ಸುಮಾರು 2 ತಿಂಗಳ ನಂತರ ಕಾರು ಮಾರಾಟವನ್ನು ಪುನಾರಂಭಿಸಿದ ಹೋಂಡಾ
ಹೋಂಡಾ ಇಂಡಿಯಾ ಕಂಪನಿಯು ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿಯ ಪ್ರಕಾರ ಕಾರು ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿರುವುದಲ್ಲದೆ ಮಾರಾಟ ಮಳಿಗೆಗಳನ್ನು ಸಹ ಪುನಾರಂಭಿದ್ದು, ವೈರಸ್ ಭೀತಿ ಹಿನ್ನಲೆಯಲ್ಲಿ ಗರಿಷ್ಠ ಪ್ರಮಾಣದ ಸುರಕ್ಷಾ ಕ್ರಮಗಳನ್ನು ಜಾರಿಗೊಳಿಸಿದೆ.

ಕೇಂದ್ರ ಸರ್ಕಾರ ನೀಡಿರುವ ಹೊಸ ಸುರಕ್ಷಾ ಮಾರ್ಗಸೂಚಿಯ ಪ್ರಕಾರ, ಹಸಿರು ವಲಯದಲ್ಲಿರುವ ಮುನ್ಸಿಪಲ್ ಕಾರ್ಪೊರೇಶನ್ ಮಿತಿ ಹೊರಗಿನ ಕೈಗಾರಿಕಾ ಸಂಸ್ಥೆಗಳಿಗೆ ಕಾರ್ಯಾಚರಣೆಯನ್ನು ಪುನಾರಂಭಿಸಲು ಅನುಮತಿ ನೀಡಲಾಗುತ್ತಿದ್ದು, ಗರಿಷ್ಠ ಪ್ರಮಾಣದ ಸುರಕ್ಷಾ ಸಾಧನಗಳನ್ನು ಬಳಕೆ ಮಾಡುವುದು ಕಡ್ಡಾಯವಾಗಿದೆ. ಹೊಸ ಮಾರ್ಗಸೂಚಿ ಅನ್ವಯ ಕಾರು ಉತ್ಪಾದನೆ ಮತ್ತು ಮಾರಾಟ ಶುರು ಮಾಡಿರುವ ಹೋಂಡಾ ಕಂಪನಿಯು ಹಸಿರು ಮತ್ತು ಕಿತ್ತಳೆ ವಲಯದಲ್ಲಿನ ಸುಮಾರು 155 ಮಾರಾಟ ಮಳಿಗೆಗಳನ್ನು ಮಾತ್ರವೇ ಪುನಾರಂಭಿಸಿವೆ.

ಸದ್ಯ ಉತ್ಪಾದನೆ ಮತ್ತು ಮಾರಾಟಕ್ಕೆ ಅನುಮತಿ ಪಡೆದುಕೊಂಡಿರುವ ಆಟೋ ಕಂಪನಿಗಳು ಕೇವಲ ಶೇ.50ಕ್ಕಿಂತ ಕಡಿಮೆ ಪ್ರಮಾಣದ ಉದ್ಯೋಗಿಗಳೊಂದಿಗೆ ಉತ್ಪಾದನಾ ಚಟುವಟಿಕೆಗಳನ್ನು ಕೈಗೊಳ್ಳಬಹುದಾಗಿದ್ದು, ಉದ್ಯೋಗದ ಸ್ಥಳದಲ್ಲಿ ಸಾಮಾಜಿಕ ಅಂತರದ ಜೊತೆ ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್ ಮತ್ತು ಹ್ಯಾಂಡ್ ಗ್ಲೌಸ್ ಬಳಕೆಯು ಕಡ್ಡಾಯವಾಗಿ ಬಳಕೆಮಾಡಬೇಕಿದೆ.

