ನವೆಂಬರ್ ತಿಂಗಳ ಕಾರು ಮಾರಾಟದಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡ ಹ್ಯುಂಡೈ

ಕರೋನಾ ವೈರಸ್ ಪರಿಣಾಮ ಆರಂಭ ದಿನಗಳಲ್ಲಿ ಕುಸಿತ ಕಂಡಿದ್ದ ಹೊಸ ವಾಹನಗಳ ಮಾರಾಟವು ತದನಂತರದ ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಹ್ಯುಂಡೈ ಕೂಡಾ ಕಾರು ಮಾರಾಟದಲ್ಲಿ ಮೊದಲ ಬಾರಿಗೆ ಹೊಸ ದಾಖಲೆಗೆ ಕಾರಣವಾಗಿದೆ.

ನವೆಂಬರ್ ತಿಂಗಳ ಕಾರು ಮಾರಾಟದಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡ ಹ್ಯುಂಡೈ

ಲಾಕ್‌ಡೌನ್ ನಂತರ ಏಪ್ರಿಲ್ ಮತ್ತು ಮೇ ತಿಂಗಳಿನ ಹೊಸ ವಾಹನ ಮಾರಾಟದಲ್ಲಿ ಸಾಕಷ್ಟು ಇಳಿಕೆಯಾಗಿದ್ದರಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಆಟೋ ಕಂಪನಿಗಳು ನಂತರದ ದಿನಗಳಲ್ಲಿ ಹಲವಾರು ಆಫರ್‌ಗಳನ್ನು ನೀಡುವ ಮೂಲಕ ವಾಹನ ಮಾರಾಟದಲ್ಲಿ ಹಂತ ಹಂತವಾಗಿ ಚೇತರಿಕೆ ಕಂಡಿದ್ದವು. ಆದರೆ ಎರಡು ತಿಂಗಳ ಅವಧಿಯಲ್ಲಿ ಹೊಸ ವಾಹನಗಳ ಬೇಡಿಕೆಯಲ್ಲಿ ದುಪ್ಪಟ್ಟು ಹೆಚ್ಚಳಗೊಂಡಿದ್ದು, ನವೆಂಬರ್ ಅವಧಿಯಲ್ಲಿನ ಹ್ಯುಂಡೈ ಕಾರು ಮಾರಾಟವು ಕಳೆದ ವರ್ಷಕ್ಕಿಂತಲೂ ಶೇ.9.4ರಷ್ಟು ಹೆಚ್ಚಳಗೊಂಡಿದೆ.

ನವೆಂಬರ್ ತಿಂಗಳ ಕಾರು ಮಾರಾಟದಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡ ಹ್ಯುಂಡೈ

ಹೌದು, ಕಳೆದ ವರ್ಷದ ನವೆಂಬರ್ ಅವಧಿಯಲ್ಲಿನ ಕಾರು ಮಾರಾಟಕ್ಕಿಂತಲೂ ಈ ವರ್ಷದ ಅಕ್ಟೋಬರ್ ಅವಧಿಯಲ್ಲಿ ಶೇ.9.4 ರಷ್ಟು ಬೆಳವಣಿಗೆ ಸಾಧಿಸಿರುವ ಹ್ಯುಂಡೈ ಕಂಪನಿಯು ಒಟ್ಟು 48,800 ಯುನಿಟ್ ಕಾರುಗಳನ್ನು ಮಾರಾಟ ಮಾಡಿದೆ.

ನವೆಂಬರ್ ತಿಂಗಳ ಕಾರು ಮಾರಾಟದಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡ ಹ್ಯುಂಡೈ

ಕಳೆದ ವರ್ಷದ ನವೆಂಬರ್‌ನಲ್ಲಿ 44,600 ಯುನಿಟ್ ಮಾರಾಟ ಮಾಡಿದ್ದ ಹ್ಯುಂಡೈ ಕಂಪನಿಯು ಈ ಬಾರಿ ಕರೋನಾ ವೈರಸ್‌ನಿಂದಾಗಿರುವ ಆರ್ಥಿಕ ಸಂಕಷ್ಟದಲ್ಲೂ ಶೇ.9.4 ರಷ್ಟು ಹೆಚ್ಚುವರಿ ಕಾರು ಮಾರಾಟ ಮಾಡಿದ್ದು, ಹ್ಯುಂಡೈ ನಿರ್ಮಾಣದ ಬಹುತೇಕ ಕಾರುಗಳು ನಿರೀಕ್ಷೆಗೂ ಮೀರಿ ಬೇಡಿಕೆ ಪಡೆದುಕೊಂಡಿವೆ.

