ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಬಿಡುಗಡೆಯಾಗಲಿದೆ ಹೊಸ ಹೋಂಡಾ ಜಾಝ್
ಹೋಂಡಾ ಕಂಪನಿಯು ತನ್ನ ಬಹುನಿರೀಕ್ಷಿತ ಬಿಎಸ್-6 ಜಾಝ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೋಂಡಾ ಕಂಪನಿಯು ಬಿಎಸ್-6 ಜಾಝ್ ಕಾರು ಕೇವಲ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಬಿಡುಗಡೆಯಾಗಲಿದೆ.

ಹೋಂಡಾ ಕಂಪನಿಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಎಸ್-6 ಜಾಝ್ ಕಾರಿನ ಟೀಸರ್ ಅನ್ನು ಇತ್ತೀಚೆಗೆ ಬಿಡುಗಡೆಗೊಳಿಸಿದೆ. ಹೊಸ ಹೋಂಡಾ ಜಾಝ್ ಕಾರಿನ ಕೆಲವು ಬದಲಾವಣೆಗಳೊಂದಿಗೆ ಹೊಸ ಫೀಚರ್ಸ್‍ಗಳನ್ನು ಅಳವಡಿಸಲಾಗುತ್ತದೆ ಎಂಬ ನಿರೀಕ್ಷೆಯಿದೆ. ಈ ಕಾರಿನ ಇಂಟಿರಿಯರ್ ನಲ್ಲಿ ಕೆಲವು ಬದಲಾವಣೆಗಳನ್ನು ನಡೆಸಬಹುದು ಎಂದು ನಿರೀಕ್ಷಿಸುತ್ತೇವೆ. ಹಿಂದಿನ ಮಾದರಿಗಳಲ್ಲಿ ಕಂಡುಬರುವ ಟಚ್‍ಪ್ಯಾಡ್ ಏರ್-ಕಾನ್ ಯುನಿಟ್ ಅನ್ನು ಹೊಸ ಮಾದರಿಯಲ್ಲಿ ಬದಲಾವಣೆಯನ್ನು ಮಾಡುವ ಸಾಧ್ಯತೆಗಳಿದೆ.

ಬಿಎಸ್-6 ಹೋಂಡಾ ಕಾರು ಹೊಸ ವಿನ್ಯಾಸವನ್ನು ಹೊಂದಿದೆ. ಹೊಸ ಚಿತ್ರದಲ್ಲಿ ಬಿಎಸ್-6 ಜಾಝ್ ಕಾರಿನ ಮುಂಭಾಗ ಎಲ್ಇಡಿ ಡಿಆರ್ಎಲ್ ಜೊತೆಗೆ ಎಲ್ಇಡಿ ಹೆಡ್ ಲ್ಯಾಂಪ್ ಮತ್ತು ದೊಡ್ಡ ಗ್ರಿಲ್ ಅನ್ನು ಹೊಂದಿದೆ.
MOST READ: ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್ ಎಸ್‍ಯುವಿ

ಹೊಸ ಹೋಂಡಾ ಜಾಝ್ ಕಾರಿನ ಡ್ಯಾಶ್‌ಬೋರ್ಡ್ ನಲ್ಲಿ ಸಣ್ಣ ಮಟ್ಟದ ಬದಲಾವಣೆಗಳನ್ನು ನಿರೀಕ್ಷಿಸುತ್ತೇವೆ. ಈ ಹೊಸ ಹೋಂಡಾ ಜಾಝ್ ಕಾರಿನಲ್ಲಿ ಆಂಡ್ರಾಯ್ಡ್ ಆಟೋ ಮತ್ತು ಆ್ಯಪಲ್ ಕಾರ್‍ಪ್ಲೇಯನ್ನು ಕನೆಕ್ಟ್ ಆಗಿರುವ ಏಳು ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂ ಅನ್ನು ಹೊಂದಿರಲಿದೆ.

