Just In
- 25 min ago
ಭಾರತದ ನಂತರ ಜಪಾನ್ ಮಾರುಕಟ್ಟೆಯಲ್ಲೂ ಬಿಡುಗಡೆಯಾಗುತ್ತಿದೆ ಹೋಂಡಾ ಹೈನೆಸ್ ಸಿಬಿ 350
- 10 hrs ago
ಡಕಾರ್ ರ್ಯಾಲಿ 2021: 43ನೇ ಆವೃತ್ತಿಯನ್ನು ಗೆದ್ದ ಹೋಂಡಾ ರೈಡರ್ ಕೆವಿನ್ ಬೆನೆವಿಡೆಸ್
- 12 hrs ago
ಸಿವಿ ವಾಹನ ಮಾದರಿಗಳಿಗಾಗಿ ಹೊಸ ಮಾದರಿಯ ಟೈರ್ ಬಿಡುಗಡೆ ಮಾಡಿದ ಬ್ರಿಡ್ಜ್ಸ್ಟೋನ್
- 12 hrs ago
ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ
Don't Miss!
- News
ಬೈಡನ್ ಪದಗ್ರಹಣಕ್ಕೆ ಸಕಲ ಸಿದ್ಧತೆ, ಮದುಮಗಳಂತೆ ಸಿಂಗಾರಗೊಳ್ಳುತ್ತಿದೆ ಸಂಸತ್
- Movies
ಸುದೀಪ್ ಜೊತೆ ಸಿನಿಮಾ: ರಕ್ಷಿತ್ ಶೆಟ್ಟಿ ಹೇಳಿದ್ದು ಹೀಗೆ
- Lifestyle
ಶನಿವಾರದ ಭವಿಷ್ಯ: ಮಕರ ರಾಶಿಯವರೇ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು
- Sports
ಭಾರತ vs ಆಸ್ಟ್ರೇಲಿಯಾ, 4ನೇ ಟೆಸ್ಟ್ ಪಂದ್ಯ, 2ನೇ ದಿನ, Live ಸ್ಕೋರ್
- Education
ECIL Recruitment 2021: ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 15ರ ಚಿನ್ನ, ಬೆಳ್ಳಿ ದರ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಐದು ವರ್ಷಗಳಲ್ಲಿ 5 ಲಕ್ಷ ಯುನಿಟ್ ಮಾರಾಟ ಗುರಿತಲುಪಿದ ಹ್ಯುಂಡೈ ಕ್ರೆಟಾ
ಹ್ಯುಂಡೈ ನಿರ್ಮಾಣದ ಕ್ರೆಟಾ ಕಂಪ್ಯಾಕ್ಟ್ ಎಸ್ಯುವಿ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡು ಯಶಸ್ವಿ ಐದು ವರ್ಷಗಳನ್ನು ಪೂರೈಸಿದ್ದು, ಕಂಪ್ಯಾಕ್ಟ್ ಎಸ್ಯುವಿ ಕಾರು ಮಾರಾಟ ಇಂದಿಗೂ ಅಗ್ರಸ್ಥಾನದಲ್ಲಿದೆ.

ಕೈಗೆಟುಕುವ ಬೆಲೆ, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಆಕರ್ಷಕ ವಿನ್ಯಾಸದೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿಯಲ್ಲಿರುವ ಕ್ರೆಟಾ ಕಾರು ಕಾಲಕಾಲಕ್ಕೆ ತಕ್ಕಂತೆ ಹಲವಾರು ಬದಲಾವಣೆಯೊಂದಿಗೆ ಬೇಡಿಕೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದು, 5 ವರ್ಷಗಳ ಅವಧಿಯಲ್ಲಿ ಬರೋಬ್ಬರಿ 5 ಲಕ್ಷ ಯುನಿಟ್ ಮಾರಾಟಗೊಳ್ಳುವ ಮೂಲಕ ಹ್ಯುಂಡೈ ಕಂಪನಿಗೆ ಭಾರೀ ಪ್ರಮಾಣದ ಆದಾಯ ತಂದುಕೊಟ್ಟಿದೆ.

