ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹ್ಯುಂಡೈ

ಭಾರತೀಯ ಮಾರುಕಟ್ಟೆಯಲ್ಲಿ ನಿಧಾನವಾಗಿ ವಾಹನಗಳ ಮಾರಾಟದಲ್ಲಿ ಚೇತರಿಕೆಯನ್ನು ಕಾಣುತ್ತಿದೆ. ಇದರ ನಡುವೆ 2020ರ ಅಕ್ಟೋಬರ್ ತಿಂಗಳಿನ ಮಾರಾಟ ವರದಿಯನ್ನು ಹ್ಯುಂಡೈ ಇಂಡಿಯಾ ಕಂಪನಿಯು ಬಹಿರಂಗಪಡಿಸಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹ್ಯುಂಡೈ

2020ರ ಅಕ್ಟೋಬರ್ ತಿಂಗಳಿನಲ್ಲಿ ಹ್ಯುಂಡೈ ಕಂಪನಿಯು ಒಟ್ಟು 68,835 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇದರಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕಂಪನಿಯು 56,605 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇನ್ನು ದೇಶದಿಂದ 12,230 ಕಾರುಗಳನ್ನು ರಫ್ತು ಮಾಡಿದೆ. ಕಳೆದ ವರ್ಷದ ಅಕ್ಟೋಬರ್ ತಿಂಗಳ ಒಟ್ಟು ಮಾರಾಟವನ್ನು ಈ ವರ್ಷದ ಅದೇ ಅವಧಿಗೆ ಹೋಲಿಸಿದರೆ ಶೇ.13.2 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹ್ಯುಂಡೈ

ಕಠಿಣವಾದ ಲಾಕ್‌ಡೌನ್ ಬಳಿಕ ಹ್ಯುಂಡೈ ಕಾರುಗಳ ಮಾರಾಟದಲ್ಲಿ ಉತ್ತಮ ಚೇತರಿಕೆಯನ್ನು ಕಂಡಿದೆ. 2020ರ ಹ್ಯುಂಡೈ ಕಂಪನಿಯು ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಮತ್ತು ದೇಶೀಯ ಮಾರುಕಟ್ಟೆಯಲ್ಲಿ ಕ್ರಮವಾಗಿ 45,809 ಯುನಿಟ್ ಮತ್ತು 50,313 ಯುನಿಟ್‌ಗಳನ್ನು ಮಾರಾಟ ಮಾಡಲು ಯಶಸ್ವಿಯಾಯಿತು.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹ್ಯುಂಡೈ

ಆದರೆ ಕಳೆದ ವರ್ಷದ ಸೆಪ್ಟೆಂಬರ್ ತಿಂಗಳ ರಫ್ತನ್ನು ಈ ವರ್ಷದ ಅದೇ ಅವಧಿಗೆ ಹೋಲಿಸಿದರೆ ಶೇ.10.1 ರಷ್ಟು ಕುಸಿತವನ್ನು ಕಂಡಿದೆ. ಹಬ್ಬದ ಸೀಸನ್ ನಲ್ಲಿ ಹ್ಯುಂಡೈ ಕಾರುಗಳು ಉತ್ತಮ ಮಾರಾಟವಗುತ್ತಿವೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹ್ಯುಂಡೈ

ಹ್ಯುಂಡೈ ಮಾರ್ಕೆಟಿಂಗ್ ಮತ್ತು ಸೇಲ್ಸ್ ನಿರ್ದೇಶಕ ತರುಣ್ ಗರ್ಗ್ ಅವರು ಮಾತನಾಡಿ, ಅಕ್ಟೋಬರ್ ತಿಂಗಳ ಮಾರಾಟ ಸಾಧನೆಯು ಒಟ್ಟಾರೆ ಉತ್ತಮ ಪಾಸಿಟಿವ್ ಬೆಳವಣಿಗೆಯನ್ನು ಕಾಣುತ್ತಿದೆ. ಕಾರುಗಳ ಮಾರಾಟದಲ್ಲಿ ಮತ್ತಷ್ಟು ಉತ್ತಮ ಬೆಳವಣಿಗೆಯನ್ನು ಸಾಧಿಸುವ ಬಲವಾದ ನಂಬಿಕೆ ಇದೆ ಎಂದು ಹೇಳಿದರು.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹ್ಯುಂಡೈ

ಇನ್ನು ಹ್ಯುಂಡೈ ಕಂಪನಿಯ ಹೊಸ ಐ20 ಕಾರು ಭಾರತೀಯ ಮಾರುಕಟ್ಟೆಯಲ್ಲಿ ಇದೇ ತಿಂಗಳ 05ರಂದು ಬಿಡುಗಡೆಯಾಗಲಿದೆ. ಹ್ಯುಂಡೈ ಕಂಪನಿಯು ತನ್ನ ಹೊಸ ಐ20 ಕಾರಿಗಾಗಿ ಅಧಿಕೃತವಾಗಿ ಪ್ರಿ ಬುಕ್ಕಿಂಗ್ ಸ್ವೀಕರಿಸಲು ಈಗಾಗಲೇ ಪ್ರಾರಂಭಿಸಲಾಗಿದೆ. ಮೂರನೇ ತಲೆಮಾರಿನ ಐ20 ಕಾರನ್ನು ಖರೀದಿಸುವ ಗ್ರಾಹರು ಟೋಕನ್ ಮೊತ್ತ ರೂ.21,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹ್ಯುಂಡೈ

ಹೊಸ ಹ್ಯುಂಡೈ ಐ20 ಕಾರು ಮೂರು ಎಂಜಿನ್ ಆಯ್ಕೆಗಳನ್ನು ಹೊಂದಿರಲಿದೆ. ಇದರಲ್ಲಿ 1.2ಎಲ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 83 ಬಿಹೆಚ್‌ಪಿ ಪವರ್ ಮತ್ತು 114 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಸಿವಿಟಿ ಆಯ್ಕೆಗೆ ಜೋಡಿಸಲಾಗುವುದು.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹ್ಯುಂಡೈ

ಇದರೊಂದಿಗೆ 1.0ಎಲ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 120 ಬಿಹೆಚ್‌ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ 7-ಸ್ಪೀಡ್ ಮತ್ತು ಸ್ಪೀಡ್ ಐಎಂಟಿ ಆಯ್ಕೆಯನ್ನು ನೀಡಲಾಗುತ್ತದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಹ್ಯುಂಡೈ

ಇನ್ನು 1.5ಎಲ್ ಡೀಸೆಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 100 ಬಿಹೆಚ್‌ಪಿ ಪವರ್ 240 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಹೊಸ ಹ್ಯುಂಡೈ ಐ20 ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಾರುತಿ ಸುಜುಕಿ ಬಲೆನೊ, ಟಾಟಾ ಆಲ್ಟ್ರೋಜ್, ಫೋಕ್ಸ್‌ವ್ಯಾಗನ್ ಪೊಲೊ ಮತ್ತು ಹೋಂಡಾ ಜಾಝ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Article Published On: Monday, November 2, 2020, 12:20 [IST]
English summary
Hyundai Achieves Highest Ever Domestic Sales. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+