ಕರೋನಾ ಅಬ್ಬರದ ನಡುವೆ ಹ್ಯುಂಡೈ ಕಾರು ಮಾರಾಟದಲ್ಲಿ ಶೇ.20ರಷ್ಟು ಹೆಚ್ಚಳ

ಕರೋನಾ ವೈರಸ್ ಪರಿಣಾಮ ಕಳೆದ ಕೆಲ ತಿಂಗಳ ಹಿಂದೆ ಸಂಪೂರ್ಣವಾಗಿ ನೆಲಕಚ್ಚಿದ್ದ ಹೊಸ ವಾಹನಗಳ ಮಾರಾಟ ಪ್ರಮಾಣವು ಇದೇ ಕರೋನಾ ವೈರಸ್ ಪರಿಣಾಮವೇ ಭಾರೀ ಪ್ರಮಾಣದಲ್ಲಿ ಬೇಡಿಕೆ ಹೆಚ್ಚಳವಾಗಲು ಕಾರಣವಾಗಿದ್ದು, ಹ್ಯುಂಡೈ ಸೇರಿದಂತೆ ಬಹುತೇಕ ಕಾರು ಕಂಪನಿಗಳು ವಾಹನ ಮಾದರಿಗಳ ಮಾರಾಟವು ಕಳೆದ ವರ್ಷಕ್ಕಿಂತಲೂ ದುಪ್ಪಟ್ಟು ಹೆಚ್ಚಳವಾಗಿದೆ.

ಕರೋನಾ ಅಬ್ಬರದ ನಡುವೆ ಹ್ಯುಂಡೈ ಕಾರು ಮಾರಾಟದಲ್ಲಿ ಶೇ.20ರಷ್ಟು ಹೆಚ್ಚಳ

ಹೌದು, ಹ್ಯುಂಡೈ ನಿರ್ಮಾಣದ ಕಾರುಗಳ ಮಾರಾಟ ಪ್ರಮಾಣವು ಈ ವರ್ಷದ ಅಗಸ್ಟ್ ತಿಂಗಳಿನಲ್ಲಿ ಶೇ. 20ರಷ್ಟು ಏರಿಕೆಯಾಗಿದ್ದು, ಅಗಸ್ಟ್ ತಿಂಗಳಿನಲ್ಲಿ ಒಟ್ಟು 45,809 ಯುನಿಟ್ ಕಾರುಗಳನ್ನು ಮಾರಾಟ ಮಾಡುವ ಮೂಲಕ ಎರಡನೇ ಅತಿ ದೊಡ್ಡ ಕಾರು ಮಾರಾಟ ಕಂಪನಿಯಾಗಿ ಹೊರಹೊಮ್ಮಿದೆ. 2019ರ ಅಗಸ್ಟ್ ಅವಧಿಯಲ್ಲಿ 38,205 ಯನಿಟ್ ಕಾರು ಮಾರಾಟ ಮಾಡಿದ್ದ ಹ್ಯುಂಡೈ ಕಂಪನಿಯು ಇದೀಗ 45,809 ಯುನಿಟ್ ಮಾರಾಟ ಮಾಡಿದೆ.

ಕರೋನಾ ಅಬ್ಬರದ ನಡುವೆ ಹ್ಯುಂಡೈ ಕಾರು ಮಾರಾಟದಲ್ಲಿ ಶೇ.20ರಷ್ಟು ಹೆಚ್ಚಳ

ಕರೋನಾ ವೈರಸ್‌ನಿಂದಾಗಿ ಆರಂಭದಲ್ಲಿ ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಬಹುತೇಕ ಆಟೋ ಕಂಪನಿಗಳು ಇದೀಗ ಕರೋನಾ ವೈರಸ್‌ನಿಂದಾಗಿ ಹೊಸ ವಾಹನಗಳ ಮಾರಾಟದಲ್ಲಿ ಅತ್ಯಧಿಕ ಬೇಡಿಕೆ ಪಡೆದುಕೊಳ್ಳುತ್ತಿದ್ದು, ವೈರಸ್ ಭೀತಿಯಿಂದಾಗಿ ಬಹುತೇಕರು ಸ್ವಂತ ವಾಹನಗಳ ಬಳಕೆಗೆ ಆದ್ಯತೆ ನೀಡುತ್ತಿರುವುದು ಈ ಬೆಳವಣಿಗೆ ಪ್ರಮುಖ ಕಾರಣವಾಗಿದೆ.

ಕರೋನಾ ಅಬ್ಬರದ ನಡುವೆ ಹ್ಯುಂಡೈ ಕಾರು ಮಾರಾಟದಲ್ಲಿ ಶೇ.20ರಷ್ಟು ಹೆಚ್ಚಳ

ಹ್ಯುಂಡೈ ನಿರ್ಮಾಣದ ಪ್ರಮುಖ ಕಾರು ಮಾದರಿಗಳ ಮಾರಾಟದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದ್ದು, ವೆನ್ಯೂ, ಕ್ರೆಟಾ, ವೆರ್ನಾ, ಔರಾ, ಸ್ಯಾಂಟ್ರೊ, ಗ್ರಾಂಡ್ ಐ10 ನಿಯೋಸ್, ಐ20, ಎಲಾಂಟ್ರಾ, ಟ್ಯುಸಾನ್ ಮತ್ತು ಕೊನಾ ಇವಿ ಕಾರುಗಳು ಉತ್ತಮ ಬೇಡಿಕೆ ಪಡೆದುಕೊಂಡಿವೆ.

