ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಬಹುದೊಡ್ಡ ಸಂಚಲನ ಸೃಷ್ಠಿಸಲಿದೆ ಹ್ಯುಂಡೈ ಮೋಟಾರ್ಸ್

ಭವಿಷ್ಯ ಯೋಜನೆಗಳತ್ತ ಮಹತ್ವದ ಹೆಜ್ಜೆಯಿರಿಸುತ್ತಿರುವ ದಕ್ಷಿಣ ಕೊರಿಯಾದ ಹ್ಯುಂಡೈ ಮೋಟಾರ್ಸ್ ಕಂಪನಿಯು ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಈಗಾಗಲೇ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಭವಿಷ್ಯದಲ್ಲಿ ಮತ್ತಷ್ಟು ಹೊಸ ಇವಿ ಮತ್ತು ಫ್ಯೂಲ್ ಸೆಲ್ಸ್ ವಾಹನಗಳೊಂದಿಗೆ ಜಾಗತಿಕ ಆಟೋ ಉದ್ಯಮದಲ್ಲಿ ವಿಭಿನ್ನವಾಗಿ ಗುರುತಿಸಿಕೊಳ್ಳುವ ಗುರಿಹೊಂದಿದೆ.

ಇವಿ ಕಾರು ಮಾರಾಟದಲ್ಲಿ ಬಹುದೊಡ್ಡ ಸಂಚಲನ ಸೃಷ್ಠಿಸಲಿದೆ ಹ್ಯುಂಡೈ

2030ರ ವೇಳೆಗೆ ಸ್ಥಗಿತಗೊಳ್ಳಲಿರುವ ಇಂಧನ ಆಧಾರಿತ ವಾಹನಗಳಿಗೆ ಪೂರಕವಾಗಿ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿ ಭಾರೀ ಪ್ರಮಾಣದ ಹೂಡಿಕೆ ಮಾಡಿರುವ ಹ್ಯುಂಡೈ ಕಂಪನಿಯು 2025ರ ವೇಳೆಗೆ 16 ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಮಾರಾಟ ಹೊಂದುವ ಸಿದ್ದತೆಯಲ್ಲಿದೆ. ಜೊತೆಗೆ 2040ರ ವೇಳೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳನ್ನು ಹಿಂದಿಕ್ಕಲಿರುವ ಹ್ಯುಂಡೈ ಕಂಪನಿಯು ಆಟೋ ಮಾರುಕಟ್ಟೆಯ ಶೇ.10ರಷ್ಟು ಪಾಲನ್ನು ತನ್ನದಾಗಿಸಿಕೊಳ್ಳಲಿದೆ.

ಇವಿ ಕಾರು ಮಾರಾಟದಲ್ಲಿ ಬಹುದೊಡ್ಡ ಸಂಚಲನ ಸೃಷ್ಠಿಸಲಿದೆ ಹ್ಯುಂಡೈ

ಸದ್ಯ ಆಟೋ ಉತ್ಪಾದನೆಯಲ್ಲಿ ಜಗತ್ತಿನ ಎಂಟನೇ ಅತಿದೊಡ್ಡ ಕಾರು ಉತ್ಪಾದನಾ ಕಂಪನಿಯಾಗಿರುವ ಹ್ಯುಂಡೈ ಕಂಪನಿಯು ಎಲೆಕ್ಟ್ರಿಕ್ ವಾಹನಗಳ ಜೊತೆಗೆ ಫ್ಯೂಲ್ ಸೆಲ್ಸ್ ಕಾರುಗಳ ಉತ್ಪಾದನೆಯಲ್ಲೂ ಈಗಾಗಲೇ ಮುನ್ನಡೆ ಸಾಧಿಸುತ್ತಿದೆ.

