ಹ್ಯುಂಡೈ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ವರ್ಷನ್ ಬಿಡುಗಡೆ

ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಹ್ಯುಂಡೈ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಆವೃತ್ತಿಯು ಬಿಡುಗಡೆಗೊಂಡಿದ್ದು, ಸ್ಪೋಟ್ಜ್ ಆವೃತ್ತಿಯಲ್ಲಿ ಹೊಸ ಟರ್ಬೋ ಆವೃತ್ತಿಯನ್ನು ಪರಿಚಯಿಸಲಾಗಿದೆ.

ಹ್ಯುಂಡೈ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ವರ್ಷನ್ ಬಿಡುಗಡೆ

ಸಾಮಾನ್ಯ ಪೆಟ್ರೋಲ್ ಆವೃತ್ತಿಗಿಂತಲೂ ಕಡಿಮೆ ಎಂಜಿನ್ ಸಾಮಾರ್ಥ್ಯ ಹೊಂದಿದ್ದರೂ ಪರ್ಫಾಮೆನ್ಸ್ ಪ್ರಿಯರಿಗಾಗಿ ಹೆಚ್ಚಿನ ಮಟ್ಟದ ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿರುವ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ ಉತ್ಪಾದಿಸಲಿದ್ದು, ಹೊಸ ಎಂಜಿನ್ ಜೊತೆಗೆ ಹಲವು ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿದೆ. ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7,68,050 ಮತ್ತು ಟಾಪ್ ಎಂಡ್ ಮಾದರಿಗೆ ರೂ.7,73,350 ಬೆಲೆ ನಿಗದಿಪಡಿಸಲಾಗಿದೆ.

ಹ್ಯುಂಡೈ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ವರ್ಷನ್ ಬಿಡುಗಡೆ

ಸ್ಪೋರ್ಟ್ಜ್ ಮತ್ತು ಸ್ಪೋರ್ಟ್ಜ್ ಡ್ಯುಯಲ್ ಟೋನ್ ಆವೃತ್ತಿಯಲ್ಲಿ ಪರಿಚಯಿಸಲಾಗಿರುವ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, ಮುಂಬರುವ ದಿನಗಳಲ್ಲಿ ಹೈ ಎಂಡ್ ಮಾದರಿಯು 7-ಸ್ಪೀಡ್ ಮ್ಯಾನುವಲ್ ಡ್ಯುಯಲ್ ಕ್ಲಚ್‌ ಆಯ್ಕೆಯನ್ನು ಪಡೆದುಕೊಳ್ಳಲಿದೆ.

ಹ್ಯುಂಡೈ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ವರ್ಷನ್ ಬಿಡುಗಡೆ

ಇನ್ನುಳಿದಂತೆ 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು 1.2-ಲೀಟರ್ ಡೀಸೆಲ್ ಎಂಜಿನ್ ಆವೃತ್ತಿಯ ಈಗಾಗಲೇ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ಎಂಜಿನ್ ಹೊಂದಿರುವ ಗ್ರಾಂಡ್ ಐ10 ನಿಯೊಸ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5,04,990 ರಿಂದ ಟಾಪ್ ಎಂಡ್ ಮಾದರಿಯು ರೂ.8,04,450 ಬೆಲೆ ಹೊಂದಿದೆ.

ಹ್ಯುಂಡೈ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ವರ್ಷನ್ ಬಿಡುಗಡೆ

ಇದೀಗ ಬಿಡುಗಡೆಯಾಗಿರುವ 1.0-ಲೀಟರ್ ಟರ್ಬೋ ಎಂಜಿನ್ ಮಾದರಿಯು ಗ್ರಾಂಡ್ ಐ10 ನಿಯೊಸ್ ಪೆಟ್ರೋಲ್ ಮಾದರಿಯಲ್ಲೇ ಹೈ ಎಂಡ್ ಆವೃತ್ತಿಯಾಗಿ ಮಾರಾಟವಾಗಲಿದ್ದು, ಸಾಮಾನ್ಯ ಗ್ರಾಂಡ್ ಐ10 ಮತ್ತು ಎಲೈಟ್ ಐ20 ನಡುವಿನ ಸ್ಥಾನ ಗಿಟ್ಟಿಸಿಕೊಂಡಿರುವ ಗ್ರಾಂಡ್ ಐ10 ನಿಯೋಸ್ ಆವೃತ್ತಿಯು ಇತರೆ ಹ್ಯಾಚ್‌ಬ್ಯಾಕ್ ಆವೃತ್ತಿಗಳಿಂತಲೂ ವಿಶೇಷ ಎನ್ನಿಸಲಿದೆ.

