2020ರ ಜಾಝ್ ಕಾರಿನ ಟಿವಿಸಿ ಬಿಡುಗಡೆಗೊಳಿಸಿದ ಹೋಂಡಾ

ಹೋಂಡಾ ಇಂಡಿಯಾ ಕಂಪನಿಯು ತನ್ನ ಬಹುನಿರೀಕ್ಷಿತ ಬಿಎಸ್-6 ಜಾಝ್ ಕಾರನ್ನು ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಈ ಹೊಸ ಹೋಂಡಾ ಜಾಝ್ ಕಾರಿನ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.7.49 ಲಕ್ಷಗಳಾಗಿದೆ.

2020ರ ಜಾಝ್ ಕಾರಿನ ಟಿವಿಸಿ ಬಿಡುಗಡೆಗೊಳಿಸಿದ ಹೋಂಡಾ

ಹೋಂಡಾ ಜಾಝ್ ಕಾರು ವಿ,ವಿಎಕ್ಸ್ ಮತ್ತು ಝಡ್ಎಕ್ಸ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿರಲಿದೆ. ಇದರಲ್ಲಿ ಝಡ್ಎಕ್ಸ್ ರೂಪಾಂತರವು ಹೊಸದಾಗಿ ಪರಿಚಯಿಸಲಾಗಿದೆ. ಇದೀಗ ಹೋಂಡಾ ಕಂಪನಿಯು ಬಿಎಸ್-6 ಜಾಝ್ ಕಾರಿನ ಅಧಿಕೃತ ಟಿವಿಸಿಯನ್ನು ಬಿಡುಗಡೆಗೊಳಿಸಿದೆ. ಈ ಟಿವಿಸಿ ವೀಡಿಯೋವನ್ನು ಹೋಂಡಾ ಕಾರ್ಸ್ ಇಂಡಿಯಾ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದೆ.

2020ರ ಜಾಝ್ ಕಾರಿನ ಟಿವಿಸಿ ಬಿಡುಗಡೆಗೊಳಿಸಿದ ಹೋಂಡಾ

ಈ ಹೊಸ ಹೋಂಡಾ ಜಾಝ್ ಕಾರು ಸ್ಟೈಲಿಶ್ ಮತ್ತು ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಬಿಎಸ್-6 ಜಾಝ್ ಕಾರಿನ ಮುಂಭಾಗ ಎಲ್ಇಡಿ ಫಾಗ್ ಲ್ಯಾಂಪ್, ಡಿಆರ್‍‍ಎಲ್ ಜೊತೆಗೆ ಎಲ್ಇಡಿ ಹೆಡ್ ಲ್ಯಾಂಪ್ ಮತ್ತು ದೊಡ್ಡ ಗ್ರಿಲ್ ಅನ್ನು ಹೊಂದಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

2020ರ ಜಾಝ್ ಕಾರಿನ ಟಿವಿಸಿ ಬಿಡುಗಡೆಗೊಳಿಸಿದ ಹೋಂಡಾ

ಈ 2020ರ ಹೋಂಡಾ ಜಾಝ್ ಕಾರಿನಲ್ಲಿ ಎಸಿ ಕಂಟ್ರೋಲ್ ಮಾಡಲು ಟಚ್‌ಸ್ಕ್ರೀನ್ ಪ್ಯಾನಲ್, ಆಂಡ್ರಾಯ್ಡ್ ಆಟೋ ಮತ್ತು ಆ್ಯಪಲ್ ಕಾರ್‍‍ಪ್ಲೇಯನ್ನು ಕನೆಕ್ಟ್ ಆಗಿರುವ ಏಳು ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂ ಅನ್ನು ಹೊಂದಿದೆ.

