ಹ್ಯುಂಡೈ ಗ್ರ್ಯಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಹ್ಯುಂಡೈ ಕಂಪನಿಯು ತನ್ನ ಬಿಎಸ್-6 ಗ್ರ್ಯಾಂಡ್ ಐ10 ನಿಯೋಸ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಇತ್ತೀಚೆಗೆ ಬಿಡುಗಡೆಗೊಳಿಸಿದರು. ಇದೀಗ ಈ ಗ್ರ್ಯಾಂಡ್ ಐ10 ನಿಯೋಸ್ ಟರ್ಬೋ ಪೆಟ್ರೋಲ್ ಆವೃತ್ತಿ ಮೈಲೇಜ್ ಮಾಹಿತಿಯು ಬಹಿರಂಗವಾಗಿದೆ.

ಹ್ಯುಂಡೈ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಈ ಗ್ರ್ಯಾಂಡ್ ಐ10 ನಿಯೋಸ್ ಟರ್ಬೋ ಪೆಟ್ರೋಲ್ ಆವೃತ್ತಿಯು ಸಾಮಾನ್ಯ ಪೆಟ್ರೋಲ್ ಆವೃತ್ತಿಗಿಂತಲೂ ಕಡಿಮೆ ಎಂಜಿನ್ ಸಾಮಾರ್ಥ್ಯ ಹೊಂದಿದ್ದರೂ ಪರ್ಫಾಮೆನ್ಸ್ ಪ್ರಿಯರಿಗಾಗಿ ಹೆಚ್ಚಿನ ಪವರ್ ಅನ್ನು ಉತ್ಪಾದಿಸುತ್ತದೆ. ಈ ಕಾರಿನಲ್ಲಿ 1.0-ಲೀಟರ್, ಮೂರು-ಸಿಲಿಂಡರ್, ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ . ಈ ಎಂಜಿನ್ 100 ಹೆಚ್‌ಪಿ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಜೋಡಿಸಲಾಗಿದೆ.

ಹ್ಯುಂಡೈ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಹೊಸ ಗ್ರ್ಯಾಂಡ್ ಐ10 ನಿಯೋಸ್ ಟರ್ಬೋ ಪೆಟ್ರೋಲ್ ಆವೃತ್ತಿಯ ಎಂಜಿನ್ ಪ್ರತಿ ಲೀಟರ್ ಗೆ 20.3 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಈ ಗ್ರ್ಯಾಂಡ್ ಐ10 ನಿಯೋಸ್ ಟರ್ಬೋ ಪೆಟ್ರೋಲ್ ಆವೃತ್ತಿಯ ಬೇಸ್ ಮಾದರಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.7,68,050 ಗಳಾದರೆ, ಟಾಪ್ ಟಾಪ್ ಎಂಡ್ ಮಾದರಿಗೆ ರೂ.7,73,350ಗಳಾಗಿದೆ.

MOST READ: ಹೊಸ ಹ್ಯುಂಡೈ ವೆನ್ಯೂ ಡೀಸೆಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಹ್ಯುಂಡೈ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಹೊಸ ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಡೀಸೆಲ್ ಆವೃತಿಯ ಮೈಲೇಜ್ ಮಾಹಿತಿಯು ಇತ್ತೀಚಿಗೆ ಬಹಿರಂಗವಾಗಿತ್ತು. ಇದರ ಪ್ರಕಾರ ಹೊಸ ಗ್ರಾಂಡ್ ಐ10 ನಿಯೋಸ್ ಡೀಸೆಲ್ ಆವೃತಿಯು ಪ್ರತಿ ಲೀಟರ್‍ ಗೆ 25.1 ಕಿ.ಮೀ ಮೈಲೇಜ್ ನೀಡುತ್ತದೆ.

ಹ್ಯುಂಡೈ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಹ್ಯುಂಡೈ ಕಂಪನಿಯು ತನ್ನ ಬಿಎಸ್-6 ಗ್ರಾಂಡ್ ಐ10 ನಿಯೋಸ್ ಸಿಎನ್‍ಜಿ ಆವೃತ್ತಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಬಿಎಸ್-6 ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಸಿಎನ್‍ಜಿ ಆವೃತ್ತಿಯ ಪ್ರಾರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.6.63 ಲಕ್ಷಗಳಾಗಿದೆ.

