ಹ್ಯುಂಡೈ ಎಲಾಂಟ್ರಾದಲ್ಲಿ ಹೊಸ ಬದಲಾಣೆ- ಫೇಸ್‌ಲಿಫ್ಟ್ ಕಾರಿನ ಬೆಲೆಯಲ್ಲಿ ಭಾರೀ ಏರಿಕೆ

ಹ್ಯುಂಡೈ ಕಂಪನಿಯು ತನ್ನ ಜನಪ್ರಿಯ ಎಲಾಂಟ್ರಾ ಫೇಸ್‌ಲಿಫ್ಟ್ ಸೆಡಾನ್ ಆವೃತ್ತಿಯ ಮಾರಾಟದಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಆರಂಭಿಕ ಆವೃತ್ತಿಯಾದ ಎಸ್ ವೆರಿಯೆಂಟ್ ಅನ್ನು ಸ್ಥಗಿತಗೊಳಿಸಲಾಗಿದೆ.

ಹ್ಯುಂಡೈ ಎಲಾಂಟ್ರಾದಲ್ಲಿ ಹೊಸ ಬದಲಾಣೆ- ಫೇಸ್‌ಲಿಫ್ಟ್ ಕಾರಿನ ಬೆಲೆಯಲ್ಲಿ ಭಾರೀ ಏರಿಕೆ

ಎಸ್ ವೆರಿಯೆಂಟ್ ಸ್ಥಗಿತದಿಂದಾಗಿ ಎಲಾಂಟ್ರಾ ಬೆಲೆಯು ಇದೀಗ ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.15.89 ಲಕ್ಷದಿಂದ ರೂ.18.49 ಲಕ್ಷಕ್ಕೆ ಏರಿಕೆಯಾಗಿದ್ದು, ಟಾಪ್ ಎಂಡ್ ಮಾದರಿಯು ರೂ.20.39 ಲಕ್ಷಕ್ಕೆ ಮಾರಾಟಗೊಳ್ಳಲಿದೆ.

ಎಲಾಂಟ್ರಾ ಕಾರು ಎಸ್ ಮ್ಯಾನುವಲ್, ಎಸ್ಎಕ್ಸ್ ಆಟೋಮ್ಯಾಟಿಕ್, ಎಸ್ಎಕ್ಸ್ ಮ್ಯಾನುವಲ್ ಮತ್ತು ಎಸ್ಎಕ್ಸ್(ಒ) ಆವೃತ್ತಿಗಳನ್ನು ಹೊಂದಿದ್ದು, ಎಸ್ ಮ್ಯಾನುವಲ್ ಆವೃತ್ತಿಯನ್ನು ಇದೀಗ ಸ್ಥಗಿತಗೊಳಿಸಲಾಗಿದೆ.

ಹ್ಯುಂಡೈ ಎಲಾಂಟ್ರಾದಲ್ಲಿ ಹೊಸ ಬದಲಾಣೆ- ಫೇಸ್‌ಲಿಫ್ಟ್ ಕಾರಿನ ಬೆಲೆಯಲ್ಲಿ ಭಾರೀ ಏರಿಕೆ

ಇನ್ನು ಬಿಎಸ್-6 ನಿಯಮದಂತೆ ಹೊಸ ಎಲಾಂಟ್ರಾ ಎಂಜಿನ್ ಅನ್ನು ಉನ್ನತೀಕರಿಸಿದ್ದು, ಹೊಸ ಕಾರು ಇದೀಗ ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದೆ. ಗ್ರಾಹಕರ ಬೇಡಿಕೆಯ ಆಧಾರದ ಮೇಲೆ ಡೀಸೆಲ್ ಆವೃತ್ತಿಯನ್ನು ಕೈಬಿಡಲಾಗಿದ್ದು, ಎಲಾಂಟ್ರಾ ಕಾರುಗಳಲ್ಲಿ ಶೇ.96 ರಷ್ಟು ಗ್ರಾಹಕರು ಪೆಟ್ರೋಲ್ ಆವೃತ್ತಿಯ ಮೇಲೆಯೇ ಹೆಚ್ಚು ಆದ್ಯತೆ ನೀಡುತ್ತಿರುವ ಹಿನ್ನಲೆಯಲ್ಲಿ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಲಾಗಿದೆ.