ಇದೀಗ ಎರಡನೇ ತಲೆಮಾರಿನ ಕ್ರೆಟಾ ಮಾದರಿಯು ಮಾರುಕಟ್ಟೆ ಪ್ರವೇಶಿಸಿದ್ದು, ಹೊಸ ಕಾರು ಹಳೆಯ ತಲೆಮಾರಿನ ಆವೃತ್ತಿಗಿಂತಲೂ ಹೆಚ್ಚು ಬಲಿಷ್ಠ, ಪ್ರೀಮಿಯಂ ಫೀಚರ್ಸ್ ಮತ್ತು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿರುವುದು ಮತ್ತಷ್ಟು ಗ್ರಾಹಕನ್ನು ಸೆಳೆಯುತ್ತಿದೆ.

ಬಿಎಸ್-6 ಎಂಜಿನ್ ಸೇರಿದಂತೆ ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಿರುವ ನ್ಯೂ ಜನರೇಷನ್ ಕ್ರೆಟಾ ಮಾದರಿಯು ಕಂಪ್ಯಾಕ್ಟ್ ಎಸ್ಯುವಿ ಮಾರಾಟದಲ್ಲಿ ಅಗ್ರಸ್ಥಾನದಲ್ಲಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಹೊಸ ಕ್ರೆಟಾ ಕಾರು ದೆಹಲಿ ಎಕ್ಸ್ಶೋರೂಂ ಆರಂಭಿಕವಾಗಿ ರೂ. 9.99 ಲಕ್ಷ ಬೆಲೆ ಪಡೆದುಕೊಂಡಿದೆ. ಟಾಪ್ ಎಂಡ್ ಮಾದರಿಯು ರೂ. 17.20 ಲಕ್ಷ ಬೆಲೆ ಪಡೆದುಕೊಳ್ಳುವ ಮೂಲಕ ಕಿಯಾ ಸೆಲ್ಟೊಸ್ಗೆ ಸರಿಸಮನಾಗಿ ಮಾರುಕಟ್ಟೆ ಪ್ರವೇಶಿಸಿದೆ.

ನ್ಯೂ ಜನರೇಷನ್ ಕ್ರೆಟಾ ಕಾರು ಗ್ರಾಹಕರ ಬೇಡಿಕೆಯೆಂತೆ ಒಟ್ಟು 5 ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ.
MOST READ: ಪ್ರತಿ ಚಾರ್ಜ್ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

1.5-ಲೀಟರ್ ಪೆಟ್ರೋಲ್ ಆವೃತ್ತಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಇದಲ್ಲದೆ ಹ್ಯುಂಡೈ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಕ್ರೆಟಾ ಕಾರಿನಲ್ಲಿ ಹೊಸದಾಗಿ 7 ಸೀಟರ್ ಮಾದರಿಯನ್ನು ಸಹ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಸಾಮಾನ್ಯ ಕಾರಿನ ಪ್ಲ್ಯಾಟ್ಫಾರ್ಮ್ ಅಡಿಯಲ್ಲೇ ಮೂರು ಸಾಲಿನ ಆಸನ ಸೌಲಭ್ಯವನ್ನು ಪಡೆದುಕೊಳ್ಳಲಿದೆ.
MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

2+3+2 ಆಸನ ಸೌಲಭ್ಯ ಪಡೆದುಕೊಳ್ಳಲಿರುವ 7 ಸೀಟರ್ ಕ್ರೆಟಾ ಮಾದರಿಯು ಸಾಮಾನ್ಯ ಕಾರಿನಲ್ಲಿರುವಂತೆಯೇ ಎಂಜಿನ್ ಆಯ್ಕೆ ಹೊಂದಿಲಿದ್ದು, ಹೊಸ ಕಾರು ತುಸು ದುಬಾರಿ ಬೆಲೆ ಹೊಂದಿರಲಿದೆ. ಮುಂಬರುವ ಅಕ್ಟೋಬರ್ ಅಥವಾ ನವೆಂಬರ್ ಹೊತ್ತಿಗೆ ಹೊಸ ಕಾರು ಬಿಡುಗಡೆಯಾಗಲಿದ್ದು, ದುಬಾರಿ ಬೆಲೆಯ ಎಂಪಿವಿ ಕಾರುಗಳಿಗೆ ಹೊಸ ಕಾರು ಪೈಪೋಟಿ ನೀಡಲಿದೆ.