ಭಾರತದಲ್ಲಿ ಹೈಬ್ರಿಡ್ ಕಾರುಗಳ ಬಿಡುಗಡೆಗೆ ಸಿದ್ದವಾದ ಹೋಂಡಾ ಕಾರ್ಸ್

ಜಪಾನ್ ಕಾರು ಉತ್ಪಾದನಾ ಕಂಪನಿಯಾದ ಹೋಂಡಾ ಕಾರ್ಸ್ ಮುಂಬರುವ ದಿನಗಳಲ್ಲಿ ಪರಿಸರ ಸ್ನೇಹಿ ವಾಹನಗಳ ನಿರ್ಮಾಣದ ಮೇಲೆ ಹೆಚ್ಚು ಹೂಡಿಕೆ ಮಾಡಲು ನಿರ್ಧರಿಸಿದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾತ್ರವಲ್ಲ ಭಾರತದಲ್ಲೂ ಹೊಸ ಹೈಬ್ರಿಡ್ ಕಾರುಗಳನ್ನು ಮಾರಾಟ ಮಾಡುವ ಗುರಿಹೊಂದಿದೆ.

ಭಾರತದಲ್ಲಿ ಹೈಬ್ರಿಡ್ ಕಾರುಗಳ ಬಿಡುಗಡೆಗೆ ಸಿದ್ದವಾದ ಹೋಂಡಾ ಕಾರ್ಸ್

2030ರ ವೇಳೆಗೆ ಸಂಪೂರ್ಣವಾಗಿ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ವಾಹನ ಮಾರಾಟ ಗುರಿಯೊಂದಿಗೆ ಪೆಟ್ರೋಲ್ ಮತ್ತು ಡೀಸೆಲ್ ವಾಹನ ಮಾರಾಟವನ್ನು ಹಂತ-ಹಂತವಾಗಿ ಸ್ಥಗಿತಗೊಳಿಸಲಾಗುತ್ತಿದ್ದು, ಸಂಪೂರ್ಣ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನಗಳ ಮಾದರಿಗಳ ಅಭಿವೃದ್ದಿ ಮತ್ತು ಮಾರಾಟ ಮೇಲೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಅದರಲ್ಲೂ ಯುರೋಪ್ ಮಾರುಕಟ್ಟೆಗಳಲ್ಲಿ ಡೀಸೆಲ್ ವಾಹನಗಳ ಮೇಲೆ ಹಲವಾರು ನಿರ್ಬಂಧಗಳನ್ನು ವಿಧಿಸುತ್ತಿರುವುದು ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನಗಳ ಬಳಕೆಯು ಗಣನೀಯವಾಗಿ ಏರಿಕೆಯಾಗುತ್ತಿದೆ.

ಭಾರತದಲ್ಲಿ ಹೈಬ್ರಿಡ್ ಕಾರುಗಳ ಬಿಡುಗಡೆಗೆ ಸಿದ್ದವಾದ ಹೋಂಡಾ ಕಾರ್ಸ್

ಮಾರುಕಟ್ಟೆಯಲ್ಲಿ ಬೇಡಿಕೆಗೆ ಅನುಗುಣವಾಗಿ ಹೋಂಡಾ ಕಾರ್ಸ್ ವಿಭಾಗವು ಸಹ ತನ್ನ ಪ್ರಮುಖ ಎಸ್‌ಯುವಿ ಮತ್ತು ಸೆಡಾನ್ ಕಾರು ಮಾದರಿಗಳಲ್ಲಿ ಹೊಸ ಸೆಲ್ಪ್ ಚಾರ್ಜಿಂಗ್ ಹೈಬ್ರಿಡ್ ಎಂಜಿನ್ ಆಯ್ಕೆ ನೀಡುತ್ತಿದ್ದು, ಹೊಸ ಕಾರುಗಳು ಭಾರತದಲ್ಲೂ ಬಿಡುಗಡೆಯಾಗಲಿವೆ.

ಭಾರತದಲ್ಲಿ ಹೈಬ್ರಿಡ್ ಕಾರುಗಳ ಬಿಡುಗಡೆಗೆ ಸಿದ್ದವಾದ ಹೋಂಡಾ ಕಾರ್ಸ್

ಭಾರತದಲ್ಲಿ ಈಗಾಗಲೇ ಹಲವಾಲು ಕಾರು ಉತ್ಪಾದನಾ ಕಂಪನಿಗಳು ಹೈಬ್ರಿಡ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಸ್ಮಾರ್ಟ್ ಹೈಬ್ರಿಡ್ ಮತ್ತು ಫುಲ್ ಹೈಬ್ರಿಡ್ ಮಾದರಿಗಳು ಮಾರಾಟಕ್ಕೆ ಲಭ್ಯವಿವೆ.

ಭಾರತದಲ್ಲಿ ಹೈಬ್ರಿಡ್ ಕಾರುಗಳ ಬಿಡುಗಡೆಗೆ ಸಿದ್ದವಾದ ಹೋಂಡಾ ಕಾರ್ಸ್

ಆದರೆ ಫುಲ್ ಹೈಬ್ರಿಡ್ ಮಾದರಿಗಳು ದುಬಾರಿ ಕಾರುಗಳಲ್ಲಿ ಮಾತ್ರ ಮಾರಾಟ ಮಾಡಲಾಗುತ್ತಿದ್ದು, ಮೈಲೇಜ್ ಸುಧಾರಣೆಗೊಳಿಸಲು ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನವು ಮಧ್ಯಮ ಗಾತ್ರದ ಕಾರುಗಳ ಬೇಡಿಕೆಗೆ ಹೆಚ್ಚಳಕ್ಕೆ ಕಾರಣವಾಗಿದೆ.

