ಸ್ಥಗಿತವಾಗಲಿದೆ ಹ್ಯುಂಡೈ ಐ20 ಆಕ್ಟಿವ್ ಕಾರು
ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ ಕಂಪನಿಯು ಐ20 ಸಿವಿಟಿ ಆವೃತ್ತಿಯ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆ. ಇದೀಗ ಐ20 ಆಕ್ಟಿವ್ ಕಾರಿನ ಹೆಸರನ್ನು ಹ್ಯುಂಡೈ ಕಂಪನಿ ಅಧಿಕೃತ ವೈಬ್‍ಸೈಟ್‍ನಿಂದ ತೆಗೆದುಹಾಕಲಾಗಿದೆ.

ಮುಂದಿನ ಏಪ್ರಿಲ್ ತಿಂಗಳಲ್ಲಿ ಬಿಎಸ್-6 ಮಾಲಿನ್ಯ ನಿಯಮ ಜಾರಿಯಾಗುವುದರಿಂದ ಐ20 ಸಿವಿಟಿ ಆವೃತ್ತಿಗಳನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಹ್ಯುಂಡೈ ಆಕ್ಟಿವ್ ಕಾರನ್ನು ಸ್ಥಗಿತಗೊಳಿಸುವುದು ಬಹುತೇಕ ಖಚಿತವಾಗಿದೆ.ಹ್ಯುಂಡೈ ಐ20 ಆಕ್ಟಿವ್ ಕಾರನ್ನು ಎಸ್, ಎಸ್ಎಕ್ಸ್ ಮತ್ತು ಎಸ್ಎಕ್ಸ್ ಡ್ಯುಯಲ್ ಟೋನ್ ಎಂಬ ಮೂರು ರೂಪಾಂತರಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಎಲ್ಲಾ ಮೂರು ರೂಪಾಂತರಗಳು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳನ್ನು ಹೊಂದಿದೆ.

ಇದರಲ್ಲಿ 1.2 ಲೀಟರ್ ಪೆಟ್ರೋಲ್ ಮತ್ತು 1.4 ಲೀಟರ್ ಡೀಸೆಲ್ ಆಯ್ಕೆಗಳನ್ನು ಒಳಗೊಂಡಿದೆ. ಈ ಕಾರಿನಲ್ಲಿರುವ 1.2 ಲೀಟರ್ ಪೆಟ್ರೋಲ್ ಎಂಜಿನ್ 82 ಬಿಹೆಚ್‍ಪಿ ಪವರ್ ಮತ್ತು 115 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 1.4 ಲೀಟರ್ ಡೀಸೆಲ್ ಎಂಜಿನ್ 89 ಬಿಹೆಚ್‍ಪಿ ಪವರ್ ಮತ್ತು 220 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಎರಡು ಎಂಜಿನ್‍ಗಳೊಂದಿಗೆ ಸ್ಟ್ಯಾಂಡರ್ಡ್ 6 ಸ್ಪೀಡ್ ಮ್ಯಾನುವಲ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಟಾಪ್-ಸ್ಪೆಕ್ ಎಸ್‍ಎಕ್ಸ್ ರೂಪಾಂತರದಲ್ಲಿ ಮಾತ್ರ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಈ ಕಾರಿನಲ್ಲಿ ಕೆಲವು ಹೆಚ್ಚುವರಿ ವೈಶಿಷ್ಟ್ಯಗಳು ಮತ್ತು ಇತರ ಸುರಕ್ಷತಾ ಉಪಕರಣಗಳನ್ನು ಅಳವಡಿಸಲಾಗಿದೆ. ಇದರಲ್ಲಿ ರಿವರ್ಸ್ ಪಾರ್ಕಿಂಗ್ ಸೆನ್ಸಾರ್‍ಗಳು, ಸ್ಪೀಡ್ ಅಲರ್ಟ್ ಸಿಸ್ಟಂ, ಡ್ರೈವರ್ ಮತ್ತು ಫ್ರಂಟ್ ಪ್ಯಾಸೆಂಜರ್ ಸೀಟ್ ಬೆಲ್ಟ್ ರಿಮೈಂಡರ್ ಮತ್ತು ರಿವರ್ಸ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.