ಇವಿ ಕಾರು ಮಾರಾಟದಲ್ಲಿ ಬಹುದೊಡ್ಡ ಸಂಚಲನ ಸೃಷ್ಠಿಸಲಿದೆ ಹ್ಯುಂಡೈ

ಭವಿಷ್ಯದ ದಿನಗಳಲ್ಲಿ ಎಲೆಕ್ಟ್ರಿಕ್ ನಂತರದ ಸ್ಥಾನದಲ್ಲಿ ಫ್ಯೂಲ್ ಸೆಲ್ಸ್ ವಾಹನಗಳು ಸದ್ದು ಮಾಡುವ ನೀರಿಕ್ಷೆಯಿದ್ದು, ಹ್ಯುಂಡೈ ಕಂಪನಿಯು ಈಗಾಗಲೇ ಈ ನಿಟ್ಟಿನಲ್ಲಿ ಹಲವಾರು ಸಂಶೋಧನೆ ಮತ್ತು ಅಭಿವೃದ್ದಿಯ ಮೂಲಕ ಮಹತ್ವದ ಮುನ್ನಡೆ ಸಾಧಿಸಿದೆ.

ಇವಿ ಕಾರು ಮಾರಾಟದಲ್ಲಿ ಬಹುದೊಡ್ಡ ಸಂಚಲನ ಸೃಷ್ಠಿಸಲಿದೆ ಹ್ಯುಂಡೈ

ಹಾಗೆಯೇ ಭವಿಷ್ಯದ ಯೋಜನೆಗಳಿಗೆ ಪೂರಕವಾಗಿ ವಿವಿಧ ಕಂಪನಿಗಳ ಜೊತೆಗೂಡಿ ಸಹಭಾಗಿತ್ವ ಯೋಜನೆ ಆರಂಭಿಸಿರುವ ಹ್ಯುಂಡೈ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ಹೊಸ ಮಾದರಿಯ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದ್ದು, ಭವಿಷ್ಯದ ಯೋಜನೆಗಳಿಗಾಗಿ ಭಾರತೀಯ ಮಾರುಕಟ್ಟೆಯನ್ನೇ ಪ್ರಮುಖ ಕೇಂದ್ರವನ್ನಾಗಿ ಪರಿಗಣಿಸಿದೆ. ಜೊತೆಗೆ ಹೊಸ ಯೋಜನೆಗಳಿಗೆ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, 2022ರ ವೇಳೆಗೆ ಬ್ಯಾಟರಿ ಉತ್ಪಾದನಾ ಕೇಂದ್ರ ಸ್ಥಾಪನೆಯೊಂದಿಗೆ ಇವಿ ಮಾರಾಟ ವಿಭಾಗದಲ್ಲಿ ಮಹತ್ವದ ಮುನ್ನಡೆ ಕಾಯ್ದುಕೊಳ್ಳುವ ಸಿದ್ದತೆಯಲ್ಲಿದೆ.

ಇವಿ ಕಾರು ಮಾರಾಟದಲ್ಲಿ ಬಹುದೊಡ್ಡ ಸಂಚಲನ ಸೃಷ್ಠಿಸಲಿದೆ ಹ್ಯುಂಡೈ

ಇನ್ನು ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಿದಂತೆ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ದಿಪಡಿಸುತ್ತಿರುವ ಹ್ಯುಂಡೈ ಕಂಪನಿಯು ಕೊನಾ ಎಲೆಕ್ಟ್ರಿಕ್ ಕಾರು ಮಾದರಿಯೊಂದಿಗೆ ಈಗಾಗಲೇ ಸಾಕಷ್ಟು ಬೇಡಿಕೆ ಪಡೆದುಕೊಂಡಿದೆ.

ಇವಿ ಕಾರು ಮಾರಾಟದಲ್ಲಿ ಬಹುದೊಡ್ಡ ಸಂಚಲನ ಸೃಷ್ಠಿಸಲಿದೆ ಹ್ಯುಂಡೈ

ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಹ್ಯುಂಡೈ ಹೊಸ ಇವಿ ವಾಹನ ಮಾದರಿಗಳು ಸಹ ಹೊಸ ಸಂಚಲನ ಸೃಷ್ಠಿಸಲಿದ್ದು, ಅಂತರಾಷ್ಟ್ರೀಯ ಗುಣಮಟ್ಟದೊಂದಿಗೆ ಹೊಸ ಇವಿ ವಾಹನ ಮಾದರಿಗಳನ್ನು ಸಿದ್ದಪಡಿಸುತ್ತಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಇವಿ ಕಾರು ಮಾರಾಟದಲ್ಲಿ ಬಹುದೊಡ್ಡ ಸಂಚಲನ ಸೃಷ್ಠಿಸಲಿದೆ ಹ್ಯುಂಡೈ

