ಮೇ ಅವಧಿಯ ಟಾಪ್ 10 ಕಾರು ಮಾರಾಟದಲ್ಲಿ ಹ್ಯುಂಡೈ ಕ್ರೆಟಾ ನಂ.1

ಕರೋನಾ ವೈರಸ್ ಪರಿಣಾಮದಿಂದಾಗಿ ಆಟೋ ಉದ್ಯಮವು ಭಾರೀ ನಷ್ಟ ಅನುಭವಿಸುತ್ತಿದ್ದು, ಲಾಕ್‌ಡೌನ್ ಸಡಿಲಿಕೆ ನಂತರವೂ ಹೊಸ ವಾಹನಗಳ ಮಾರಾಟ ಮಂದಗತಿಯಲ್ಲಿ ಸಾಗಿದೆ. ಹೀಗಿರುವಾಗ ಮೊದಲ ಬಾರಿಗೆ ಹ್ಯುಂಡೈ ಕಂಪನಿಯು ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಕಾರುಗಳನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೆ ಲಗ್ಗೆಯಿಟ್ಟಿದೆ.

ಮೇ ಅವಧಿಯ ಟಾಪ್ 10 ಕಾರು ಮಾರಾಟದಲ್ಲಿ ಹ್ಯುಂಡೈ ಕ್ರೆಟಾ ನಂ.1

ಕಾರು ಮಾರಾಟ ಮತ್ತು ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿರುವ ಮಾರುತಿ ಸುಜುಕಿ ಕಂಪನಿಯು ಟಾಪ್ 10 ಕಾರು ಮಾರಾಟದಲ್ಲಿ ಒಟ್ಟು 7 ಕಾರುಗಳನ್ನು ಹೊಂದಿದ್ದು, ಹ್ಯುಂಡೈ ನಿರ್ಮಾಣದ ಎರಡು ಕಾರು ಮತ್ತು ಕಿಯಾ ಒಂದು ಕಾರು ಟಾಪ್ ಹತ್ತರ ಸ್ಥಾನದಲ್ಲಿವೆ. ಇದರಲ್ಲಿ ಮೊದಲ ಬಾರಿಗೆ ಆರು ಮತ್ತು ಏಳನೇ ಸ್ಥಾನದಲ್ಲಿರುತ್ತಿದ್ದ ಕ್ರೆಟಾ ಕಾರು ಇದೇ ಮೊದಲ ಬಾರಿಗೆ ಮೊದಲ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದು, ಮೇ ಅವಧಿಯಲ್ಲಿ 3,212 ಯುನಿಟ್ ಮಾರಾಟಗೊಂಡಿದೆ.

ಮೇ ಅವಧಿಯ ಟಾಪ್ 10 ಕಾರು ಮಾರಾಟದಲ್ಲಿ ಹ್ಯುಂಡೈ ಕ್ರೆಟಾ ನಂ.1

ಹ್ಯುಂಡೈ ಕಂಪನಿಯು ಸದ್ಯ ಕಾರು ಮಾರಾಟದಲ್ಲಿ ಎರಡನೇ ಸ್ಥಾನದಲ್ಲಿದ್ದರೂ ಮೇ ಅವಧಿಯ ಟಾಪ್ 10 ಕಾರು ಮಾರಾಟದಲ್ಲಿ ಮಾತ್ರ ಮೊದಲ ಸ್ಥಾನದಲ್ಲಿದ್ದು, ಮೇ 4ರಂದು ಘೋಷಣೆಯಾದ ಲಾಕ್‌ಡೌನ್ ವಿನಾಯ್ತಿ ನಂತರ ಮೇ 31ರ ತನಕ ಬರೋಬ್ಬರಿ 12,583 ಕಾರುಗಳನ್ನು ಮಾರಾಟ ಮಾಡಿದೆ.

ಮೇ ಅವಧಿಯ ಟಾಪ್ 10 ಕಾರು ಮಾರಾಟದಲ್ಲಿ ಹ್ಯುಂಡೈ ಕ್ರೆಟಾ ನಂ.1

ಇದರಲ್ಲಿ ದೇಶಿಯ ಮಾರುಕಟ್ಟೆಯಲ್ಲಿ 6,883 ಯುನಿಟ್ ಮಾರಾಟ ಮಾಡಿದ್ದಲ್ಲಿ 5,700 ಯುನಿಟ್ ರಫ್ತುಗೊಳಿಸಿದೆ. ಒಟ್ಟು ಕಾರುಗಳ ಮಾರಾಟದಲ್ಲಿ ನ್ಯೂ ಜನರೇಷನ್ ಕ್ರೆಟಾ ಮಾತ್ರ 3,212 ಯುನಿಟ್ ಮಾರಾಟದೊಂದಿಗೆ ನಂ.1 ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಮಾರ್ಚ್ 16ರಂದು ಬಿಡುಗಡೆಯ ನಂತರ ಇದುವರೆಗೆ ಸುಮಾರು 16 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದೆ.