ಹ್ಯುಂಡೈ ಐ20 ಆಕ್ಟಿವ್‍ನಲ್ಲಿ ಇತರ ಹಲವಾರು ಫೀಚರ್‍ಗಳಿವೆ. ಅದರಲ್ಲಿ ಕಾಂಟ್ರಾಸ್ಟ್ ಫಿನಿಶ್ ಹೊಂದಿರುವ ಎಸಿ ವೆಂಟ್ಸ್, ಸೀಟ್‍ಗಳನ್ನು ಹೊಂದಿದೆ ಮತ್ತು ಆಕರ್ಷಕವಾದ ಡ್ಯಾಶ್‍ಬೋರ್ಡ್ ಹೊಂದಿದೆ.

ಹ್ಯುಂಡೈ ಐ20 ಆಕ್ಟಿವ್ ಕಾರಿನಲ್ಲಿ ಅ್ಯಪಲ್ ಕಾರ್‍ಪ್ಲೇ, ಆಂಡ್ರಾಯ್ಡ್ ಆಟೋ, ಆಟೋ ಕ್ಲೈಮೇಟ್ ಕಂಟ್ರೋಲ್, ಕೀಲೆಸ್ ಎಂಟ್ರಿ, ವೈರ್‍ಲೆಸ್ ಚಾರ್ಜಿಂಗ್, ಪುಶ್-ಬಟನ್ ಸ್ಟಾರ್ಟ್-ಸ್ಟಾಪ್ ಮತ್ತು 7 ಇಂಚಿನ ಟಚ್ ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂ ಅನ್ನು ಹೊಂದಿದೆ.

ಹ್ಯುಂಡೈ ಐ20 ಆಕ್ಟಿವ್ ಕಾರಿನಲ್ಲಿ ಎಲ್‍ಇಡಿ ಹೆಡ್‍ಲ್ಯಾಂಪ್, ಡಿಆರ್‍ಎಲ್ ಮತ್ತು ಟೇಲ್ ಲ್ಯಾಂಪ್, ಫಾಗ್ ಲ್ಯಾಂಪ್ ಪ್ಲಾಸ್ಟಿಕ್ ಬಾಡಿ-ಕ್ಲಾಡಿಂಗ್, ಡೈಮೆಂಡ್ ಕಟ್ ಅಲಾಯ್ ವ್ಹೀಲ್ ಮತ್ತು ಮುಂಭಾಗದ ಬಂಪರ್‍ನಲ್ಲಿ ಫಾಕ್ಸ್ ಸ್ಕಿಡ್ ಪ್ಲೇಟ್‍ಗಳು ಹೊಂದಿವೆ. ಐ20 ಆಕ್ಟಿವ್ ಕಾರು ಆಕರ್ಷಕ ಲುಕ್ ಅನ್ನು ಹೊಂದಿದೆ.

2020ರ ಏಪ್ರಿಲ್ ತಿಂಗಳಲ್ಲಿ ಬಿಎಸ್-6 ಮಾಲಿನ್ಯ ನಿಯಮ ಜಾರಿಯಾಗುವುದರಿಂದ ಐ20 ಆಕ್ಟಿವ್ ಕಾರನ್ನು ಸ್ಥಗಿತಗೊಳಿಸಲು ಮುಂದಾಗಿದೆ ಎಂದು ನಿರೀಕ್ಷಿಸಲಾಗಿದೆ. ಹ್ಯುಂಡೈ ಐ20 ಆಕ್ಟಿವ್ ದೇಶಿಯ ಮಾರುಕಟ್ಟೆಯಲ್ಲಿ ಫೋಕ್ಸ್ ವ್ಯಾಗನ್ ಪೊಲೊ ಕಾರಿಗೆ ಪೈಪೋಟಿಯನ್ನು ನೀಡುತ್ತಿತ್ತು.


Click it and Unblock the Notifications