ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಹ್ಯುಂಡೈ ಎಲೈಟ್ ಐ20 ಕಾರು

ಹ್ಯುಂಡೈ ಕಂಪನಿಯು ತನ್ನ ಬಿಎಸ್-6 ಎಲೈಟ್ ಐ20 ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಬಹುನೀರಿಕ್ಷಿತ ಬಿಎಸ್-6 ಹ್ಯುಂಡೈ ಎಲೈಟ್ ಐ20 ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.6.50 ಲಕ್ಷಗಳಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಎಲೈಟ್ ಐ20 ಕಾರು

ಬಿಎಸ್-6 ಎಲೈಟ್ ಐ20 ಕಾರಿನ ಟಾಪ್ ಸ್ಪೆಕ್ ಅಸ್ಟಾ(ಒ) ರೂಪಾಂತರದ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.8.31 ಲಕ್ಷಗಳಾಗಿದೆ. ಈ ಹೊಸ ಐ20 ಕಾರು ಸಾಕಷ್ಟು ಸ್ಪೋರ್ಟಿಯರ್ ಮತ್ತು ಸ್ಟೈಲಿಶ್ ಲುಕ್ ಅನ್ನು ಹೊಂದಿದೆ. ಐ20 ಹ್ಯುಂಡೈ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಹೊಸ ಎಲೈಟ್ ಐ20 ಕಾರು ಕೇವಲ ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರ ಬಿಡುಗಡೆ ಮಾಡಲಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಎಲೈಟ್ ಐ20 ಕಾರು

ಬಿಎಸ್-6 ಎಲೈಟ್ ಐ20 ಕಾರಿನ ಮುಂಭಾಗದಲ್ಲಿ ಹೊಸ ಹನಿಕೊಂಬ್ ಗ್ರಿಲ್ ಅನ್ನು ಹೊಂದಿದೆ. ಇನ್ನು ಈ ಕಾರಿನ ಇಂಟಿರಿಯರ್‍ನಲ್ಲಿ ಮಲ್ಟಿಫಂಕ್ಷನ್ ಸ್ಟೀಟಿಯರಿಂಗ್ ವ್ಹೀಲ್ ಅನ್ನು ಅಳವಡಿಸಲಾಗಿದೆ. ಹೊಸ ಹ್ಯುಂಡೈ ಐ20 ಕಾರಿನಲ್ಲಿ ಆಡಿಯೊ ಸಿಸ್ಟಂ, ಕ್ರೂಸ್ ಕಂಟ್ರೋಲ್ ಮತ್ತು ಫುಲ್-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌ ಅನ್ನು ಒಳಗೊಂಡಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಎಲೈಟ್ ಐ20 ಕಾರು

ಈ ಹೊಸ ಕಾರಿನಲ್ಲಿ 7 ಇಂಚಿನ ಇನ್ಪೋಟೇನ್‍ಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಈ ಕಾರಿನ ಇಂಟಿರಿಯರ್‍‍ನಲ್ಲಿ ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, ಹ್ಯುಂಡೈನ ಕನೆಕ್ಟಿವಿಟಿ ಸೂಟ್ ಮತ್ತು ಇತರ ಹಲವಾರು ಫೀಚರ್‍‍ಗಳನ್ನು ಹೊಂದಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಎಲೈಟ್ ಐ20 ಕಾರು

ಹೊಸ ಹ್ಯುಂಡೈ ಎಲೈಟ್ ಐ20 ಕಾರಿನಲ್ಲಿ ಎಲ್‍ಇಡಿ ಹೆಡ್‍ಲೈಟ್, ಹೊಸ 16 ಡೈಮೆಂಡ್ ಕಟ್ ಅಲಾಯ್ ವ್ಹೀಲ್‍‍ಗಳು, ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್‍‍ಗಳೊಂದಿಗೆ ಸ್ಲಿಕ್ ಒಆರ್‍‍ವಿಎಂಗಳು ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಕೂಡ ಆಳವಡಿಸಲಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಎಲೈಟ್ ಐ20 ಕಾರು

ಬಿಎಸ್-6 ಎಲೈಟ್ ಐ20 ಕಾರಿನಲ್ಲಿ 1.2-ಲೀಟರ್ ಪೆಟ್ರೋಲ್ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 6000 ಆರ್‌ಪಿಎಂನಲ್ಲಿ 82 ಬಿಹೆಚ್‌ಪಿ ಮತ್ತು 4000 ಆರ್‌ಪಿಎಂನಲ್ಲಿ 114 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಈ ಹಿಂದೆ ಮಾರುಕಟ್ಟೆಯಲ್ಲಿ ಲಭವಿದ್ದ ಸಿವಿಟಿ ಆಯ್ಕೆಯ ಡೀಸೆಲ್ ಎಂಜಿನ್ ಅನ್ನು ಸ್ಥಗಿತಗೊಳಿಸಲಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಎಲೈಟ್ ಐ20 ಕಾರು

ಹೂಸ ಹ್ಯುಂಡೈ ಐ20 ಎಲೈಟ್ ಕಾರು ಐದು ಬಣ್ಣಗಳಲ್ಲಿ ಲಭ್ಯವಿದೆ. ಇದರಲ್ಲಿ ನಾಲ್ಕು ಸಿಂಗಲ್ ಟೋನ್ ಬಣ್ಣಗಳಾದರೆ ಒಂದು ಡ್ಯುಯಲ್ ಟೋನ್ ಬಣ್ಣದ ಆಯ್ಕೆಗಳನ್ನು ನೀಡಿದೆ. ಇದರಲ್ಲಿ ಪೋಲಾರ್ ವೈಟ್, ಟೈಫೂನ್ ಸಿಲ್ವರ್, ಸ್ಟಾರ್‌ಡಸ್ಟ್ ಗ್ರೇ, ಫೈರಿ ರೆಡ್ ಮತ್ತು ಪೋಲರ್‌ವೈಟ್ / ಬ್ಲ್ಯಾಕ್ ಬಣ್ಣಗಳಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಎಲೈಟ್ ಐ20 ಕಾರು

ಹೊಸ ಎಲೈಟ್ ಐ20 ಕಾರಿನ ವಿನ್ಯಾಸದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಇದಲ್ಲದೆ ಹ್ಯುಂಡೈ ಕಂಪನಿಯು ಹೊಸ ತಲೆಮಾರಿನ ಐ20 ಕಾರನ್ನು ಅಭಿವೃದ್ದಿಪಡಿಸುತ್ತಿದೆ. ಈಗಾಗಲೇ ಹಲವು ಬಾರಿ ಈ ಕಾರು ಸ್ಪಾಟ್ ಟೆಸ್ಟ್ ನಡೆಸಲಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಎಲೈಟ್ ಐ20 ಕಾರು

ಹೊಸ ಹ್ಯುಂಡೈ ಎಲೈಟ್ ಐ20 ಕಾರು ಮಾರುತಿ ಸುಜುಕಿ ಕಂಪನಿಯ ಬಲೆನೊ, ಫೋರ್ಡ್ ಫ್ರೀ‍‍ಸ್ಟೈಲ್, ಟಾಟಾ ಆಲ್ಟ್ರೋಜ್ ಹಾಗೂ ಹೋಂಡಾ ಜಾಜ್‍ ಕಾರುಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Friday, March 27, 2020, 15:10 [IST]
English summary
Hyundai i20 Elite BS6 Launched In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+