ಮೇ ಅವಧಿಯ ಟಾಪ್ 10 ಕಾರು ಮಾರಾಟದಲ್ಲಿ ಹ್ಯುಂಡೈ ಕ್ರೆಟಾ ನಂ.1

ಹ್ಯುಂಡೈ ಕಾರುಗಳ ಮಾರಾಟ ಪೈಕಿ ನ್ಯೂ ಜನರೇಷನ್ ಕ್ರೆಟಾ ಖರೀದಿಗೆ ಹೆಚ್ಚು ಬೇಡಿಕೆಯಿದ್ದು, ತದನಂತರ ಸ್ಥಾನದಲ್ಲಿ ವೆನ್ಯೂ ಮತ್ತು ಗ್ರಾಂಡ್ ಐ10 ನಿಯೋಸ್ ಕಾರುಗಳು ಹೆಚ್ಚು ಬೇಡಿಕೆ ಪಡೆದುಕೊಂಡಿವೆ. ಆದರೆ ಹೊಸದಾಗಿ ಬಿಡುಗಡೆಯಾಗಿರುವುದರಿಂದ ಕ್ರೆಟಾ ಮಾದರಿಗೆ ಹೆಚ್ಚು ಬೇಡಿಕೆಯಿದ್ದು, ಲಾಕ್‌ಡೌನ್ ಸಂಕಷ್ಟದಲ್ಲೂ ಹೊಸ ಕಾರು ಭರ್ಜರಿ ಬೇಡಿಕೆ ಪಡೆದುಕೊಂಡಿರುವುದು ಹ್ಯುಂಡೈ ಕಂಪನಿಗೆ ನೀರಿಕ್ಷೆಗೂ ಮೀರಿ ಲಾಭ ತಂದುಕೊಟ್ಟಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಮೇ ಅವಧಿಯ ಟಾಪ್ 10 ಕಾರು ಮಾರಾಟದಲ್ಲಿ ಹ್ಯುಂಡೈ ಕ್ರೆಟಾ ನಂ.1

ಇನ್ನು ಹೊಸ ಕ್ರೆಟಾ ಕಾರು ದೆಹಲಿ ಎಕ್ಸ್‌ಶೋರೂಂ ಆರಂಭಿಕವಾಗಿ ರೂ. 9.99 ಲಕ್ಷ ಬೆಲೆ ಪಡೆದುಕೊಂಡಿದ್ದು, ಟಾಪ್ ಎಂಡ್ ಮಾದರಿಯು ರೂ. 17.20 ಲಕ್ಷ ಬೆಲೆ ಪಡೆದುಕೊಳ್ಳುವ ಮೂಲಕ ಕಿಯಾ ಸೆಲ್ಟೊಸ್‌ಗೆ ಸರಿಸಮನಾಗಿ ಮಾರುಕಟ್ಟೆ ಪ್ರವೇಶಿಸಿದೆ.

ಮೇ ಅವಧಿಯ ಟಾಪ್ 10 ಕಾರು ಮಾರಾಟದಲ್ಲಿ ಹ್ಯುಂಡೈ ಕ್ರೆಟಾ ನಂ.1

ಹೊಸ ಕ್ರೆಟಾ ಕಾರು ಗ್ರಾಹಕರ ಬೇಡಿಕೆಯೆಂತೆ ಒಟ್ಟು 5 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಮೇ ಅವಧಿಯ ಟಾಪ್ 10 ಕಾರು ಮಾರಾಟದಲ್ಲಿ ಹ್ಯುಂಡೈ ಕ್ರೆಟಾ ನಂ.1

ಕ್ರೆಟಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಲಾಗಿದ್ದು, ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಖರೀದಿಸಬಹುದಾಗಿದೆ.

ಮೇ ಅವಧಿಯ ಟಾಪ್ 10 ಕಾರು ಮಾರಾಟದಲ್ಲಿ ಹ್ಯುಂಡೈ ಕ್ರೆಟಾ ನಂ.1

1.5-ಲೀಟರ್ ಪೆಟ್ರೋಲ್ ಆವೃತ್ತಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಮೇ ಅವಧಿಯ ಟಾಪ್ 10 ಕಾರು ಮಾರಾಟದಲ್ಲಿ ಹ್ಯುಂಡೈ ಕ್ರೆಟಾ ನಂ.1

ಇದರಲ್ಲಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯು 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ನೊಂದಿಗೆ 140-ಬಿಎಚ್‌ಪಿ ಉತ್ಪಾದನೆ ಮಾಡಲಿದ್ದು, ಕ್ರೆಟಾ ಆವೃತ್ತಿಯಲ್ಲೇ ಇದು ಹೈ ಎಂಡ್ ಆವೃತ್ತಿಯಾಗಿ ಮಾರಾಟಗೊಳ್ಳಲಿದೆ. ಹಾಗೆಯೇ ಹೊಸ ಕಾರಿನಲ್ಲಿ ಹಲವಾರು ಐಷಾರಾಮಿ ಫೀಚರ್ಸ್‌ಗಳ ಜೊತೆಗೆ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

Most Read Articles

Kannada
English summary
Hyundai Creta is now the best-selling car in India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X