ಹೊಸ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಗಾಗಿ ಎಲೆಕ್ಟ್ರಿಕ್-ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ (ಇ-ಜಿಎಂಪಿ) ಅನ್ನು ಅನಾವರಣಗೊಳಿಸಿದ್ದು, ಹೊಸ ಪ್ಲ್ಯಾಟ್‌ಫಾರ್ಮ್ ಅನ್ನು ವಿಶೇಷವಾಗಿ ಬ್ಯಾಟರಿ ಎಲೆಕ್ಟ್ರಿಕ್ ವೆಹಿಕಲ್ (ಬಿಇವಿ) ಅಭಿವೃದ್ದಿಗಾಗಿ ಬಳಕೆ ಮಾಡಿಕೊಳ್ಳಲಿದೆ.

ಇವಿ ಕಾರು ಮಾರಾಟದಲ್ಲಿ ಬಹುದೊಡ್ಡ ಸಂಚಲನ ಸೃಷ್ಠಿಸಲಿದೆ ಹ್ಯುಂಡೈ

2021ರಿಂದ ಹೊಸ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಹೊಸ ಬ್ಯಾಟರಿ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಪಡಿಸಲಿರುವ ಹ್ಯುಂಡೈ ಕಂಪನಿಯು ಹೊಸ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದಿಗೊಳಿಸಲಿರುವ ವಾಹನಗಳನ್ನು ಹೆಚ್ಚಿನ ಮಟ್ಟದ ಬ್ಯಾಟರಿ ರೇಂಜ್, ಅತಿ ಅವಧಿಯಲ್ಲಿ ಪೂರ್ಣಪ್ರಮಾಣದ ಚಾರ್ಜಿಂಗ್ ಮತ್ತು ಹೆಚ್ಚಿನ ಮಟ್ಟದ ಎಂಜಿನ್ ಕಾರ್ಯಕ್ಷಮತೆಯನ್ನು ಖಾತ್ರಿಪಡಿಸುತ್ತದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಇವಿ ಕಾರು ಮಾರಾಟದಲ್ಲಿ ಬಹುದೊಡ್ಡ ಸಂಚಲನ ಸೃಷ್ಠಿಸಲಿದೆ ಹ್ಯುಂಡೈ

ಹೊಸ ಪ್ಲ್ಯಾಟ್‌ಫಾರ್ಮ್ ಅಡಿ ನಿರ್ಮಾಣದ ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳು ಪ್ರತಿ ಚಾರ್ಜ್‌ಗೆ ಕನಿಷ್ಠ 500 ಕಿ.ಮೀ ಗಿಂತಲೂ ಅಧಿಕ ಮೈಲೇಜ್‌ನೊಂದಿಗೆ ರಸ್ತೆಗಿಳಿಯಲಿದ್ದು, ಬೆಲೆಯಲ್ಲೂ ಕೂಡಾ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭಾರೀ ಪೈಪೋಟಿ ನೀಡಲಿವೆ. ಇದಕ್ಕಾಗಿ ಹೊಸ ಪ್ಲ್ಯಾಟ್‌ಫಾರ್ಮ್ ಅಭಿವೃದ್ದಿಯ ಮೇಲೆ ಭಾರೀ ಪ್ರಮಾಣದ ಹೂಡಕೆ ಮಾಡುತ್ತಿರುವ ಹ್ಯುಂಡೈ ಕಂಪನಿಯು 2025ರ ವೇಳೆ ಒಟ್ಟು 16 ವಿವಿಧ ಎಲೆಕ್ಟ್ರಿಕ್ ಕಾರು ಮಾರಾಟ ಮಾಡುವ ಗುರಿಹೊಂದಿದೆ.

Most Read Articles

Kannada
English summary
Hyundai To Electrify Its Portfolio In Major Markets By 2040. Read in Kannada.
Story first published: Friday, December 11, 2020, 21:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X