2020ರ ಜಾಝ್ ಕಾರಿನ ಟಿವಿಸಿ ಬಿಡುಗಡೆಗೊಳಿಸಿದ ಹೋಂಡಾ

ಇದರೊಂದಿಗೆ ಬ್ಲೂಟೂತ್ ಕನೆಕ್ಟಿವಿಟಿ, ಕ್ರೂಸ್ ಕಂಟ್ರೋಲ್, ಸೆಮಿ ಡಿಜೆಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಕ್ರೂಸ್ ಕಂಟ್ರೋಲ್, ಕ್ಲೈಮೆಂಟ್ ಕಂಟ್ರೋಲ್ ಮತ್ತು ಪುಶ್ ಬಟನ್ ಹೊಂದಿದೆ. ಹೊಸ ಹೋಂಡಾ ಜಾಝ್ ಕಾರಿನಲ್ಲಿ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

2020ರ ಜಾಝ್ ಕಾರಿನ ಟಿವಿಸಿ ಬಿಡುಗಡೆಗೊಳಿಸಿದ ಹೋಂಡಾ

ಈ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಡ್ಯುಯಲ್ ಎಸ್‌ಆರ್‌ಎಸ್ ಏರ್‌ಬ್ಯಾಗ್‌ಗಳು, ಇಬಿಡಿಯೊಂದಿಗೆ ಎಬಿಎಸ್, ಪಾರ್ಕಿಂಗ್ ಸೆನ್ಸರ್‌ಗಳೊಂದಿಗೆ ರೇರ್ ಕ್ಯಾಮೆರಾ, ಐಎಸ್‌ಒಫಿಕ್ಸ್ ಮೌಂಟ್ಸ್ ಮತು ಆಂಟಿ-ಥೆಫ್ಟ್ ಸಿಸ್ಟಂ ಅನ್ನು ಹೊಂದಿದೆ.

2020ರ ಜಾಝ್ ಕಾರಿನ ಟಿವಿಸಿ ಬಿಡುಗಡೆಗೊಳಿಸಿದ ಹೋಂಡಾ

ಈ ಹೊಸ ಕಾರಿನಲ್ಲಿ 1.2-ಲೀಟರ್ ನಾಲ್ಕು ಸಿಲಿಂಡರ್ ಐ-ವಿಟಿಇಸಿ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 89 ಬಿಹೆಚ್‍ಪಿ ಪವರ್ ಮತ್ತು 110 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ, ಈ ಎಂಜಿನ್ ನೊಂದಿಗೆ ಐದು-ಸ್ಪೀಡ್ ಮ್ಯಾನುವಲ್ ಮತ್ತು ಏಳು-ಸ್ಪೀಡ್ ಸಿವಿಟಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಹೊಸ ಹೋಂಡಾ ಜಾಝ್ ಕಾರನ್ನು ಖರೀದಿಸಲು ಬಯಸುವ ಗ್ರಾಹಕರು ಹೋಂಡಾ ಕಂಪನಿಯ ಅಧಿಕೃತ ಡೀಲರ್ ಬಳಿ ತೆರಳಿ ಟೋಕನ್ ಮೊತ್ತ ರೂ.21,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಇನ್ನು ಹೊಸ ಜಾಝ್ ಕಾರಿಗಾಗಿ ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಮಾಡುವ ಗ್ರಾಹಕರು ಟೋಕನ್ ಮೊತ್ತ ರೂ.5,000 ಪಾವತಿಸಿ ಕಾಯ್ದಿರಿಸಬಹುದಾಗಿದೆ.

2020ರ ಜಾಝ್ ಕಾರಿನ ಟಿವಿಸಿ ಬಿಡುಗಡೆಗೊಳಿಸಿದ ಹೋಂಡಾ

ಈ ಹೊಸ ಹೋಂಡಾ ಜಾಝ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಐ20, ಫೋಕ್ಸ್‍ವ್ಯಾಗನ್ ಪೊಲೊ, ಮಾರುತಿ ಸುಜುಕಿ ಬಲೆನೊ, ಟೊಯೊಟಾ ಗ್ಲಾಂಝಾ ಮತ್ತು ಟಾಟಾ ಆಲ್ಟ್ರೋಜ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
Read more on ಹೋಂಡಾ honda
English summary
Honda Jazz Facelift TVC Details. Read In Kannada.
Story first published: Friday, August 28, 2020, 11:36 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X