ಜೆಡ್ಆರ್-ವಿ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೋಂಡಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ವಿವಿಧ ಮಾದರಿಯ ಕಾರು ಮಾರಾಟ ಮಾಡುವ ಮೂಲಕ ಗ್ರಾಹಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ಶೀಘ್ರದಲ್ಲೇ ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯೊಂದನ್ನು ಬಿಡುಗಡೆಗೊಳಿಸುವ ಸಿದ್ದತೆಯಲ್ಲಿದೆ.

ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ ಮತ್ತು ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಗೆ ಪೈಪೋಟಿಯಾಗಿ ಹೋಂಡಾ ಹೊಸ ಕಾರು ಬಿಡುಗಡೆಯಾಗುತ್ತಿದ್ದು, ಗ್ರಾಹರ ಬೇಡಿಕೆಯೆಂತೆ ಹೊಸ ಕಾರುನ್ನು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ. ಹೊಸ ಕಾರು ರೂ.7 ಲಕ್ಷದಿಂದ ರೂ.11 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದ್ದು, ಗ್ರಾಹಕರ ಬೇಡಿಕೆಯಲ್ಲಿ ಗಮನಸೆಳೆಯಲಿದೆ.

ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಮಾಹಿತಿಗಳ ಪ್ರಕಾರ ಹೊಸ ಕಾರು ಜೆಡ್ಆರ್-ವಿ ಹೆಸರಿನೊಂದಿಗೆ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಕೇಂದ್ರ ಸಾರಿಗೆ ಇಲಾಖೆಗೆ ಸಲ್ಲಿಸಲಾಗಿರುವ ಟ್ರೆಡ್‌ಮಾರ್ಕ್ ಅರ್ಜಿಯಲ್ಲಿ ಹೊಸ ಕಾರಿನ ಹೆಸರು ಬಹಿರಂಗವಾಗಿದೆ.

ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಬಿಎಸ್-6 ಕಾರು ಮಾದರಿಗಳ ಬಿಡುಗಡೆಯ ನಂತರ ಹೊಸ ಕಾರುಗಳ ಬಿಡುಗಡೆಯತ್ತ ಗಮನಹರಿಸಲಿರುವ ಹೋಂಡಾ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಹೊಸ ಕಾರು ಆವೃತ್ತಿಗಳನ್ನು ಸಿದ್ದಪಡಿಸುತ್ತಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಇದೇ ವರ್ಷಾಂತ್ಯಕ್ಕೆ ಇಲ್ಲವೇ 2021ರ ಆರಂಭದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಸಬ್ ಫೋರ್ ಮೀಟರ್ ಮಾದರಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳನ್ನು ಹೊಂದಿರಲಿದೆ.

ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಹೋಂಡಾ ಕಂಪನಿಯು ಸದ್ಯ ತನ್ನ ಬಹುಬೇಡಿಕೆಯ ಕಾರು ಮಾದರಿಯಾಗಿರುವ ಅಮೇಜ್ ಕಂಪ್ಯಾಕ್ಟ್ ಸೆಡಾನ್ ಮಾದರಿಯಿಂದಲೂ ಕೆಲವು ಹಲವಾರು ತಾಂತ್ರಿಕ ಅಂಶಗಳನ್ನು ಹೊಸ ಕಾರಿನಲ್ಲಿ ಎರವಲು ಪಡೆದುಕೊಳ್ಳಲಿದ್ದು, ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿದೆ.

MOST READ: ಲಾಕ್‌ಡೌನ್ ಸಂಕಷ್ಟ- ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5 ಸಾವಿರ ಪರಿಹಾರ..

ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಜೊತೆಗೆ ಜಪಾನ್ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಕ್ರಾಸ್ ಎಸ್‌ಯುವಿ ಮಾದರಿಯೊಂದರ ಪ್ಲ್ಯಾಟ್‌ಫಾರ್ಮ್ ಆಧರಿಸಿರುವ ಹೊಸ ಕಾರು ಪ್ರಮುಖ ಬದಲಾವಣೆಗಳೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆ ಪೂರೈಸಲಿದೆ.

ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಇದಲ್ಲದೇ ಭಾರತದಲ್ಲಿ ಕೆಲವು ಕಾರಣಾಂತರಗಳಿಂದ ಹೊಸ ಮಾದರಿಯ ಹೆಚ್‌ಆರ್-ವಿ ಎಸ್‌ಯುವಿ ಮಾದರಿಯ ಬಿಡುಗಡೆಯಿಂದ ಹಿಂದೆ ಸರಿದ್ದ ಹೋಂಡಾ ಇಂಡಿಯಾ ಕಂಪನಿಯು ಇದೀಗ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗೆ ಆಸಕ್ತಿ ತೊರುತ್ತಿದೆ.

MOST READ: ಲಾಕ್‌ಡೌನ್ ನಡುವೆಯೂ ಮದುವೆಯಾಗಲು 100 ಕಿ.ಮೀ ಸೈಕಲ್ ತುಳಿದ ಭೂಪ..!

ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾಹಿತಿ ಬಹಿರಂಗ

ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ನೆಕ್ಸಾನ್, ಮಾರುತಿ ಬ್ರೆಝಾ, ಹ್ಯುಂಡೈ ವೆನ್ಯೂ ಮತ್ತು ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೆ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಹೊಸ ಕಾರಿನ ಬೆಲೆ ಕೂಡಾ ಆಕರ್ಷಕವಾಗಿರಲಿದೆ.

Article Published On: Wednesday, May 6, 2020, 17:54 [IST]
English summary
Honda ZR-V Name Registered, Hinting New Compact SUV. Read in Kannada.
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+