ಡಬ್ಲ್ಯುಆರ್-ವಿ ಬದಲಾಗಿ ಜೆಡ್ಆರ್-ವಿ ಪರಿಚಯಿಸಲಿದೆ ಹೋಂಡಾ

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಮಹತ್ವದ ಬದಲಾವಣೆ ತರುತ್ತಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡಬ್ಲ್ಯುಆರ್-ವಿ ಕಂಪ್ಯಾಕ್ಟ್ ಎಸ್‌ಯುವಿ ಬದಲಾಗಿ ಹೊಸದಾಗಿ ಅಭಿವೃದ್ದಿಗೊಳಿಸಲಾಗುತ್ತಿರುವ ಜೆಡ್ಆರ್-ವಿ ಕಾರು ಮಾದರಿಯನ್ನು ಪರಿಚಯಿಸಬಹುದು ಎನ್ನಲಾಗಿದೆ.

ಡಬ್ಲ್ಯುಆರ್-ವಿ ಬದಲಾಗಿ ಜೆಡ್ಆರ್-ವಿ ಪರಿಚಯಿಸಲಿದೆ ಹೋಂಡಾ

ಸದ್ಯ ಮಾರುಕಟ್ಟೆಯಲ್ಲಿ ಡಬ್ಲ್ಯಆರ್-ವಿ ಕಾರು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಮಾದರಿಯೊಂದಿಗೆ ಮಾರಾಟಗೊಳ್ಳುತ್ತಿದ್ದು, ಹೊಸದಾಗಿ ಅಭಿವೃದ್ದಿಗೊಳಿಸಲಾಗುತ್ತಿರುವ ಜೆಡ್ಆರ್-ವಿ ಕಾರು ಮಾದರಿಯು ಕೂಡಾ ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆ ಅನುಸಾರವಾಗಿ ಹಲವಾರು ಹೊಸ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ. ಬೆಲೆಯಲ್ಲೂ ಕೂಡಾ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಪೈಪೋಟಿ ನೀಡಲಿರುವ ಜೆಡ್ಆರ್-ವಿ ಕಾರು ಮಾದರಿಯು ಮುಂಬರುವ ಕೆಲವೇ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ.

ಡಬ್ಲ್ಯುಆರ್-ವಿ ಬದಲಾಗಿ ಜೆಡ್ಆರ್-ವಿ ಪರಿಚಯಿಸಲಿದೆ ಹೋಂಡಾ

ಡಬ್ಲ್ಯುಆರ್-ವಿ ಕಾರು ಮಾದರಿಯು ಸದ್ಯ ಗ್ರಾಹಕರ ಬೇಡಿಕೆಯಲ್ಲಿ ಸತತ ಹಿನ್ನಡೆ ಅನುಭವಿಸುತ್ತಿರುವ ಹಿನ್ನಲೆಯಲ್ಲಿ ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬಂದಿರುವ ಹೋಂಡಾ ಕಂಪನಿಯು ಹೊಸ ಉತ್ಪನ್ನಗಳ ಮೂಲಕ ನ್ಯೂ ಜನರೇಷನ್ ಫೀಚರ್ಸ್‌ಗಳನ್ನು ಪರಿಚಯಿಸಲಿದೆ.

ಡಬ್ಲ್ಯುಆರ್-ವಿ ಬದಲಾಗಿ ಜೆಡ್ಆರ್-ವಿ ಪರಿಚಯಿಸಲಿದೆ ಹೋಂಡಾ

ಹೊಸ ಕಾರು ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ ಮತ್ತು ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿದ್ದು, ಗ್ರಾಹರ ಬೇಡಿಕೆಯೆಂತೆ ಹೊಸ ಕಾರನ್ನು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ.

ಡಬ್ಲ್ಯುಆರ್-ವಿ ಬದಲಾಗಿ ಜೆಡ್ಆರ್-ವಿ ಪರಿಚಯಿಸಲಿದೆ ಹೋಂಡಾ

ಹೊಸ ಕಾರು ರೂ. 7 ಲಕ್ಷದಿಂದ ರೂ. 11 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದ್ದು, ಗ್ರಾಹಕರ ಬೇಡಿಕೆಯಲ್ಲಿ ಗಮನಸೆಳೆಯಲಿದೆ. ಮಾಹಿತಿಗಳ ಪ್ರಕಾರ, ಹೊಸ ಕಾರು ಜೆಡ್ಆರ್-ವಿ ಹೆಸರಿನೊಂದಿಗೆ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಕೇಂದ್ರ ಸಾರಿಗೆ ಇಲಾಖೆಗೆ ಈಗಾಗಲೇ ಸಲ್ಲಿಕೆ ಮಾಡಲಾಗಿರುವ ಟ್ರೆಡ್‌ಮಾರ್ಕ್ ಅರ್ಜಿಯಲ್ಲಿ ಹೊಸ ಕಾರಿನ ಹೆಸರು ಬಹಿರಂಗಗೊಳಿಸಲಾಗಿದೆ.

