ಅಲ್ಕಾಜರ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಕ್ರೆಟಾ 7 ಸೀಟರ್ ವರ್ಷನ್
ಸಬ್ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಸದ್ಯ ಮುಂಚೂಣಿಯಲ್ಲಿರುವ ಹ್ಯುಂಡೈ ಕ್ರೆಟಾ ಕಾರು ಶೀಘ್ರದಲ್ಲೇ ಮತ್ತೊಂದು ಹೊಸ ಆವೃತ್ತಿಯನ್ನು ಪಡೆದುಕೊಳ್ಳಲಿದ್ದು, 7 ಸೀಟರ್ ಮಾದರಿಯೊಂದಿಗೆ ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗುತ್ತಿದೆ.

7 ಸೀಟರ್ ಸೌಲಭ್ಯವನ್ನು ಹೊಂದಿರುವ ಕ್ರೆಟಾ ಎಸ್‌ಯುವಿ ಕಾರು ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಿರುವ ಹ್ಯುಂಡೈ ಕಂಪನಿಯು ಹೊಸ ಕಾರಿನ ಅಧಿಕೃತ ಹೆಸರನ್ನು ಕೂಡಾ ಕೇಂದ್ರ ಸಾರಿಗೆ ಇಲಾಖೆಯಲ್ಲಿ ನೋಂದಣಿ ಮಾಡಿದ್ದು, ಹೊಸ ಕಾರು ದೇಶಿಯ ಮಾರುಕಟ್ಟೆಯಲ್ಲಿ ಬದಲಿ ಹೆಸರಿನೊಂದಿಗೆ ಮಾರಾಟಕ್ಕೆ ಲಭ್ಯವಾಗಲಿದೆ.

ಟ್ರೇಡ್‌ಮಾರ್ಕ್ ಪ್ರಮಾಣಪತ್ರದಲ್ಲಿ ಹೊಸ ಕಾರಿನ ಹೆಸರನ್ನು ಅಲ್ಕಾಜರ್(alcazar)ಎಂದು ನಮೂದು ಮಾಡಲಾಗಿದ್ದು, ಹೊಸ ಎಸ್‌ಯುವಿ ಕಾರು ಮಾದರಿಗಾಗಿ ಈ ಹೆಸರನ್ನು ಬಳಕೆ ಮಾಡುವುದಾಗಿ ಸೂಚಿಸಿದೆ.

ಸದ್ಯ ಹ್ಯುಂಡೈ ಬಿಡುಗಡೆ ಮಾಡಲಿರುವ ಹೊಸ ಕಾರುಗಳ ಪೈಕಿ 7 ಸೀಟರ್ ಕ್ರೆಟಾ ಕೂಡಾ ಒಂದಾಗಿದ್ದು, ಹೊಸ ಕಾರಿಗಾಗಿಯೇ ಅಲ್ಕಾಜರ್ ಹೆಸರನ್ನು ಬಳಕೆ ಮಾಡುವುದು ಬಹುತೇಕ ಖಚಿತ ಎನ್ನಲಾಗಿದೆ.

ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್ ಕೂಡಾ ಈಗಾಗಲೇ 7 ಸೀಟರ್ ಮಾದರಿಯೊಂದಿಗೆ ಬಿಡುಗಡೆಗಾಗಿ ಸಿದ್ದವಾಗಿದ್ದು, ಮಹೀಂದ್ರಾ ಎಕ್ಸ್‌ಯುವಿ500 ಕಾರು ಮಾದರಿಯಲ್ಲಿ ಈಗಾಗಲೇ 7 ಸೀಟರ್ ಮಾದರಿಯೊಂದಿಗೆ ಮಾರಾಟ ಮಾಡಲಾಗುತ್ತಿದೆ.

ಇದೀಗ ನ್ಯೂ ಜನರೇಷನ್ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಕೂಡಾ 7 ಸೀಟರ್ ಮಾದರಿಯೊಂದಿಗೆ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಹೊಸ ಅಲ್ಕಾಜರ್ ಕಾರು ಸಾಮಾನ್ಯ ಕಾರು ಮಾದರಿಗಿಂತಲೂ ತುಸು ಪ್ರೀಮಿಯಂ ಸೌಲಭ್ಯಗಳೊಂದಿಗೆ ಬೆಲೆಯಲ್ಲೂ ದುಬಾರಿಯಾಗಿರಲಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹೊಸ ಕಾರಿನಲ್ಲಿ ಸದ್ಯ ಮಾರುಕಟ್ಟೆಯಲ್ಲಿರುವ 1.5-ಲೀಟರ್ ಪೆಟ್ರೋಲ್ ಅಥವಾ 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಹೊಸ ಕಾರು ಈ ವರ್ಷದ ಕೊನೆಯಲ್ಲಿ ಅಥವಾ 2021ರ ಆರಂಭದಲ್ಲಿ ಬಿಡುಗಡೆಗೊಳ್ಳುವುದು ಬಹುತೇಕ ಖಚಿತವಾಗಿದೆ.

ಇನ್ನು ಹ್ಯುಂಡೈ ಕಾರುಗಳ ಮಾರಾಟ ಪೈಕಿ ನ್ಯೂ ಜನರೇಷನ್ ಕ್ರೆಟಾ ಖರೀದಿಗೆ ಹೆಚ್ಚು ಬೇಡಿಕೆಯಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಆರಂಭಿಕವಾಗಿ ರೂ. 9.99 ಲಕ್ಷ ಬೆಲೆ ಪಡೆದುಕೊಂಡಿದೆ. ಟಾಪ್ ಎಂಡ್ ಮಾದರಿಯು ರೂ. 17.20 ಲಕ್ಷ ಬೆಲೆ ಪಡೆದುಕೊಳ್ಳುವ ಮೂಲಕ ಕಿಯಾ ಸೆಲ್ಟೊಸ್‌ಗೆ ಸರಿಸಮನಾಗಿ ಮಾರುಕಟ್ಟೆ ಪ್ರವೇಶಿಸಿದೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಹೊಸ ಕ್ರೆಟಾ ಕಾರು ಗ್ರಾಹಕರ ಬೇಡಿಕೆಯೆಂತೆ ಒಟ್ಟು 5 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ.

ಕ್ರೆಟಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಲಾಗಿದ್ದು, ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಖರೀದಿಸಬಹುದಾಗಿದೆ.
MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!

1.5-ಲೀಟರ್ ಪೆಟ್ರೋಲ್ ಆವೃತ್ತಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.


Click it and Unblock the Notifications