2021ಕ್ಕೆ ಬಿಡುಗಡೆಯಾಗಲಿದೆ ಹೋಂಡಾ ನಿರ್ಮಾಣದ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೋಂಡಾ ಕಂಪನಿಯು ಈಗಾಗಲೇ ದೇಶಿಯ ಮಾರುಕಟ್ಟೆಯಲ್ಲಿ ವಿವಿಧ ಕಾರು ಮಾದರಿಗಳ ಮಾರಾಟ ಮಾಡುವ ಮೂಲಕ ಗ್ರಾಹಕರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿದ್ದು, ಮುಂಬರುವ ದಿನಗಳಲ್ಲಿ ಮತ್ತೊಂದು ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯೊಂದನ್ನು ಬಿಡುಗಡೆಗೊಳಿಸುವ ಸಿದ್ದತೆಯಲ್ಲಿದೆ.

2021ಕ್ಕೆ ಬಿಡುಗಡೆಯಾಗಲಿದೆ ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ ಮತ್ತು ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಗೆ ಪೈಪೋಟಿಯಾಗಿ ಹೋಂಡಾ ಹೊಸ ಕಾರು ಬಿಡುಗಡೆಯಾಗುತ್ತಿದ್ದು, ಗ್ರಾಹರ ಬೇಡಿಕೆಯೆಂತೆ ಹೊಸ ಕಾರುನ್ನು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ. ಹೊಸ ಕಾರು ರೂ. 6 ಲಕ್ಷದಿಂದ ರೂ. 9 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದ್ದು, ಗ್ರಾಹಕರ ಬೇಡಿಕೆಯಲ್ಲಿ ಗಮನಸೆಳೆಯಲಿದೆ.

2021ಕ್ಕೆ ಬಿಡುಗಡೆಯಾಗಲಿದೆ ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಮಾಹಿತಿಗಳ ಪ್ರಕಾರ, ಹೊಸ ಕಾರು ಜೆಡ್ಆರ್-ವಿ ಹೆಸರಿನೊಂದಿಗೆ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಕೇಂದ್ರ ಸಾರಿಗೆ ಇಲಾಖೆಗೆ ಈಗಾಗಲೇ ಸಲ್ಲಿಕೆ ಮಾಡಲಾಗಿರುವ ಟ್ರೆಡ್‌ಮಾರ್ಕ್ ಅರ್ಜಿಯಲ್ಲಿ ಹೊಸ ಕಾರಿನ ಹೆಸರು ಬಹಿರಂಗಗೊಳಿಸಲಾಗಿದೆ.

2021ಕ್ಕೆ ಬಿಡುಗಡೆಯಾಗಲಿದೆ ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಬಿಎಸ್-6 ಕಾರು ಮಾದರಿಗಳ ಬಿಡುಗಡೆಯ ನಂತರ ಹೊಸ ಕಾರುಗಳ ಬಿಡುಗಡೆಯತ್ತ ಗಮನಹರಿಸಲಿರುವ ಹೋಂಡಾ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಹೊಸ ಕಾರು ಆವೃತ್ತಿಗಳನ್ನು ಸಿದ್ದಪಡಿಸುತ್ತಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಇದೇ ವರ್ಷಾಂತ್ಯದಲ್ಲಿ ಬಿಡುಗಡೆಗೊಳಿಸುವ ಯೋಜನೆಯಲ್ಲಿತ್ತು.

2021ಕ್ಕೆ ಬಿಡುಗಡೆಯಾಗಲಿದೆ ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಆದರೆ ಕರೋನಾ ವೈರಸ್ ಪರಿಣಾಮ ಹೊಸ ಕಾರಿನ ಬಿಡುಗಡೆಯನ್ನು 2021ರ ಮೇ ಅವಧಿಗೆ ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಸಬ್ ಫೋರ್ ಮೀಟರ್ ಮಾದರಿಯಲ್ಲಿ ಬಿಡುಗಡೆಯಾಗಲಿದೆ. ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳೊಂದಿಗೆ ಬೆಲೆಯಲ್ಲೂ ಪ್ರತಿಸ್ಪರ್ಧಿ ಕಾರು ಮಾದರಿಗಳಿಗಿಂತಲೂ ಉತ್ತಮವಾಗಿರಲಿದ್ದು, ಡಬ್ಲ್ಯುಆರ್-ವಿ ಕಾರು ಮಾದರಿಗಿಂತಲೂ ಕೆಳದರ್ಜೆ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

2021ಕ್ಕೆ ಬಿಡುಗಡೆಯಾಗಲಿದೆ ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೋಂಡಾ ಕಂಪನಿಯು ಸದ್ಯ ತನ್ನ ಬಹುಬೇಡಿಕೆಯ ಕಾರು ಮಾದರಿಯಾಗಿರುವ ಅಮೇಜ್ ಕಂಪ್ಯಾಕ್ಟ್ ಸೆಡಾನ್ ಮಾದರಿಯಿಂದಲೂ ಹಲವಾರು ತಾಂತ್ರಿಕ ಅಂಶಗಳನ್ನು ಹೊಸ ಕಾರಿನಲ್ಲಿ ಎರವಲು ಪಡೆದುಕೊಳ್ಳಲ್ಲಿದ್ದು, ಅತ್ಯುತ್ತಮ ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿದೆ.

2021ಕ್ಕೆ ಬಿಡುಗಡೆಯಾಗಲಿದೆ ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಜೊತೆಗೆ ಜಪಾನ್ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಕ್ರಾಸ್ ಎಸ್‌ಯುವಿ ಮಾದರಿಯೊಂದರ ಪ್ಲ್ಯಾಟ್‌ಫಾರ್ಮ್ ಆಧರಿಸಿರುವ ಹೊಸ ಕಾರು ಪ್ರಮುಖ ಬದಲಾವಣೆಗಳೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆ ಪೂರೈಸಲಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

2021ಕ್ಕೆ ಬಿಡುಗಡೆಯಾಗಲಿದೆ ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಇದಲ್ಲದೇ ಭಾರತದಲ್ಲಿ ಕೆಲವು ಕಾರಣಾಂತರಗಳಿಂದ ಹೊಸ ಮಾದರಿಯ ಹೆಚ್‌ಆರ್-ವಿ ಎಸ್‌ಯುವಿ ಮಾದರಿಯ ಬಿಡುಗಡೆಯಿಂದ ಹಿಂದೆ ಸರಿದ್ದ ಹೋಂಡಾ ಇಂಡಿಯಾ ಕಂಪನಿಯು ಇದೀಗ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗೆ ಆಸಕ್ತಿ ತೊರುತ್ತಿದೆ.

Article Published On: Friday, October 23, 2020, 11:02 [IST]
English summary
New Honda Compact SUV Likely To Be Unveiled In May 2021. Read in Kannada.
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+