ನವೆಂಬರ್ ತಿಂಗಳ ಕಾರು ಮಾರಾಟದಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡ ಹ್ಯುಂಡೈ

ಮತ್ತೊಂದು ವಿಶೇಷತೆ ಅಂದರೆ ಹ್ಯುಂಡೈ ಕಂಪನಿಯ ಕಾರು ಮಾರಾಟವು ಇದೇ ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡಿದ್ದು, ಈ ಹಿಂದೆ 52,000 ಯನಿಟ್ ಮಾರಾಟವೇ ಅತಿ ಹೆಚ್ಚು ಬೇಡಿಕೆಯಾಗಿತ್ತು. ಈ ವರ್ಷದ ಅಕ್ಟೋಬರ್‌ನಲ್ಲಿ 56,605 ಯನಿಟ್ ಕಾರು ಮಾರಾಟ ಮಾಡುವ ಹೊಸ ನೀರಿಕ್ಷೆ ಹುಟ್ಟುಹಾಕಿದ್ದು, ದೀಪಾವಳಿ ಸಂಭ್ರಮದಲ್ಲೂ ಹೆಚ್ಚಿನ ಮಟ್ಟದ ಕಾರುಗಳನ್ನು ಮಾರಾಟ ಮಾಡಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ನವೆಂಬರ್ ತಿಂಗಳ ಕಾರು ಮಾರಾಟದಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡ ಹ್ಯುಂಡೈ

ಹ್ಯುಂಡೈ ಕಾರು ಮಾರಾಟದಲ್ಲಿ ಕ್ರೆಟಾ ಎಸ್‌ಯುವಿ, ಗ್ರ್ಯಾಂಡ್ ಐ10 ನಿಯೋಸ್ ಮತ್ತು ವೆನ್ಯೂ ಕಾರು ಮಾದರಿಯೇ ಅಗ್ರಸ್ಥಾನದಲ್ಲಿದ್ದು, ಕ್ರೆಟಾ ಕಾರು ಮಾದರಿಯು ಟಾಪ್ 10 ಕಾರು ಮಾರಾಟದಲ್ಲಿ 7 ಸ್ಥಾನವನ್ನು ಕಾಯ್ದಕೊಂಡಿದೆ.

ನವೆಂಬರ್ ತಿಂಗಳ ಕಾರು ಮಾರಾಟದಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡ ಹ್ಯುಂಡೈ

ಹ್ಯುಂಡೈ ಕಂಪನಿಯು ಭಾರತದಲ್ಲಿ ನಿರ್ಮಾಣವಾಗುವ ಬಹುತೇಕ ಕಾರು ಮಾದರಿಗಳನ್ನು ವಿದೇಶಿ ಮಾರುಕಟ್ಟೆಗಳಲ್ಲೂ ಮಾರಾಟ ಮಾಡುತ್ತಿದ್ದು, ಭಾರತದಿಂದ ರಫ್ತು ಸೌಲಭ್ಯವನ್ನು ಪಡೆದುಕೊಂಡಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ನವೆಂಬರ್ ತಿಂಗಳ ಕಾರು ಮಾರಾಟದಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡ ಹ್ಯುಂಡೈ

ಸದ್ಯ ಭಾರತದಲ್ಲಿ ಕಾರುಗಳ ರಫ್ತುಗಳ ಪ್ರಮಾಣದಲ್ಲಿ ಅಗ್ರಸ್ಧಾನದಲ್ಲಿರುವ ಹ್ಯುಂಡೈ ಕಂಪನಿಯು ವಿವಿಧ ಕಾರು ಮಾದರಿಗಳನ್ನು ಭಾರತದಿಂದಲೇ ಸುಮಾರು 80 ರಾಷ್ಟ್ರಗಳಿಗೆ ರಫ್ತು ಹೊಂದಿದ್ದು, ಒಟ್ಟು 12 ಕಾರು ಮಾದರಿಗಳನ್ನು ಮಾರಾಟ ಮಾಡುತ್ತಿದೆ.

Most Read Articles

Kannada
English summary
Hyundai Car Sales November 2020. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X