ಡಬ್ಲ್ಯುಆರ್-ವಿ ಬದಲಾಗಿ ಜೆಡ್ಆರ್-ವಿ ಪರಿಚಯಿಸಲಿದೆ ಹೋಂಡಾ

ಬಿಎಸ್-6 ಕಾರು ಮಾದರಿಗಳ ಬಿಡುಗಡೆಯ ನಂತರ ಹೊಸ ಕಾರುಗಳ ಬಿಡುಗಡೆಯತ್ತ ಗಮನಹರಿಸಲಿರುವ ಹೋಂಡಾ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಹೊಸ ಕಾರು ಆವೃತ್ತಿಗಳನ್ನು ಸಿದ್ದಪಡಿಸುತ್ತಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಇದೇ ವರ್ಷಾಂತ್ಯದಲ್ಲಿ ಬಿಡುಗಡೆಗೊಳಿಸುವ ಯೋಜನೆಯಲ್ಲಿತ್ತು.

ಡಬ್ಲ್ಯುಆರ್-ವಿ ಬದಲಾಗಿ ಜೆಡ್ಆರ್-ವಿ ಪರಿಚಯಿಸಲಿದೆ ಹೋಂಡಾ

ಆದರೆ ಕರೋನಾ ವೈರಸ್ ಪರಿಣಾಮ ಹೊಸ ಕಾರಿನ ಬಿಡುಗಡೆಯನ್ನು 2021ರ ಮೇ ಅವಧಿಗೆ ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಸಬ್ ಫೋರ್ ಮೀಟರ್ ಮಾದರಿಯಲ್ಲಿ ಬಿಡುಗಡೆಯಾಗಲಿದೆ. ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳೊಂದಿಗೆ ಬೆಲೆಯಲ್ಲೂ ಪ್ರತಿಸ್ಪರ್ಧಿ ಕಾರು ಮಾದರಿಗಳಿಗಿಂತಲೂ ಉತ್ತಮವಾಗಿರಲಿದ್ದು, ಡಬ್ಲ್ಯುಆರ್-ವಿ ಕಾರು ಮಾದರಿಗಿಂತಲೂ ಕೆಳದರ್ಜೆ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಡಬ್ಲ್ಯುಆರ್-ವಿ ಬದಲಾಗಿ ಜೆಡ್ಆರ್-ವಿ ಪರಿಚಯಿಸಲಿದೆ ಹೋಂಡಾ

ಹೋಂಡಾ ಕಂಪನಿಯು ಸದ್ಯ ತನ್ನ ಬಹುಬೇಡಿಕೆಯ ಕಾರು ಮಾದರಿಯಾಗಿರುವ ಅಮೇಜ್ ಕಂಪ್ಯಾಕ್ಟ್ ಸೆಡಾನ್ ಮಾದರಿಯಿಂದಲೂ ಹಲವಾರು ತಾಂತ್ರಿಕ ಅಂಶಗಳನ್ನು ಹೊಸ ಕಾರಿನಲ್ಲಿ ಎರವಲು ಪಡೆದುಕೊಳ್ಳಲ್ಲಿದ್ದು, ಅತ್ಯುತ್ತಮ ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿದೆ.

ಡಬ್ಲ್ಯುಆರ್-ವಿ ಬದಲಾಗಿ ಜೆಡ್ಆರ್-ವಿ ಪರಿಚಯಿಸಲಿದೆ ಹೋಂಡಾ

ಜೊತೆಗೆ ಜಪಾನ್ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಕ್ರಾಸ್ ಎಸ್‌ಯುವಿ ಮಾದರಿಯೊಂದರ ಪ್ಲ್ಯಾಟ್‌ಫಾರ್ಮ್ ಆಧರಿಸಿರುವ ಹೊಸ ಕಾರು ಪ್ರಮುಖ ಬದಲಾವಣೆಗಳೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆ ಪೂರೈಸಲಿದೆ.

MOST READ: ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

ಡಬ್ಲ್ಯುಆರ್-ವಿ ಬದಲಾಗಿ ಜೆಡ್ಆರ್-ವಿ ಪರಿಚಯಿಸಲಿದೆ ಹೋಂಡಾ

ಇದಲ್ಲದೇ ಭಾರತದಲ್ಲಿ ಕೆಲವು ಕಾರಣಾಂತರಗಳಿಂದ ಹೊಸ ಮಾದರಿಯ ಹೆಚ್‌ಆರ್-ವಿ ಎಸ್‌ಯುವಿ ಮಾದರಿಯ ಬಿಡುಗಡೆಯಿಂದ ಹಿಂದೆ ಸರಿದ್ದ ಹೋಂಡಾ ಇಂಡಿಯಾ ಕಂಪನಿಯು ಇದೀಗ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗೆ ಆಸಕ್ತಿ ತೊರುತ್ತಿದೆ.

Most Read Articles

Kannada
English summary
Honda ZR-V Likely To Replace WR-V. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X