭಾರತದಲ್ಲಿ ತನ್ನ ಮೊದಲ ಇವಿ ಕಾರು ಮಾದರಿಯಾದ ಇ ಕಾರ್ಸ್ ಮಾದರಿಯನ್ನು ಬಿಡುಗಡೆ ಮಾಡುವ ಸಾಧ್ಯತೆಗಳಿದ್ದು, ಮಾಹಿತಿಗಳ ಪ್ರಕಾರ ಹೊಸ ಕಾರು 570ಕಿ.ಮೀ ಮೈಲೇಜ್ ಹೊಂದಿದೆ ಎನ್ನಲಾಗಿದೆ.

ಇನ್ನು ಕೆಲವು ಮಾಹಿತಿಗಳ ಪ್ರಕಾರ, ಹೋಂಡಾ ಕಂಪನಿಗಳು ವಿವಿಧ ರಾಷ್ಟ್ರಗಳಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಬ್ಯಾಟರಿ ಪ್ಯಾಕ್ ಆಯ್ಕೆಯೊಂದಿಗೆ ಬಿಡುಗಡೆ ಮಾಡಲಿದೆ ಎನ್ನಲಾಗಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಹೋಂಡಾ ಇವಿ ಕಾರು ಗರಿಷ್ಠ 300 ಕಿ.ಮೀ ಮೈಲೇಜ್ ಹೊಂದಿರಲಿದೆ ಎನ್ನಲಾಗಿದೆ.
MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಇದಕ್ಕೆ ಕಾರಣ 580ಕಿ.ಮೀ ಮೈಲೇಜ್ ಹೊಂದಿರುವ ಹೋಂಡಾ ಇ ಕಾರ್ಸ್ ಮಾದರಿಯು ಯುರೋಪ್ ಮಾರುಕಟ್ಟೆಯಲ್ಲಿ ಭಾರತೀಯ ರೂಪಾಯಿ ಮೌಲ್ಯದಲ್ಲಿ ರೂ.28 ಲಕ್ಷ ಬೆಲೆ ಹೊಂದಿದೆ. ಈ ಕಾರಣಕ್ಕಾಗಿ ಭಾರತದಲ್ಲಿ ಹೊಸ ಕಾರಿನ ಬೆಲೆ ಇಳಿಕೆಗಾಗಿ ಬ್ಯಾಟರಿ ಸಾಮಾರ್ಥ್ಯ ಇಳಿಕೆ ಮಾಡಬಹುದಾಗಿದ್ದು, ರೂ.12 ಲಕ್ಷದಿಂದ ರೂ.15 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆ ಮಾಬಹುದಾಗಿದ್ದು, ಹಲವಾರು ಪ್ರೀಮಿಯಂ ಫೀಚರ್ಸ್ ಜೊತೆಗೆ ಪ್ರಯಾಣಿಕ ಸುರಕ್ಷತೆ ಹೆಚ್ಚಿನ ಗಮನಹರಿಸಿದೆ.