Just In
- 49 min ago ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- 57 min ago ನಿಮ್ಮ ಬಳಿ 7 ಲಕ್ಷ ರೂಪಾಯಿ ಇದ್ದರೆ ಸಾಕು.. ಕನಸಿನ ಕಾರನ್ನು ಮನೆ ತರಬಹುದು!
- 16 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 16 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
Don't Miss!
- Movies ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೋಂಡಾ ಹೊಸ ಕಂಪ್ಯಾಕ್ಟ್ ಎಸ್ಯುವಿ
ಹೋಂಡಾ ಕಂಪನಿಯು ಈಗಾಗಲೇ ದೇಶಿಯ ಮಾರುಕಟ್ಟೆಯಲ್ಲಿ ವಿವಿಧ ಕಾರು ಮಾದರಿಗಳ ಮಾರಾಟ ಮಾಡುವ ಮೂಲಕ ಗ್ರಾಹಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ಶೀಘ್ರದಲ್ಲೇ ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್ಯುವಿ ಮಾದರಿಯೊಂದನ್ನು ಬಿಡುಗಡೆಗೊಳಿಸುವ ಸಿದ್ದತೆಯಲ್ಲಿದೆ.
ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ ಮತ್ತು ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್ಯುವಿ ಕಾರುಗಳಿಗೆ ಪೈಪೋಟಿಯಾಗಿ ಹೋಂಡಾ ಹೊಸ ಕಾರು ಬಿಡುಗಡೆಯಾಗುತ್ತಿದ್ದು, ಗ್ರಾಹರ ಬೇಡಿಕೆಯೆಂತೆ ಹೊಸ ಕಾರುನ್ನು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ. ಹೊಸ ಕಾರು ರೂ.7 ಲಕ್ಷದಿಂದ ರೂ.11 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದ್ದು, ಗ್ರಾಹಕರ ಬೇಡಿಕೆಯಲ್ಲಿ ಗಮನಸೆಳೆಯಲಿದೆ.
ಮಾಹಿತಿಗಳ ಪ್ರಕಾರ, ಹೊಸ ಕಾರು ಜೆಡ್ಆರ್-ವಿ ಹೆಸರಿನೊಂದಿಗೆ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಕೇಂದ್ರ ಸಾರಿಗೆ ಇಲಾಖೆಗೆ ಈಗಾಗಲೇ ಸಲ್ಲಿಕೆ ಮಾಡಲಾಗಿರುವ ಟ್ರೆಡ್ಮಾರ್ಕ್ ಅರ್ಜಿಯಲ್ಲಿ ಹೊಸ ಕಾರಿನ ಹೆಸರು ಬಹಿರಂಗಗೊಳಿಸಲಾಗಿದೆ.
ಬಿಎಸ್-6 ಕಾರು ಮಾದರಿಗಳ ಬಿಡುಗಡೆಯ ನಂತರ ಹೊಸ ಕಾರುಗಳ ಬಿಡುಗಡೆಯತ್ತ ಗಮನಹರಿಸಲಿರುವ ಹೋಂಡಾ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಹೊಸ ಕಾರು ಆವೃತ್ತಿಗಳನ್ನು ಸಿದ್ದಪಡಿಸುತ್ತಿದ್ದು, ಕಂಪ್ಯಾಕ್ಟ್ ಎಸ್ಯುವಿ ಕಾರು ಮಾದರಿಯು ಇದೇ ವರ್ಷಾಂತ್ಯದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.
MOST READ: ಲಾಕ್ಡೌನ್ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ
ಹೊಸ ಕಂಪ್ಯಾಕ್ಟ್ ಎಸ್ಯುವಿ ಮಾದರಿಯು ಸಬ್ ಫೋರ್ ಮೀಟರ್ ಮಾದರಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್ಯುವಿ ವೈಶಿಷ್ಟ್ಯತೆಗಳನ್ನು ಹೊಂದಿರಲಿದೆ.
ಹೋಂಡಾ ಕಂಪನಿಯು ಸದ್ಯ ತನ್ನ ಬಹುಬೇಡಿಕೆಯ ಕಾರು ಮಾದರಿಯಾಗಿರುವ ಅಮೇಜ್ ಕಂಪ್ಯಾಕ್ಟ್ ಸೆಡಾನ್ ಮಾದರಿಯಿಂದಲೂ ಹಲವಾರು ತಾಂತ್ರಿಕ ಅಂಶಗಳನ್ನು ಹೊಸ ಕಾರಿನಲ್ಲಿ ಎರವಲು ಪಡೆದುಕೊಳ್ಳಲ್ಲಿದ್ದು, ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ಗಳನ್ನು ಪಡೆದುಕೊಳ್ಳಲಿದೆ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..
ಜೊತೆಗೆ ಜಪಾನ್ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಕ್ರಾಸ್ ಎಸ್ಯುವಿ ಮಾದರಿಯೊಂದರ ಪ್ಲ್ಯಾಟ್ಫಾರ್ಮ್ ಆಧರಿಸಿರುವ ಹೊಸ ಕಾರು ಪ್ರಮುಖ ಬದಲಾವಣೆಗಳೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆ ಪೂರೈಸಲಿದೆ.
ಇದಲ್ಲದೇ ಭಾರತದಲ್ಲಿ ಕೆಲವು ಕಾರಣಾಂತರಗಳಿಂದ ಹೊಸ ಮಾದರಿಯ ಹೆಚ್ಆರ್-ವಿ ಎಸ್ಯುವಿ ಮಾದರಿಯ ಬಿಡುಗಡೆಯಿಂದ ಹಿಂದೆ ಸರಿದ್ದ ಹೋಂಡಾ ಇಂಡಿಯಾ ಕಂಪನಿಯು ಇದೀಗ ಕಂಪ್ಯಾಕ್ಟ್ ಎಸ್ಯುವಿ ಬಿಡುಗಡೆಗೆ ಆಸಕ್ತಿ ತೊರುತ್ತಿದೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್ಗೆ ಭರ್ಜರಿ ಆಫರ್ ನೀಡಿದ ಟಾಟಾ
ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ನೆಕ್ಸಾನ್, ಮಾರುತಿ ಬ್ರೆಝಾ, ಹ್ಯುಂಡೈ ವೆನ್ಯೂ ಮತ್ತು ಮಹೀಂದ್ರಾ ಎಕ್ಸ್ಯುವಿ300 ಕಾರುಗಳಿಗೆ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಹೊಸ ಕಾರಿನ ಬೆಲೆ ಕೂಡಾ ಆಕರ್ಷಕವಾಗಿರಲಿದೆ.