ಡಬ್ಲ್ಯುಆರ್-ವಿ ಫೇಸ್‍ಲಿಫ್ಟ್ ಕಾರಿನ ಟೀಸರ್ ಬಿಡುಗಡೆಗೊಳಿಸಿದ ಹೋಂಡಾ
ಹೋಂಡಾ ಕಾರ್ಸ್ ಇಂಡಿಯಾ ತನ್ನ ಡಬ್ಲ್ಯುಆರ್-ವಿ ಫೇಸ್‍ಲಿಫ್ಟ್ ಆವೃತ್ತಿಯ ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಶೀಘ್ರದಲ್ಲಿಯೇ ಈ ಫೇಸ್‍ಲಿಫ್ಟ್ ಕಾರು ಬಿಡುಗಡೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈ ಟೀಸರ್ ಅನ್ನು ಬಿಡುಗಡೆಗೊಳಿಸಲಾಗಿದೆ.

ಟ್ವಿಟರ್‍ನಲ್ಲಿ ಬಿಡುಗಡೆಗೊಳಿಸಲಾಗಿರುವ ಈ ಟೀಸರ್‍ನಲ್ಲಿ ಹೋಂಡಾ ಕಂಪನಿಯ ಫೇಸ್‍ಲಿಫ್ಟ್ ಆವೃತ್ತಿಯಲ್ಲಿ ಹಲವಾರು ಬದಲಾವಣೆಗಳಾಗಿರುವುದನ್ನು ಕಾಣಬಹುದು. ಫೇಸ್‍ಲಿಫ್ಟ್ ಆವೃತ್ತಿಯಲ್ಲಿ ಹೊಸ ಬಿಎಸ್ 6 ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಅಳವಡಿಸಲಾಗಿದೆ. ಇದರ ಜೊತೆಗೆ ವಿನ್ಯಾಸ ಹಾಗೂ ಫೀಚರ್‍ಗಳನ್ನು ಸಹ ಅಪ್‍ಡೇಟ್ ಮಾಡಲಾಗಿದೆ.

ಹೊಸ ಕಾರಿನ ಗ್ರಿಲ್ ಹಾಗೂ ಬಂಪರ್‍ಗಳಿಗೆ ಹೊಸ ಲುಕ್ ನೀಡಲಾಗಿದೆ. ಇದರ ಜೊತೆಗೆ ಎಲ್‍ಇಡಿ ಟೇಲ್‍ಲೈಟ್ ಹಾಗೂ ಎಲ್‍ಇಡಿ ಪ್ರೊಜೆಕ್ಟರ್ ಹೆಡ್‍ಲ್ಯಾಂಪ್ ಹೊಂದಿರುವ ಫಾಗ್ ಲ್ಯಾಂಪ್‍ಗಳನ್ನು ಅಳವಡಿಸಲಾಗಿದೆ.

ಫಾಗ್ ಲ್ಯಾಂಪ್ ಹೌಸಿಂಗ್‍ಗಳು ಕಪ್ಪು ಬಣ್ಣವನ್ನು ಹೊಂದಿವೆ. ಇಂಟಿರಿಯರ್ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಾಗದೇ ಇದ್ದರೂ ಫೇಸ್‍ಲಿಫ್ಟ್ ಆವೃತ್ತಿಯಲ್ಲಿ ಹೊಸ ಫ್ಯಾಬ್ರಿಕ್ ಸೀಟುಗಳನ್ನು ಅಳವಡಿಸಲಾಗುವುದು.

ಇವುಗಳ ಜೊತೆಗೆ ಟಚ್‍ಸ್ಕ್ರೀನ್ ಇನ್ಫೋಟೆನ್‍ಮೆಂಟ್ ಸಿಸ್ಟಂ ಹಾಗೂ ಡಿಜಿಟಲ್ ಇನ್ಸ್ ಟ್ರೂಮೆಂಟ್‍ಗಳನ್ನು ನೀಡಲಾಗುವುದು. ಮಾರುಕಟ್ಟೆಯಲ್ಲಿರುವ ಹಳೆಯ ತಲೆಮಾರಿನ ಹೋಂಡಾ ಡಬ್ಲ್ಯುಆರ್-ವಿಯಲ್ಲಿರುವ ಎಲೆಕ್ಟ್ರಾನಿಕ್ ಸನ್‍ರೂಫ್ ಹಾಗೂ ಕ್ರೂಸ್ ಕಂಟ್ರೋಲ್‍ಗಳನ್ನು ಫೇಸ್‍ಲಿಫ್ಟ್ ಆವೃತ್ತಿಯಲ್ಲಿಯೂ ಸಹ ನೀಡಲಾಗುವುದು.

ಡಬ್ಲ್ಯುಆರ್-ವಿ ಫೇಸ್‍ಲಿಫ್ಟ್ ಆವೃತ್ತಿಯನ್ನು 1.2 ಲೀಟರಿನ ಪೆಟ್ರೋಲ್ ಹಾಗೂ 1.5 ಲೀಟರಿನ ಡೀಸೆಲ್ ಬಿಎಸ್ 6 ಎಂಜಿನ್‍ನಲ್ಲಿ ಬಿಡುಗಡೆಗೊಳಿಸಲಾಗುವುದು. ಹಳೆಯ ತಲೆಮಾರಿನ ಕಾರಿನಂತೆ ಫೇಸ್‍ಲಿಫ್ಟ್ ಕಾರಿನಲ್ಲಿಯೂ ಸಹ 5 ಸ್ಪೀಡ್ ಹಾಗೂ 6 ಸ್ಪೀಡಿನ ಗೇರ್‍ಬಾಕ್ಸ್ ಆಯ್ಕೆಗಳನ್ನು ನೀಡಲಾಗುವುದು.


Click it and Unblock the Notifications