ಇದರೊಂದಿಗೆ ಬ್ಲೂಟೂತ್ ಕನೆಕ್ಟಿವಿಟಿ, ಕ್ರೂಸ್ ಕಂಟ್ರೋಲ್, ಸೆಮಿ ಡಿಜೆಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಕ್ಲೈಮೆಂಟ್ ಕಂಟ್ರೋಲ್ ಮತ್ತು ಪುಶ್ ಬಟನ್ ಅನ್ನು ಹೊಂದಿರಲಿದೆ. ಹೊಸ ಹೋಂಡಾ ಜಾಝ್ ಕಾರಿನಲ್ಲಿ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ.
MOST READ: ಭಾರತದಲ್ಲಿ ಬಿಡುಗಡೆಯಾಗಲಿದೆ ಐಷಾರಾಮಿ ಮರ್ಸಿಡಿಸ್ ಬೆಂಝ್ ಜಿಎಲ್‍ಎ ಎಸ್‍ಯುವಿ

ಈ ಕಾರಿನಲ್ಲಿ ಸುರಕ್ಷತೆಗಾಗಿ ಡ್ಯುಯಲ್-ಏರ್‌ಬ್ಯಾಗ್‌ಗಳು, ಇಬಿಡಿಯೊಂದಿಗೆ ಎಬಿಎಸ್, ಪಾರ್ಕಿಂಗ್ ಸೆನ್ಸರ್‌ಗಳೊಂದಿಗೆ ರೇರ್ ಕ್ಯಾಮೆರಾ, ಐಎಸ್‌ಒಫಿಕ್ಸ್ ಮೌಂಟ್ಸ್ ಅನ್ನು ಹೊಂದಿರುತ್ತದೆ. ಈ ಕಾರಿನಲ್ಲಿ ಒಟ್ಟು ಆರು ಏರ್‌ಬ್ಯಾಗ್‌ಗಳನ್ನು ಅಳವಡಿಸಲಾಗುತ್ತದೆ.

ಹೊಸ ಹೋಂಡಾ ಜಾಝ್ ಕಾರು ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಬಿಡುಗಡೆಯಾಗಲಿದೆ. ಈ ಕಾರನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಅಭಿವೃದ್ದಿಪಡಿಸಲಾಗುತ್ತದೆ. ಹೋಂಡಾ ಕಂಪನಿಯು ಸರಣಿಯಲ್ಲಿರುವ ಅಮೇಜ್ ಮತ್ತು ಡಬ್ಲ್ಯೂಆರ್-ವಿ ಮಾದರಿಗಳು ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿರಲಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಹೋಂಡಾ ಜಾಝ್ ಕಾರಿನ ಒಳ ಭಾಗದಲ್ಲಿ ಉತ್ತಮ ಸ್ಪೇಸ್ ಅನ್ನು ಹೊಂದಿರುವುದರಿಂದ ಆರಾಮದಾಯಕವಾಗಿ ಕುಳಿತು ಪ್ರಯಾಣಿಸಬಹುದಾಗಿದೆ. ಹೊಸ ಹೋಂಡಾ ಜಾಝ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

ಹೂಸ ಹೋಂಡಾ ಜಾಝ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಐ20, ಫೋಕ್ಸ್‍ವ್ಯಾಗನ್ ಪೊಲೊ, ಮಾರುತಿ ಬಲೆನೊ, ಟೊಯೊಟಾ ಗ್ಲಾಂಝಾ ಮತ್ತು ಟಾಟಾ ಆಲ್ಟ್ರೋಜ್ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ. ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೋಂಡಾ ಜಾಝ್ ಕಾರು ಹಿಂದಿನ ಮಾದರಿಗಿಂತ ತುಸು ಹೆಚ್ಚು ಬೆಲೆಯನ್ನು ಹೊಂದಿರಲಿದೆ. ಕಂಪನಿಯು ಈ ಹೊಸ ಕಾರಿನ ಬೆಲೆಯನ್ನು ಬಹಿರಂಗಪಡಿಸಿಲ್ಲ.


Click it and Unblock the Notifications