ಭಾರತದಲ್ಲಿ ಹೈಬ್ರಿಡ್ ಕಾರುಗಳ ಬಿಡುಗಡೆಗೆ ಸಿದ್ದವಾದ ಹೋಂಡಾ ಕಾರ್ಸ್

ಹೀಗಾಗಿ ಹೋಂಡಾ ಕಾರ್ಸ್ ಕಂಪನಿಯು ವಿವಿಧ ಕಾರು ಮಾದರಿಗಳಿಗೆ ಅನುಗುಣವಾಗಿ ಫುಲ್ ಹೈಬ್ರಿಡ್ ವರ್ಷನ್ ಮತ್ತು ಸ್ಮಾರ್ಟ್ ಹೈಬ್ರಿಡ್ ಮಾದರಿಗಳನ್ನು ಬಿಡುಗಡೆ ಮಾಡಲಿದ್ದು, ಈ ಕಾರುಗಳು ಅತ್ಯುತ್ತಮ ಮೈಲೇಜ್‌ನೊಂದಿಗೆ ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯುತ್ತಿವೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಭಾರತದಲ್ಲಿ ಹೈಬ್ರಿಡ್ ಕಾರುಗಳ ಬಿಡುಗಡೆಗೆ ಸಿದ್ದವಾದ ಹೋಂಡಾ ಕಾರ್ಸ್

ಸದ್ಯ ಬೇಡಿಕೆಗೆ ಅನುಗುಣವಾಗಿ ಚಾರ್ಜಿಂಗ್ ನಿಲ್ದಾಣಗಳ ಕೊರತೆ ಹಿನ್ನಲೆಯಲ್ಲಿ ಸೆಲ್ಪ್ ಚಾರ್ಜ್ ಹೈಬ್ರಿಡ್ ಮಾದರಿಗಳಿಗೆ ಬೇಡಿಕೆಯಿದ್ದು, ಮುಂಬರುವ ದಿನಗಳಲ್ಲಿ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಗೊಳಿಸುತ್ತಿರುವುದೇ ಕಾರು ಅಭಿವೃದ್ದಿಯಲ್ಲಿ ಮಹತ್ವದ ಬದಲವಾಣೆಗೆ ಕಾರಣವಾಗಿದೆ.

ಭಾರತದಲ್ಲಿ ಹೈಬ್ರಿಡ್ ಕಾರುಗಳ ಬಿಡುಗಡೆಗೆ ಸಿದ್ದವಾದ ಹೋಂಡಾ ಕಾರ್ಸ್

ಇನ್ನು ದೇಶಾದ್ಯಂತ ಹೆಚ್ಚುತ್ತಿರುವ ಇಂಧನ ಚಾಲಿತ ವಾಹನಗಳಿಂದ ಭಾರೀ ಪ್ರಮಾಣದ ಮಾಲಿನ್ಯ ಉತ್ಪಾದನೆಯಾಗುತ್ತಿದ್ದು, ಮಾಲಿನ್ಯ ತಗ್ಗಿಸಲು ನಿಟ್ಟಿನಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಉತ್ಪಾದನೆ ಮತ್ತು ಮಾರಾಟ ಮೇಲೆ ಹಲವು ಕಠಿಣ ಕ್ರಮಗಳನ್ನು ಜಾರಿಗೆ ತರುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾದ ನಿಯಮ ಜಾರಿಗೆ ತರುತ್ತಿವೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಭಾರತದಲ್ಲಿ ಹೈಬ್ರಿಡ್ ಕಾರುಗಳ ಬಿಡುಗಡೆಗೆ ಸಿದ್ದವಾದ ಹೋಂಡಾ ಕಾರ್ಸ್

ಸದ್ಯ ಮಾರುಕಟ್ಟೆಯಲ್ಲಿ ವಿನೂತನ ಮಾದರಿಯ ಹಲವು ಎಲೆಕ್ಟ್ರಿಕ್ ವಾಹನಗಳು ಖರೀದಿಗೆ ಲಭ್ಯವಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳೇ ಹೆಚ್ಚಿನ ಮಟ್ಟದಲ್ಲಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಎಲೆಕ್ಟ್ರಿಕ್ ವಾಹನ ಮಾರಾಟವನ್ನು ಉತ್ತೇಜಿಸಲು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರದ ಫೇಮ್ 2 ಯೋಜನೆಯೂ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಇದೀಗ ಭಾರೀ ಬದಲಾವಣೆಗೆ ಕಾರಣವಾಗಿದ್ದು, ಇವಿ ಖರೀದಿಸುವ ಗ್ರಾಹಕರಿಗೆ ಸಬ್ಸಡಿ, ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದೆ.

Most Read Articles

Kannada
Read more on ಹೋಂಡಾ honda
English summary
Honda To Launch A Hybrid Model In India Soon. Read in Kannada.
Story first published: Monday, August 3, 2020, 21:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X