ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೋಂಡಾ ಸಿಆರ್-ವಿ ಸ್ಪೆಷಲ್ ಎಡಿಷನ್ ಎಸ್‌ಯುವಿ

ಭಾರತದಲ್ಲಿ ಹಬ್ಬಗಳು ಹತ್ತಿರ ಬಂದತೆಲ್ಲಾ ಜನರಿಗೆ ಮಾತ್ರವಲ್ಲದೆ ಎಲ್ಲಾ ಕಂಪನಿಗಳಿಗೂ ಸಹ ಖುಷಿಯಾಗುತ್ತದೆ. ಜನರು ಹೊಸ ವಾಹನಗಳನ್ನು ಖರೀದಿಸಲು ಮುಂದಾದರೆ, ಕಂಪನಿಗಳು ವಾಹನಗಳ ಮೇಲೆ ರಿಯಾಯಿತಿಯನ್ನು ನೀಡಲು ಮುಂದಾಗುತ್ತವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೋಂಡಾ ಸಿಆರ್-ವಿ ಸ್ಪೆಷಲ್ ಎಡಿಷನ್ ಎಸ್‌ಯುವಿ

ಈ ಸಮಯದಲ್ಲಿ ಗ್ರಾಹಕರು ಶಾಪಿಂಗ್ ಮಾಡುವುದನ್ನು ಶುಭವೆಂದು ಪರಿಗಣಿಸಿದರೆ, ವಾಹನ ತಯಾರಕರು ಮಾರುಕಟ್ಟೆಯಲ್ಲಿ ಆಕರ್ಷಕ ಕೊಡುಗೆಗಳನ್ನು ನೀಡುವ ಮೂಲಕ ಹೊಸ ಮಾದರಿಗಳನ್ನು ಬಿಡುಗಡೆಗೊಳಿಸಿ ತಮ್ಮ ಮಾರಾಟವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಈಗ ಖ್ಯಾತ ಕಾರು ತಯಾರಕ ಕಂಪನಿಯಾದ ಹೋಂಡಾ ಕಾರ್ಸ್ ಇಂಡಿಯಾ ಮಾರುಕಟ್ಟೆಯಲ್ಲಿರುವ ತನ್ನ ಕಾರಿನ ವಿಶೇಷ ಆವೃತ್ತಿಯನ್ನು ಬಿಡುಗಡೆಗೊಳಿಸಲು ಮುಂದಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೋಂಡಾ ಸಿಆರ್-ವಿ ಸ್ಪೆಷಲ್ ಎಡಿಷನ್ ಎಸ್‌ಯುವಿ

ಮಾಧ್ಯಮಗಳ ವರದಿಯ ಪ್ರಕಾರ, ಹೋಂಡಾ ಕಾರ್ಸ್ ತನ್ನ ಸಿಆರ್-ವಿ ಎಸ್‌ಯುವಿಯ ವಿಶೇಷ ಆವೃತ್ತಿಯನ್ನು ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ವಿಶೇಷ ಆವೃತ್ತಿಯ ಸುಮಾರು 45 ಯುನಿಟ್ ಗಳನ್ನು ಉತ್ಪಾದಿಸಲಾಗುವುದು.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೋಂಡಾ ಸಿಆರ್-ವಿ ಸ್ಪೆಷಲ್ ಎಡಿಷನ್ ಎಸ್‌ಯುವಿ

ಈ ವಿಶೇಷ ಆವೃತ್ತಿಯ ಆರಂಭಿಕ ಬೆಲೆ ದೆಹಲಿಯ ಎಕ್ಸ್ ಶೋರೂಂ ದರದಂತೆ ರೂ.29.50 ಲಕ್ಷಗಳಾಗಿದೆ. ಸಿಆರ್-ವಿ ವಿಶೇಷ ಆವೃತ್ತಿಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ನವೀಕರಿಸಿದ ಮಾದರಿಯನ್ನು ಆಧರಿಸಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೋಂಡಾ ಸಿಆರ್-ವಿ ಸ್ಪೆಷಲ್ ಎಡಿಷನ್ ಎಸ್‌ಯುವಿ

ಈ ಎಸ್‌ಯುವಿಯಲ್ಲಿ ರಿಡಿಸೈನ್ ಮಾಡಲಾದ ಮುಂಭಾಗ ಹಾಗೂ ಹಿಂಭಾಗದ ಬಂಪರ್, ಮುಂಭಾಗದಲ್ಲಿ ಕೆಂಪು ಟ್ರಿಮ್ ಸೇರಿದಂತೆ ಕೆಲವು ಕಾಸ್ಮೆಟಿಕ್ ಅಪ್ ಡೇಟ್ ಗಳನ್ನು ಮಾಡಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗುವುದು. ಈ ಎಸ್‌ಯುವಿಯ ಇಂಟಿರಿಯರ್ ನಲ್ಲಿಯೂ ಕೆಲವು ಬದಲಾವಣೆಗಳನ್ನು ಮಾಡಲಾಗುವುದು.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೋಂಡಾ ಸಿಆರ್-ವಿ ಸ್ಪೆಷಲ್ ಎಡಿಷನ್ ಎಸ್‌ಯುವಿ

ಹೋಂಡಾ ಸಿಆರ್-ವಿ ವಿಶೇಷ ಆವೃತ್ತಿಯು ಹ್ಯಾಂಡ್ಸ್-ಫ್ರೀ ಟೇಲ್‌ಗೇಟ್, ಪವರ್ಡ್ ಫ್ರಂಟ್ ಪ್ಯಾಸೆಂಜರ್ ಸೀಟ್, ಆಕ್ಟಿವ್ ಕಾರ್ನರಿಂಗ್ ಎಲ್ಇಡಿ ಹೆಡ್‌ಲ್ಯಾಂಪ್‌, ಫ್ರಂಟ್ ಪಾರ್ಕಿಂಗ್ ಸೆನ್ಸರ್ ಹಾಗೂ ಆಟೋ ಫೋಲ್ಡಿಂಗ್ ಒಆರ್‌ವಿಎಂ ಸೇರಿದಂತೆ ಹಲವಾರು ಫೀಚರ್ ಗಳನ್ನು ಹೊಂದಿರುವ ಸಾಧ್ಯತೆಗಳಿವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೋಂಡಾ ಸಿಆರ್-ವಿ ಸ್ಪೆಷಲ್ ಎಡಿಷನ್ ಎಸ್‌ಯುವಿ

ಇನ್ನು ಹೋಂಡಾ ಸಿಆರ್-ವಿ ವಿಶೇಷ ಆವೃತ್ತಿಯಲ್ಲಿರುವ ಎಂಜಿನ್ ಬಗ್ಗೆ ಹೇಳುವುದಾದರೆ ಈ ಎಸ್‌ಯುವಿಯಲ್ಲಿ 2.0-ಲೀಟರಿನ 4-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅಳವಡಿಸಲಾಗುವುದು. ಈ ಎಂಜಿನ್ 6,500 ಆರ್‌ಪಿಎಂನಲ್ಲಿ 152 ಬಿಹೆಚ್‌ಪಿ ಪವರ್ ಹಾಗೂ 4,300 ಆರ್‌ಪಿಎಂನಲ್ಲಿ 189 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಸಿವಿಟಿ ಗೇರ್‌ಬಾಕ್ಸ್ ಜೋಡಿಸಬಹುದು.

Most Read Articles

Kannada
Read more on ಹೋಂಡಾ honda
English summary
Honda to launch CR V special edition soon in India. Read in Kannada.
Story first published: Thursday, October 22, 2020, 18:51 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X