Just In
- 3 hrs ago ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- 4 hrs ago ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- 4 hrs ago ಪ್ರೇರಣಾತ್ಮಕ ಕಥೆ: ಮನೆ ಕೆಲಸದಾಕೆಗೆ 'ಸೈಕಲ್' ಖರೀದಿಸಲು ಸಹಾಯ ಮಾಡಿದ ಮಾಲೀಕ.. ವಿಡಿಯೋ ವೈರಲ್
- 6 hrs ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
Don't Miss!
- News ಕಾಂಗ್ರೆಸ್ ನೇತೃತ್ವದ ಒಕ್ಕೂಟಕ್ಕೆ ನಾಯಕನೇ ಇಲ್ಲ: ಪ್ರಧಾನಿ ಮೋದಿ!
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Movies ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ಎಫೆಕ್ಟ್: ಹ್ಯುಂಡೈ ಕಾರುಗಳ ಮಾರಾಟದಲ್ಲಿ ಭಾರೀ ಕುಸಿತ
ಕರೋನಾ ವೈರಸ್ ಹರಡುವಿಕೆಯನ್ನು ತಡೆಯಲು ಹಲವು ಕಠಿಣ ಕ್ರಮಗಳನ್ನು ಜಾರಿಗೊಳಿಸಿರುವ ಕೇಂದ್ರ ಸರ್ಕಾರವು 21ದಿನ ಕಾಲ ಲಾಕ್ ಡೌನ್ ವಿಧಿಸಿದ್ದು, ವಾಣಿಜ್ಯ ಚಟುವಟಿಕೆಗಳು ಸಂಪೂರ್ಣ ಬಂದ್ ಆಗಿದ್ದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ನೀಡಿದೆ.
ವೈರಸ್ ತಡೆಯುವ ಉದ್ದೇಶದಿಂದ ಅನಿವಾರ್ಯವಾಗಿ ಲಾಕ್ ಡೌನ್ ವಿಧಿಸಿದ್ದರಿಂದ ಕೈಗಾರಿಕೆಗಳು ಸಂಪೂರ್ಣವಾಗಿ ಉತ್ಪಾದನಾ ಚಟುವಟಿಕೆಗಳನ್ನು ನಿಲ್ಲಿಸಿದ್ದು, ಆಟೋ ಕಂಪನಿಗಳು ಸಹ ಭಾರೀ ಪ್ರಮಾಣದ ನಷ್ಟ ಅನುಭವಿಸಿವೆ. ಅದರಲ್ಲೂ ಬ್ಯಾನ್ ಭೀತಿಯಲ್ಲಿದ್ದ ಬಿಎಸ್-4 ವಾಹನ ಮಾರಾಟಕ್ಕೆ ಹಲವು ಕಠಿಣ ಷರತ್ತುಗಳನ್ನು ವಿಧಿಸಲಾಗಿದ್ದು, ಹೊಸ ವಾಹನಗಳ ಉತ್ಪಾದನೆ ಕುಂಠಿತವಾಗಿರುವುದಲ್ಲದೆ ಹಳೆಯ ವಾಹನ ಮಾರಾಟದಲ್ಲೂ ನಷ್ಟ ಭೀತಿ ಎದುರಾಗಿದೆ.
ಹ್ಯುಂಡೈ ಕಂಪನಿಯ ಸಹ ಹೊಸ ಮಾರ್ಚ್ ಅವಧಿಯ ಹೊಸ ವಾಹನಗಳ ಮಾರಾಟದಲ್ಲಿ ಶೇ.41 ರಷ್ಟು ಕುಸಿತ ಕಂಡಿದ್ದು, ಕೇವಲ 32,279 ಯುನಿಟ್ ಮಾತ್ರ ಮಾರಾಟ ಮಾಡಿದೆ. ಇದರಲ್ಲಿ 26,300 ಯುನಿಟ್ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗಿದ್ದರೆ 5,979 ಯುನಿಟ್ ಅನ್ನು ವಿದೇಶಿ ಮಾರುಕಟ್ಟೆಗೆ ರಫ್ತುಗೊಳಿಸಲಾಗಿದೆ.
