ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆ ಮಾಡಲಿದೆ ಹೋಂಡಾ

ಹೋಂಡಾ ಇಂಡಿಯಾ ಕಂಪನಿಯು ಈಗಾಗಲೇ ವಿವಿಧ ಮಾದರಿಯ ಹಲವು ಕಾರುಗಳ ಮಾರಾಟ ಮೂಲಕ ಗ್ರಾಹಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ.

ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆ ಮಾಡಲಿದೆ ಹೋಂಡಾ

ಮಾಹಿತಿಗಳ ಪ್ರಕಾರ, ಹೋಂಡಾ ಕಂಪನಿಯು ರೂ.8 ಲಕ್ಷದಿಂದ ರೂ.12 ಲಕ್ಷ ಬೆಲೆ ಅಂತರದಲ್ಲಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ ಮತ್ತು ಟಾಟಾ ನೆಕ್ಸಾನ್ ಕಾರುಗಳಿಗೆ ಪೈಪೋಟಿಯಾಗಿ ಬಿಡುಗಡೆ ಮಾಡಲಿದೆ. ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರಿನ ಮೂಲಕ ಗ್ರಾಹಕರ ಬೇಡಿಕೆ ಹೆಚ್ಚಿಸುವತ್ತ ಹೋಂಡಾ ಗಮನಹರಿಸಿದೆ.

ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆ ಮಾಡಲಿದೆ ಹೋಂಡಾ

ಈ ಹಿಂದಿಯೇ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಕುರಿತಂತೆ ಸುಳಿವು ನೀಡಿದ್ದ ಹೋಂಡಾ ಕಂಪನಿಯು ಬಿಎಸ್-6 ಜಾರಿಯಾಗುತ್ತಿದ್ದ ಹಿನ್ನಲೆಯಲ್ಲಿ ಹೊಸ ಯೋಜನೆ ಕೈಬಿಟ್ಟು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರು ಮಾದರಿಗಳ ಎಂಜಿನ್ ಉನ್ನತೀಕರಣದತ್ತ ಗಮನಹರಿಸಿತ್ತು.

ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆ ಮಾಡಲಿದೆ ಹೋಂಡಾ

ಇದೀಗ ಬಿಎಸ್-6 ಎಂಜಿನ್ ಹೊಂದಿರುವ ಬಹುತೇಕ ಹೋಂಡಾ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗಿದ್ದು, ಕರೋನಾ ವೈರಸ್ ತಡೆಗಾಗಿ ಹಾಕಲಾಗಿರುವ ಲಾಕ್ ಡೌನ್ ತೆರವುಗೊಳಿಸಿದ ನಂತರ ಬಹುತೇಕ ಕಾರುಗಳು ಮಾರುಕಟ್ಟೆ ಪ್ರವೇಶಿಸಲಿದೆ.

ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆ ಮಾಡಲಿದೆ ಹೋಂಡಾ

ಬಿಎಸ್-6 ಕಾರು ಮಾದರಿಗಳ ಬಿಡುಗಡೆಯ ನಂತರ ಹೊಸ ಕಾರುಗಳ ಬಿಡುಗಡೆಯತ್ತ ಗಮನಹರಿಸಲಿರುವ ಹೋಂಡಾ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಹೊಸ ಕಾರು ಆವೃತ್ತಿಯನ್ನು ಸಿದ್ದಪಡಿಸಲಿದೆ. ಹೊಸ ಕಾರುಗಳು ಇದೇ ವರ್ಷಾಂತ್ಯಕ್ಕೆ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಅಮೇಜ್ ಹೆಸರಿನಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ

ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆ ಮಾಡಲಿದೆ ಹೋಂಡಾ

ಸದ್ಯ ಹೋಂಡಾ ಬಹುಬೇಡಿಕೆಯ ಕಾರು ಮಾದರಿಯಾಗಿರುವ ಅಮೇಜ್ ಕಂಪ್ಯಾಕ್ಟ್ ಸೆಡಾನ್ ಮಾದರಿಯಿಂದಲೇ ಹಲವಾರು ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಳ್ಳಲಿರುವ ಅಮೇಜ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆಯ ವೇಳೆ ಹೊಸ ಹೆಸರನ್ನು ಕೂಡಾ ಪಡೆದುಕೊಳ್ಳಬಹುದಾದ ಸಾಧ್ಯತೆಗಳಿವೆ.

ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆ ಮಾಡಲಿದೆ ಹೋಂಡಾ

ಅಮೇಜ್ ಕಂಪ್ಯಾಕ್ಟ್ ಎಸ್‌ಯವಿ ಮಾದರಿಯ ಈಗಾಗಲೇ ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ ಖರೀದಿಗೆ ಲಭ್ಯವಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಆವೃತ್ತಿಯು ಕೆಲವು ಪ್ರಮುಖ ಬದಲಾವಣೆಗಳೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆ ಪೂರೈಸಲಿದೆ.

ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆ ಮಾಡಲಿದೆ ಹೋಂಡಾ

ಇದಲ್ಲದೇ ಭಾರತದಲ್ಲಿ ಕೆಲವು ಕಾರಣಾಂತರಗಳಿಂದ ಹೊಸ ಮಾದರಿಯ ಹೆಚ್‌ಆರ್-ವಿ ಎಸ್‌ಯುವಿ ಬಿಡುಗಡೆಯಿಂದ ಹಿಂದೆ ಸರಿದ್ದ ಹೋಂಡಾ ಇಂಡಿಯಾ ಕಂಪನಿಯು ಇದೀಗ ಮತ್ತೆ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಮುಂಬರುವ ದಿನಗಳಲ್ಲಿ ಹೆಚ್ಆರ್-ವಿ ಕಾರನ್ನು ಬಿಡುಗಡೆಗೊಳಿಸುವ ಸುಳಿವು ನೀಡಿದೆ.

ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆ ಮಾಡಲಿದೆ ಹೋಂಡಾ

ಪ್ರತಿಸ್ಪರ್ಧಿ ಕಾರುಗಳ ಮಾದರಿಗಳ ಬೆಲೆ ಸಮರದಿಂದಾಗಿ ಕಳೆದ ವರ್ಷ ಹೆಚ್‌ಆರ್-ವಿ ಕಾರು ಬಿಡುಗಡೆಯ ಯೋಜನೆಯಿಂದ ಹಿಂದೆ ಸರಿದ್ದ ಹೋಂಡಾ ಸಂಸ್ಥೆಯು ಇದೀಗ ಮತ್ತೆ ಹೊಸ ಕಾರು ಬಿಡುಗಡೆಗಾಗಿ ಸಿದ್ದತೆ ನಡೆಸುತ್ತಿದ್ದು, ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಹೊಸ ಕಾರು ಮಾರುಕಟ್ಟೆ ಪ್ರವೇಶಿಸಲಿದೆ. ಸಿಟಿ ಸೆಡಾನ್ ಮತ್ತು ಸಿವಿಕ್ ಸೆಡಾನ್ ಕಾರುಗಳ ಮಧ್ಯದ ಸ್ಥಾನದಲ್ಲಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಪ್ರೀಮಿಯಂ ಫೀಚರ್ಸ್‌ಗಳಿಂದಾಗಿ ತುಸು ದುಬಾರಿ ಎನ್ನಿಸಲಿದೆ.

ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆ ಮಾಡಲಿದೆ ಹೋಂಡಾ

ಪ್ರೀಮಿಯಂ ವೈಶಿಷ್ಟ್ಯತೆಗಳಿಂದಾಗಿ ಹೆಚ್‍ಆರ್-ವಿ ಕಾರು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ರೆನಾಲ್ಟ್ ಕ್ಯಾಪ್ಚರ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ತೀವ್ರ ಪೈಪೋಟಿ ನೀಡುವ ಗುಣಲಕ್ಷಣಗಳನ್ನು ಹೊಂದಿದ್ದು, ಯುರೋಪ್ ಮಾರುಕಟ್ಟೆಗಳಲ್ಲಿ 2014ರಲ್ಲೇ ಬಿಡುಗಡೆಗೊಂಡಿರುವ ಹೆಚ್ಆರ್-ವಿ ಕಾರು ಸಾಕಷ್ಟು ಬದಲಾವಣೆಗಳೊಂದಿಗೆ ಉತ್ತಮ ಮಾರಾಟ ಹೊಂದಿದೆ. ಈ ಕಾರು ಕೂಡಾ ಭಾರತದಲ್ಲಿ ಬಿಡುಗಡೆಯಾಗುವ ಸಿದ್ದತೆ ನಡೆಸಿದ್ದು, 2021ರ ವೇಳೆಗೆ ಮಾರುಕಟ್ಟೆಗೆ ಪ್ರವೇಶಿಸುವ ಸಾಧ್ಯತೆಗಳಿವೆ.

Article Published On: Wednesday, April 8, 2020, 15:00 [IST]
English summary
Honda working on all-new compact SUV. Read in Kannada.
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+