ಹ್ಯುಂಡೈ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ವರ್ಷನ್ ಬಿಡುಗಡೆ

ಗ್ರಾಂಡ್ ಐ10 ನಿಯೋಸ್ ಕಾರು ಎರಾ, ಮ್ಯಾಗ್ನಾ, ಸ್ಪೋರ್ಟ್ಜ್ ಮತ್ತು ಆಸ್ಟಾ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಗಳಲ್ಲೂ ಖರೀದಿಗೆ ಲಭ್ಯವಿರುವ ಗ್ರಾಂಡ್ ಐ10 ನಿಯೋಸ್ ಕಾರು ಹಳೆಯ ಆವೃತ್ತಿಗಿಂತಲೂ ಹೆಚ್ಚು ಸ್ಪೋರ್ಟಿ ಲುಕ್‌ನೊಂದಿಗೆ ಮುಂಭಾಗದ ಗ್ರಿಲ್ ಡಿಸೈನ್ ಹೊಸ ಕಾರಿಗೆ ಹೆಚ್ಚಿನ ಮಟ್ಟದ ಪ್ರೀಮಿಯಂ ಲುಕ್ ನೀಡಿದೆ.

ಹ್ಯುಂಡೈ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ವರ್ಷನ್ ಬಿಡುಗಡೆ

ಹ್ಯುಂಡೈ ಸಂಸ್ಥೆಯು ಇದೇ ಮೊದಲ ಬಾರಿಗೆ ಗ್ರಾಂಡ್ ಐ10 ನಿಯೊಸ್ ಮೂಲಕ ತನ್ನ ನವೀಕೃತ ಕಾರುಗಳ ಮಾದರಿಗಳಲ್ಲಿ ಬಿಎಸ್- 6 ಎಂಜಿನ್ ಜೋಡಣೆಗೆ ಚಾಲನೆ ನೀಡಿದ್ದು, ಇದೀಗ ಬಿಡುಗಡೆಯಾಗಿರುವ ಟರ್ಬೋ ಪೆಟ್ರೋಲ್ ಕೂಡಾ ಬಿಎಸ್-6 ವೈಶಿಷ್ಟ್ಯತೆ ಹೊಂದಿದೆ.

ಹ್ಯುಂಡೈ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ವರ್ಷನ್ ಬಿಡುಗಡೆ

ಎಂಜಿನ್ ಸಾಮಾರ್ಥ್ಯ

ಗ್ರಾಂಡ್ ಐ10 ನಿಯೊಸ್ ಕಾರು 1.2-ಲೀಟರ್ ಕಪ್ಪಾ ಪೆಟ್ರೋಲ್ ಎಂಜಿನ್ ಮೂಲಕ 81-ಬಿಎಚ್‌ಪಿ, 114-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.2-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಮೂಲಕ 76-ಬಿಎಚ್‌ಪಿ, 190-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಹ್ಯುಂಡೈ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ವರ್ಷನ್ ಬಿಡುಗಡೆ

ಇದೀಗ ಬಿಡುಗಡೆಯಾಗಿರುವ 1.0-ಲೀಟರ್(998ಸಿಸಿ) ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯು 100-ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಪ್ರತಿ ಲೀಟರ್‌ಗೆ 20.3 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಹ್ಯುಂಡೈ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ವರ್ಷನ್ ಬಿಡುಗಡೆ

ಈ ಮೂಲಕ ಹ್ಯಾಚ್‌ಬ್ಯಾಕ್ ಮಾದರಿಗಳಲ್ಲೇ ಹೆಚ್ಚಿನ ಮಟ್ಟದ ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿರುವ ಅತ್ಯುತ್ತಮ ಕಾರು ಮಾದರಿ ಇದಾಗಿದ್ದು, ಇದೀಗ ಬಿಡುಗಡೆಯಾಗಿರುವ ಟರ್ಬೋ ಪೆಟ್ರೋಲ್ ಕಾರು ಮಾದರಿಯು ಹೊಸ ತಲೆಮಾರಿನ ಮಾರುತಿ ಸುಜುಕಿ ಸ್ವಿಫ್ಟ್ ಕಾರಿಗೆ ಮತ್ತಷ್ಟು ಪೈಪೋಟಿ ನೀಡಲಿದೆ.

Most Read Articles

Kannada
English summary
South Korean carmaker, Hyundai has launched the 2020 Grand i10 Nios with a 1.0-liter Turbo GDi petrol engine in India prices starting at Rs.7.68 Lakh (Ex-showroom). Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X