ಹ್ಯುಂಡೈ ಎಲಾಂಟ್ರಾದಲ್ಲಿ ಹೊಸ ಬದಲಾಣೆ- ಫೇಸ್‌ಲಿಫ್ಟ್ ಕಾರಿನ ಬೆಲೆಯಲ್ಲಿ ಭಾರೀ ಏರಿಕೆ

ಫೇಸ್‌ಲಿಫ್ಟ್ ಆವೃತ್ತಿ ಮೂಲಕ ಎಲಾಂಟ್ರಾ ಕಾರಿನಲ್ಲಿ ಹಲವು ಹೊಸ ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಸಾಮಾನ್ಯ ಎಲಾಂಟ್ರಾ ಕಾರಿಗಿಂತಲೂ ಹೊಸ ಕಾರಿನ ವಿನ್ಯಾಸ ಮತ್ತು ಎಂಜಿನ್ ವಿಭಾಗದಲ್ಲಿ ಮಹತ್ವದ ಬದಲಾವಣೆ ಪರಿಚಯಿಸಲಾಗಿದೆ. ಮರುವಿನ್ಯಾಸಗೊಳಿಸಲಾದ ಫ್ರಂಟ್ ಕಾಸ್‌ಕ್ಲಾಡಿಂಗ್ ಗ್ರಿಲ್, ನವೀಕೃತ ಹೆಡ್‌ಲ್ಯಾಂಪ್ ಕ್ಲಸ್ಟರ್, ಹೊಸ ಎಲ್ಇಡಿ ಡಿಆರ್‌ಎಲ್ಎಸ್, ತ್ರಿಕೋನಾಕಾರದ ಫಾಗ್ ಲ್ಯಾಂಪ್ ನೀಡಲಾಗಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಹ್ಯುಂಡೈ ಎಲಾಂಟ್ರಾದಲ್ಲಿ ಹೊಸ ಬದಲಾಣೆ- ಫೇಸ್‌ಲಿಫ್ಟ್ ಕಾರಿನ ಬೆಲೆಯಲ್ಲಿ ಭಾರೀ ಏರಿಕೆ

ಹಾಗೆಯೇ ಹೊಸ ಕಾರಿನ ಒಳಭಾಗದ ವಿನ್ಯಾಸ ಮತ್ತು ತಾಂತ್ರಿಕ ಸೌಲಭ್ಯಗಳಲ್ಲೂ ಕೆಲವು ಬದಲಾವಣೆಗಳನ್ನು ಪರಿಚಯಿಸಿರುವ ಹ್ಯುಂಡೈ ಸಂಸ್ಥೆಯು ಹೊಸದಾದ 0.8-ಇಂಚಿನ ಟಚ್‌ಸ್ಕೀನ್ ಇನ್ಪೋಟೈನ್‌ಮೆಂಟ್, ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯಿಡ್ ಆಟೋ, ಇನ್ಫಿನಿಟಿ ಸೌಂಡ್ ಸಿಸ್ಟಂ, ಟೈರ್ ಪ್ರೆಸರ್ ಮಾನಿಟರ್ ಸಿಸ್ಟಂ, ವೈರ್‌ಲೆಸ್ ಚಾರ್ಜರ್ ನೀಡಲಾಗಿದೆ.