ಕರೋನಾ ಅಬ್ಬರದ ನಡುವೆ ಹ್ಯುಂಡೈ ಕಾರು ಮಾರಾಟದಲ್ಲಿ ಶೇ.20ರಷ್ಟು ಹೆಚ್ಚಳ

ಇದರಲ್ಲಿ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ನೀರಿಕ್ಷೆಗೂ ಮೀರಿ ಗ್ರಾಹಕರ ಬೇಡಿಕೆಗಳನ್ನು ಪಡೆದುಕೊಳ್ಳುತ್ತಿದ್ದು, ಕ್ರೆಟಾ ನಂತರ ವೆನ್ಯೂ ಮಾದರಿಯು ಸಹ ಗ್ರಾಹಕರ ಬೇಡಿಕೆಯಲ್ಲಿ ಅಗ್ರಸ್ಥಾನದಲ್ಲಿದೆ.

ಕರೋನಾ ಅಬ್ಬರದ ನಡುವೆ ಹ್ಯುಂಡೈ ಕಾರು ಮಾರಾಟದಲ್ಲಿ ಶೇ.20ರಷ್ಟು ಹೆಚ್ಚಳ

ಕ್ರೆಟಾ ಕಾರು ಮಾದರಿಯು ಕೈಗೆಟುಕುವ ಬೆಲೆ, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಆಕರ್ಷಕ ವಿನ್ಯಾಸದೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿಯಲ್ಲಿರುವ ಕ್ರೆಟಾ ಕಾರು ಕಾಲಕಾಲಕ್ಕೆ ತಕ್ಕಂತೆ ಹಲವಾರು ಬದಲಾವಣೆಯೊಂದಿಗೆ ಬೇಡಿಕೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದು, 5 ವರ್ಷಗಳ ಅವಧಿಯಲ್ಲಿ ಬರೋಬ್ಬರಿ 5 ಲಕ್ಷ ಯುನಿಟ್ ಮಾರಾಟಗೊಳ್ಳುವ ಮೂಲಕ ಹ್ಯುಂಡೈ ಕಂಪನಿಗೆ ಭಾರೀ ಪ್ರಮಾಣದ ಆದಾಯ ತಂದುಕೊಟ್ಟಿದೆ.

ಕರೋನಾ ಅಬ್ಬರದ ನಡುವೆ ಹ್ಯುಂಡೈ ಕಾರು ಮಾರಾಟದಲ್ಲಿ ಶೇ.20ರಷ್ಟು ಹೆಚ್ಚಳ

ಇದೀಗ ಎರಡನೇ ತಲೆಮಾರಿನ ಕ್ರೆಟಾ ಮಾದರಿಯು ಮಾರುಕಟ್ಟೆ ಪ್ರವೇಶಿಸಿದ್ದು, ಹೊಸ ಕಾರು ಹಳೆಯ ತಲೆಮಾರಿನ ಆವೃತ್ತಿಗಿಂತಲೂ ಹೆಚ್ಚು ಬಲಿಷ್ಠ, ಪ್ರೀಮಿಯಂ ಫೀಚರ್ಸ್ ಮತ್ತು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿರುವುದು ಮತ್ತಷ್ಟು ಗ್ರಾಹಕನ್ನು ಸೆಳೆಯುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಕರೋನಾ ಅಬ್ಬರದ ನಡುವೆ ಹ್ಯುಂಡೈ ಕಾರು ಮಾರಾಟದಲ್ಲಿ ಶೇ.20ರಷ್ಟು ಹೆಚ್ಚಳ

ಹೊಸ ಕ್ರೆಟಾ ಕಾರು ದೆಹಲಿ ಎಕ್ಸ್‌ಶೋರೂಂ ಆರಂಭಿಕವಾಗಿ ರೂ. 9.99 ಲಕ್ಷ ಬೆಲೆ ಪಡೆದುಕೊಂಡಿದೆ. ಟಾಪ್ ಎಂಡ್ ಮಾದರಿಯು ರೂ. 17.20 ಲಕ್ಷ ಬೆಲೆ ಪಡೆದುಕೊಳ್ಳುವ ಮೂಲಕ ಕಿಯಾ ಸೆಲ್ಟೊಸ್‌ಗೆ ಸರಿಸಮನಾಗಿ ಮಾರುಕಟ್ಟೆ ಪ್ರವೇಶಿಸಿದೆ.

ಕರೋನಾ ಅಬ್ಬರದ ನಡುವೆ ಹ್ಯುಂಡೈ ಕಾರು ಮಾರಾಟದಲ್ಲಿ ಶೇ.20ರಷ್ಟು ಹೆಚ್ಚಳ

ನ್ಯೂ ಜನರೇಷನ್ ಕ್ರೆಟಾ ಕಾರು ಗ್ರಾಹಕರ ಬೇಡಿಕೆಯೆಂತೆ ಒಟ್ಟು 5 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಕರೋನಾ ಅಬ್ಬರದ ನಡುವೆ ಹ್ಯುಂಡೈ ಕಾರು ಮಾರಾಟದಲ್ಲಿ ಶೇ.20ರಷ್ಟು ಹೆಚ್ಚಳ

1.5-ಲೀಟರ್ ಪೆಟ್ರೋಲ್ ಆವೃತ್ತಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

Most Read Articles

Kannada
English summary
Hyundai India Increase Domestic Sales By 20 Percent In August 2020. Read in Kannada.
Story first published: Friday, September 4, 2020, 22:40 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X