ಬಜೆಟ್ ಬೆಲೆಗಳ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ ಮೋಟಾರ್ಸ್

ದೇಶಾದ್ಯಂತ ಎಲೆಕ್ಟ್ರಿಕ್ ಕಾರುಗಳಿಗೆ ಹೆಚ್ಚಿನ ಬೇಡಿಕೆ ಹರಿದುಬರುತ್ತಿದ್ದು, ಹ್ಯುಂಡೈ ಕಂಪನಿಯು ತನ್ನ ಪ್ರಮುಖ ಬ್ರಾಂಡ್‌ಗಳ ಅಡಿಯಲ್ಲಿ ಹೊಸ ಮಾದರಿಯ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಜೆಟ್ ಬೆಲೆಯಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಬಜೆಟ್ ಬೆಲೆಗಳ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹ್ಯುಂಡೈ ಕಂಪನಿಯು ದೇಶದಲ್ಲಿ ಈಗಾಗಲೇ ಪ್ರೀಮಿಯಂ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯಾದ ಕೊನಾ ಕಾರನ್ನು ಮಾರಾಟ ಮಾಡುತ್ತಿದ್ದು, ಹೆಚ್ಚಿನ ಮೈಲೇಜ್ ಮತ್ತು ಪ್ರೀಮಿಯಂ ಫೀಚರ್ಸ್ ಹೊಂದಿರುವ ಕೊನಾ ಇವಿ ಕಾರು ತುಸು ದುಬಾರಿ ಎನ್ನಿಸಲಿದೆ. ಆದರೆ ದೇಶಿಯ ಮಾರುಕಟ್ಟೆಯಲ್ಲಿ ದುಬಾರಿ ಬೆಲೆ ವಾಹನಗಳಿಂತ ಬಜೆಟ್ ಬೆಲೆಯಲ್ಲಿ ಉತ್ತಮ ಮೈಲೇಜ್ ಹೊಂದಿರುವ ಇವಿ ವಾಹನಗಳಿಗೆ ಹೆಚ್ಚು ಬೇಡಿಕೆ ಹರಿದುಬರುತ್ತಿದ್ದು, ಹ್ಯುಂಡೈ ಕಂಪನಿಯು ಹೊಸ ಇವಿ ಕಾರುಗಳನ್ನು ಎಲ್ಲಾ ವರ್ಗದ ಗ್ರಾಹಕರನ್ನು ಗಮದಲ್ಲಿಟ್ಟುಕೊಂಡು ವಿವಿಧ ಮಾದರಿಯ ಇವಿ ಕಾರುಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದೆ.

ಬಜೆಟ್ ಬೆಲೆಗಳ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಕೈಗೆಟುವ ಬೆಲೆಯಲ್ಲಿ ಬಿಡುಗಡೆಯಾಗಲಿರುವ ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರುಗಳು ಇವಿ ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸಲಿದ್ದು, ಮಾಧ್ಯಮ ಸಂದರ್ಶನವೊಂದರಲ್ಲಿ ಭವಿಷ್ಯದ ಯೋಜನೆ ಬಗೆಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

ಬಜೆಟ್ ಬೆಲೆಗಳ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

2025ರ ವೇಳೆಗೆ 44 ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಹೊಂದಲಿರುವ ಹ್ಯುಂಡೈ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಗ್ರಾಹಕರ ಬೇಡಿಕೆಯೆಂತೆ 10ಕ್ಕೂ ಹೆಚ್ಚು ಎಲೆಕ್ಟ್ರಿಕ್ ಮಾದರಿಗಳನ್ನು ಮಾರಾಟ ಮಾಡಲಿದ್ದು, ಎಲ್‌ಜಿ ಕಂಪನಿ ಜೊತೆಗೂಡಿ ಬ್ಯಾಟರಿ ಸೌಲಭ್ಯಕ್ಕಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ.

ಬಜೆಟ್ ಬೆಲೆಗಳ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಸದ್ಯ ಎಲೆಕ್ಟ್ರಿಕ್ ಕಾರು ಮಾದರಿಗಳ ಮುಖ್ಯ ತಾಂತ್ರಿಕ ಅಂಶವಾಗಿ ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯಕ್ಕಾಗಿ ಸಂಪೂರ್ಣವಾಗಿ ಚೀನಿ ಮತ್ತು ಥೈವಾನ್ ಮಾರುಕಟ್ಟೆಯನ್ನು ನೆಚ್ಚಿಕೊಂಡಿರುವುದೇ ಇವಿ ಕಾರುಗಳ ಬೆಲೆ ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಬೆಲೆ ಪಡೆದುಕೊಂಡಿರುವುದಕ್ಕೆ ಪ್ರಮುಖ ಕಾರಣವಾಗಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಬಜೆಟ್ ಬೆಲೆಗಳ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಬೆಲೆ ಇಳಿಕೆಗಾಗಿ ಭಾರತದಲ್ಲಿ ಪೂರ್ಣ ಪ್ರಮಾಣದ ಲೀಥಿಯಂ ಅಯಾನ್ ಬ್ಯಾಟರಿ ಉತ್ಪಾದನಾ ಘಟಕಗಳಿಗೆ ಹಲವು ಆಟೋ ಕಂಪನಿಗಳು ಸಹಭಾಗೀತ್ವದ ಯೋಜನೆಯನ್ನು ಕೈಗೊಂಡಿದ್ದು, ಮೇಡ್ ಇನ್ ಇಂಡಿಯಾ ಬ್ಯಾಟರಿ ಲಭ್ಯವಾದಲ್ಲಿ ಇವಿ ಕಾರುಗಳ ಬೆಲೆಯಲ್ಲಿ ಗಣನೀಯವಾಗಿ ಇಳಿಕೆ ಮಾಡಬಹುದುದಾಗಿದೆ.

ಬಜೆಟ್ ಬೆಲೆಗಳ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹಾಗೆಯೇ ಸಾರ್ವಜನಿಕ ಬಳಕೆಯ ಚಾರ್ಜಿಂಗ್ ನಿಲ್ದಾಣಗಳ ಕೊರತೆಯು ಇವಿ ಕಾರುಗಳ ಮಾರಾಟವು ನಿಧಾನಗತಿಯಲ್ಲಿ ಸಾಗುತ್ತಿದ್ದು, ಕೇಂದ್ರ ಸರ್ಕಾರವು ಈ ನಿಟ್ಟಿನಲ್ಲಿ ಫೇಮ್ 2 ಯೋಜನೆ ಅಡಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಬಜೆಟ್ ಬೆಲೆಗಳ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಫೇಮ್ 2 ಯೋಜನೆ ಅಡಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಕಂಪನಿಗಳ ಜೊತೆಗೆ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ಗರಿಷ್ಠ ಸಬ್ಸಡಿ, ಜಿಎಸ್‌ಟಿಯಲ್ಲಿ ವಿನಾಯ್ತಿ, ನಿಗದಿತ ಮಟ್ಟದ ತೆರಿಗೆ ವಿನಾಯ್ತಿ ನೀಡುತ್ತಿದ್ದು, ಎಲೆಕ್ಟ್ರಿಕ್ ಚಾರ್ಜಿಂಗ್ ನಿಲ್ದಾಣಗಳ ಹೆಚ್ಚಳಕ್ಕೂ ಹೆಚ್ಚಿನ ಮಟ್ಟದ ಸಬ್ಸಡಿ ನೀಡುತ್ತಿದೆ.

Article Published On: Saturday, November 14, 2020, 8:45 [IST]
English summary
Hyundai is developing affordable electric suv cars for Indian market. Read in Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+