ಬಿಡುಗಡೆಗೆ ಸಜ್ಜಾದ ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು

ಹೋಂಡಾ ಇಂಡಿಯಾ ಕಂಪನಿಯು ಹೊಸ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಂಡಾ ಕಂಪನಿಯು ನಾಳೆ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರನ್ನು ಅಧಿಕೃತವಾಗಿ ಭಾರತದಲ್ಲಿ ಬಿಡುಗಡೆಗೊಳಿಸಲಿದೆ.

ಬಿಡುಗಡೆಗೆ ಸಜ್ಜಾದ ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು

ಹೋಂಡಾ ಕಂಪನಿಯು ತನ್ನ ಹೊಸ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಆವೃತ್ತಿಯ ಬುಕ್ಕಿಂಗ್ ಅನ್ನು ಇತ್ತೀಚೆಗೆ ಅಧಿಕೃತವಾಗಿ ಸ್ವೀಕರಿಸಲು ಪ್ರಾರಂಭಿಸಿದೆ. ಹೋಂಡಾ ಕಂಪನಿಯ ಹಿಂದಿನ ಡಬ್ಲ್ಯುಆರ್‍-ವಿ ಮಾದರಿಗೆ ಹೊಸ ಫೇಸ್‍‍ಲಿಫ್ಟ್ ಕಾರನ್ನು ಹೋಲಿಸಿದರೆ ಹಲವಾರು ಬದಲಾವಣೆಗಳಾಗಿರುವುದನ್ನು ಕಾಣಬಹುದು. ಬಿಡುಗಡೆಯ ಮುನ್ನ ಡೀಲರ್ ಬಳಿ ತಲುಪಿರುವ ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರಿನ ಸ್ಪೈ ಚಿತ್ರಗಳು ಇತ್ತೀಚೆಗೆ ಬಹಿರಂಗವಾಗಿತ್ತು.

ಬಿಡುಗಡೆಗೆ ಸಜ್ಜಾದ ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು

ಫೇಸ್‍‍ಲಿಫ್ಟ್ ಆವೃತ್ತಿಯಲ್ಲಿ ಹೊಸ ಬಿ‍ಎಸ್-6 ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಅಳವಡಿಸಲಾಗಿದೆ. 2020ರ ಹೋಂಡಾ ಡಬ್ಲ್ಯುಆರ್-ವಿ ಫೇಸ್‌ಲಿಫ್ಟ್‌ ಹೊಸ ವಿನ್ಯಾಸ ಹಾಗೂ ಫೀಚರ್‍‍ಗಳನ್ನು ಸಹ ನವೀಕರಿಸಲಾಗಿದೆ.

MOST READ: ಡೀಲರ್ ಬಳಿ ತಲುಪಿದ 2020ರ ಹೋಂಡಾ ಸಿಟಿ ಕಾರು

ಬಿಡುಗಡೆಗೆ ಸಜ್ಜಾದ ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು

ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಆವೃತ್ತಿಯನ್ನು 1.2 ಲೀಟರಿನ ಪೆಟ್ರೋಲ್ ಹಾಗೂ 1.5 ಲೀಟರಿನ ಡೀಸೆಲ್ ಬಿ‍ಎಸ್ 6 ಎಂಜಿನ್‍‍ನಲ್ಲಿ ಬಿಡುಗಡೆಗೊಳಿಸಲಾಗುವುದು. ಹಳೆಯ ತಲೆಮಾರಿನ ಕಾರಿನಂತೆ ಫೇಸ್‍‍ಲಿಫ್ಟ್ ಕಾರಿನಲ್ಲಿಯೂ ಸಹ 5-ಸ್ಪೀಡ್ ಹಾಗೂ 6-ಸ್ಪೀಡಿನ ಗೇರ್‍‍ಬಾಕ್ಸ್ ಆಯ್ಕೆಗಳನ್ನು ನೀಡಲಾಗುವುದು.