ಇದು ಕಳೆದ ವರ್ಷದ ಮಾರ್ಚ್ ಅವಧಿಗಿಂತ ಶೇ.41 ರಷ್ಟು ಕುಸಿತ ಕಂಡಿದ್ದು, ಜಾರಿಗೆ ತರಲಾದ ಬಿಎಸ್-6 ವಾಹನ ಮಾರಾಟವು ಉತ್ತಮ ಬೇಡಿಕೆ ತಂದುಕೊಡುವ ನೀರಿಕ್ಷೆಯಿದೆ. ಆದರೆ ಬಿಎಸ್-4 ವಾಹನ ಸ್ಟಾಕ್ ಪ್ರಮಾಣವು ಆಟೋ ಕಂಪನಿಗಳಿಗೆ ಭಾರೀ ಪ್ರಮಾಣದ ನಷ್ಟ ಉಂಟುಮಾಡಲಿವೆ.
ಭಾರತದಲ್ಲಿ ಮಾಲಿನ್ಯವನ್ನು ತಡೆಯುವ ಉದ್ದೇಶದಿಂದ 2018ರ ಅಕ್ಟೋಬರ್ನಲ್ಲಿ ಮಹತ್ವದ ಆದೇಶ ಹೊರಡಿಸಿದ್ದ ಸುಪ್ರೀಂಕೋರ್ಟ್ 2020ರ ಏಪ್ರಿಲ್ 1ರಿಂದ ಕಡ್ಡಾಯವಾಗಿ ಬಿಎಸ್-6 ನಿಯಮವನ್ನು ಜಾರಿಗೆ ತರುವಂತೆ ಆದೇಶ ನೀಡಿತ್ತು. ಸುಪ್ರೀಂ ಆದೇಶದಂತೆ ಇಂದಿನಿಂದ ಬಿಎಸ್-6 ವಾಹನಗಳ ಮಾರಾಟವು ಕಡ್ಡಾಯವಾಗಿದ್ದರೂ ಪರಿಸ್ಥಿತಿಗೆ ಅನುಗುಣವಾಗಿ ಇನ್ನು ಕೂಡಾ ಬಿಎಸ್-4 ವಾಹನಗಳವನ್ನು ಮುಂದಿನ ಕೆಲ ದಿನಗಳ ಕಾಲ ಮುಂದುವರಿಸಲಾಗಿದೆ.
2020ರ ಏಪ್ರಿಲ್ 1ರಿಂದಲೇ ಬಿಎಸ್-4 ವಾಹನಗಳ ಮಾರಾಟ ಮತ್ತು ನೋಂದಣಿ ಪ್ರಕ್ರಿಯೆಯನ್ನು ಬ್ಯಾನ್ ಮಾಡಿದ್ದ ಸುಪ್ರೀಂಕೋರ್ಟ್ ಕೊನೆಯ ಕ್ಷಣದಲ್ಲಿ ಬ್ಯಾನ್ ಅಸ್ತ್ರವನ್ನು ಸಡಿಲಿಸಿದ್ದು, ಕರೋನಾ ವೈರಸ್ ತಡೆ ಉದ್ದೇಶದಿಂದ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್ಡೌನ್ ಹಿನ್ನಲೆಯಲ್ಲಿ ಆಟೋ ಕಂಪನಿಗಳಿಗೆ ಕೆಲವು ವಿನಾಯ್ತಿಗಳನ್ನು ನೀಡಿದೆ.