MOST READ: ಹೊಸ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಹ್ಯುಂಡೈ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಗ್ರ್ಯಾಂಡ್ ಐ10 ನಿಯೋಸ್ ಕಾರು ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಕಾರಿನ ಮುಂಭಾಗ ಸಿಗ್ನೇಚರ್ ಕ್ಯಾಸ್ಕೇಡಿಂಗ್ ಗ್ರಿಲ್ ಅನ್ನು ಹೊಂದಿದೆ. ಇನ್ನು ಇಂಟಿಗ್ರೇಟೆಡ್ ಟರ್ನ್ ಸಿಗ್ನಿಲ್‍‍ನೊಂದಿಗೆ ಸ್ಲಿಕ್ ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್ ಅನ್ನು ಹೊಂದಿದೆ. ಈ ಕಾರು ಎಲ್‍ಇಡಿ ಡಿಎಆರ್‍ಎಲ್‍‍ಗಳನ್ನುಹೊಂದಿದೆ. ಇದು ಈ ಹ್ಯಾಚ್‍‍ಬ್ಯಾಕ್‍ಗೆ ಸ್ಪೋರ್ಟಿ ಮತ್ತು ಪ್ರೀಮಿಯಂ ಲುಕ್ ಅನ್ನು ನೀಡಿದೆ.

ಹ್ಯುಂಡೈ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಹೊಸ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಕಾರಿನ ಇಂಟಿರಿಯರ್‍‍ನಲ್ಲಿ ಡ್ಯುಯಲ್ ಟೋನ್ ಬ್ಲ್ಯಾಕ್/ಗ್ರೇ ಫಿನಿಶಿಂಗ್ ಅನ್ನು ಹೊಂದಿದೆ. ಇನ್ನೂ ಟಚ್‌ಸ್ಕ್ರೀನ್ ಇನ್ಫೋಟೇನ್‍‍ಮೆಂಟ್ ಸಿಸ್ಟಂ ಅನ್ನು ಹೊಂದಿದೆ.

MOST READ: ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಹ್ಯುಂಡೈ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಇದರೊಂದಿಗೆ ಈ ಕಾರಿನ ಇಂಟೆರಿಯರ್‍ನಲ್ಲಿ ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಕೀಲೆಸ್ ಎಂಟ್ರಿ ಮತ್ತು ಸ್ಟೀಯರಿಂಗ್-ಮೌಂಟೆಡ್ ಆಡಿಯೋವನ್ನು ಹೊಂದಿದೆ.

ಹ್ಯುಂಡೈ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಈ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಇದಕ್ಕಾಗಿ ಕಾರಿನಲ್ಲಿ ಏರ್‍‍ಬ್ಯಾಗಗಳು, ರಿವರ್ಸ್ ಪಾರ್ಕಿಂಗ್ ಸೆನ್ಸಾರ್‍‍‍ಗಳು, ಇಬಿಡಿಯೊಂದಿಗೆ ಎಬಿಎಸ್, ಸೀಟ್ ಬೆಲ್ಟ್ ರಿಮೈಂಡರ್, ಹೈ ಸ್ಪೀಡ್ ಅಲರ್ಟ್ ಮತ್ತು ಎಸ್‌ಒಫಿಕ್ಸ್ ಚೈಲ್ಡ್-ಸೀಟ್ ಮೌಂಟ್‍‍ಗಳನ್ನು ಒಳಗೊಂಡಿದೆ. ಈ ಟರ್ಬೋ ಪೆಟ್ರೋಲ್ ಮಾದರಿಯು ಹೊಸ ತಲೆಮಾರಿನ ಮಾರುತಿ ಸುಜುಕಿ ಸ್ವಿಫ್ಟ್ ಕಾರಿಗೆ ಮತ್ತಷ್ಟು ಪೈಪೋಟಿ ನೀಡುತ್ತದೆ.

More from DriveSpark

Article Published On: Saturday, May 9, 2020, 14:12 [IST]
English summary
Hyundai Grand i10 Nios turbo-petrol fuel efficiency revealed. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+