ಹ್ಯುಂಡೈ ಎಲಾಂಟ್ರಾದಲ್ಲಿ ಹೊಸ ಬದಲಾಣೆ- ಫೇಸ್‌ಲಿಫ್ಟ್ ಕಾರಿನ ಬೆಲೆಯಲ್ಲಿ ಭಾರೀ ಏರಿಕೆ

ಇದರೊಂದಿಗೆ ಪ್ರೀಮಿಯಂ ಫೀಚರ್ಸ್‌ಗಳಾದ ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ವೆಂಟಿಲೆಟೆಡ್ ಫ್ರಂಟ್ ಸೀಟ್, 10 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್, ಎಲೆಕ್ಟ್ರಿಕ್ ಸನ್‌ರೂಫ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ಹ್ಯಾಂಡ್ ಫ್ರೀ ಟೈಲ್‌ಗೆಟ್, ಕ್ರೂಸ್ ಕಂಟ್ರೊಲ್ ಸೇರಿದಂತೆ ಹಲವು ಹೊಸ ಸೌಲಭ್ಯಗಳನ್ನು ನೀಡಲಾಗಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಹ್ಯುಂಡೈ ಎಲಾಂಟ್ರಾದಲ್ಲಿ ಹೊಸ ಬದಲಾಣೆ- ಫೇಸ್‌ಲಿಫ್ಟ್ ಕಾರಿನ ಬೆಲೆಯಲ್ಲಿ ಭಾರೀ ಏರಿಕೆ

ಸುರಕ್ಷತೆಗೂ ಹೊಸ ಕಾರಿನಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, 33 ಸೆಫ್ಟಿ ಫೀಚರ್ಸ್ ಒಳಗೊಂಡ ಬ್ಲೂ ಲಿಂಕ್, ಸ್ಟ್ಯಾಂಡರ್ಡ್ ಸೆಫ್ಟಿ ಫೀಚರ್ಸ್‌ಗಳಾದ 6 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಹೈ ಸ್ಟೀಡ್ ವಾರ್ನಿಂಗ್, ಸೀಟ್ ಬೆಲ್ಟ್ ರಿಮೆಂಡರ್, ಹಿಲ್ ಹೋಲ್ಡ್ ಅಸಿಸ್ಟ್ ಮತ್ತು ವೆಹಿಕಲ್ ಸ್ಟ್ಯಾಬಿಲಿಟಿ ಕಂಟ್ರೊಲ್ ಸೌಲಭ್ಯಗಳನ್ನು ನೀಡಲಾಗಿದೆ.

ಹ್ಯುಂಡೈ ಎಲಾಂಟ್ರಾದಲ್ಲಿ ಹೊಸ ಬದಲಾಣೆ- ಫೇಸ್‌ಲಿಫ್ಟ್ ಕಾರಿನ ಬೆಲೆಯಲ್ಲಿ ಭಾರೀ ಏರಿಕೆ

ಎಂಜಿನ್ ಸಾಮರ್ಥ್ಯ

ಹೊಸ ಎಲಾಂಟ್ರಾ ಸೆಡಾನ್ ಆವೃತ್ತಿಯು ಈ ಬಾರಿ ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದ್ದು, ಈ ಹಿಂದೆ ಇದ್ದ 2.0-ಲೀಟರ್ ಪೆಟ್ರೋಲ್ ಎಂಜಿನ್ ಅನ್ನೇ ಇದೀಗ ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಉನ್ನತೀಕರಿಸಲಾಗಿದೆ. ಇದರಿಂದ ಹೊಸ ಎಂಜಿನ್ ಪರ್ಫಾಮೆನ್ಸ್ ಮತ್ತು ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆ ಕಂಡುಬಂದಿದೆ.

MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಹ್ಯುಂಡೈ ಎಲಾಂಟ್ರಾದಲ್ಲಿ ಹೊಸ ಬದಲಾಣೆ- ಫೇಸ್‌ಲಿಫ್ಟ್ ಕಾರಿನ ಬೆಲೆಯಲ್ಲಿ ಭಾರೀ ಏರಿಕೆ

ಹೊಸ ಕಾರು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಸೌಲಭ್ಯದೊಂದಿಗೆ 152-ಬಿಎಚ್‌ಪಿ ಮತ್ತು 192-ಎನ್ಎಂ ಟಾರ್ಕ್ ಉತ್ಪಾದಿಸುವ ಮೂಲಕ ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹೋಂಡಾ ಸಿವಿಕ್, ಸ್ಕೋಡಾ ಒಕ್ಟಿವಿಯಾ ಮತ್ತು ಟೊಯೊಟಾ ಕರೊಲ್ಲಾ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡುತ್ತಿದೆ.

More from DriveSpark

Article Published On: Friday, May 15, 2020, 8:45 [IST]
English summary
Hyundai Elantra price increased in India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+