ಬಿಎಸ್-6 ಜಾರಿಗೆ ಮುನ್ನ ಕರೋನಾ ವೈರಸ್ ಭೀತಿ ಹೆಚ್ಚಿದ್ದರಿಂದ ಎಲ್ಲಾ ಮಾದರಿಯ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಿ ಲಾಕ್ ಡೌನ್ ಹೇರಲಾಗಿತ್ತು. ಕೊನೆಯ ಗಳಿಗೆಯಲ್ಲಿ ಮಾರಾಟವಾಗಬೇಕಿದ್ದ ಲಕ್ಷಾಂತರ ಬಿಎಸ್-4 ವಾಹನಗಳು ಮಾರಾಟವಾಗದೆ ಹಾಗೆಯೇ ಉಳಿದಿವೆ.
ಇದರಿಂದ ಆಟೋ ಕಂಪನಿಗಳಿಗೆ ವಿನಾಯ್ತಿಯೊಂದಿಗೆ ಕೆಲವು ಷರತ್ತುಗಳನ್ನು ವಿಧಿಸಿ ಮಾರಾಟಕ್ಕೆ ಅವಕಾಶ ನೀಡಿರುವ ಸುಪ್ರೀಂಕೋರ್ಟ್ ಬ್ಯಾನ್ ನಷ್ಟ ತಡೆಗೆ ಸಹಕರಿಸಿದೆ.ಕರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡಿರುವ ವಿಚಾರವನ್ನು ಮುಂದಿಟ್ಟುಕೊಂಡು ವಿನಾಯ್ತಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುವ ಇಂಡಿಯನ್ ಆಟೋ ಡೀಲರ್ಸ್ ಅಸೋಶಿಯೇಷನ್ ಸಂಸ್ಥೆಗೆ ಸುಪ್ರೀಂಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿ ಮಾರಾಟ ಅವಧಿಯನ್ನು ವಿಸ್ತರಣೆ ಮಾಡಿದೆ.
ಏಪ್ರಿಲ್ 1ರಿಂದಲೇ ನಿಷೇಧಗೊಳ್ಳಬೇಕಿದ್ದ ಬಿಎಸ್-4 ವಾಹನಗಳ ಮಾರಾಟ ಪ್ರಕ್ರಿಯೆಯನ್ನು ಏಪ್ರಿಲ್ 24ರ ತನಕ ವಿಸ್ತರಣೆ ಮಾಡಲಾಗಿದ್ದು, ಪ್ರತಿ ಆಟೋ ಕಂಪನಿಗಳು ಸ್ಟಾಕ್ ಇರುವ ಶೇ.10 ರಷ್ಟು ಪ್ರಮಾಣದ ಬಿಎಸ್-4 ವಾಹನಗಳನ್ನು ಮಾತ್ರವೇ ಮಾರಾಟ ಮಾಡಬೇಕು ಎಂದಿದೆ.
ಜೊತೆಗೆ ಬಿಎಸ್-4 ವಾಹನ ಮಾರಾಟ ಅವಧಿ ವಿಸ್ತರಣೆಯ ವಿನಾಯ್ತಿಯು ದೆಹಲಿ ಮತ್ತು ಎನ್ಸಿಆರ್ ಪ್ರದೇಶಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಸುಪ್ರೀಂಕೋರ್ಟ್, ಮಾಲಿನ್ಯ ತಡೆಯಲು ಹಳೆಯ ವಾಹನಗಳಿಗೆ ಕಡಿವಾಣ ಹಾಕುವುದೇ ಮುಖ್ಯ ಎಂದಿದೆ.
ಮಾಹಿತಿಗಳ ಪ್ರಕಾರ, ವಿವಿಧ ಆಟೋ ಕಂಪನಿಗಳ ಬಳಿ ಇನ್ನು ಸುಮಾರು 7 ಲಕ್ಷ ಬಿಎಸ್-4 ಎಂಜಿನ್ ಪ್ರೇರಿತ ವಾಹನಗಳ ಸ್ಟಾಕ್ ಇದ್ದು, ಇದು ರೂ.6,400 ಕೋಟಿ ಮೌಲ್ಯವನ್ನು ಹೊಂದಿದೆ.