ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೋಂಡಾ ಕಂಪನಿಯು ಈಗಾಗಲೇ ದೇಶಿಯ ಮಾರುಕಟ್ಟೆಯಲ್ಲಿ ವಿವಿಧ ಕಾರು ಮಾದರಿಗಳ ಮಾರಾಟ ಮಾಡುವ ಮೂಲಕ ಗ್ರಾಹಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ಶೀಘ್ರದಲ್ಲೇ ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯೊಂದನ್ನು ಬಿಡುಗಡೆಗೊಳಿಸುವ ಸಿದ್ದತೆಯಲ್ಲಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ ಮತ್ತು ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಗೆ ಪೈಪೋಟಿಯಾಗಿ ಹೋಂಡಾ ಹೊಸ ಕಾರು ಬಿಡುಗಡೆಯಾಗುತ್ತಿದ್ದು, ಗ್ರಾಹರ ಬೇಡಿಕೆಯೆಂತೆ ಹೊಸ ಕಾರುನ್ನು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ. ಹೊಸ ಕಾರು ರೂ.7 ಲಕ್ಷದಿಂದ ರೂ.11 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದ್ದು, ಗ್ರಾಹಕರ ಬೇಡಿಕೆಯಲ್ಲಿ ಗಮನಸೆಳೆಯಲಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಮಾಹಿತಿಗಳ ಪ್ರಕಾರ, ಹೊಸ ಕಾರು ಜೆಡ್ಆರ್-ವಿ ಹೆಸರಿನೊಂದಿಗೆ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಕೇಂದ್ರ ಸಾರಿಗೆ ಇಲಾಖೆಗೆ ಈಗಾಗಲೇ ಸಲ್ಲಿಕೆ ಮಾಡಲಾಗಿರುವ ಟ್ರೆಡ್‌ಮಾರ್ಕ್ ಅರ್ಜಿಯಲ್ಲಿ ಹೊಸ ಕಾರಿನ ಹೆಸರು ಬಹಿರಂಗಗೊಳಿಸಲಾಗಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಬಿಎಸ್-6 ಕಾರು ಮಾದರಿಗಳ ಬಿಡುಗಡೆಯ ನಂತರ ಹೊಸ ಕಾರುಗಳ ಬಿಡುಗಡೆಯತ್ತ ಗಮನಹರಿಸಲಿರುವ ಹೋಂಡಾ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಹೊಸ ಕಾರು ಆವೃತ್ತಿಗಳನ್ನು ಸಿದ್ದಪಡಿಸುತ್ತಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಇದೇ ವರ್ಷಾಂತ್ಯದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಸಬ್ ಫೋರ್ ಮೀಟರ್ ಮಾದರಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳನ್ನು ಹೊಂದಿರಲಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೋಂಡಾ ಕಂಪನಿಯು ಸದ್ಯ ತನ್ನ ಬಹುಬೇಡಿಕೆಯ ಕಾರು ಮಾದರಿಯಾಗಿರುವ ಅಮೇಜ್ ಕಂಪ್ಯಾಕ್ಟ್ ಸೆಡಾನ್ ಮಾದರಿಯಿಂದಲೂ ಹಲವಾರು ತಾಂತ್ರಿಕ ಅಂಶಗಳನ್ನು ಹೊಸ ಕಾರಿನಲ್ಲಿ ಎರವಲು ಪಡೆದುಕೊಳ್ಳಲ್ಲಿದ್ದು, ಅತ್ಯುತ್ತಮ ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಜೊತೆಗೆ ಜಪಾನ್ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಕ್ರಾಸ್ ಎಸ್‌ಯುವಿ ಮಾದರಿಯೊಂದರ ಪ್ಲ್ಯಾಟ್‌ಫಾರ್ಮ್ ಆಧರಿಸಿರುವ ಹೊಸ ಕಾರು ಪ್ರಮುಖ ಬದಲಾವಣೆಗಳೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆ ಪೂರೈಸಲಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಇದಲ್ಲದೇ ಭಾರತದಲ್ಲಿ ಕೆಲವು ಕಾರಣಾಂತರಗಳಿಂದ ಹೊಸ ಮಾದರಿಯ ಹೆಚ್‌ಆರ್-ವಿ ಎಸ್‌ಯುವಿ ಮಾದರಿಯ ಬಿಡುಗಡೆಯಿಂದ ಹಿಂದೆ ಸರಿದ್ದ ಹೋಂಡಾ ಇಂಡಿಯಾ ಕಂಪನಿಯು ಇದೀಗ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗೆ ಆಸಕ್ತಿ ತೊರುತ್ತಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ನೆಕ್ಸಾನ್, ಮಾರುತಿ ಬ್ರೆಝಾ, ಹ್ಯುಂಡೈ ವೆನ್ಯೂ ಮತ್ತು ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೆ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಹೊಸ ಕಾರಿನ ಬೆಲೆ ಕೂಡಾ ಆಕರ್ಷಕವಾಗಿರಲಿದೆ.

Most Read Articles

Kannada
Read more on ಹೋಂಡಾ honda
English summary
Honda Considering Introducing New SUVs In India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more