ಈ ನಿಟ್ಟಿನಲ್ಲಿ ಹೊಸ ನಿಯಮ ಅನ್ವಯ ಹೋಂಡಾ ಇಂಡಿಯಾ ಕೂಡಾ ಗರಿಷ್ಠ ಸುರಕ್ಷಾ ಕ್ರಮಗಳನ್ನು ಕೈಗೊಂಡಿದ್ದು, ಮಾರಾಟ ಮಳಿಗೆಗಳಿಗೆ ಗ್ರಾಹಕರ ಆಗಮನ ತಡೆಯುವುದಕ್ಕಾಗಿ ಕಂಪನಿಯೇ ಆನ್‌ಲೈನ್ ವ್ಯವಹಾರಗಳ ಮೂಲಕ ಪತ್ರ ವ್ಯವಹಾರ ಮುಗಿಸಿ ಅಂತಿಮವಾಗಿ ಕಾರು ಉತ್ಪನ್ನಗಳನ್ನು ಗ್ರಾಹಕರ ಬಾಗಿಲುಗಳಿಗೆ ತಲುಪಿಸುತ್ತಿದೆ.

ಕಾರು ವಿತರಣೆ ಸಂದರ್ಭದಲ್ಲೂ ನಂಜು ನಿರೋಧಕ ಔಷಧಿಗಳನ್ನು ಸಿಂಪರಣೆಯ ನಂತರವೇ ಗ್ರಾಹಕರಿಗೆ ಉತ್ಪನ್ನಗಳನ್ನು ಹಸ್ತಾಂತರ ಮಾಡಲಿದ್ದು, ಈ ವೇಳೆ ಗ್ರಾಹಕರ ಮತ್ತು ಉದ್ಯೋಗಿಗಳಿಗೆ ಯಾವುದೇ ರೀತಿಯ ಸೋಂಕು ಹರಡುವಿಕೆಯನ್ನು ತಡೆಯಲು ಗರಿಷ್ಠ ಎಚ್ಚರಿಕೆ ಕ್ರಮ ಪಾಲಿಸಲಾಗುತ್ತಿದೆ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಸುರಕ್ಷಾ ಕ್ರಮಗಳೊಂದಿಗೆ ವಾಣಿಜ್ಯ ವ್ಯಾಪಾರವನ್ನು ಪುನಾರಂಭಿಸುತ್ತಿರುವ ಉದ್ಯಮ ಸಂಸ್ಥೆಗಳು ಸೋಂಕು ಹರಡದಂತೆ ಸಾಕಷ್ಟು ಎಚ್ಚರಿಕೆ ವಹಿಸುತ್ತಿದ್ದು, ಹೋಂಡಾ ಇಂಡಿಯಾ ಕೂಡಾ ಹೊಸ ನಿಯಮ ಅನುಸಾರವಾಗಿ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ 'ಹೋಂಡಾ ಫ್ರಮ್ ಹೋಮ್' ಎನ್ನುವ ಆನ್‌ಲೈನ್ ಕಾರು ಮಾರಾಟ ಮಳಿಗೆಯನ್ನು ತೆರೆದಿದೆ.

ಇನ್ನು ಕರೋನಾ ವೈರಸ್ ವಿರುದ್ಧದ ಹೋರಾಟದಲ್ಲೂ ಭಾಗಿಯಾಗಿರುವ ಹೋಂಡಾ ಕಂಪನಿಯು ತನ್ನ ಗ್ರಾಹಕರಿಗೆ ಹೆಚ್ಚುವರಿ ವಾರಂಟಿ ಅವಧಿಯನ್ನು ಘೋಷಣೆ ಮಾಡಿರುವುದಲ್ಲದೆ ಕಾರ್ಪೋರೆಟ್ ಸಾಮಾಜಿಕ ಹೊಣೆಗಾರಿಕೆಯ ನೀತಿ ಭಾರೀ ಪ್ರಮಾಣದ ದೇಣಿಗೆ ನೀಡಿ ಬದ್ದತೆ ತೊರಿದ್ದು, ವೆಂಟಿಲೇಟರ್ ಮತ್ತು ಅಗತ್ಯ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಸಹಕಾರಿಯಾಗುತ್ತಿದೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಧನಸಹಾಯದ ಜೊತೆಗೆ ವೈದ್ಯಕೀಯ ಉಪಕರಣಗಳನ್ನು ಉತ್ಪಾದನೆ ಮಾಡಿ ವಿವಿಧ ರಾಜ್ಯ ಸರ್ಕಾರಗಳಿಗೆ ವಿತರಣೆ ಮಾಡುತ್ತಿವೆ.


Click it and Unblock the Notifications








