ಕರೋನಾ ವಿರುದ್ಧದ ಹೋರಾಟಕ್ಕಾಗಿ ರೂ.5 ಕೋಟಿ ದೇಣಿಗೆ ನೀಡಿದ ಹ್ಯುಂಡೈ ಇಂಡಿಯಾ

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಈಗಾಗಲೇ ಹಲವು ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಹಣಕಾಸಿನ ನೆರವು ಘೋಷಣೆ ಮಾಡಿರುವುದಲ್ಲದೇ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಅಭಿವೃದ್ದಿಪಡಿಸುವುದುದಾಗಿ ಹೇಳಿಕೊಂಡಿದ್ದು, ಹ್ಯುಂಡೈ ಇಂಡಿಯಾ ಕಂಪನಿಯು ಇದೀಗ ರೂ.5 ಕೋಟಿ ದೇಣಿಗೆ ಘೋಷಣೆ ಮಾಡಿದೆ.

ಕರೋನಾ ವಿರುದ್ಧದ ಹೋರಾಟಕ್ಕಾಗಿ ರೂ.5 ಕೋಟಿ ದೇಣಿಗೆ ನೀಡಿದ ಹ್ಯುಂಡೈ ಇಂಡಿಯಾ

ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಲಾಕ್ ಡೌನ್ ವಿಧಿಸಲಾಗಿದ್ದು, ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಭಾರತ ಸೇರಿ ವಿಶ್ವದ ಹಲವು ರಾಷ್ಟ್ರಗಳ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದೆ. ಕರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಆರಂಭಿಸಲಾಗಿರುವ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ.

ಕರೋನಾ ವಿರುದ್ಧದ ಹೋರಾಟಕ್ಕಾಗಿ ರೂ.5 ಕೋಟಿ ದೇಣಿಗೆ ನೀಡಿದ ಹ್ಯುಂಡೈ ಇಂಡಿಯಾ

ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಚಾಲನೆ ನೀಡಿವೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ಕರೋನಾ ವಿರುದ್ಧದ ಹೋರಾಟಕ್ಕಾಗಿ ರೂ.5 ಕೋಟಿ ದೇಣಿಗೆ ನೀಡಿದ ಹ್ಯುಂಡೈ ಇಂಡಿಯಾ

ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಮತ್ತು ಐಸಿಯು ಯುನಿಟ್‌ಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡುವುದಾಗಿ ಘೋಷಣೆ ಮಾಡಿದ್ದು, ಆರೋಗ್ಯ ಇಲಾಖೆಯ ಬೇಡಿಕೆಗಳನ್ನು ಪೂರೈಸಲು ಸಿದ್ದವಾಗುತ್ತಿವೆ.

ಕರೋನಾ ವಿರುದ್ಧದ ಹೋರಾಟಕ್ಕಾಗಿ ರೂ.5 ಕೋಟಿ ದೇಣಿಗೆ ನೀಡಿದ ಹ್ಯುಂಡೈ ಇಂಡಿಯಾ

ಇದರ ಜೊತೆಗೆ ಗ್ರಾಮೀಣ ಭಾಗದಲ್ಲಿನ ಆರೋಗ್ಯ ಸೌಕರ್ಯ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ವಿಶೇಷ ಆದ್ಯತೆ ನೀಡುವುದಾಗಿ ಹೇಳಿಕೊಂಡಿರುವ ಆಟೋ ಕಂಪನಿಗಳು ಪರಿಸರ ಮತ್ತು ಆರೋಗ್ಯ ಕಾಳಜಿಗೆ ವಿಶೇಷ ಆಸಕ್ತಿ ವಹಿಸಿದ್ದು, ಶೀಘ್ರದಲ್ಲೇ ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವುದಾಗಿ ಘೋಷಣೆ ಮಾಡಿವೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ಕರೋನಾ ವಿರುದ್ಧದ ಹೋರಾಟಕ್ಕಾಗಿ ರೂ.5 ಕೋಟಿ ದೇಣಿಗೆ ನೀಡಿದ ಹ್ಯುಂಡೈ ಇಂಡಿಯಾ

ಇನ್ನು ಚೀನಾದಿಂದ ಶುರುವಾದ ಕರೋನಾ ವೈರಸ್ ದಾಳಿಯು ಇದೀಗ ಇಡೀ ವಿಶ್ವವನ್ನೇ ವ್ಯಾಪಿಸಿದ್ದು, ಇದುವರೆಗೆ 18 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿರುವುದಲ್ಲದೆ 1.14 ಲಕ್ಷ ಜನ ಪ್ರಾಣಕಳೆದುಕೊಂಡಿದ್ದಾರೆ. ಸೋಂಕಿತರಲ್ಲಿ ಇದುವರೆಗೆ ಸುಮಾರು 2.73 ಲಕ್ಷ ಜನ ಗುಣಮುಖರಾಗಿದ್ದು, ಶೇ.4 ರಷ್ಟು ಸೋಂಕು ಪಿಡಿತರ ಸ್ಥಿತಿ ಶೋಚನೀಯವಾಗಿದೆ.

ಕರೋನಾ ವಿರುದ್ಧದ ಹೋರಾಟಕ್ಕಾಗಿ ರೂ.5 ಕೋಟಿ ದೇಣಿಗೆ ನೀಡಿದ ಹ್ಯುಂಡೈ ಇಂಡಿಯಾ

ಹೀಗಾಗೀ ವೈರಸ್ ತಡೆಗಾಗಿ ಈಗಾಗಲೇ ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಿನಿಂದ ಹೋರಾಟ ನಡೆಸುತ್ತಿದ್ದು, ವೈದ್ಯಕೀಯ ಉಪಕರಣಗಳ ಕೊರತೆಯು ಸೋಂಕಿತರ ಸಾವಿನ ಪ್ರಮಾಣ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

MOST READ: ಕರೋನಾ ವೈರಸ್: ವೆಂಟಿಲೆಟರ್ ಉತ್ಪಾದನೆ ಚಾಲನೆ ನೀಡಿದ ಮಾರುತಿ ಸುಜುಕಿ

ಕರೋನಾ ವಿರುದ್ಧದ ಹೋರಾಟಕ್ಕಾಗಿ ರೂ.5 ಕೋಟಿ ದೇಣಿಗೆ ನೀಡಿದ ಹ್ಯುಂಡೈ ಇಂಡಿಯಾ

ಈ ಹಿನ್ನಲೆಯಲ್ಲಿ ಸದ್ಯ ವಾಹನಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವ ಆಟೋ ಉತ್ಪಾದನಾ ಘಟಕಗಳಲ್ಲೇ ಅಗತ್ಯ ವೈದಕೀಯ ಉಪಕರಣಗಳ ಉತ್ಪಾದನೆಗೆ ನಿರ್ಧರಿಸಲಾಗಿದ್ದು, ವೆಂಟಿಲೆಟರ್, ಮಾಸ್ಕ್‌, ಟೆಸ್ಟಿಂಗ್ ಕಿಟ್ ಉತ್ಪಾದನೆಗೆ ಪ್ರಮುಖ ಕಾರು ಕಂಪನಿಗಳು ಒಪ್ಪಿಗೆ ಸೂಚಿಸಿವೆ.

Article Published On: Monday, April 13, 2020, 15:17 [IST]
English summary
Hyundai donates Rs 5 Crore to fight Covid-19 details, Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+