ಬಿಡುಗಡೆಗೆ ಸಜ್ಜಾದ ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು

ಇದರಲ್ಲಿ 1.2 ಪೆಟ್ರೋಲ್ ಎಂಜಿನ್ ಪ್ರತಿ ಲೀಟರ್‌ಗೆ 16.5 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಇನ್ನು 1.5 ಡೀಸೆಲ್ ಎಂಜಿನ್ ಪ್ರತಿ ಲೀಟರ್‌ಗೆ 23.7 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಿಡುಗಡೆಗೆ ಸಜ್ಜಾದ ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು

2020ರ ಹೋಂಡಾ ಡಬ್ಲ್ಯುಆರ್-ವಿ ಫೇಸ್‌ಲಿಫ್ಟ್‌ನಲ್ಲಿ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್ಸ್ ಮತ್ತು ಪೊಸಿಷನ್ ಲ್ಯಾಂಪ್‌ಗಳಿವೆ. ಹಿಂಭಾಗದಲ್ಲಿ, ಡಬ್ಲ್ಯುಆರ್-ವಿ ಫೇಸ್ ಲಿಫ್ಟ್ ಸುಧಾರಿತ ಸಿ-ಆಕಾರದ ಎಲ್ಇಡಿ ರೇರ್ ಫಾಗ್‍ ಲ್ಯಾಂಪ್‍‍ಗಳನ್ನು ಅಳವಡಿಸಲಾಗಿದೆ.

ಬಿಡುಗಡೆಗೆ ಸಜ್ಜಾದ ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು

ಹೊಸ ಹೋಂಡಾ ಡಬ್ಲ್ಯುಆರ್-ವಿ ಫೇಸ್‌ಲಿಫ್ಟ್‌ ಕಾರಿನಲ್ಲಿ ಕ್ರಾಸ್ಒವರ್ ಕ್ರೂಸ್ ಕಂಟ್ರೋಲ್ ಮತ್ತು ಒನ್-ಟಚ್ ಎಲೆಕ್ಟ್ರಿಕ್ ಸನ್ರೂಫ್ ಅನ್ನು ಸಹ ಹೊಂದಿದೆ. ಹೊಸ ಕಾರಿನ ಗ್ರಿಲ್ ಹಾಗೂ ಬಂಪರ್‍‍ಗಳು ಹೊಸ ಲುಕ್ ಅನ್ನು ಹೊಂದಿದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಬಿಡುಗಡೆಗೆ ಸಜ್ಜಾದ ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು

ಈ ಕಾರಿನ ಇಂಟಿರಿಯರ್ ನಲ್ಲಿ ಟಚ್‍‍ಸ್ಕ್ರೀನ್ ಇನ್ಫೋಟೆನ್‍‍ಮೆಂಟ್ ಸಿಸ್ಟಂ ಹಾಗೂ ಡಿಜಿಟಲ್ ಇನ್ಸ್ ಟ್ರೂಮೆಂಟ್‍‍‍ಗಳನ್ನು ಹೊಂದಿರಲಿದೆ. ಮಾರುಕಟ್ಟೆಯಲ್ಲಿರುವ ಹಳೆಯ ತಲೆಮಾರಿನ ಹೋಂಡಾ ಡಬ್ಲ್ಯು‍ಆರ್-ವಿಯಲ್ಲಿರುವ ಎಲೆಕ್ಟ್ರಾನಿಕ್ ಸನ್‍‍ರೂಫ್ ಹಾಗೂ ಕ್ರೂಸ್ ಕಂಟ್ರೋಲ್‍‍ಗಳನ್ನು ಫೇಸ್‍‍ಲಿಫ್ಟ್ ಆವೃತ್ತಿಯಲ್ಲಿಯೂ ಸಹ ನೀಡಲಾಗುವುದು.

ಬಿಡುಗಡೆಗೆ ಸಜ್ಜಾದ ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು

ಹೊಸ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು ಭಾರತದಲ್ಲಿ ಬಿಡುಗಡೆಯಾದ ಬಳಿಕ ಹೊಸ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ 300, ಫೋರ್ಡ್ ಇಕೋಸ್ಪೋರ್ಟ್ ಮತ್ತು ಹ್ಯುಂಡೈ ವೆನ್ಯೂ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ.

Article Published On: Wednesday, July 1, 2020, 17:42 [IST]
English summary
Honda WRV Facelift To Be Launched In India Tomorrow. Read In Kannada.
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+